Homeಮುಖಪುಟಕೋವಿಡ್ ರೂಪಾಂತರ ಪತ್ತೆ ಹಿನ್ನೆಲೆ: ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ

ಕೋವಿಡ್ ರೂಪಾಂತರ ಪತ್ತೆ ಹಿನ್ನೆಲೆ: ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ

- Advertisement -
- Advertisement -

ಕೋವಿಡ್ 19 ರೂಪಾಂತರ ಪ್ರಕರಣ ನೆರೆಯ ಕೇರಳದಲ್ಲಿ ಪತ್ತೆ ಬೆನ್ನಲ್ಲೇ ಕರ್ನಾಟಕ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಹೊರಡಿಸಿದ್ದು, ಸಾರ್ವಜನಿಕರು ನಿಯಮಗಳನ್ನು ಪಾಲಿಸುವಂತೆ ಸಲಹೆಯನ್ನು ನೀಡಿದೆ.

ಕೇರಳದಲ್ಲಿ ಕೋವಿಡ್-19 ರೂಪಾಂತರಿ ಜೆಎನ್ 1 ಪ್ರಕರಣ ಪತ್ತೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದಲ್ಲಿ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳವಂತೆ ಸೂಚನೆ ನೀಡಲಾಗಿದೆ. ಕೇರಳ ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚಿಸಲಾಗಿದೆ. ಕೇರಳದಿಂದ ಬರುವವರನ್ನು ಕಡ್ಡಾಯವಾಗಿ ಪರೀಕ್ಷೆ ಮಾಡುವಂತೆ ಆದೇಶ ನೀಡಲಾಗಿದೆ.

ಆರೋಗ್ಯ ಇಲಾಖೆ ಹೊರಡಿಸಿದ ಮಾರ್ಗಸೂಚಿಯಲ್ಲಿ ಏನೇನಿದೆ?

ಎಲ್ಲಾ ಹಿರಿಯ ನಾಗರೀಕರು ಅದರಲ್ಲೂ 60 ವರ್ಷ ಹಾಗೂ ಮೇಲ್ಪಟ್ಟವರು, ಕಿಡ್ನಿ, ಹೃದಯ, ಲಿವರ್ ಸಮಸ್ಯೆ ಸೇರಿ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್‌ನ್ನು ಕಡ್ಡಾಯವಾಗಿ ಧರಿಸಬೇಕು. ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದೆ ದೂರ ಇರುವುದು ಸೂಕ್ತವಾಗಿದೆ.

ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು.

ದೈಹಿಕ ಸ್ವಚ್ಛತೆಯನ್ನು ಕಾಪಾಡಬೇಕು. ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳಬೇಕಿದೆ.

ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಉತ್ತಮ. ಈ ವೇಳೆ ಹಿರಿಯ ನಾಗರಿಕರು ಮತ್ತು ಅನಾರೋಗ್ಯ ಪೀಡಿತರನ್ನು ಭೇಟಿ ಮಾಡುವುದನ್ನು ತಪ್ಪಿಸಬೇಕು.

ವಿದೇಶ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಕೋವಿಡ್‌ ರೂಪಾಂತರ ಪ್ರಕರಣ ಪತ್ತೆ ಹಿನ್ನೆಲೆ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ನಿನ್ನೆ ಮನವಿ ಮಾಡಿದ್ದರು. ಗಡಿ ಭಾಗದಲ್ಲಿ ಹೆಚ್ಚು ಟೆಸ್ಟಿಂಗ್ ವ್ಯವಸ್ಥೆ ಮಾಡುವ ಬಗ್ಗೆಯೂ ಮಾಹಿತಿಯನ್ನು ನೀಡಿದ್ದರು.

ಕೇರಳದಲ್ಲಿ ಪತ್ತೆಯಾಗಿರುವ ಜೆಎನ್1 ಕೋವಿಡ್ ಉಪಪ್ರಭೇದದ ಬಗ್ಗೆ ಪ್ರತಿಕ್ರಿಯಿಸಿದ್ದ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್, ಆತಂಕ ಪಡಬೇಕಾದ ಅಗತ್ಯವಿಲ್ಲ. ಅದೊಂದು ಉಪಪ್ರಭೇದವಾಗಿದ್ದು, ಕೇರಳದಲ್ಲಿ ಅದನ್ನು ಈಗ ಪತ್ತೆ ಹಚ್ಚಲಾಗಿದೆ. 2-3 ತಿಂಗಳುಗಳ ಹಿಂದೆ ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ತಪಾಸಣೆಗೊಳಗಾಗಿದ್ದ ಭಾರತೀಯರಲ್ಲಿ ಈ ಪ್ರಭೇದ ಪತ್ತೆಯಾಗಿತ್ತು. ಭಾರತದ ಇತರೆ ರಾಜ್ಯಗಳಲ್ಲಿಯೂ ಈ ವೈರಸ್ ಹರಡಿದೆ. ಆದರೆ ಕೇರಳವು ಮೊದಲೇ ಪತ್ತೆ ಹಚ್ಚಿದ್ದು, ರಾಜ್ಯದ ಆರೋಗ್ಯ ವ್ಯವಸ್ಥೆ ಉತ್ತಮವಾಗಿರುವುದರಿಂದ ಜಿನೊಮಿಕ್ ಸೀಕ್ವೆನ್ಸಿಂಗ್ ಮೂಲಕ ಅದನ್ನು ನಾವು ಪತ್ತೆ ಹಚ್ಚಲು ಸಾಧ್ಯವಾಗಿದೆ  ಎಂದು ಹೇಳಿದ್ದರು.

ಮಂಡ್ಯದಲ್ಲಿ ಕೋವಿಡ್ ಪ್ರಕರಣ ಪತ್ತೆ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವ್ಯಕ್ತಿಯೊಬ್ಬರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.ಇವರಿಗೆ ಪ್ರಯಾಣದ ಇತಿಹಾಸ ಇಲ್ಲದಿದ್ದರೂ ಸೋಂಕು ತಗುಲಿದೆ. ಸೋಂಕಿತ ವ್ಯಕ್ತಿಯಲ್ಲಿ ಯಾವ ರೋಗ ಲಕ್ಷಣಗಳು ಇರಲಿಲ್ಲ. ಇದೀಗ ವ್ಯಕ್ತಿಯ ಸಂಪರ್ಕದಲ್ಲಿದ್ದ ನಾಲ್ವರಿಗೂ ಆರ್​ಟಿಪಿಸಿಆರ್ ಟೆಸ್ಟ್ ಮಾಡಲಾಗಿದ್ದು, ಅವರಲ್ಲಿ ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ.

ಇದನ್ನು ಓದಿ: ರಾಮಮಂದಿರ ಉದ್ಘಾಟನೆಗೆ ಅಡ್ವಾಣಿ, ಜೋಷಿಗಿಲ್ಲ ಪ್ರವೇಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...