Homeಮುಖಪುಟಈರುಳ್ಳಿ ರಫ್ತು ನಿಷೇಧ ನಿರ್ಧಾರ ಸಮರ್ಥಿಸಿಕೊಂಡ ವಿತ್ತ ಸಚಿವೆ; ರೈತರ ಪ್ರತಿಭಟನೆಗೆ ಪವಾರ್ ಬೆಂಬಲ

ಈರುಳ್ಳಿ ರಫ್ತು ನಿಷೇಧ ನಿರ್ಧಾರ ಸಮರ್ಥಿಸಿಕೊಂಡ ವಿತ್ತ ಸಚಿವೆ; ರೈತರ ಪ್ರತಿಭಟನೆಗೆ ಪವಾರ್ ಬೆಂಬಲ

- Advertisement -
- Advertisement -

ಈರುಳ್ಳಿ ಸೇರಿದಂತೆ ಕೆಲವು ಉತ್ಪನ್ನಗಳ ವಿದೇಶಕ್ಕೆ ರಫ್ತು ನಿಷೇಧಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಸಮರ್ಥಿಸಿಕೊಂಡಿದ್ದಾರೆ. ‘ದೇಶೀಯ ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸುವುದು ಅತ್ಯಗತ್ಯ’ ಎಂದು ಅವರು ಪ್ರತಿಪಾದಿಸಿದ್ದಾರೆ. ಮತ್ತೊಂದೆಡೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ನಾಸಿಕ್ ಜಿಲ್ಲೆಯ ಚಂದ್‌ವಾಡ್‌ನಲ್ಲಿ ಈರುಳ್ಳಿ ರಫ್ತು ನಿಷೇಧವನ್ನು ವಿರೋಧಿಸಿ ನಡೆದ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ನೀಡಿದ್ದಾರೆ.

ಈ ಕುರಿತು ಲೋಕಸಭೆಯಲ್ಲಿ ಮಂಗಳವಾರ ಮಾತನಾಡಿರುವ ನಿರ್ಮಲಾ ಸೀತಾರಾಮನ್, ‘ನಾವು ರೈತರು ಮತ್ತು ಗ್ರಾಹಕರ ಹಿತಾಸಕ್ತಿಗಳನ್ನು ಸಮತೋಲನಗೊಳಿಸುವುದಕ್ಕೆ ಆದ್ಯತೆ ನೀಡಿದ್ದೇವೆ. ಆಗಾಗ ಬೆಲೆಗಳು ಹೆಚ್ಚಾಗುತ್ತಿವೆ. ಈ ಸಂದರ್ಭದಲ್ಲಿ ನಾವು ಕೆಲವು ನಿರ್ಬಂಧಗಳನ್ನು ತೆಗೆದುಹಾಕಬೇಕು. ನಾವು ರೈತರಿಂದ ಖರೀದಿಸಿದ್ದಕ್ಕೆ ನೀಡುತ್ತಿರುವ ಬೆಲೆ ಸಮರ್ಪಕವಾಗಿದೆ ಎಂಬ ಪ್ರಜ್ಞೆ ನಮಗಿದೆ’ ಎಂದರು.

‘ನಮ್ಮ ಆರ್ಥಿಕತೆಯು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಮಾರ್ಪಟ್ಟಿದ್ದೇವೆ. ಎರಡನೇ ತ್ರೈಮಾಸಿಕದಲ್ಲಿ 7.6% ಬೆಳವಣಿಗೆಯು ವಿಶ್ವದಲ್ಲೇ ಅತ್ಯಧಿಕವಾಗಿದೆ. ಸಾಮಾಜಿಕ ಕಲ್ಯಾಣದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಹಣಕಾಸಿನ ವಿವೇಕವು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ’ ಎಂದು ಸೀತಾರಾಮನ್ ಹೇಳಿದರು.

ರೈತರ ಹೋರಾಟಕ್ಕೆ ಎನ್‌ಸಿಪಿ ಬೆಂಬಲ:

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಮತ್ತು ಕೇಂದ್ರದ ಮಾಜಿ ಕೃಷಿ ಸಚಿವ ಶರದ್ ಪವಾರ್ ಸೋಮವಾರ ನಾಸಿಕ್ ಜಿಲ್ಲೆಯ ಚಂದ್‌ವಾಡ್‌ನಲ್ಲಿ ಈರುಳ್ಳಿ ರಫ್ತು ನಿಷೇಧವನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದ್ದಾರೆ. ಮತ್ತೊಂದು ಕಡೆ ಎನ್‌ಸಿಪಿ ಸಂಸದರು ಚಳಿಗಾಲದ ಅಧೀವೇಶನದಲ್ಲಿ ಧ್ವನಿ ಎತ್ತಿದ್ದಾರೆ.

ನಾಸಿಕ್‌ನಲ್ಲಿ ನಡೆದ ರೈತರ ಪ್ರತಿಭಟನೆಗೆ ಬೆಂಬಲ ನೀಡಿ ಮಾತನಾಡಿದ ಶರದ್ ಪವಾರ್

‘ಕೇಂದ್ರದ ಬಿಜೆಪಿ ಸರ್ಕಾರಕ್ಕೆ ರೈತರ ಶ್ರಮದ ಬಗ್ಗೆ ಗೌರವವಿಲ್ಲ ಮತ್ತು ಅದಕ್ಕಾಗಿಯೇ ರೈತರ ಹಿತಾಸಕ್ತಿ ವಿರುದ್ಧ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಾಗುವುದು’ ಎಂದು ರೈತರಿಗೆ ಭರವಸೆ ನೀಡಿದ್ದರು.

‘ಈರುಳ್ಳಿ ಬೆಲೆ ಹೆಚ್ಚಳದಿಂದ ರೈತರು ಲಾಭ ಮಾಡುತ್ತಿದ್ದರೆ ಅದರಲ್ಲಿ ಯಾವುದೇ ತಪ್ಪಿಲ್ಲ. ಕುಟುಂಬದ ಒಟ್ಟು ಆಹಾರ ವೆಚ್ಚದಲ್ಲಿ ಈರುಳ್ಳಿಯ ಪಾಲು ಅತ್ಯಲ್ಪವಾಗಿರುವುದರಿಂದ ಜನರು ಅಂತಹ ತಾತ್ಕಾಲಿಕ ಬೆಲೆ ಹೆಚ್ಚಳವನ್ನು ಸಹಿಸಿಕೊಳ್ಳಬೇಕು’ ಎಂದು ಪವಾರ್ ಜನರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ; ಗುರ್ಜರ್ ಜಮೀನಿಗೆ ನುಗ್ಗಿದ ಮೇಕೆಗಳು: ದಲಿತ ಮಹಿಳೆಯರಿಗೆ ಅಮಾನವೀಯವಾಗಿ ಥಳಿಸಿದ ಭೂ ಮಾಲೀಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...