Homeಮುಖಪುಟ'ಕೋವಿಡ್ ರೂಪಾಂತರಿ ಉಲ್ಬಣಕ್ಕೆ ಡಬ್ಲ್ಯೂಎಚ್ಒ ಆತಂಕ; 60 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ'

‘ಕೋವಿಡ್ ರೂಪಾಂತರಿ ಉಲ್ಬಣಕ್ಕೆ ಡಬ್ಲ್ಯೂಎಚ್ಒ ಆತಂಕ; 60 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ’

- Advertisement -
- Advertisement -

ಅಮೆರಿಕಾ, ಚೈನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್-19 ರೂಪಾಂತರಿ ಜೆಎನ್ 1 ಉಲ್ಬಣವಾಗುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ ನೀಡಿದೆ. ಪ್ರಸ್ತುತ ಈ ರೂಪಾಂತರಿ ವೈರಾಣು ಕರ್ನಾಟಕದ ನೆರೆಯ ರಾಜ್ಯ ಕೇರಳದಲ್ಲಿ ಪತ್ತೆಯಾಗಿದ್ದು, ರಾಜ್ಯದ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

ಕೊಡಗಿನ ಕುಶಾಲನಗರದಲ್ಲಿ ಮಾತಾನಾಡಿದ ಅವರು, ‘ಕೋವಿಡ್-19 ರೂಪಾಂತರಿ ಕುರಿತು ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದೇವೆ. ಕೋವಿಡ್ ತಡೆಗಟ್ಟಲು ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಜೊತೆಗೂ ಸದಸ್ಯರು ಚರ್ಚೆ ನಡೆಸಿದ್ದಾರೆ. ಕೇಂದ್ರದಿಂದ ಕೆಲವು ಸಲಹೆಗಳನ್ನು ಪಡೆದುಕೊಂಡಿದ್ದು, 60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಕಾಯಿಲೆ ಇರುವವರು ಹಾಗೂ ಜ್ವರ, ಕಫ, ಶೀತದ ಲಕ್ಷಣ ಇರುವವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳುವಂತೆ ಮನವಿ ಮಾಡಿದ್ದೇವೆ’ ಎಂದರು.

ಮುಂಜಾಗ್ರತಾ ಕ್ರಮವಾಗಿ, ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳವಂತೆ ಸೂಚನೆ ನೀಡಲಾಗಿದೆ. ಕೇರಳ ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚಿಸಲಾಗಿದೆ. ಕೇರಳದಿಂದ ಬರುವವರನ್ನು ಕಡ್ಡಾಯವಾಗಿ ಪರೀಕ್ಷೆ ಮಾಡುವಂತೆ ಆದೇಶ ನೀಡಿದ್ದೇವೆ’ ಎಂದು ಹೇಳಿದರು.

‘ಉಸಿರಾಟದ ತೊಂದರೆಯಂತ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಕಡ್ಡಾಯವಾಗಿ ಟೆಸ್ಟಿಂಗ್ ಮಾಡಲಾಗುತ್ತದೆ. ಕೋವಿಡ್ ಇರುವುದು ಪತ್ತೆಯಾದರೆ ಏನು ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ. ಗಡಿ ಭಾಗದಲ್ಲಿ ಹೆಚ್ಚು ಟೆಸ್ಟಿಂಗ್ ಮಾಡುತ್ತೇವೆ. ಯಾರ ಯಾರ ಮೇಲೆ ಸಂಶಯ ಇದೆ ಅವರೆಲ್ಲರಿಗೂ ಟೆಸ್ಟ್ ಮಾಡಿಸುತ್ತೇವೆ’ ಎಂದು ತಿಳಿಸಿದರು.

‘ಮುಂದಿನ 2-3 ದಿನಗಳಲ್ಲಿ ರೂಪಾಂತರಿ ವೈರಸ್‌ನ ತೀವ್ರತೆ ಎಷ್ಟಿದೆ ಎಂಬುದು ತಿಳಿಯಲಿದೆ. ಸದ್ಯಕ್ಕೆ ಜನ ಗುಂಪುಗೂಡುವಂತಿಲ್ಲ. ಪ್ರಸ್ತುತ ರಾಜ್ಯದಲ್ಲಿ ಸಹಜ ಸ್ಥಿತಿ ಇದ್ದು, ಪಾಸಿಟಿವ್ ಪ್ರಕರಣಗಳು ಹೆಚ್ಚಾದರೆ ಮಾತ್ರ ಮಾತ್ರ ನಿಯಮಗಳನ್ನು ಜಾರಿ ಮಾಡಬೇಕಾಗುತ್ತದೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ; ಯಾರೂ ಆತಂಕಪಡುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.

ಆತಂಕ ಪಡುವ ಅಗತ್ಯವಿಲ್ಲ: ಕೇರಳ ಆರೋಗ್ಯ ಸಚಿವೆ

ಕೇರಳದಲ್ಲಿ ಪತ್ತೆಯಾಗಿರುವ ಜೆಎನ್1 ಕೋವಿಡ್ ಉಪಪ್ರಭೇದವಾಗಿದ್ದು, ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಭಾನುವಾರ ಹೇಳಿದ್ದಾರೆ.

‘ಆತಂಕ ಪಡುವಂಥದ್ದೇನೂ ಇಲ್ಲ. ಅದೊಂದು ಉಪಪ್ರಭೇದವಾಗಿದ್ದು, ಕೇರಳದಲ್ಲಿ ಅದನ್ನು ಈಗ ಪತ್ತೆ ಹಚ್ಚಲಾಗಿದೆ. 2-3 ತಿಂಗಳುಗಳ ಹಿಂದೆ ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ತಪಾಸಣೆಗೊಳಗಾಗಿದ್ದ ಭಾರತೀಯರಲ್ಲಿ ಈ ಪ್ರಭೇದ ಪತ್ತೆಯಾಗಿತ್ತು. ರತದ ಇತರೆ ರಾಜ್ಯಗಳಲ್ಲಿಯೂ ಈ ವೈರಸ್ ಹರಡಿದೆ. ಆದರೆ, ಕೇರಳವು ಮೊದಲೇ ಪತ್ತೆ ಹಚ್ಚಿದ್ದು, ರಾಜ್ಯದ ಆರೋಗ್ಯ ವ್ಯವಸ್ಥೆ ಉತ್ತಮವಾಗಿರುವುದರಿಂದ ಜಿನೊಮಿಕ್ ಸೀಕ್ವೆನ್ಸಿಂಗ್ ಮೂಲಕ ಅದನ್ನು ನಾವು ಪತ್ತೆ ಹಚ್ಚಲು ಸಾಧ್ಯವಾಗಿದೆ ’ ಎಂದು ತಿಳಿಸಿದರು.

ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ:

ಉಸಿರಾಟದ ಕಾಯಿಲೆಗಳ ಉಲ್ಬಣ ಮತ್ತು ಕೋವಿಡ್-19 ರೂಪಾಂತರಿ ಜೆಎನ್1 ವಿಕಸನಗೊಳ್ಳುತ್ತಿದ್ದು, ಹೆಚ್ಚಿನ ನಿಗಾ ಇಡುವಂತೆ ಸದಸ್ಯ ರಾಷ್ಟ್ರಗಳಿಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಒತ್ತಾಯಿಸಿದೆ.
ಡಬ್ಲ್ಯೂಎಚ್ಒ ಜಾಗತಿಕ ಸಂಸ್ಥೆಯ ಕೋವಿಡ್-19 ತಾಂತ್ರಿಕ ವಿಭಾಗದ ಮುಖ್ಯಸ್ಥೆ ಮಾರಿಯಾ ವ್ಯಾನ್ ಕೆರ್ಖೋವ್ ಅವರ ವೀಡಿಯೊವನ್ನು ಹಂಚಿಕೊಂಡಿದ್ದು, ಕೋವಿಡ್ 19 ರೂಪಾಂತರಿ ಉಲ್ಬಣಗಳಿಗೆ ಕಾರಣ ಮತ್ತು ತೆಗೆದುಕೊಳ್ಳಲೇಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿವರಿಸಲಾಗಿದೆ.

ಉಸಿರಾಟ ಸಂಬಂಧಿ ಕಾಯಿಲೆಗಳು ಉಲ್ಬಣಗೊಳ್ಳುತ್ತಿರುವ ಬಗ್ಗೆ ಮಾತನಾಡಿರುವ ಡಾ ಮಾರಿಯಾ ವ್ಯಾನ್ ಕೆರ್ಕೋವ್, ‘ಈ ರಜಾ ದಿನಗಳಲ್ಲಿ ನಿಮ್ಮ ಕುಟುಂಬಗಳು ಮತ್ತು ಸ್ನೇಹಿತರನ್ನು ಸುರಕ್ಷಿತವಾಗಿರಿಸಲು ಡಬ್ಲ್ಯೂಎಚ್ಒನ ಸಾರ್ವಜನಿಕ ಆರೋಗ್ಯ ಸಲಹೆಯನ್ನು ಅನುಸರಿಸಿ’ ಎಂದು ಮನವಿ ಮಾಡಿದ್ದಾರೆ.

‘ಹಲವಾರು ರೋಗಕಾರಕಗಳು ಪ್ರಪಂಚದಾದ್ಯಂತ ಉಸಿರಾಟದ ಕಾಯಿಲೆಗಳ ಹೆಚ್ಚಳಕ್ಕೆ ಕಾರಣವಾಗಿವೆ. ಕೋವಿಡ್-19, ರೈನೋವೈರಸ್, ಮೈಕೋಪ್ಲಾಸ್ಮಾ ನ್ಯುಮೋನಿಯಾ ಮತ್ತು ಇತರರು SARS-CoV-2 ಸೇರಿದಂತೆ ಹಲವಾರು ರೋಗಕಾರಕಗಳಿಂದಾಗಿ ಪ್ರಪಂಚದಾದ್ಯಂತ ಉಸಿರಾಟದ ಕಾಯಿಲೆಗಳು ಹೆಚ್ಚುತ್ತಿವೆ. ರೂಪಾಂತರಿ ಜೆಎನ್.1 ಅನ್ನು ಈಗಾಗಲೇ ಪತ್ತೆಹಚ್ಚಲಾಗಿದ್ದು, ಅದು ತನ್ನ ಹರಡುವಿಕೆಯನ್ನು ಮುಂದುವರಿಸಿದೆ’ ಎಂದು ಅವರು ಹೇಳಿದ್ದಾರೆ.

‘ರಜಾ ಕಾಲದ ಕೂಟಗಳು ಸೋಂಕು ಸೇರಿದಂತೆ ಉಸಿರಾಟದ ಸೋಂಕುಗಳ ಉಲ್ಬಣಕ್ಕೆ ಕಾರಣವಾಗಿದೆ. ಇದು ಕೇವಲ ಕೋವಿಡ್-19 ಮಾತ್ರವಲ್ಲದೆ; ನಮ್ಮಲ್ಲಿ ಇನ್ಫ್ಲುಯೆನ್ಜಾ ಹಾಗೂ ಇತರ ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳಿವೆ. ಪ್ರಪಂಚದ ಇತರ ಭಾಗಗಳಲ್ಲಿ ನಾವು ಚಳಿಗಾಲದ ತಿಂಗಳುಗಳನ್ನು ಪ್ರವೇಶಿಸುತ್ತಿದ್ದೇವೆ. ಜನರು ರಜಾದಿನಗಳಿಗಾಗಿ ಒಟ್ಟುಗೂಡಲು ಪ್ರಾರಂಭಿಸುತ್ತಿದ್ದಾರೆ. ಗುಂಪುಗುಂಪಾಗಿ ಜನರು ಅವರ ಮನೆಯೊಳಗೆ ಸಮಯ ಕಳೆಯುತ್ತಾರೆ. ಅಲ್ಲಿ ಗಾಳಿ ಗುಣಮಟ್ಟ ಕಳಪೆ ಇದ್ದರೆ, ಈ ರೂಪಾಂತರಿ ವೈರಾಣು ಗಾಳಿಯ ಮೂಲಕ ಪರಿಣಾಮಕಾರಿಯಾಗಿ ಹರಡುತ್ತವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ಗಾಝಾದಲ್ಲಿ ಮಾನವೀಯ ಬಿಕ್ಕಟ್ಟು: ಹಸಿವು ತಾಳಲಾರದೆ ಟ್ರಕ್‌ಗಳನ್ನು ತಡೆದು ಆಹಾರ ಕಸಿದುಕೊಳ್ಳುತ್ತಿರುವ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...