Homeಕರ್ನಾಟಕದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

ದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

- Advertisement -
- Advertisement -

‘ಕೇಂದ್ರದ ಬಿಜೆಪಿ ಸರ್ಕಾರ ದೇಶದ ಚರಿತ್ರೆಯಲ್ಲಿ ದಾಖಲಾಗುವಂತಹ ಕೆಲಸವನ್ನು ಸಂಸತ್ತಿನ ಉಭಯ ಸದನಗಳಲ್ಲಿ ಸ್ಪೀಕರ್ ಅವರಿಂದ ಮಾಡಿಸಿದೆ. ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗೆ ಭಂಗವಾಗುತ್ತಿದ್ದು, ಸಂಸತ್ ಭದ್ರತಾ ಲೋಪದ ಬಗ್ಗೆ ಸರ್ಕಾರ ಅಧಿಕೃತ ಹೇಳಿಕೆಯನ್ನು ಸದನದಲ್ಲಿ ನೀಡಬೇಕು ಎಂದು ಆಗ್ರಹಿಸಿದೆವು. ಈ ಬಗ್ಗೆ ಹೇಳಿಕೆ ನೀಡಲು ಅವರಿಂದ ಸಾಧ್ಯವಾಗದೇ ವಿರೋಧ ಪಕ್ಷಗಳ ಸಂಸತ್ ಸದಸ್ಯರನ್ನು ಅಮಾನತು ಮಾಡಿ ತಮಗೆ ಬೇಕಾದ ಮಸೂದೆ ಮಂಡನೆ ಮಾಡಿ ಅನುಮೋದನೆ ಪಡೆದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಅಪಮಾನ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇಂಡಿಯಾ ಒಕ್ಕೂಟದ 146 ಸಂಸದರ ಅಮಾನತು ವಿರೋಧಿಸಿ ಇಂದು ಬೆಂಗಳೂರಿನ ಫ್ರೀಡಂಪಾರ್ಕಿನಲ್ಲಿ ಕರ್ನಾಟಕ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಕೇಂದ್ರದ ಈ ಜನ ವಿರೋಧಿ ನಿರ್ಧಾರದ ಬಗ್ಗೆ ಜನರ ಗಮನ ಸೆಳೆಯಲು ದೇಶದಾದ್ಯಂತ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾವು ಪ್ರಜಾಪ್ರಭುತ್ವ ಉಳಿಸಬೇಕು ಎಂಬ ಕಾರಣಕ್ಕೆ, ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆ ಹಾಗೂ ವೈಫಲ್ಯವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇವೆ’ ಎಂದರು.

‘ದೇಶದ ಸಂಸತ್ತಿನ ಮೇಲೆ ನಡೆದ ದಾಳಿ ವಿಚಾರವಾಗಿ ಪ್ರಧಾನಮಂತ್ರಿಗಳು ಹಾಗೂ ಗೃಹ ಸಚಿವರಿಂದ ಉತ್ತರ ಕೇಳಿದ ಕಾರಣಕ್ಕೆ ವಿರೋಧ ಪಕ್ಷಗಳ 146 ಸಂಸದರನ್ನು ಸದನದಿಂದ ಅಮಾನತು ಮಾಡಲಾಗಿದೆ. ಪ್ರಜಾಪ್ರಭುತ್ವ ಹಾಗೂ ಅದರ ಮೌಲ್ಯಗಳನ್ನು ಉಳಿಸುವ ಉದ್ದೇಶದಿಂದ ಸರ್ಕಾರದ ವೈಫ್ಯಲ್ಯ ಹಾಗೂ ಭದ್ರತಾ ಲೋಪದ ಬಗ್ಗೆ ಸದನದಲ್ಲಿ ಚರ್ಚೆಗೆ ಆಗ್ರಹಿಸಲಾಯಿತು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿ ಉಳಿದವರನ್ನು ಅಮಾನತು ಮಾಡಿದ್ದಾರೆ’ ಎಂದು ಆರೋಪಿಸಿದರು.

‘ನೂತನ ಸಂಸತ್ ಭವನದಲ್ಲಿ ವಿರೋಧ ಪಕ್ಷದ ಸಂಸದರ ವಿರುದ್ಧದ ದಾಳಿ, ಕೇಂದ್ರ ಸರ್ಕಾರದ ದುರಾಡಳಿತ, ಸಂವಿಧಾನ ವಿರೋಧಿ ನೀತಿ ಖಂಡಿಸಿ ಸಂಸತ್ ಆವರಣದ ಮಹಾತ್ಮ ಗಾಂಧಿ ಅವರ ಪ್ರತಿಮೆ ಮುಂದೆ ನಮ್ಮ ಸಂಸತ್ ಸದಸ್ಯರು ಪ್ರತಿಭಟನೆ ಮಾಡಿದ್ದಾರೆ. ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ. ಸ್ಪೀಕರ್ ಅವರ ಬಳಿ ಕಾಗದ ಹರಿದಿದ್ದಾರೆ ಎಂದು ವಿರೋಧ ಪಕ್ಷಗಳ ಕೆಲವು ಸದಸ್ಯರ ನಡೆಯನ್ನು ಹಕ್ಕುಬಾಧ್ಯತಾ ಸಮಿತಿಯ ಪರಿಶೀಲನೆಗೆ ಒಳಪಡಿಸಿದ್ದಾರೆ. ಆ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೋ ಇಲ್ಲವೋ ಎಂಬ ಪ್ರಶ್ನೆಯನ್ನು ನಾವು ಜನರ ಮುಂದೆ ಇಡಬೇಕಿದೆ’ ಎಂದರು.

‘ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯ ಗೆದ್ದಿದ್ದೇವೆ, ನಾವು ಏನು ಬೇಕಾದರೂ ಮಾಡಬಹುದು ಎಂದು ಬಿಜೆಪಿ ನಾಯಕರು ಬೀಗುತ್ತಿದ್ದಾರೆ. ಜನ ಯಾವಾಗ ಬೇಕಾದರೂ ತಮ್ಮ ನಿರ್ಧಾರವನ್ನು ಬದಲಿಸಬಹುದು. ರಾಜ್ಯ ವಿಧಾನಸಭೆ ನಂತರ ಲೋಕಸಭೆ ಚುನಾವಣೆಯಲ್ಲಿ ಜನ ಬೇರೆ ರೀತಿಯ ಫಲಿತಾಂಶ ಕೊಟ್ಟಿರುವ ಉದಾಹರಣೆಗಳಿವೆ. ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ವಿಧಾನಸಭೆ ಚುನಾವಣೆ ನಂತರ ಎರಡೇ ತಿಂಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಜನರ ತೀರ್ಪು ಬದಲಾಗಿತ್ತು. ಆದ್ದರಿಂದ ನಾವು ಹತಾಶರಾಗುವುದು ಬೇಡ. ನಾವು ನೀತಿ ಮೇಲೆ ರಾಜಕಾರಣ ಮಾಡುತ್ತಿದ್ದು, ಬಿಜೆಪಿಯ ಸರ್ವಾಧಿಕಾರಿ ಸರ್ಕಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ನಮ್ಮ ರಾಜ್ಯದಲ್ಲಿ, ಜನರ ಸಮಸ್ಯೆ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡಿ ಎಂದರೆ ವಿರೋಧ ಪಕ್ಷದ ನಾಯಕರು ಚರ್ಚೆ ಮಾಡಲಿಲ್ಲ. ಕೊನೆಯ ದಿನ ಅವರು ಹೊರಗೆ ಪ್ರತಿಭಟನೆ ಮಾಡಿದ್ದರು. ಜನ ಸದನದ ಒಳಗೆ ಚರ್ಚೆ ಮಾಡಲು ಬಿಜೆಪಿಯ 65 ನಾಯಕರನ್ನು ಆರಿಸಿ ಕಳುಹಿಸಿದ್ದಾರೆ’ ಎಂದು ಡಿಕೆಶಿ ವಾಗ್ದಾಳಿ ನಡೆಸಿದರು.

‘ಈ ಹೋರಾಟವನ್ನು ಜನರ ಮಧ್ಯೆ ತೆಗೆದುಕೊಂಡು ಹೋಗಬೇಕು. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು, ಸಂವಿಧಾನದ ಹಕ್ಕುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಿದೆಯೇ ಎಂಬ ಪ್ರಶ್ನೆಯನ್ನು ವಿರೋಧ ಪಕ್ಷಗಳ ನಾಯಕರು ಎತ್ತುತ್ತಿದ್ದಾರೆ. ಶೇ.98 ರಷ್ಟು ಫಲಾನುಭವಿಗಳಿಗೆ ನಮ್ಮ ಯೋಜನೆಗಳು ತಲುಪಿವೆ. ಸುಮಾರು 59 ಸಾವಿರ ಕೋಟಿಯಷ್ಟು ಹಣವನ್ನು ನಾವು ಈ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟಿದ್ದೇವೆ. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಬದ್ಧತೆ. ಕಾರ್ಯಕರ್ತರಿಂದಲೇ ಈ ಪಕ್ಷ. ನಿಮ್ಮ ಹೋರಾಟವೇ ನಮಗೆ ಸ್ಫೂರ್ತಿ. ನಿಮ್ಮ ವಿಶ್ವಾಸ ಸದಾ ನಮ್ಮ ಜತೆ ಇರಲಿ ಎಂದು ಮನವಿ ಮಾಡುತ್ತೇನೆ’ ಎಂದರು.

ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ತಪ್ಪಿತಸ್ಥರನ್ನು ಬಿಡುವುದಿಲ್ಲ:

ಯಶವಂತಪುರದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿರುವುದರ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿಗಳು, ‘ಈ ವಿಚಾರ ನನ್ನ ಗಮನಕ್ಕೆ ಬಂದಿದೆ. 3 ಗಂಟೆಗೆ ಪಾಲಿಕೆ ವ್ಯಾಪ್ತಿಯ ಶಾಲೆಗಳ ವಿಚಾರವಾಗಿ ಸಭೆ ಕರೆದಿದ್ದು, ಈ ಘಟನೆ ಬಗ್ಗೆ ವರದಿ ತರಿಸಿಕೊಳ್ಳುತ್ತಿದ್ದೇನೆ. ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಇತ್ತೀಚೆಗೆ ಕೋಲಾರದ ಶಾಲೆಯ ಘಟನೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಮಕ್ಕಳನ್ನು ನಾವು ಯಾವ ರೀತಿ ನಡೆಸಿಕೊಳ್ಳಬೇಕೋ ಆ ರೀತಿ ನಡೆಸಿಕೊಳ್ಳಬೇಕು. ಮಕ್ಕಳನ್ನು ದುರುಪಯೋಗ ಮಾಡಿಕೊಳ್ಳುವಂತಿಲ್ಲ. ಶೌಚಾಲಯಗಳನ್ನು ಮಕ್ಕಳಿಂದ ಸ್ವಚ್ಛಗೊಳಿಸಲು ಅವಕಾಶ ನೀಡಿಲ್ಲ, ಮುಂದೆಯೂ ನೀಡುವುದಿಲ್ಲ’ ಎಂದು ಹೇಳಿದರು.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಜಿತ್ ಪವಾರ್ ಹಾಗೂ ಏಕನಾಥ ಶಿಂಧೆಯಂತಹವರು ಇದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಅವರು ಮೇಧಾವಿಗಳು; ಅವರಿಗೆ ಅನುಭವ ಹೆಚ್ಚಾಗಿದೆ. ಅವರಿಗೆ ಜೋತಿಷ್ಯ ಗೊತ್ತಿದ್ದು, ನುಡಿಮುತ್ತುಗಳನ್ನು ನಾವು ಸಂತೋಷದಿಂದ ಕೇಳುತ್ತಿದ್ದೇವೆ. ಅವರ ಬಾಯಿಗೆ ಬೀಗ ಹಾಕುವ ಶಕ್ತಿ ನನ್ನಲಿಲ್ಲ. ಅವರು ಮಾತನಾಡುತ್ತಿರಬೇಕು; ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ನಮ್ಮ ಪಕ್ಷ ಅಧಿಕಾರದಲ್ಲಿರುವುದನ್ನು ಅವರಿಂದ ಸಹಿಸಲಾಗುತ್ತಿಲ್ಲ. ಅವರಿಗೆ ಅಧಿಕಾರ ಸಿಗಲಿಲ್ಲ ಎಂಬ ಹತಾಶೆಯಿಂದ ಏನೆನೋ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ’ ಎಂದರು.

ನೀರಿನ ದರ ಹೆಚ್ಚಳದ ಬಗ್ಗೆ ಕೇಳಿದಾಗ, ‘ಜನಸಾಮಾನ್ಯರ ಮನೆಗಳ ನೀರಿನ ದರ ಏರಿಕೆ ಆಗಿಲ್ಲ. 2018ರಲ್ಲಿ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಹೈಕೋರ್ಟ್ ನಲ್ಲಿ ತಡೆಯಾಜ್ಞೆ ಇತ್ತು. ಹೀಗಾಗಿ 2018ರಲ್ಲಿ ನಿಗದಿ ಮಾಡಿದಂತೆ ಕೈಗಾರಿಕೆಗಳ ನೀರಿನ ದರ ಏರಿಕೆ ಮಾಡಲಾಗಿದೆ. 2013ರಿಂದ ಇಲ್ಲಿಯವೆಗೂ ಕಳೆದ 10 ವರ್ಷಗಳಿಂದ ಬೆಂಗಳೂರಿನ ಜನಸಾಮಾನ್ಯರ ಬಳಕೆ ನೀರಿನ ದರವನ್ನು ಏರಿಕೆ ಮಾಡಿಲ್ಲ. ಈಗ 2018ರ ಕಾನೂನನ್ನು ಸಕ್ರಮ ಮಾಡಿದ್ದೇವೆ’ ಎಂದು ತಿಳಿಸಿದರು.

ಇದನ್ನೂ ಓದಿ; ‘ನಾನು ವಿಡಿಯೋ ಮಾಡಿದ್ದರ ಬಗ್ಗೆ ಮಾತನಾಡುತ್ತಿರುವ ಮಾಧ್ಯಮಗಳು ನಿರುದ್ಯೋಗದ ಕುರಿತು ಚರ್ಚಿಸುತ್ತಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...