Homeಅಂತರಾಷ್ಟ್ರೀಯಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

- Advertisement -
- Advertisement -

ಗಾಝಾದ ಮೇಲೆ ಇಸ್ರೇಲ್ ಕಳೆದ 10 ವಾರಗಳಿಂದ ದಾಳಿಯನ್ನು ನಡೆಸುತ್ತಿದೆ. 19,000ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರು ಯುದ್ಧದಿಂದ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಬಾಂಬ್‌ಗಳ ದಾಳಿಯಲ್ಲಿ ನಾಗರಿಕರ ಸಾವು ಒಂದೆಡೆಯಾದರೆ, ಇನ್ನೊಂದೆಡೆ ಯುದ್ಧದಿಂದಾಗಿ ಗಾಝಾದಲ್ಲಿ ಭೀಕರ ಸ್ಥಿತಿ ಎದುರಾಗಿದ್ದು, ಸಾಂಕ್ರಾಮಿಕ ರೋಗಗಳು ಉದ್ಭವಿಸುತ್ತಿದೆ.

ಗಾಝಾದಲ್ಲಿ ಆರೋಗ್ಯ ವ್ಯವಸ್ಥೆಯು ಕುಸಿಯುತ್ತಿದೆ ಮತ್ತು ಸಾಂಕ್ರಾಮಿಕ ರೋಗಗಳ ಆತಂಕಕಾರಿಯಾಗಿ ಹೊರಹೊಮ್ಮಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಎಚ್ಚರಿಕೆ ನೀಡಿತ್ತು. ಆದರೆ ಇದೀಗ ಗಾಝಾದಲ್ಲಿ ಆ ಪರಿಸ್ಥಿತಿ ಎದುರಾಗಿದೆ.

ಗಾಝಾ ನಗರದ ಖಾನ್ ಯೂನಿಸ್‌ ನಗರದ ತಹಾನಿ ಅಬು ತೈಮಾ ಅವರು ಈ ಬಗ್ಗೆ ಮಾತನಾಡುತ್ತಾ, ಇಸ್ರೇಲ್‌ ದಾಳಿಗೆ ಓರ್ವ ಪುತ್ರ ಮತ್ತು ಓರ್ವ ಸಹೋದರನನ್ನು ನಾನು ಕಳೆದುಕೊಂಡಿದ್ದೇನೆ. ಈಗ ಸಾಂಕ್ರಾಮಿಕ ರೋಗ ಇನ್ನುಳಿದ ನನ್ನ ಕುಟುಂಬದ ಸದಸ್ಯರನ್ನು ಬಲಿ ಪಡೆಯುತ್ತದೆ ಎಂಬ ಭೀತಿ ನನಗೆ ಕಾಡುತ್ತಿದೆ ಎಂದು ಹೇಳಿದ್ದಾರೆ. ಅಬು ತೈಮಾ ಅವರ 2 ವರ್ಷದ ಮಗಳು ಅತಿಸಾರ, ವಾಂತಿಯಿಂದ ಬಳಲುತ್ತಿದ್ದಾರೆ ಮತ್ತು ಶೀತ ಮತ್ತು ಆಹಾರದ ಕೊರತೆಯಿಂದ ನಡುಗುತ್ತಿದ್ದಾರೆ. ಮಗು ನನ್ನಲ್ಲಿ ಆಹಾರವನ್ನು ಕೇಳುತ್ತದೆ, ಆದರೆ ನಾನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದಾರೆ.

42 ವರ್ಷದ ಅಬು ತೈಮಾ ಅವರಿಗೆ ಕ್ಯಾನ್ಸರ್ ಇದೆ. ಈಗ ಅವರು ತೀವ್ರವಾದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಯುದ್ಧದಿಂದಾಗಿ ಧೂಳು ಮತ್ತು ಇತರ ಕಣಗಳಿಂದಾಗಿ ಮಾಲಿನ್ಯ ಉಂಟಾಗಿ ಈ ಸಮಸ್ಯೆ ಉದ್ಭವಿಸಿದೆ ಎಂದು ಅವರು ಹೇಳಿದ್ದಾರೆ. ಇದಲ್ಲದೆ ವಿದ್ಯುತ್‌ ಇಲ್ಲದ ಕಾರಣ ಬೆಳಕಿಗಾಗಿ ನಾನು  ಉರುವಲುಗಳನ್ನು ಸುಡುತ್ತೇನೆ. ಹೊಗೆ ನನ್ನನ್ನು ಕೊಲ್ಲುತ್ತದೆ ಎಂದು ನನಗೆ ಗೊತ್ತಿದೆ ಆದರೆ ನನಗೆ ಬೇರೆ ದಾರಿಯಿಲ್ಲ. ನನ್ನ ಕುಟುಂಬವು ನಾಸರ್ ಆಸ್ಪತ್ರೆಯಲ್ಲಿ ಆಶ್ರಯ ಪಡೆದಿದೆ. ಆಸ್ಪತ್ರೆಯು ಗಂಭೀರವಾಗಿ ಗಾಯಗೊಂಡವರಿಗೆ ಮಾತ್ರ ಸೀಮಿತ ಚಿಕಿತ್ಸೆಯನ್ನು ನೀಡುತ್ತಿದೆ. ರೋಗಿಗಳು ಮತ್ತು ಆಶ್ರಯ ಪಡೆದ ಜನರು ಶುದ್ಧ ನೀರಿಗಾಗಿ ಪರದಾಡುತ್ತಿದ್ದಾರೆ. ನೈರ್ಮಲ್ಯಗಳಿಲ್ಲ, ಕಿಕ್ಕಿರಿದ ಜನರಿಂದ ಸೋಂಕುಗಳು ವೇಗವಾಗಿ ಹರಡುತ್ತಿವೆ ಎಂದು ಅಬು ತೈಮಾ ಅವರು ಹೇಳಿದ್ದಾರೆ.

ಹಮಾಸ್ ವಿರುದ್ಧ ಇಸ್ರೇಲ್‌ನ ಸೇನಾ ಕಾರ್ಯಾಚರಣೆಯ 10 ವಾರಗಳು ಕಳೆದಿದೆ. ಜನರ ವಲಸೆಯಿಂದ ಕಿಕ್ಕಿರಿದ ಆಶ್ರಯ ತಾಣಗಳು, ನಿರಂತರ ಬಾಂಬ್ ದಾಳಿಗಳು, ಹಸಿವಿನಿಂದ ಬಳಲುತ್ತಿರುವ ಗಾಝಾ ಈಗ ರೋಗಕ್ಕೆ ಫಲವತ್ತಾದ ನೆಲವಾಗಿದೆ.

ಚಿಕನ್ಪಾಕ್ಸ್, ದದ್ದುಗಳು, ಮೂತ್ರನಾಳದ ಸೋಂಕುಗಳು, ಮೆನಿಂಜೈಟಿಸ್, ಮಂಪ್ಸ್, ಸ್ಕೇಬೀಸ್, ದಡಾರ ಮತ್ತು ಪುಡ್‌ ಪ್ಯಾಯಿಸನಿಂಗ್‌, ಅತಿಸಾರ, ಕಾಮಾಲೆ ಮತ್ತು ಉಸಿರಾಟದ ಸೋಂಕುಗಳು ಹೆಚ್ಚುತ್ತಿದೆ ಎಂದು ಗಾಝಾದ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ. ಇದಲ್ಲದೆ ಯುದ್ಧ ಪೀಡಿತ ಭೂಮಿಯಲ್ಲಿ ವಿಶ್ವಸಂಸ್ಥೆಯು ಸಂಭಾವ್ಯ 14 ರೋಗಗಳನ್ನು ಪತ್ತೆಹಚ್ಚಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಯುದ್ಧದಿಂದಾಗಿ ಗಾಝಾದ ಪ್ರಾಥಮಿಕ ಆರೈಕೆ ಕೇಂದ್ರಗಳಲ್ಲಿ 3ನೇ ಎರಡರಷ್ಟು ಮುಚ್ಚಲಾಗಿದೆ ಎಂದು WHO ಹೇಳಿದೆ. ಗಾಝಾದ 36 ಆಸ್ಪತ್ರೆಗಳಲ್ಲಿ 11 ಭಾಗಶಃ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಸುಮಾರು 1.3 ಮಿಲಿಯನ್ ಜನರು ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ 220 ಜನರಿಗೆ ಸರಾಸರಿ ಒಂದು ಶೌಚಾಲಯ ಮತ್ತು ಪ್ರತಿ 4,500ಗೆ ಒಂದು ಮಾತ್ರ ಶವರ್ ಇದೆ ಎನ್ನುವ ಆಘಾತಕಾರಿ ಸತ್ಯವು ಬಹಿರಂಗವಾಗಿದೆ.

ಮಕ್ಕಳಲ್ಲಿ ಅತಿಸಾರದ ಪ್ರಕರಣಗಳು ನ.29ರಿಂದ ಡಿ.10ರವರೆಗೆ 66 ಪ್ರತಿಶತದಷ್ಟು ಹೆಚ್ಚಿವೆ ಮತ್ತು ವಯಸ್ಕರಲ್ಲಿ ಈ ಅಂಕಿ ಅಂಶವು 55 ಪ್ರತಿಶತದಷ್ಟಿದೆ ಎಂದು ದತ್ತಾಂಶಗಳು ಬಹಿರಂಗಪಡಿಸಿದೆ. ನನ್ನ ಮಕ್ಕಳಿಗೆ ಜೀರ್ಣಕ್ರಿಯೆಯ ಸಮಸ್ಯೆಗಳಿವೆ ಮತ್ತು ನಿರಂತರವಾಗಿ ವಾಂತಿಯಾಗುತ್ತದೆ ಮತ್ತು ಅವರಿಗೆ ಚಿಕಿತ್ಸೆ ನೀಡಲು ನನಗೆ ಯಾವುದೇ ಮಾರ್ಗವಿಲ್ಲ. ಆಸ್ಪತ್ರೆಗಳು ತುಂಬಿಕೊಂಡಿವೆ. ಅಲ್ಲಿ ಯಾವುದೇ ಸೇವೆಗಳು ಸಿಗುತ್ತಿಲ್ಲ. ಯಾವುದೇ ಅಂತಾರಾಷ್ಟ್ರೀಯ ಸಂಸ್ಥೆಗಳು ನಮ್ಮನ್ನು ಭೇಟಿ ಮಾಡಿಲ್ಲ ಎಂದು 37 ವರ್ಷದ ಅಲ್-ಟಾಟ್ರಿ ಹೇಳಿದ್ದಾರೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...