Homeಮುಖಪುಟಅಪ್ರಾಪ್ತೆಯ ಅತ್ಯಾಚಾರ ಪ್ರಕರಣ: ಉತ್ತರ ಪ್ರದೇಶದ ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ

ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ: ಉತ್ತರ ಪ್ರದೇಶದ ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ

- Advertisement -
- Advertisement -

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ದುದ್ಧಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಮ್ದುಲರ್ ಗೊಂಡ್‌ಗೆ ನ್ಯಾಯಾಲಯ 25 ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ. ದಂಡ ವಿಧಿಸಿದೆ.

ಡಿಸೆಂಬರ್ 12 ರಂದು ಸೋನಭದ್ರಾ ಜಿಲ್ಲಾ ಹೆಚ್ಚುವರಿ ನ್ಯಾಯಾಲಯವು ಶಾಸಕ ಗೊಂಡ್ ತಪ್ಪಿತಸ್ಥ ಎಂದು ಘೋಷಿಸಿತ್ತು. ಆತ 2014 ರಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವುದು ಸಾಕ್ಷ್ಯಾಧಾರಗಳಿಂದ ರುಜುವಾತಾಗಿದೆ ಎಂದು ತೀರ್ಪು ನೀಡಿತ್ತು. ಶಾಸಕನ ಮೇಲೆ ಐಪಿಸಿ ಸೆಕ್ಷನ್ 376, 506 ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಸೋನಭದ್ರಾ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಇಹ್ಸಾನುಲ್ಲಾ ಖಾನ್ ಅವರು 2014 ರ ಅತ್ಯಾಚಾರ ಪ್ರಕರಣದಲ್ಲಿ ಶಾಸಕರ ಗೊಂಡ್‌ ತಪ್ಪಿತಸ್ಥನೆಂದು ತೀರ್ಪು ನೀಡಿದ್ದು, ಶಿಕ್ಷೆ ಪ್ರಕಟಿಸಿರುವುದಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಪೋಕ್ಸೊ) ಸತ್ಯಪ್ರಕಾಶ್ ತ್ರಿಪಾಠಿ ಅವರು ಹೇಳಿದ್ದಾರೆ.

ಎರಡು ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆಯಾದ ಕಾರಣ ರಾಮ್ದುಲರ್ ಗೊಂಡ್‌ಗೆ ಸುಪ್ರೀಂ ಕೋರ್ಟ್‌ ಆದೇಶದಂತೆ ತನ್ನ ಶಾಸಕ ಸ್ಥಾನ ಕಳೆದುಕೊಳ್ಳಲಿದ್ದಾರೆ. ಸುಪ್ರೀಂ ಕೋರ್ಟ್‌ನ 2013 ರ ತೀರ್ಪಿನ ಪ್ರಕಾರ, ಯಾವುದೇ ಸಂಸದ ಅಥವಾ ಶಾಸಕ ಅಪರಾಧದ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ರುಜುವಾತಾಗಿ, ಅವರಿಗೆ ಕನಿಷ್ಠ ಎರಡು ವರ್ಷಗಳ ಜೈಲು ಶಿಕ್ಷೆ ಘೋಷಣೆಯಾದರೆ ತಕ್ಷಣವೇ ಜಾರಿಗೆ ಬರುವಂತೆ ಅವರು ಸಂಸತ್ ಮತ್ತು ವಿಧಾನಮಂಡಲದ ಸದಸ್ಯತ್ವವನ್ನು ಕಳೆದುಕೊಳ್ಳಲಿದ್ದಾರೆ ಎಂದು ಸಂತ್ರಸ್ಥೆ ಪರ ವಕೀಲ ಸತ್ಯಪ್ರಕಾಶ್ ಸಖ್ಯ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಶಾಸಕ ತಪ್ಪಿತಸ್ಥ ಎಂದು ರುಜುವಾತಾಗಿದೆ. ಎಂಟು ಪ್ರಾಸಿಕ್ಯೂಷನ್ ಮತ್ತು ಮೂವರು ಡಿಫೆನ್ಸ್ ಸಾಕ್ಷಿಗಳನ್ನು ನ್ಯಾಯಾಲಯವು ಪರಿಶೀಲಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಶಾಸಕನಿಗೆ ಶಿಕ್ಷೆಯಾಗಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದ ಅತ್ಯಾಚಾರ ಸಂತ್ರಸ್ತೆಯ ಸಹೋದರ, ರಾಮ್ದುಲರ್ ಗೊಂಡ್ ಶಾಸಕನಾದ ನಂತರ ಗೊಂಡ್ ನಮ್ಮ ಕುಟುಂಬಕ್ಕೆ ಕಿರುಕುಳ ನೀಡಿದ್ದ. ಪ್ರಕರಣವನ್ನು ಹಿಂಪಡೆಯುವಂತೆ ಒತ್ತಡ ಹೇರಿದ್ದ ಎಂದು ಆರೋಪಿಸಿದ್ದಾರೆ.

ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ, ಆರೋಪಿ ರಾಮ್ದುಲರ್ ಗೊಂಡ್‌ನ ಪತ್ನಿ ಗ್ರಾಮದ ಮುಖ್ಯಸ್ಥರಾಗಿದ್ದರು. ನವೆಂಬರ್ 4,2014 ರ ಸಂಜೆ ಸಂತ್ರಸ್ತೆ ಬಹಿರ್ದೆಸೆಗೆ ಮನೆ ಬಳಿಯ ಹೊಲಕ್ಕೆ ಹೋದಾಗ ಅಪರಾಧಿ ಗೊಂಡ್ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ.

ಬಾಲಕಿ ಘಟನಾ ಸ್ಥಳದಿಂದ ಮನೆಗೆ ಬಂದು ರೈತನಾಗಿದ್ದ ತನ್ನ ಅಣ್ಣನಿಗೆ ವಿಷಯ ತಿಳಿಸಿದ್ದಳು. ಪ್ರಭಾವಿ ವ್ಯಕ್ತಿಯಾಗಿದ್ದ ಆರೋಪಿಯ ಮುಂದೆ ಬಾಲಕಿಯ ಅಣ್ಣ ಏನು ಮಾಡುವಂತೆ ಇರಲಿಲ್ಲ. ಇದನ್ನೇ ಲಾಭ ಮಾಡಿಕೊಂಡ ಆರೋಪಿ ಬಾಲಕಿಯ ಅಣ್ಣನಿಗೆ ಬೆದರಿಕೆ ಹಾಕಿ, ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದ. ಆತನ ಕಿರುಕುಳ ತಾಳಲಾರದೆ, ಕೊನೆಗೆ ಬಾಲಕಿಯ ತಂದೆ ಸೋನಭದ್ರಾ ಜಿಲ್ಲೆಯ ಮೈರಪುರ ಪೊಲೀಸರಿಗೆ ದೂರು ನೀಡಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಬಳಿಕ ಆತ ಬಿಡುಗಡೆಗೊಂಡಿದ್ದ.

ಘಟನೆ ನಡೆದಾಗ ಅಪರಾಧಿ ಶಾಸಕನಾಗಿರಲಿಲ್ಲ. ಬಳಿಕ 2022 ರ ವಿಧಾನಸಭಾ ಚುನಾವಣೆಯಲ್ಲಿ ಆರೋಪಿ ಗೊಂಡ್ ದುದ್ಧಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಮಾಜವಾದಿ ಪಕ್ಷದ ವಿಜಯ್ ಸಿಂಗ್ ಅವರನ್ನು 6,723 ಮತಗಳಿಂದ ಸೋಲಿಸಿ ಶಾಸಕನಾಗಿದ್ದ.

ಇದನ್ನೂ ಓದಿ : ಜೀವನ ಕೊನೆಗೊಳಿಸಲು ಅನುಮತಿ ನೀಡಿ; ಲೈಂಗಿಕ ಕಿರುಕುಳದಿಂದ ನೊಂದು ಸಿಜೆಐಗೆ ಪತ್ರ ಬರೆದ ನ್ಯಾಯಾಧೀಶೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...