HomeUncategorizedಜೈಪುರ ರೈಲಿನಲ್ಲಿ ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ತಿರಸ್ಕಾರ

ಜೈಪುರ ರೈಲಿನಲ್ಲಿ ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ತಿರಸ್ಕಾರ

- Advertisement -
- Advertisement -

ಜೈಪುರದಲ್ಲಿ ಮೂವರು ಮುಸ್ಲಿಂ ಪ್ರಯಾಣಿಕರು ಮತ್ತು ತನ್ನ ಹಿರಿಯ ಅಧಿಕಾರಿಯನ್ನು ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿಟ್ಟು ಹತ್ಯೆ ಮಾಡಿದ್ದ ಆರೋಪಿ ಆರ್‌ಪಿಎಫ್ ಪೇದೆಯಾಗಿದ್ದ ಚೇತನ್‌ ಸಿಂಗ್‌ ಚೌಧರಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಜಾಮೀನು ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂಬ ಪ್ರತಿವಾದಿಗಳ ವಾದವನ್ನು ಪರಿಗಣಿಸಿದೆ.

ಮಹಾರಾಷ್ಟ್ರದ ಜೈಲಿನಲ್ಲಿರುವ ಚೌಧರಿ ವಿಚಾರಣೆ ಭಾಗವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಕಳೆದ ತಿಂಗಳು ವಕೀಲರಾದ ಅಮಿತ್ ಮಿಶ್ರಾ ಮತ್ತು ಪಂಕಜ್ ಘಿಲ್ಡಿಯಾಲ್ ಅವರ ಮೂಲಕ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದ ಆರೋಪಿಯು, ತಾನು ಭೂತ ಭ್ರಮೆಗಳಿಂದ ಬಳಲುತ್ತಿದ್ದೇನೆ, ನನ್ನನ್ನು ಇನ್ನೊಂದು ಆತ್ಮ ವಶಪಡಿಸಿಕೊಂಡಿರುವಂತೆ ಭಾಸವಾಗುತ್ತದೆ ಎಂದು ಹೇಳಿದ್ದ. ಪೊಲೀಸರು ಜಾಮೀನು ಅರ್ಜಿಗೆ ವಿರೋಧಿಸಿದ್ದು, ಆರೋಪಿ ನಿರ್ದಿಷ್ಟ ಸಮುದಾಯದ ಬಗ್ಗೆ ಕೋಪ ಮತ್ತು ದ್ವೇಷವನ್ನು ಹೊಂದಿದ್ದ ಮತ್ತು ಮಾಡಿದ ಅಪರಾಧಕ್ಕೆ ಯಾವುದೇ ಪಶ್ಚಾತ್ತಾಪವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಆರೋಪಿಗೆ ಜಾಮೀನು ಮಂಜೂರು ಮಾಡಿದರೆ, ಅದು ಕಾನೂನಿನ ಬಗ್ಗೆ ನಕಾರಾತ್ಮಕ ಚಿತ್ರಣವನ್ನು ಸೃಷ್ಟಿಸುತ್ತದೆ ಮತ್ತು ಕೆಲವು ಧಾರ್ಮಿಕ ಗುಂಪುಗಳಲ್ಲಿ ಭಯ, ಭೀತಿ ಮತ್ತು ಅಭದ್ರತೆಯನ್ನು ಉಂಟುಮಾಡಬಹುದು ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಸರ್ಕಾರಿ ರೈಲ್ವೆ ಪೊಲೀಸರು ಕೋರ್ಟ್‌ ಗಮನಕ್ಕೆ ತಂದಿದ್ದರು.

ಸಂತ್ರಸ್ತ ಅಸ್ಗರ್ ಶೇಖ್ ಅವರ ಪತ್ನಿ ಉಮೇಸಾ ಖಾತೂನ್ ಅವರು ತಮ್ಮ ವಕೀಲರಾದ ಕರೀಂ ಪಠಾಣ್ ಮತ್ತು ಫಜ್ಲುರ್ರಹ್ಮಾನ್ ಶೇಖ್ ಅವರ ಮೂಲಕ ಚೌಧರಿಗೆ ಜಾಮೀನು ನೀಡುವುದನ್ನು ವಿರೋಧಿಸಿದ್ದಾರೆ. ಆರೋಪಿಯು ಭಯೋತ್ಪಾದಕ ಮನೋಭಾವದ ವ್ಯಕ್ತಿಯಾಗಿದ್ದಾನೆ ಮತ್ತು ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದ್ದಾನೆ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದರು.

ಜು.31ರಂದು ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ರೈಲಿನಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಟಿಕಾರಾಂ ಮೀನಾ ಮತ್ತು ಮೂವರು ಪ್ರಯಾಣಿಕರಾದ ಅಬ್ದುಲ್ ಕಾದರ್ ಮೊಹಮ್ಮದ್ ಹುಸೇನ್ ಭಾನ್‌ಪುರವಾಲಾ, ಸೈಯದ್ ಸೈಫುದ್ದೀನ್ ಮತ್ತು ಅಸ್ಗರ್ ಅಬ್ಬಾಸ್ ಶೇಖ್ ಅವರನ್ನು ಚೇತನ್‌ ಸಿಂಗ್‌ ಗುಂಡಿಟ್ಟು ಹತ್ಯೆ ಮಾಡಿದ್ದ. ಆಘಾತಕಾರಿ ಘಟನೆಯನ್ನು ಇತರ ಪ್ರಯಾಣಿಕರು ವಿಡಿಯೋ ಮಾಡಿದ್ದರು. ವಿಡಿಯೋದಲ್ಲಿ ಗಡ್ಡದಾರಿ ಮುಸ್ಲಿಮರ ಮೇಲೆ ಚೇತನ್‌ ಸಿಂಗ್‌ ಫೈರಿಂಗ್‌ ಮಾಡುವುದು ಸೆರೆಯಾಗಿತ್ತು. ಈತ ವಿಡಿಯೋದಲ್ಲಿ ಮುಸ್ಲಿಮರು ಪಾಕಿಸ್ತಾನದಿಂದ ಕಾರ್ಯಾಚರಿಸುತ್ತಿದ್ದಾರೆ. ಇದನ್ನು ಮಾದ್ಯಮಗಳು ತೋರಿಸುತ್ತಿರುವುದು. ನೀವು ಭಾರತದಲ್ಲಿ ಬದುಕಲು ಬಯಸುವುದಾದರೆ ಮೋದಿ, ಯೋಗಿ ಹಾಗೂ ನಿಮ್ಮ ಠಾಕ್ರೆಗೆ ಮತ ಚಲಾಯಿಸಿ ಎಂದು ಹೇಳಿರುವುದು ಕೂಡ ವೀಡಿಯೊದಲ್ಲಿ ದಾಖಲಾಗಿದೆ.

ಘಟನೆಯ ನಂತರ ಚೌಧರಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯಿದೆ ಮತ್ತು ಭಾರತೀಯ ರೈಲ್ವೇ ಕಾಯ್ದೆಯ ಸೆಕ್ಷನ್‌ಗಳು ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿತ್ತು. ಘಟನೆಯ ಕುರಿತು ಸಮಗ್ರ ತನಿಖೆಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರೈಲ್ವೆ ಮಂಡಳಿ ರೂಪಿಸಿತ್ತು.

ಉತ್ತರಪ್ರದೇಶದ ಹತ್ರಾಸ್‌ ಮೂಲದ ಚೇತನ್ ಸಿಂಗ್‌ನನ್ನು ಕಳೆದ ಮಾರ್ಚ್‌ನಲ್ಲಿ ಭಾವನಗರ ವಿಭಾಗದಿಂದ ಮುಂಬೈಗೆ ವರ್ಗಾವಣೆ ಮಾಡಲಾಗಿತ್ತು. ಆ ಬಳಿಕ ಹತ್ರಾಸ್‌ಗೆ ಭೇಟಿ ನೀಡಿದ್ದ ದುಷ್ಕರ್ಮಿ ಜು.17ರಂದು ಊರಿಗೆ ಹಿಂದಿರುಗಿದ್ದ. ಈತ ರೈಲಿನಲ್ಲಿ ಕೃತ್ಯದ ಬಳಿಕ ಪರಾರಿಯಾಗಲು ಯತ್ನಿಸಿದ್ದು ರೈಲ್ವೆ ಪೊಲೀಸ್ ಸಿಬ್ಬಂದಿ  ಬಂಧಿಸಿದ್ದರು.

ಇದನ್ನು ಓದಿ: ಇಸ್ರೇಲ್‌ನಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಸಿದ ಮೂವರು ನಾಗರಿಕರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...