Homeಮುಖಪುಟಕೇರಳ ಸರಕಾರ-ಗವರ್ನರ್‌ ಜಟಾಪಟಿ ಮುಂದುವರಿಕೆ: ಕೇಂದ್ರಕ್ಕೆ ಪತ್ರ ಬರೆದ ಸಿಎಂ

ಕೇರಳ ಸರಕಾರ-ಗವರ್ನರ್‌ ಜಟಾಪಟಿ ಮುಂದುವರಿಕೆ: ಕೇಂದ್ರಕ್ಕೆ ಪತ್ರ ಬರೆದ ಸಿಎಂ

- Advertisement -
- Advertisement -

ಕೇರಳ ಸರಕಾರ ಮತ್ತು ರಾಜ್ಯಪಾಲರ ನಡುವಿನ ಜಟಾಪಟಿ ಮುಂದುವರಿದಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ವಿರುದ್ಧ ಕೇಂದ್ರ ಸರಕಾರಕ್ಕೆ ಪತ್ರವನ್ನು ಬರೆದಿದ್ದಾರೆ.

ರಾಜ್ಯಪಾಲರ ವಿರುದ್ಧ ಕೇಂದ್ರದ ಮೊರೆ ಹೋಗುವುದಾಗಿ ಇತ್ತೀಚೆಗೆ ಪಿಣರಾಯ್ ವಿಜಯನ್‌ ಹೇಳಿದ್ದರು. ಮೂಲಗಳ ಪ್ರಕಾರ, ರಾಜ್ಯಪಾಲರು ತಮ್ಮ ಸಾಂವಿಧಾನಿಕ ಕರ್ತವ್ಯಗಳು ಮತ್ತು ಕಟ್ಟುಪಾಡುಗಳನ್ನು ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ ಸಿಎಂ ಪಿಣರಾಯ್‌ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಯಾವುದೇ ನಿರ್ದಿಷ್ಟ ಬೇಡಿಕೆಯನ್ನು ಸಲ್ಲಿಸದಿದ್ದರೂ, ರಾಜ್ಯಪಾಲರು ಪ್ರಚೋದನೆಗಳನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾದ ಪ್ರತಿಭಟನೆಯ ನಡುವೆ ರಾಜ್ಯಪಾಲರು ಇತ್ತೀಚೆಗೆ ಕೋಝಿಕ್ಕೋಡ್ ನಗರಕ್ಕೆ ಭೇಟಿ ನೀಡಿದ್ದನ್ನು ಸಹ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದಲ್ಲದೆ ವಿಧಾನಸಭೆಯಲ್ಲಿ ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ವಿಳಂಬದ ಬಗ್ಗೆ ಕೂಡ ಉಲ್ಲೇಖಿಸಲಾಗಿದೆ. ರಾಜ್ಯದ ವಿರುದ್ಧ ರಾಜ್ಯಪಾಲರ ನಿಲುವು ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧವನ್ನು ಹದಗೆಡಿಸಬಹುದು ಎಂದು ಪಿಣರಾಯ್‌ ವಿಜಯನ್ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಕೇರಳ ಸರಕಾರ-ರಾಜ್ಯಪಾಲರ ಜಟಾಪಟಿ:

2019ರಲ್ಲಿ ಕೇಂದ್ರ ಸರ್ಕಾರ ಆರಿಫ್ ಮೊಹಮ್ಮದ್ ಖಾನ್ ಅವರನ್ನು ರಾಜ್ಯಪಾಲರಾಗಿ ನೇಮಕಗೊಳಿಸಿದ ದಿನಗಳಿಂದಲೇ ರಾಜ್ಯಪಾಲರು ಮತ್ತು ಕೇರಳ ಸರ್ಕಾರದ ನಡುವೆ ಹಲವು ವಿಚಾರಗಳಿಗೆ ಜಟಾಪಟಿ ನಡೆದಿದೆ. 2019ರ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದ ಕೇರಳ ಸರ್ಕಾರ, ಜ.13 ರಂದು ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ರಾಜ್ಯ ಸರ್ಕಾರ ಕೋರ್ಟ್‌ ಮೆಟ್ಟಿಲೇರಿದ್ದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ರಾಜ್ಯಪಾಲರು, ಸರ್ಕಾರ ಸುಪ್ರೀಂಕೋರ್ಟ್‌ಗೆ ಹೋಗುವುದರಲ್ಲಿ ನನಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಅವರು ಈ ವಿಷಯವನ್ನು ಮೊದಲು ನನಗೆ ತಿಳಿಸಬೇಕಿತ್ತು. ಸರ್ಕಾರ ಕೋರ್ಟ್‌ಗೆ ಹೋದ ವಿಚಾರ ಪತ್ರಿಕೆಗಳ ಮೂಲಕ ಗೊತ್ತಾಗಿದೆ. ನಾನು ಕೇವಲ ರಬ್ಬರ್ ಸ್ಟಾಂಪ್ ಅಲ್ಲ. ಸರ್ಕಾರ ಶಿಷ್ಟಾಚಾರ ಮತ್ತು ಸೌಜನ್ಯ ಉಲ್ಲಂಘಿಸಲಾಗಿದೆ ಎಂದು ಹೇಳಿದ್ದರು.

ಬಳಿಕ ಕೇರಳದ 9 ವಿಶ್ವವಿದ್ಯಾನಿಲಯಗಳಿಗೆ ಉಪ ಕುಲಪತಿಗಳ ನೇಮಕ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಜಟಾಪಟಿ ಉಂಟು ಮಾಡಿತ್ತು. 2022ರ ಅ.22ರಂದು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಏಕಾಏಕಿ ಕೇರಳದ 9 ವಿವಿಗಳ ಉಪ ಕುಲಪತಿಗಳ ರಾಜೀನಾಮೆ ಕೇಳಿದ್ದರು. ರಾಜ್ಯಪಾಲರ ದಿಢೀರ್ ನಿರ್ಧಾರಕ್ಕೆ ಸಿಎಂ ಪಿಣರಾಯಿ ವಿಜಯನ್ ಸೇರಿದಂತೆ ಸರ್ಕಾರದ ಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ರಾಜ್ಯಪಾಲರ ಕ್ರಮ ಪ್ರಶ್ನಿಸಿ ಉಪ ಕುಲಪತಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆ ಬಳಿಕ ಸರ್ಕಾರ, ಉಪ ಕುಲಪತಿಗಳನ್ನು ನೇಮಿಸುವ ಅಧಿಕಾರದಿಂದ ರಾಜ್ಯಪಾಲರನ್ನೇ ಕೆಳಗಿಳಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದಿತ್ತು. ಆದರೆ, ಈ ಮಸೂದೆಗೆ ಅಂಗೀಕಾರಕ್ಕೆ ರಾಜ್ಯಪಾಲರು ಸಹಿ ಹಾಕುವುದಿಲ್ಲ ಎಂದು ತಿಳಿದು ಸುಗ್ರಿವಾಜ್ಞೆ ಹೊರಡಿಸಲಾಗಿತ್ತು.

ವಿಧಾನಸಭೆಯಲ್ಲಿ ಅಂಗೀಕಾರಗೊಂಡಿರುವ ಮಸೂದೆಗಳನ್ನು ಇತ್ಯರ್ಥಪಡಿಸುವಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿಳಂಬ ಮಾಡಿದ್ದರು. ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಸುಮಾರು 8 ಮಸೂದೆಗಳು ವಿಲೇವಾರಿಗೆ ಬಾಕಿಯಿದೆ. ಈ ನಡುವೆ ಡಿಸೆಂಬರ್ 11ರಂದು ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಕಾರಿಗೆ ಮುತ್ತಿಗೆ ಹಾಕಿದ್ದರು. ರಾಜ್ಯಪಾಲರು ದೆಹಲಿಗೆ ಪ್ರಯಾಣಿಸಲು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ತೆರಳುವ ದಾರಿ ಮಧ್ಯೆ ಈ ಘಟನೆ ನಡೆದಿತ್ತು. ತಕ್ಷಣ ಕಾರಿನಿಂದ ಕೆಳಗಿಳಿದಿದ್ದ ರಾಜ್ಯಪಾಲರು, ಸಿಎಂ ಕಳಿಸಿದ ಗೂಂಡಾಗಳು ನನ್ನ ಮೇಲೆ ದಾಳಿಗೆ ಯತ್ನಿಸಿದ್ದಾರೆ. ನನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡುವ ಉದ್ದೇಶ ಅವರಿಗಿತ್ತು ಎಂದು ಮಾದ್ಯಮಗಳ ಮುಂದೆ ಹೇಳಿದ್ದರು.

ಇದನ್ನು ಓದಿ: ತಮಿಳುನಾಡು: 30 ಹಿಂದೂ ಕುಟುಂಬಗಳಿಗೆ ಆಶ್ರಯ ನೀಡಿದ ಮಸೀದಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...