Homeಮುಖಪುಟಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

ಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

- Advertisement -
- Advertisement -

ಸಂಸತ್ತಿನ ಭದ್ರತಾಲೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನಾಲ್ವರು ಆರೋಪಿಗಳ ಮೇಲೆ ಯುಎಪಿಎ ಕಾನೂನಿನಡಿ ಪ್ರಕರಣ ದಾಖಲಿಸಿರುವುದನ್ನು ಪಿಯುಸಿಎಲ್‌( PEOPLE’S UNION FOR CIVIL LIBERTIES) ಖಂಡಿಸಿದ್ದು, ಯುಎಪಿಎ ಪ್ರಕರಣವನ್ನು ಕೈಬಿಡುವಂತೆ ಆಗ್ರಹಿಸಿದೆ.

ಈ ಕುರಿತು ಪಿಯುಸಿಎಲ್‌ ಅಧ್ಯಕ್ಷರಾದ ಕವಿತಾ ಶ್ರೀವತ್ಸವ್‌ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿ,ಸುರೇಶ್‌ ಅವರು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಸಂಸತ್ತಿನಲ್ಲಿ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಡಬ್ಬಗಳಿಂದ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿ  ಇಂಕ್ವಿಲಾಬ್ ಜಿಂದಾಬಾದ್ ಮತ್ತು ಭಗತ್ ಸಿಗ್ ಅಮರ್‌ ರಹೇ ಎಂದು ಘೋಷಣೆಗಳನ್ನು ಕೂಗಿದ್ದಕ್ಕಾಗಿ ಲಕ್ನೋದ ಸಾಗರ್ ಶರ್ಮಾ(26) ಮತ್ತು ಬೆಂಗಳೂರಿನ ಇಂಜಿನಿಯರಿಂಗ್ ಪದವೀಧರ ಮನೋರಂಜನ್ ಡಿ(35) ಮತ್ತು ಸದನದ ಹೊರಗೆ ಗ್ಯಾಸ್ ಸ್ಪೇ ಮಾಡಿ ಸರ್ವಾಧಿಕಾರ, ನಿರುದ್ಯೋಗ, ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಹಾಗೂ ಜೈ ಭೀಮ್‌ ಘೋಷಣೆಗಳನ್ನು ಕೂಗಿದ ಅಮೋಲ್ ಶಿಂಧೆ (25) ಮತ್ತು ನೀಲಮ್ ದೇವಿ (42) ಮತ್ತು ವಿರುದ್ಧದ ಯುಎಪಿಎ ಪ್ರಕರಣವನ್ನು ಕೈಬಿಡಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ವಿಶಾಲ್‌ ಶರ್ಮಾ, ಲಲಿತ್‌ ಝಾ ಸೇರಿ ಬಂಧಿತ 6 ಮಂದಿ ‘ಭಗತ್ ಸಿಂಗ್ ಫ್ಯಾನ್ ಕ್ಲಬ್’ ಜೊತೆ ಸಂಬಂಧ ಹೊಂದಿದ್ದರು. ಅವರು ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್ ಮತ್ತು ಶಿವರಾಮ ರಾಜಗುರು ಅವರ ಮೇಲಿನ ಅಭಿಮಾನ ಹೊಂದಿದ್ದರು ಎಂದು ಹೇಳಿದ್ದಾರೆ. ಎಲ್ಲಾ 6 ಆರೋಪಿಗಳ ವಿರುದ್ಧ ಸೆಕ್ಷನ್ 120B , 452 , 153 , 186, 353ರಡಿ ಪ್ರಕರಣ  ದಾಖಲಿಸಲಾಗಿದೆ. ಇದಲ್ಲದೆ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆಯ ಸೆಕ್ಷನ್ 16 ಮತ್ತು 18ರಡಿಯಲ್ಲಿ ಭಯೋತ್ಪಾದಕ ಕೃತ್ಯದ ಆರೋಪವನ್ನು ಹೊರಿಸಲಾಗಿದೆ. ಇದು ಸರಿಯಲ್ಲ ಎಂದು ಪಿಯುಸಿಎಲ್‌ ಹೇಳಿದೆ.

ಕಳೆದ 9 ವರ್ಷಗಳಿಂದ ನಿರುದ್ಯೋಗದ ಸಮಸ್ಯೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸದೆ ಇರುವುದು ವಾಸ್ತವವಾಗಿ 6 ಯುವಕರ ಕೃತ್ಯಕ್ಕೆ ಪ್ರಚೋದನೆಯಂತೆ ಕಂಡು ಬರುತ್ತಿದೆ. 2023ರಲ್ಲಿ ನಿರುದ್ಯೋಗ ದರವು 7.6% ಆಗಿದೆ. ಇದು ಸಾಂಕ್ರಾಮಿಕದ ಪೂರ್ವ ದರಗಳಿಗಿಂತ ಹೆಚ್ಚಾಗಿದೆ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳದೆ ಇರುವುದರಿಂದ ಭಗತ್ ಸಿಂಗ್ ಅವರಂತೆಯೇ ಅವರು ಕಿವುಡರನ್ನು ಕೇಳುವಂತೆ ಮಾಡಲು ಮತ್ತು ಅಜಾಗರೂಕರಿಗೆ ಎಚ್ಚರಿಕೆಯನ್ನು ನೀಡಲು ಪ್ರಯತ್ನಿಸಿದರು ಎಂದು ಪಿಯುಸಿಎಲ್‌ ಹೇಳಿದೆ.

ಬಂಧಿತ ಯುವಕರ ವಿರುದ್ಧ ಯುಎಪಿಎಯಂತಹ ಕಠೋರ ಕಾನೂನನ್ನು ಬಳಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಲ್ಲದೇ ಮತ್ತೇನೂ ಅಲ್ಲ. ಯುಎಪಿಎ ಸೆಕ್ಷನ್ 15ರ ಅಡಿಯಲ್ಲಿ ಒಂದು ಕೃತ್ಯವನ್ನು ಭಯೋತ್ಪಾದಕ ಕೃತ್ಯವೆಂದು ಪರಿಗಣಿಸಬೇಕಾದರೆ ಭಾರತದ ಏಕತೆ ಮತ್ತು ಸಮಗ್ರತೆಗೆ ಬೆದರಿಕೆ ಹಾಕುವ ಭಯೋತ್ಪದಾಕ ಕೃತ್ಯವಾಗಿರಬೇಕು. ಬಾಂಬ್‌ಗಳು ಅಥವಾ ಇತರ ಸ್ಫೋಟಕ ವಸ್ತುಗಳ ಬಳಕೆ ಮತ್ತು ಸಾವು, ನೋವುಗಳು ಸಂಭವಿಸರಬೇಕು. ಅಂತಹ ಸಂದರ್ಭಗಳಲ್ಲಿ ಮಾತ್ರ ಕಠೋರ ಕಾನೂನನ್ನು ಬಳಸಬೇಕು ಎಂದಿದೆ ಎಂದು ಪಿಯುಸಿಎಲ್‌ ಹೇಳಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಪಿಯುಸಿಎಲ್‌ ಕರ್ನಾಟಕ ರಾಜ್ಯಾಧ್ಯಕ್ಷರಾದ ಅರವಿಂದ್‌ ನಾರಾಯಣ್, ಯುವಕರ ಮೇಲೆ ಯುಎಪಿಎ ಕೇಸ್ ಹಾಕಲಾಗಿದೆ. ಯುಎಪಿಎ ನಿಯಮಾವಳಿಗಳನ್ನು ಓದಬೇಕು. ಉದ್ದೇಶ ಪೂರ್ವಕವಾಗಿ ಹಾನಿ ಮಾಡಿದರೆ ಮಾತ್ರ ಈ ಪ್ರಕರಣ ದಾಖಲಿಸಬೇಕು ಎಂದಿದೆ. ಇಲ್ಲಿ ಉದ್ದೇಶಪೂರ್ವಕ ಕೃತ್ಯವೆಂದು ಕಂಡು ಬಂದಿಲ್ಲ. ನಿರುದ್ಯೋಗ, ಸರ್ವಾಧಿಕಾರ, ಮಣಿಪುರ ವಿಚಾರದಲ್ಲಿ ಎಚ್ಚರಿಕೆ ನೀಡಲು ಈ ಕೃತ್ಯ ಮಾಡಿದ್ದಾರೆ. ಇನ್ನು ಕ್ರಿಯೆಯನ್ನು ನೋಡಿದಾಗ ಬಾಂಬ್‌ ಸ್ಪೋಟದಂತಹ ಕೃತ್ಯ ನಡೆದಿಲ್ಲ. ಖಾಲಿ ಹೊಗೆ ಮಾತ್ರ ಸ್ಪ್ರೇ ಮಾಡಿದ್ದಾರೆ. ಇದನ್ನು ನೋಡಿದಾಗ ಯುಎಪಿಎ ದಾಖಲಿಸಿರುವುದು ಕಾನೂನಿನ ದುರುಪಯೋಗ ಎಂದು ಹೇಳಿದ್ದಾರೆ.

ನಿರುದ್ಯೋಗ ಯುವಜನರಲ್ಲಿ ದೊಡ್ಡ ಸಮಸ್ಯೆಯಾಗಿದೆ. ಈ ಅಭಿಪ್ರಾಯವನ್ನು ಯುಎಪಿಎ ಬಳಸಿ ತಡೆಯಲು ಸಾಧ್ಯವಿಲ್ಲ. ಭಗತ್‌ ಸಿಂಗ್ ಅವರ ಮಾತನ್ನು ನಾವು ನೆನಪಿಸಬಹುದು. ಅವರು ಯುಎಪಿಎ ಕಾಯ್ದೆಯಂತಿದ್ದ ಪಬ್ಲಿಕ್‌ ಸೇಪ್ಟಿ ಮೂಲಕ ಸಮಸ್ಯೆಯ ಬಗ್ಗೆ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಯುಎಪಿಎ ದುರ್ಬಳಕೆ ಇದೊಂದೇ ಘಟನೆಯಲ್ಲ. ಇಂಡಿಯಾ- ಆಸ್ಟ್ರೇಲಿಯಾ ಫೈನಲ್‌ ಪಂದ್ಯದ ವೇಳೆ ಯುಎಪಿಎ ಕೇಸ್ ದಾಖಲಿಸಿದ್ದಾರೆ. ಭಾರತದ ಸೋಲನ್ನು ಸಂಭ್ರಮಿಸಿದರು ಎಂದು ವಿದ್ಯಾರ್ಥಿಗಳ ಮೇಲೆ ಈ ಕೇಸ್ ದಾಖಲು ಮಾಡಿದ್ದಾರೆ. ಇದು ಎಷ್ಟು ಸಮಂಜಸ? ಇತ್ತೀಚೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯುಎಪಿಎ ಕೇಸ್ ದಾಖಲು ಮಾಡಲಾಗುತ್ತಿದೆ. ಸರಕಾರ ಯುಎಪಿಎಯನ್ನು ಅಸ್ತ್ರವಾಗಿ ಬಳಸುತ್ತಿದೆ. ಆದ್ದರಿಂದ ಯುಎಪಿಎ ರದ್ದು ಮಾಡಬೇಕು. ಇಂತಹ ಕೇಸ್ ಎಲ್ಲರ ಮೇಲೂ ಫೈಲ್‌ ಮಾಡಬಾರದು. ಸಂಸತ್ತಿನ ಭದ್ರತಲೋಪದ ಪ್ರಕರಣದಲ್ಲಿನ ಆರೋಪಿಗಳ ಮೇಲಿನ ಯುಎಪಿಎ ಪ್ರಕರಣವನ್ನು ಕೈಬಿಡಬೇಕು ಮತ್ತು ಅವರನ್ನು ಬಂಧನದಿಂದ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...