Homeಮುಖಪುಟರಾಮಮಂದಿರ ಉದ್ಘಾಟನೆಗೆ ಅಡ್ವಾಣಿ, ಜೋಷಿಗಿಲ್ಲ ಪ್ರವೇಶ

ರಾಮಮಂದಿರ ಉದ್ಘಾಟನೆಗೆ ಅಡ್ವಾಣಿ, ಜೋಷಿಗಿಲ್ಲ ಪ್ರವೇಶ

- Advertisement -
- Advertisement -

ದೆಹಲಿಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 2024ರ ಲೋಕಸಭೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. 2000ಕ್ಕೂ ಅಧಿಕ ವಿಶೇಷ ಅತಿಥಿಗಳು ಭಾಗವಹಿಸಲಿದ್ದಾರೆ. ಆದರೆ ರಾಮಮಂದಿರ ಆಂದೋಲನದಲ್ಲಿ ಭಾಗವಹಿಸಿದ್ದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರನ್ನು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಿಂದ ದೂರ ಇಡಲಾಗಿದೆ.

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡ, ದಲೈ ಲಾಮಾ, ನಟರಾದ ರಜನಿಕಾಂತ್, ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್ ಮತ್ತು ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಅನಿಲ್ ಅಂಬಾನಿ ಸೇರಿದಂತೆ ಹಲವು ಪ್ರಮುಖ ನಾಯಕರು, ಉದ್ಯಮಿಗಳಿಗೆ ಆಹ್ವಾನವನ್ನು ನೀಡಲಾಗಿದೆ. 4000 ಸಂತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. 2200ಕ್ಕೂ ಅಧಿಕ ಅತಿಥಿಗಳು ಭಾಗವಹಿಸಲಿದ್ದಾರೆ. ಅವರಿಗೆ ಬೇಕಿದ್ದ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಆದರೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರಲ್ಲಿ ವಯಸ್ಸಿನ ಕಾರಣ ಮುಂದಿಟ್ಟು ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಮನವಿ ಮಾಡಲಾಗಿದೆ.

ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮಾತನಾಡಿ, ಬಿಜೆಪಿ ನಾಯಕರಾದ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸದಂತೆ ಮನವಿ ಮಾಡಲಾಗಿದೆ. ಆರೋಗ್ಯ ಮತ್ತು ವಯಸ್ಸಿನ ಕಾರಣಗಳಿಂದ ನಾವು ಈ ವಿನಂತಿಯನ್ನು ಮಾಡಿದ್ದೇವೆ. ಇದಕ್ಕೆ ಇಬ್ಬರೂ ಕೂಡ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ರಾಮ ಮಂದಿರ ಚಳುವಳಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಡ್ವಾಣಿ, ಜೋಷಿ 

80ರ ದಶಕದಲ್ಲಿ ರಾಮ ಮಂದಿರಕ್ಕಾಗಿ ನಡೆದ ಚಳುವಳಿಯ ನೇತೃತ್ವವನ್ನು ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ವಹಿಸಿದ್ದರು. ಅಡ್ವಾಣಿ ಸೋಮನಾಥದಿಂದ ಅಯೋಧ್ಯೆಯವರೆಗೆ ‘ರಥಯಾತ್ರೆ’ ನಡೆಸಿದ್ದರು. ದೊಡ್ಡ ಪ್ರಮಾಣದ ಹಿಂಸಾಚಾರ, ದಂಗೆ ಮತ್ತು ಹತ್ಯೆಗಳೊಂದಿಗೆ ರಥಯಾತ್ರೆ ಕಾರಣವಾಗಿತ್ತು.  ಆ ಬಳಿಕ ಅಡ್ವಾಣಿ ಅವರನ್ನು ಬಿಹಾರದ ಲಾಲು ಪ್ರಸಾದ್ ಯಾದವ್ ಸರಕಾರ ಬಂಧಿಸಿತ್ತು.

ಇದಾದ ಬಳಿಕ 1992 ಡಿ.6ರಂದು ಅಡ್ವಾಣಿ, ಜೋಷಿ ನೇತೃತ್ವದ ಕರಸೇವಕರಿಂದ ಬಾಬರಿ ಮಸೀದಿ ಧ್ವಂಸ ನಡೆಯುತ್ತದೆ. ಆ ಬಳಿಕ ರಾಷ್ಟ್ರವ್ಯಾಪಿ ಕೋಮು ಗಲಭೆ ಆರಂಭವಾಗುತ್ತದೆ. ಎರಡು ಸಾವಿರಕ್ಕೂ ಹೆಚ್ಚು ಮಂದಿಯ ಸಾವು ಸಂಭವಿಸುತ್ತದೆ. ಪ್ರಕರಣಕ್ಕೆ ಸಂಬಂಧಿಸಿ ಕರಸೇವಕರ ವಿರುದ್ಧ, ಎಲ್‌.ಕೆ. ಅಡ್ವಾಣಿ, ಅಶೋಕ್‌ ಸಿಂಘಲ್‌, ವಿನಯ್‌ ಕಟಿಯಾರ್‌, ಉಮಾಭಾರತಿ, ಸಾಧ್ವಿ ಋತಂಬರಾ, ಮುರಳಿಮನೋಹರ ಜೋಶಿ, ಗಿರಿರಾಜ್‌ ಕಿಶೋರ್‌ ಹಾಗೂ ವಿಷ್ಣು ಹರಿ ದಾಲ್ಮಿಯಾ ಅವರ ವಿರುದ್ಧ ಪ್ರಕರಣ ದಾಖಲಾಗತ್ತದೆ.

ಆ ಬಳಿಕ ವಿಚಾರಣೆಯ ವೇಳೆ ಕರಸೇವಕರು ಬಿಜೆಪಿಯ ಹಿರಿಯ ನಾಯಕರಾದ ಅಡ್ವಾಣಿ, ಜೋಷಿ ಅವರ ಸೂಚನೆ ಮೇರೆಗೆ ಸಭೆ ಸೇರಿದ್ದೇವೆ ಮತ್ತು ಮಸೀದಿಗೆ ನುಗ್ಗಿದ್ದೇವೆ ಎಂದು ಹೇಳಿದ್ದರು. ಬಾಬರಿ ಮಸೀದಿಯ ಧ್ವಂಸಕ್ಕೆ ಮೊದಲು ಸುಮಾರು 150,000 ಜನರು ಅಡ್ವಾಣಿ ಮತ್ತು ಜೋಷಿಯ ಭಾಷಣಗಳನ್ನು ಕೇಳಲು ಜಮಾಯಿಸಿದ್ದರು. ಈ ಇಬ್ಬರು ಕೂಡ ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳಲ್ಲಿ ಸೇರಿದ್ದರು.

2020ರಲ್ಲಿ ಲಕ್ನೋ ವಿಶೇಷ ಸಿಬಿಐ ಕೋರ್ಟ್ ನ್ಯಾಯಾಧೀಶ ಎಸ್.ಕೆ.ಯಾದವ್ ನೇತೃತ್ವದ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣವು ಪೂರ್ವ ನಿಯೋಜಿತವಲ್ಲ ಎಂದು ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಶಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ, ಬಜರಂಗ ದಳ ಸಂಸ್ಥಾಪಕ ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳನ್ನು ಖುಲಾಸೆಗೊಳಿಸಿತ್ತು.

2019ರಲ್ಲಿ ಅಂದಿನ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ. ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರನ್ನೊಳಗೊಂಡ ಪೀಠ ಅಯೋಧ್ಯೆ ಭೂ ವಿವಾದದ ಕುರಿತು ತೀರ್ಪು ನೀಡಿತ್ತು. ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್‌ ನೀಡಿತ್ತು.

ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಲಾಲ್ ಕೃಷ್ಣ ಅಡ್ವಾಣಿ ಒಬ್ಬರು. 1984ರಲ್ಲಿ ಕೇವಲ ಇಬ್ಬರು ಸಂಸದರನ್ನು ಹೊಂದಿದ್ದ ಬಿಜೆಪಿಯನ್ನು ಅಧಿಕಾರದ ಗದ್ದುಗೆವೆರೆಗೆ ಬಿಜೆಪಿಯನ್ನು ಮುನ್ನಡೆಸಿದ ಹಿರಿಯ ನಾಯಕರಲ್ಲಿ ಅಡ್ವಾಣಿ ಓರ್ವರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಆಡ್ವಾಣಿ ಕೈಗೊಂಡ ರಥಯಾತ್ರೆಯು ಬಿಜೆಪಿಯ ರಾಜಕೀಯ ಇತಿಹಾಸಕ್ಕೆ ಹೊಸ ತಿರುವು ನೀಡಿತ್ತು. ಬಿಜೆಪಿಯ ಭೀಷ್ಮ ಎಂದೇ ಹೆಸರುವಾಸಿಯಾದ ಆಡ್ವಾಣಿ ಅವರ ರಥಯಾತ್ರೆಗೆ ವ್ಯಕ್ತವಾದ ಅಪಾರ ಬೆಂಬಲವು ಆಡ್ವಾಣಿಗೆ ಮಾತ್ರವಲ್ಲ, ಬಿಜೆಪಿಯ ಬೆಳವಣಿಗೆಗೆ ಕಾರಣವಾಗಿತ್ತು.

ಆದರೆ 2014ರಲ್ಲಿ ಮೋದಿ ಭಾರತದ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಅಡ್ವಾಣಿ ಅವರನ್ನು ನೇಪಥ್ಯಕ್ಕೆ ಸರಿಸಲಾಯಿತು. ಮೋದಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಅಮಿತ್‌ ಶಾ ಪಕ್ಷದ ಅಧ್ಯಕ್ಷರಾದರು. ಆ ಬಳಿಕ ಪಕ್ಷದ ಸ್ಥಾಪಕ ಸದಸ್ಯರಾದ ಅಡ್ವಾಣಿ ಮತ್ತು ಬಿಜೆಪಿಯ ಮಾಜಿ ಅಧ್ಯಕ್ಷ ಮುರಳಿ ಮನೋಹರ್ ಜೋಷಿ ಅವರ ಸಲಹಾ ಮಂಡಳಿಯನ್ನು ರಚಿಸಲಾಗಿತ್ತು. ಆದರೆ ಸಮಿತಿ ಒಮ್ಮೆಯೂ ಸಭೆ ನಡೆಸಿರಲಿಲ್ಲ. ಆ ಬಳಿಕ 2019ರ ಚುನಾವಣೆಯಲ್ಲಿ ಅವರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. ಅಡ್ವಾಣಿ ಮತ್ತು ಜೋಷಿ ಅವರ ರಾಜಕೀಯ ಜೀವನವು ಇದೇ ವೇಳೆಗೆ ಅಂತ್ಯಗೊಂಡಿತ್ತು.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....