Homeಕರ್ನಾಟಕಮಧ್ಯಪ್ರದೇಶ: ಹಿಂದುಳಿದ ವರ್ಗದ ನಾಯಕ ಪಟ್ವಾರಿಗೆ ಕಾಂಗ್ರೆಸ್‌ ಸಾರಥ್ಯ

ಮಧ್ಯಪ್ರದೇಶ: ಹಿಂದುಳಿದ ವರ್ಗದ ನಾಯಕ ಪಟ್ವಾರಿಗೆ ಕಾಂಗ್ರೆಸ್‌ ಸಾರಥ್ಯ

- Advertisement -
- Advertisement -

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕಳಪೆ ಸಾಧನೆ ಬಳಿಕ ಇದೀಗ ರಾಜ್ಯ ಘಟಕದ ಅಧ್ಯಕ್ಷರನ್ನು ಬದಲಾವಣೆ ಮಾಡಿದೆ. ಮಧ್ಯಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ  ಹಿಂದುಳಿದ ವರ್ಗಗಳ ನಾಯಕ ಜಿತು ಪಟ್ವಾರಿ ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಮಧ್ಯಪ್ರದೇಶದಲ್ಲಿ ಒಬಿಸಿ ಸಮುದಾಯದ ನಾಯಕನಿಗೆ ಸಿಎಂ ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿಗೆ ಸೆಡ್ಡು ಹೊಡೆದಿದೆ.

ಇದಲ್ಲದೆ ಉಮಂಗ್ ಸಿಂಘರ್ ಅವರನ್ನು ಸಿಎಲ್‌ಪಿ ನಾಯಕರನ್ನಾಗಿ ಮತ್ತು ಹೇಮಂತ್ ಕಟಾರೆ ಅವರನ್ನು ಮಧ್ಯಪ್ರದೇಶದ ಉಪ ನಾಯಕರನ್ನಾಗಿ ನೇಮಿಸುವ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿದ್ದಾರೆ.

ತಕ್ಷಣದಿಂದ ಜಾರಿಗೆ ಬರುವಂತೆ ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಜಿತು ಪಟ್ವಾರಿ ಅವರನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷವು ಎಕ್ಸ್‌ನಲ್ಲಿ ಮಾಡಿದ ತನ್ನ ಅಧಿಕೃತ ಪೋಸ್ಟ್‌ನಲ್ಲಿ ತಿಳಿಸಿದ್ದು, ನಿರ್ಗಮಿತ ಅಧ್ಯಕ್ಷರಾದ ಕಮಲ್ ನಾಥ್ ಅವರ ಕೊಡುಗೆಗಳನ್ನು ಪಕ್ಷವು ಪ್ರಶಂಸಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಮಧ್ಯಪ್ರದೇಶ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ಮತ್ತು 2024ರಲ್ಲಿ ಲೋಕಸಭಾ ಚುನಾವಣೆಯನ್ನು ಮುಂದಿಟ್ಟು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಈ ಮಹತ್ವದ ಬದಲಾವಣೆ ಮಾಡಿದೆ.

ಜಿತು ಪಟ್ವಾರಿ ಯಾರು?

49 ವರ್ಷದ ಜಿತು ಪಟ್ವಾರಿ ಅವರು ಮಧ್ಯಪ್ರದೇಶದ ಪ್ರಭಾವಿ ಕಾಂಗ್ರೆಸ್‌ ನಾಯಕರಲ್ಲಿ ಓರ್ವರಾಗಿದ್ದಾರೆ. 2013ರಲ್ಲಿ ರಾವು ಕ್ಷೇತ್ರದಿಂದ ಶಾಸಕರಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದ ಜಿತು ಪಟ್ವಾರಿ, ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಕಾರ್ಯದರ್ಶಿಯಾಗಿದ್ದರು. ಗುಜರಾತ್‌ ಕಾಂಗ್ರೆಸ್‌ನ ಉಸ್ತುವಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 2023ರ ಚುನಾವಣೆಯಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದರು. ಅವರು 2018ರಲ್ಲಿ ರಾವು ಕ್ಷೇತ್ರದಿಂದ ಎರಡನೇ ಬಾರಿಗೆ ಚುನಾವಣೆಯಲ್ಲಿ ಗೆಲುವನ್ನು ಕಂಡಿದ್ದರು. ನಂತರ ಕಮಲ್ ನಾಥ್ ನೇತೃತ್ವದ ಸರ್ಕಾರದಲ್ಲಿ ಪಟ್ವಾರಿ ಅವರು ಉನ್ನತ ಶಿಕ್ಷಣ, ಯುವಜನ ಮತ್ತು ಕ್ರೀಡಾ ವ್ಯವಹಾರಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

2018ರಲ್ಲಿ ಕಮಲ್ ನಾಥ್ ಅವರನ್ನು ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿ (MPCC) ಮುಖ್ಯಸ್ಥರನ್ನಾಗಿ ನೇಮಿಸಿದಾಗ, ಪಟ್ವಾರಿ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಏಪ್ರಿಲ್ 2020ರಲ್ಲಿ ಅವರನ್ನು ಕಮಲನಾಥ್‌ ಅವರು ಕಾಂಗ್ರೆಸ್‌ನ ರಾಜ್ಯ ಮಾಧ್ಯಮ ಘಟಕದ ಅಧ್ಯಕ್ಷರಾಗಿ ನೇಮಿಸಿದ್ದರು.

ಪಟ್ವಾರಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ನಿಕಟವರ್ತಿಯಾಗಿದ್ದಾರೆ. ಕಟಾರೆಯವರ ತಂದೆ ಸತ್ಯದೇವ್ ಕಟಾರೆ ಕೂಡ ರಾಜ್ಯದಲ್ಲಿ ಗೃಹ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಬಿಜೆಪಿಯು ಒಬಿಸಿ ಸಮುದಾಯದ ಮೋಹನ್ ಯಾದವ್ ಅವರನ್ನು ಸಿಎಂ ಆಗಿ, ಬ್ರಾಹ್ಮಣ ಸಮುದಾಯದ ರಾಜೇಂದ್ರ ಶುಕ್ಲಾ ಮತ್ತು ದಲಿತ ಸಮುದಾಯದ ಜಗದೀಶ್ ದೇವದಾ ಅವರನ್ನು ಡಿಸಿಎಂ ಆಗಿ ನೇಮಿಸಿದ ಬೆನ್ನಲ್ಲೇ ಕಾಂಗ್ರೆಸ್ ಈ ನೇಮಕಾತಿಯನ್ನು ಮಾಡಿದೆ.

ನವೆಂಬರ್ 17ರಂದು ನಡೆದ 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ 163 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ಉಳಿಸಿಕೊಂಡರೆ, ಕಾಂಗ್ರೆಸ್ 66 ಸ್ಥಾನಗಳನ್ನು ಪಡೆದುಕೊಂಡಿದೆ. ಇದು 2018ರಲ್ಲಿ ಕಾಂಗ್ರೆಸ್‌ ಗೆದ್ದ 114 ಸ್ಥಾನಗಳಿಗಿಂತ ಕಡಿಮೆಯಾಗಿದೆ.

ಇದಕ್ಕೆ ಮೊದಲು ಕಾಂಗ್ರೆಸ್ ಛತ್ತೀಸ್‌ಗಢ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಬೈಜ್ ಮತ್ತು ಛತ್ತೀಸ್‌ಗಢದ ಸಿಎಲ್‌ಪಿ ನಾಯಕರಾಗಿ ಚರಣ್ ದಾಸ್ ಮಹಂತ್ ಅವರನ್ನು ನೇಮಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...