Homeಮುಖಪುಟಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್‌ ಅನುಮತಿ

ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್‌ ಅನುಮತಿ

- Advertisement -
- Advertisement -

ಉತ್ತರ ಪ್ರದೇಶದ ಮಥುರಾದ ಕೃಷ್ಣ ಜನ್ಮ ಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿಯ ಆವರಣದಲ್ಲಿ ಸಮೀಕ್ಷೆ ಮಾಡುವಂತೆ ಕೋರಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ ಮಾನ್ಯ ಮಾಡಿದೆ. ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ನಡೆಸಲು ಅನುಮತಿ ನೀಡಿದೆ.

“ಶಾಹಿ ಈದ್ಗಾ ಮಸೀದಿಯನ್ನು ಸಮೀಕ್ಷೆ ಮಾಡಲು ಆಯೋಗ ರಚಿಸುವಂತೆ ಕೋರಿದ್ದ ನಮ್ಮ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದೆ. ಈ ಕುರಿತು ಹೆಚ್ಚಿನ ಮಾಹಿತಿ ಆದೇಶ ಪ್ರತಿ ದೊರೆತ ಬಳಿಕ ತಿಳಿಸಲಾಗುವುದು” ಎಂದು ಅರ್ಜಿದಾರರ ಪರ ವಕೀಲ ರಂಜನಾ ಅಗ್ನಿಹೋತ್ರಿ ಹೇಳಿದ್ದಾಗಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಮಥುರಾದ ಕೃಷ್ಣ ಜನ್ಮಭೂಮಿಯಲ್ಲಿದ್ದ ದೇವಸ್ಥಾನವನ್ನು ಕೆಡವಿ ಮೊಗಲ್ ದೊರೆ ಔರಂಗಜೇಬ್ ನಿರ್ದೇಶನದಂತೆ ಅಲ್ಲಿ ಶಾಹಿ ಈದ್ಗಾ ಮಸೀದಿ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಸುಮಾರು 12ರಷ್ಟು ಅರ್ಜಿಗಳು ಈಗಾಗಲೇ ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದು, ಎಲ್ಲಾ ಅರ್ಜಿಗಳು ಕತ್ರಾ ಕೇಶವ್ ದೇವಸ್ಥಾನಕ್ಕೆ ಹೊಂದಿಕೊಂಡಿರುವ 13.17 ಎಕರೆ ಜಾಗದಲ್ಲಿರುವ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿವೆ.

ಗುರುವಾರ ಮಧ್ಯಾಹ್ನ ಸುದ್ದಿಗಾರರೊಂದಿಗೆ ಮಾತನಾಡಿದ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್, “ಅಡ್ವೊಕೇಟ್ ಕಮಿಷನರ್ ನೇಮಕ ಮಾಡಬೇಕು ಎಂಬ ನಮ್ಮ ಬೇಡಿಕೆಗೆ ನ್ಯಾಯಾಲಯ ಒಪ್ಪಿದೆ. ಅಡ್ವೊಕೇಟ್ ಕಮಿಷನರ್ ಯಾರಾಗುತ್ತಾರೆ, ವಿಧಾನಗಳೇನು ಮತ್ತು ಅದು ತ್ರಿಸದಸ್ಯ ಸಮಿತಿಯಾಗಬಹುದೇ? ಈ ಎಲ್ಲಾ ವಿಷಯಗಳು ಡಿಸೆಂಬರ್ 18 ರಂದು ನಿರ್ಧಾರವಾಗಲಿದೆ ಎಂದಿದ್ದಾರೆ.

“ಶಾಹಿ ಈದ್ಗಾ ಮಸೀದಿಯಲ್ಲಿ ಸಾಕಷ್ಟು ಚಿಹ್ನೆಗಳಿವೆ. ಇವುಗಳ ವಾಸ್ತವಿಕ ಸ್ಥಿತಿಯನ್ನು ತಿಳಿಯಲು, ನಿಜವಾದ ಅಡ್ವೋಕೇಟ್ ಕಮಿಷನರ್ ಅಗತ್ಯವಿದೆ ಎಂದು ನಾವು ಒತ್ತಾಯಿಸಿದ್ದೇವೆ. ನ್ಯಾಯಾಲಯವು ನಮ್ಮ ಅರ್ಜಿಯನ್ನು ಅಂಗೀಕರಿಸಿದೆ” ಎಂದು ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.

ಇದನ್ನೂ ಓದಿ : ಧ್ವನಿವರ್ಧಕ ಬಳಕೆ, ಮಾಂಸ ಮಾರಾಟ ನಿಯಂತ್ರಣ ಕುರಿತು ಆದೇಶ ಹೊರಡಿಸಿದ ಮಧ್ಯಪ್ರದೇಶದ ನೂತನ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...