Homeಮುಖಪುಟಪುಸ್ತಕ ಬಿಡುಗಡೆಯಲ್ಲಿ ಪಾಲ್ಗೊಳ್ಳಲು ಕೊಲೆ ಅಪರಾಧಿಗೆ ಪೆರೋಲ್: ಅಪ್ಪನ ಪರ ವಾದ ಮಂಡಿಸಿದ ನ್ಯಾಯವಾದಿ ಮಗಳು

ಪುಸ್ತಕ ಬಿಡುಗಡೆಯಲ್ಲಿ ಪಾಲ್ಗೊಳ್ಳಲು ಕೊಲೆ ಅಪರಾಧಿಗೆ ಪೆರೋಲ್: ಅಪ್ಪನ ಪರ ವಾದ ಮಂಡಿಸಿದ ನ್ಯಾಯವಾದಿ ಮಗಳು

- Advertisement -
- Advertisement -

ವಿಶೇಷ ಪ್ರಕರಣವೊಂದರಲ್ಲಿ, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸರಣಿ ಹಂತಕನಿಗೆ ತನ್ನ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇರಳ ಹೈಕೋರ್ಟ್ ಇತ್ತೀಚೆಗೆ ಪೆರೋಲ್ ನೀಡಿದೆ.

ರಿಪ್ಪರ್ ಜಯನಂದನ್‌ ಪೆರೋಲ್ ಪಡೆದ ಅಪರಾಧಿ. ತಾನು ರಚಿಸಿದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಜಯನಂದನ್ ಅವರಿಗೆ ಎರಡು ದಿನಗಳ ಬೆಂಗಾವಲು ಪೆರೋಲ್ ನೀಡಿ ನ್ಯಾಯಮೂರ್ತಿ ಪಿ.ವಿ.ಕುಂಞಿಕೃಷ್ಣನ್ ಆದೇಶಿಸಿದ್ದಾರೆ.

ಗಮನಾರ್ಹ ಸಂಗತಿಯೆಂದರೆ, ಜಯನಂದನ್ ಅವರ ಪತ್ನಿ ಪೆರೋಲ್‌ ಕೋರಿ ಅರ್ಜಿ ಸಲ್ಲಿಸಿದ್ದರು. ಅವರ ಮಗಳು, ವಕೀಲೆ ಕೀರ್ತಿ ಜಯನಂದನ್‌ ಅವರೇ ತನ್ನ ತಂದೆಯ ಬಿಡುಗಡೆಗಾಗಿ ವಾದ ಮಂಡಿಸಿದ್ದಾರೆ.

ಒಂಬತ್ತನೇ ತರಗತಿಯವರೆಗೆ ಮಾತ್ರ ಓದಿರುವ ಜಯನಂದನ್ ಅವರು ಕಳೆದ 17 ವರ್ಷಗಳಿಂದ ಜೈಲಿನಲ್ಲಿದ್ದು ಈ ಅವಧಿಯಲ್ಲಿ ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ಈ ವಿಚಾರವನ್ನು ನ್ಯಾಯಾಧೀಶರು ಪೆರೋಲ್‌ ನೀಡುವ ವೇಳೆ ಗಮನಿಸಿದ್ದಾರೆ.

ಜಯನಂದನ್ ಸುಮಾರು 23 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಅವುಗಳಲ್ಲಿ 5 ಕೊಲೆ ಪ್ರಕರಣಗಳಾಗಿವೆ. 3 ಕೊಲೆ ಪ್ರಕರಣಗಳಲ್ಲಿ ಅವರನ್ನು ಖುಲಾಸೆಗೊಳಿಸಲಾಗಿದ್ದು ಎರಡರಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ತನ್ನ 17 ವರ್ಷಗಳ ಸೆರೆವಾಸದ ಅವಧಿಯಲ್ಲಿ ಜಯನಂದನ್ ಈವರೆಗೆ ಎರಡು ಬಾರಿ ಜೈಲಿನಿಂದ ತಪ್ಪಿಸಿಕೊಂಡಿದ್ದರು ಎಂದು ಬಾರ್‌ ಅಂಡ್ ಬೆಂಚ್ ವರದಿ ಮಾಡಿದೆ.

ಜಯನಂದನ್ ರಚಿಸಿದ ‘ಪುಲರಿ ವಿರಿಯುಂ ಮುಂಬೆ’ ಕೃತಿ ಡಿಸೆಂಬರ್ 23ರಂದು ಎರ್ನಾಕುಲಂ ಪ್ರೆಸ್ ಕ್ಲಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪೆರೋಲ್ ನೀಡಲಾಗಿದೆ. ಅರ್ಜಿದಾರರ ಪ್ರಕಾರ, ಜಯನಂದನ್ ತನ್ನ ಪುಸ್ತಕದಿಂದ ಬರುವ ಆದಾಯವನ್ನು ವಿಶೇಷ ಅಗತ್ಯತೆ ಇರುವ ಮಕ್ಕಳ ಕಲ್ಯಾಣಕ್ಕಾಗಿ ದಾನ ಮಾಡಲು ಬಯಸಿದ್ದಾರೆ.

ಪುಸ್ತಕ ಬಿಡುಗಡೆಗೆ ಪೆರೋಲ್‌ ನೀಡಲು ಕಾನೂನು ಪ್ರಕಾರ ಅವಕಾಶ ಇಲ್ಲ ಎಂದು ಜೈಲು ಅಧಿಕಾರಿಗಳು ನಿರಾಕರಿಸಿದ್ದರು. ಆದರೆ, ಇಂತಹ ಪ್ರಕರಣಗಳಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಬಹುದು ಎಂದು ನ್ಯಾಯ ಪೀಠ ತಿಳಿಸಿದೆ.

ಜಯನಂದನ್‌ ಅವರಿಗೆ ನ್ಯಾಯಾಲಯ ಡಿಸೆಂಬರ್ 22ರಿಂದ 23ರವರೆಗೆ (ಇಂದು ಮತ್ತು ನಾಳೆ) ಬೆಂಗಾವಲು ಪೆರೋಲ್ ನೀಡಿದೆ.

ಇದನ್ನೂ ಓದಿ : “ಗೋಮಾಂಸ ಪ್ರಚಾರಕಿಯನ್ನು ದೇವಸ್ಥಾನಕ್ಕೆ ಹೇಗೆ ಬಿಟ್ರು”?..ಯೂಟ್ಯೂಬರ್ ವಿರುದ್ಧ ಧ್ವೇಷ ಹರಡಿದ ಬಲ ಪಂಥೀಯರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...