Homeಮುಖಪುಟಮನೆ ಕೆಲಸಕ್ಕಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಕೂಡಿಹಾಕಿ ಥಳಿಸಿದ ಮಾಲೀಕ!

ಮನೆ ಕೆಲಸಕ್ಕಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಕೂಡಿಹಾಕಿ ಥಳಿಸಿದ ಮಾಲೀಕ!

- Advertisement -
- Advertisement -

ಬಿಹಾರ ಮೂಲದ ಅಪ್ರಾಪ್ತ ಬಾಲಕಿಯನ್ನು (13 ವರ್ಷ) ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದೂ ಅಲ್ಲದೆ, ಆಕೆಗೆ ಲೈಂಗಿಕ ಹಾಗೂ ದೈಹಿಕ ಕಿರುಕುಳ ನೀಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿರುವುದು ಶುಕ್ರವಾರ (ಡಿ.8) ಬೆಳಕಿದೆ ಬಂದಿದೆ.

ಅಪ್ರಾಪ್ತ ಬಾಲಕಿ ಮೇಲೆ ಉದ್ಯೋಗದಾತ ಹಾಗೂ ಆತನ ಮಕ್ಕಳು ದೈಹಿಕ ಮತ್ತು ಲೈಂಗಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ಪೋಷಕರು ಆರೋಪಿಸಿದ್ದು, ಕಳೆದ ಆರು ತಿಂಗಳಿನಿಂದ ಮನೆ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಪೊಲೀಸರು ರಕ್ಷಿಸಿದ್ದಾರೆ.

ಮನೆಗೆಲಸ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿರುವ ಬಾಲಕಿಯ ತಾಯಿಗೆ ಕಳೆದ ನಾಲ್ಕು ತಿಂಗಳಿಂದ ತನ್ನ ಮಗಳನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಭಾರತೀಯ ದಂಡ ಸಂಹಿತೆ (IPC) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಸೆಕ್ಟರ್ 51 ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

ತಾನು ಈ ಹಿಂದೆ ಕೆಲಸ ಮಾಡುತ್ತಿದ್ದ ಮನೆಯಲ್ಲೇ ತನ್ನ ಮಗಳು ಕೆಲಸ ಮಾಡುತ್ತಿದ್ದರಿಂದ ಮಹಿಳೆಯು ಮನೆ ಮಾಲೀಕರಿಗೆ ಹಲವು ಬಾರಿ ಮಗಳ ಜೊತೆ ಮಾತನಾಡಲು ಕರೆ ಮಾಡಿದ್ದರು. ಆದರೆ ಮಾತನಾಡಲು ಅವರು ಅವಕಾಶ ನೀಡಿರಲಿಲ್ಲ. ‘ಹಲವು ಬಾರಿ ಕರೆ ಮಾಡಿ ನನ್ನ ಮಗಳನ್ನು ಭೇಟಿಯಾಗಲು ಏಕೆ ಬಿಡುತ್ತಿಲ್ಲ ಎಂದು ನಾನು ಕೇಳಿದೆ, ಅವರು ನನ್ನ ಕರೆಯನ್ನು ಕಟ್ ಮಾಡಲು ಆರಂಭಿಸಿದರು. ಏನೋ ತಪ್ಪಾಗಿದೆ ಎಂದು ತಿಳಿದು ಅವರ ಮನೆಗೆ ಹೊರಟೆವು’ ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

ಬಾಲಕಿಯ ಪೋಷಕರು ಆರೋಪಿಯ ಮನೆಗೆ ತೆರಳಿದಾಗ ತನ್ನ ಮಗಳನ್ನು ಗುರುತಿಸಲು ಅವರಿಗೆ ಸಾಧ್ಯವಾಗಿಲ್ಲ. ಏಕೆಂದರೆ, ಮನೆ ಮಾಲೀಕರು ಆಕೆಯ ಕೂದಲನ್ನು ಕಿತ್ತುಹಾಕಿದ್ದರು. ಸಾಲದ್ದಕ್ಕೆ ಆಕೆಯ ಕೈಯನ್ನು ಆಸಿಡ್‌ನಿಂದ ಸುಟ್ಟು ಹಾಕಿದ್ದರು. ಆಕೆಯ ಕುತ್ತಿಗೆಯಲ್ಲಿ ಮತ್ತು ಮುಖದಲ್ಲಿ ಹಲವು ಗಾಯದ ಗುರುತುಗಳು ಇದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

‘ಅವರು ತನ್ನ ಮೇಲೆ ಸುತ್ತಿಗೆ ಮತ್ತು ರಾಡ್‌ಗಳಿಂದ ಹಲ್ಲೆ ಮಾಡುತ್ತಿದ್ದರು. ಮನೆ ಮಾಲೀಕರ ಇಬ್ಬರು ಪುತ್ರರು ನನ್ನ ಬಟ್ಟೆ ಬಿಚ್ಚಿಸಿ ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದರು ಎಂದು ಬಾಲಕಿ ನಮಗೆ ತಿಳಿಸಿದ್ದಾರೆ. ಯಾರಿಗಾದರೂ ಹೇಳಿದರೆ ತಂದೆ-ತಾಯಿಯನ್ನು ಕೊಲ್ಲುವುದಾಗಿ ಬೆದರಿಸಿದ್ದಾರೆ. ತಾನು ನೆಲ ಒರೆಸುತ್ತಿದ್ದಾಗ ಆರೋಪಿಗಳು ಹಿಂದಿನಿಂದ ಬಂದು ಕೈ ಮೇಲೆ ಆಸಿಡ್ ಸುರಿದಿದ್ದಾರೆ ಎಂದು ಹೇಳಿದ್ದಾಳೆ. ಮಲಗಲು ಹೊದಿಕೆಗಳನ್ನೂ ನೀಡಲಿಲ್ಲ; ನೆಲದ ಮೇಲೆಯೇ ಮಲಗಬೇಕಿತ್ತು. ಥಳಿಸುವಾಗ ಶಬ್ಧ ಬರಬಾರದು ಎಂಬ ಕಾರಣಕ್ಕೆ ಬಾಯಿಗೆ ಬಟ್ಟೆಗಳನ್ನು ತುರುಕುತ್ತಿದ್ದರು ಎಂದು ಬಾಲಕಿ ನಮಗೆ ತಿಳಿಸಿದ್ದಾರೆ’ ಎಂದು ಅವರು ಹೇಳಿದರು.

ಬಾಲಕಿಗೆ ನಾಯಿಗಳು ಕಚ್ಚಿವೆ ಎಂದು ಅಧಿಕಾರಿಗಳು ಹೇಳಿದ್ದು, ‘ಮನೆ ಮಾಲೀಕರು ಮತ್ತು ಅವರ ಮಕ್ಕಳು ನೆಲದ ಮೇಲೆ ಬಿಸ್ಕೆಟ್ ಅನ್ನುಎಸೆಯುತ್ತಿದ್ದರು, ಅವುಗಳನ್ನು ತೆಗೆದುಕೊಳ್ಳಲು ನನಗೆ ಹೇಳುತ್ತಿದ್ದ ಅವರು, ನಾಯಿಯನ್ನು ಛೂ ಬಿಟ್ಟು ಕಚ್ಚಲು ಆದೇಶಿಸುತ್ತಿದ್ದರು ಎಂದೂ ಬಾಲಕಿ ಹೇಳಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ದಿನಕ್ಕೆ ಒಮ್ಮೆ ಮಾತ್ರ ಸಂಜೆ 4 ಗಂಟೆಗೆ ಬಾಲಕಿಗೆ ಆಹಾರ ನೀಡಲಾಗುತ್ತಿತ್ತು. ಕೆಲವೊಮ್ಮೆ ಮೂರು ದಿನಕ್ಕೊಮ್ಮೆ ಮಾತ್ರ ಊಟ ಕೊಡುತ್ತಿದ್ದರು. ಆಹಾರ ತಿನ್ನಲು ಯತ್ನಿಸಿದರೆ ಮಾಲೀಕರು ಬಾಲಕಿಯನ್ನು ಹೊಡೆಯುತ್ತಿದ್ದರು ಎನ್ನಲಾಗಿದೆ. ಪ್ರಸ್ತುತ ಆಕೆಯನ್ನು ಸೆಕ್ಟರ್ 10ರ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...