Homeಮುಖಪುಟಶುಕ್ರವಾರದ ನಮಾಝ್‌ಗೆ ನಿರಂತರ ಅವಕಾಶ ನಿರಾಕರಣೆ; ಕಣಿವೆ ರಾಜ್ಯದಲ್ಲಿ ಧಾರ್ಮಿಕ ಹಕ್ಕಿನ ಉಲ್ಲಂಘನೆ

ಶುಕ್ರವಾರದ ನಮಾಝ್‌ಗೆ ನಿರಂತರ ಅವಕಾಶ ನಿರಾಕರಣೆ; ಕಣಿವೆ ರಾಜ್ಯದಲ್ಲಿ ಧಾರ್ಮಿಕ ಹಕ್ಕಿನ ಉಲ್ಲಂಘನೆ

- Advertisement -
- Advertisement -

ಕಾಶ್ಮೀರದ ಐತಿಹಾಸಿಕ ಅಂಜುಮನ್ ಔಕಾಫ್ ಜುಮಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ಅಧಿಕಾರಿಗಳು ನಿರಂತರವಾಗಿ ಅನುಮತಿ ನಿರಾಕರಿಸುತ್ತಿದ್ದಾರೆ. ಆದರೆ ಈ ಬಗ್ಗೆ ಅಧಿಕಾರಿಗಳು ಯಾವುದೇ ಅಧಿಕೃತ ವಿವರಣೆಯನ್ನು ಕೊಟ್ಟಿಲ್ಲ. ಪ್ಯಾಲೆಸ್ತೀನ್‌ ಪರ ಪ್ರತಿಭಟನೆ ನಡೆಯಬಹುದು ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರಬಹುದು ಎಂದು ಕಲ್ಪಿತ ಕಾರಣವನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಮಸೀದಿಯಲ್ಲಿ ಶುಕ್ರವಾರದ ಸಾಮೂಹಿಕ ನಮಾಝ್‌ ನಡೆಯದೆ 10 ಶುಕ್ರವಾರಗಳೇ ಕಳೆದಿದ್ದು, ನಮ್ಮ ಧಾರ್ಮಿಕ ಹಕ್ಕನ್ನು ಅಧಿಕಾರಿಗಳು ಕಸಿದುಕೊಳ್ಳುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

14ನೇ ಶತಮಾನದ ಅಂಜುಮನ್ ಔಕಾಫ್ ಜಮಾ ಮಸೀದಿಯ ಆಡಳಿತ ಮಂಡಳಿ ಈ ಬಗ್ಗೆ ಹೇಳಿಕೆಯನ್ನು ನೀಡಿದ್ದು,  ಶ್ರೀನಗರದ ಅಧಿಕಾರಿಗಳು ಹುರಿಯತ್ ಮುಖ್ಯಸ್ಥ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಗೃಹಬಂಧನದಲ್ಲಿ ಇರಿಸಿದ್ದಾರೆ. ಕಾಶ್ಮೀರದ ಮುಖ್ಯ ಧರ್ಮಗುರುಗಳೂ ಆಗಿರುವ ಮಿರ್ವೈಜ್ ಅವರು  ಶುಕ್ರವಾರದ ಪ್ರಾರ್ಥನೆ ಮತ್ತು ಇತರ ಪ್ರಮುಖ ಧಾರ್ಮಿಕ ದಿನಗಳಲ್ಲಿ ಮಸೀದಿಯಲ್ಲಿ ಮುಖ್ಯ ಧರ್ಮೋಪದೇಶವನ್ನು ನೀಡುತ್ತಿದ್ದರು. ಮಸೀದಿಯಲ್ಲಿ ಪ್ರಾರ್ಥನೆಗೆ ನಿರ್ಬಂಧಿಸಿರುವುದಕ್ಕೆ ಮತ್ತು ಧರ್ಮಗುರುವಿಗೆ ಗೃಹ ಬಂಧನ ವಿಧಿಸಿರುವುದಕ್ಕೆ ಅಧಿಕಾರಿಗಳು ಯಾವುದೇ ಕಾರಣವನ್ನು ನೀಡಿಲ್ಲ ಎಂದು ಮಸೀದಿಯ ವ್ಯವಸ್ಥಾಪಕ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಿರ್ವೈಜ್,  ಅಧಿಕಾರಿಗಳು ಜಾಮಿಯಾ ಮಸೀದಿಯನ್ನು ಗುರಿಯಾಗಿಸಿದ್ದಾರೆ. ಕಣಿವೆ ರಾಜ್ಯದ ಮುಸ್ಲಿಮರಿಗೆ ದುಃಖವನ್ನುಂಟುಮಾಡಲು ಮತ್ತು ಅವರಿಗೆ ಆಧುನಿಕ ಕಾಶ್ಮೀರದಲ್ಲಿ ಅವರ ಸ್ಥಾನಮಾನವನ್ನು ತೋರಿಸಲು ಈ ರೀತಿಯಾಗಿ ಮಾಡಲಾಗುತ್ತಿದೆ. ಮುಸ್ಲಿಮರ ಧಾರ್ಮಿಕ ಭಾವನೆಗಳೊಂದಿಗೆ ಆಟವಾಡುವುದನ್ನು ಸರಕಾರ ನಿಲ್ಲಿಸಬೇಕು ಮತ್ತು ಅವರು ತಮ್ಮ ಮಸೀದಿಗಳಲ್ಲಿ ಅಡೆತಡೆಗಳಿಲ್ಲದೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು. ಜನರ ಮೌನ ಮತ್ತು ಅವರ ಧಾರ್ಮಿಕ ಹಕ್ಕುಗಳ ಮೇಲೆ ಲಜ್ಜೆಗೆಟ್ಟು ದಾಳಿಗಳನ್ನು ಮಾಡುವಾಗ ಪ್ರತಿಕ್ರಿಯಿಸದಿರುವಿಕೆ ನಮ್ಮ ದೌರ್ಬಲ್ಯ ಎಂದು ತಪ್ಪಾಗಿ ಭಾವಿಸಬಾರದು ಎಂದು ಹೇಳಿದ್ದಾರೆ.

ನಾಲ್ಕು ವರ್ಷಗಳ ಗೃಹ ಬಂಧನದ ಬಳಿಕ ಮಿರ್ವೈಜ್ ಅವರನ್ನು ಇತ್ತೀಚೆಗೆ ಗೃಹಬಂಧನದಿಂದ ಬಿಡುಗಡೆ ಮಾಡಲಾಗಿತ್ತು. ಅವರಿಗೆ ಶ್ರೀನಗರದ ನೌಹಟ್ಟಾ ಪ್ರದೇಶದ ಮಸೀದಿಯಲ್ಲಿ ಶುಕ್ರವಾರ ಧರ್ಮೋಪದೇಶವನ್ನು ನೀಡಲು ಅವಕಾಶ ಮಾಡಿಕೊಡಲಾಗಿತ್ತು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ನಂತರ ಮೊದಲ ಬಾರಿಗೆ ಅವರು ಜನರನ್ನು ಉದ್ದೇಶಿಸಿ ಮಾತನಾಡುವಾಗ ಮಸೀದಿಯಲ್ಲಿ ಅವರು ಭಾವುಕರಾಗಿದ್ದರು. ಸಾವಿರಾರು ಜನರು ಮಸೀದಿಯಲ್ಲಿ ಅವರು ಭಾವುಕರಾಗಿ ಮಾತನಾಡುವುದರಿಂದ ಕಾನೂನು-ಸುವ್ಯವಸ್ಥೆ ಅಡಚಣೆಯಾಗಬಹುದು ಎನ್ನುವುದು ಅಧಿಕಾರಿಗಳು ಕೊಡುತ್ತಿರುವ ಕಾರಣವಾಗಿದೆ.

ಮಿರ್ವೈಜ್ ಅವರು ಸೆ.22 ರಂದು ಬಿಡುಗಡೆಯಾದಾಗಿನಿಂದ ಎರಡು ಶುಕ್ರವಾರ ಮಸೀದಿಯಲ್ಲಿ ತಮ್ಮ ಧರ್ಮೋಪದೇಶವನ್ನು ನೀಡಿದ್ದರು. ಅಧಿಕಾರಿಗಳು ಜಾಮಿಯಾ ಮಸೀದಿಯಲ್ಲಿ ಪ್ರಾರ್ಥನೆಗೆ ಅನುಮತಿ ನಿರಾಕರಿಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ ಮಸೀದಿಯ ಆಡಳಿತ ಮಂಡಳಿಯು ಅಧಿಕಾರಿಗಳು ಭದ್ರತಾ ಕಾಳಜಿಯ ಕಾರಣ ನೀಡಿ ಕಾಶ್ಮೀರದ ಜನರ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಆರ್ಟಿಕಲ್ 370ನ್ನು ರದ್ದು ಮಾಡಿ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕೇಂದ್ರ ಸರ್ಕಾರದ  ಆಗಸ್ಟ್ 5, 2019ರ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದ ವೇಳೆಯೇ ಈ ಐತಿಹಾಸಿಕ ಮಸೀದಿಯಲ್ಲಿ ಪ್ರಾರ್ಥನೆಗೆ ನಿರಾಕರಿಸಲಾಗಿದೆ.

ಕಳೆದ ತಿಂಗಳು ಗಾಝಾವನ್ನು ಬೆಂಬಲಿಸಿ ಪ್ರತಿಭಟನೆಗಳನ್ನು ನಡೆಸಬಹುದು ಎಂಬ ಆತಂಕದಿಂದ ಅಧಿಕಾರಿಗಳು ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ಅವಕಾಶ ನೀಡಿರಲಿಲ್ಲ. ಇದಲ್ಲದೆ ಸೂಫಿ ಸಂತರ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಸಮಸ್ಯೆಯನ್ನು ಪ್ರಸ್ತಾಪಿಸುವುದನ್ನು ತಪ್ಪಿಸಬೇಕು ಮತ್ತು ಪ್ಯಾಲೆಸ್ತೀನ್‌ ಸಮಸ್ಯೆ ಬಗ್ಗೆ ಮಸೀದಿಯಲ್ಲಿ ಧ್ವನಿ ಎತ್ತಬಾರದು ಎಂದು ಜಮ್ಮು-ಕಾಶ್ಮೀರದ ವಕ್ಫ್ ಮಂಡಳಿಯ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ.

ಇದನ್ನು ಓದಿ: ಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...