Homeಕರ್ನಾಟಕಬಿಜೆಪಿಗರು ದೆಹಲಿಗೆ ನಡೆದುಕೊಂಡು ಹೋಗುವಿರಾ: ಆರ್. ಅಶೋಕ್‌ಗೆ ಕಾಂಗ್ರೆಸ್ ತಿರುಗೇಟು

ಬಿಜೆಪಿಗರು ದೆಹಲಿಗೆ ನಡೆದುಕೊಂಡು ಹೋಗುವಿರಾ: ಆರ್. ಅಶೋಕ್‌ಗೆ ಕಾಂಗ್ರೆಸ್ ತಿರುಗೇಟು

- Advertisement -
- Advertisement -

ತಾವೂ ಸೇರಿದಂತೆ ತಮ್ಮ ಪಕ್ಷದವರು ದೆಹಲಿಗೆ ನಡೆದುಕೊಂಡು ಹೋಗುವಿರಾ, ಎತ್ತಿನ ಬಂಡಿ ಹತ್ತುವಿರಾ ಅಥವಾ ವಿಮಾನದಲ್ಲಿ ಹೋಗುವಿರಾ’ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ.

‘ಸಿಎಂ ಸಿದ್ದರಾಮಯ್ಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ಕೃಷ್ಣಬೈರೇಗೌಡ ಐಷಾರಾಮಿ ಜೆಟ್‌ನಲ್ಲಿ ಪ್ರಯಾಣ ಮಾಡುತ್ತಾರೆ. ಇಲ್ಲಿ ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇನಾ ನಿಮ್ಮ ಸಮಾಜವಾದ’ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದರು.

ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವಾಗ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಹೋದ್ಯೋಗಿಗಳು ಐಶಾರಾಮಿ ಜೆಟ್ ಬಳಸಿದ್ದರ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ‘ಐಶಾರಾಮಿ ಜೆಟ್ ಬಳಸುವ ದೌಲತ್ತು ಸಿಎಂ, ಸಚಿವರಿಗೆ ಬೇಕಿತ್ತಾ’ ಎಂದು ಪ್ರಶ್ನಿಸಿದ್ದರು.

ವಿಪಕ್ಷ ನಾಯಕನ ಏಟಿಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್, ‘ಆರ್. ಅಶೋಕ್ ಅವರೇ, ಮೋದಿಯವರು ಓಡಾಡುವ ಐಷಾರಾಮಿ ವಿಮಾನದ ಬೆಲೆ ಎಷ್ಟು ತಿಳಿದಿದೆಯೇ? ಹಿಂದಿನ ಪ್ರಧಾನಿಗಳು ವಾಯುಪಡೆಯ ವಿಮಾನ ಬಳಸುತ್ತಿದ್ದರು, ಮೋದಿಗೆ ₹8000 ಕೋಟಿಯ ವಿಮಾನದ ಅಗತ್ಯ ಬಿದ್ದಿದ್ದೇಕೆ? ಮಣಿಪುರ ಹೊತ್ತಿ ಉರಿಯುತ್ತಿರುವಾಗ ಮೋದಿ ರೋಡ್ ಶೋಕಿ ಮಾಡಿಕೊಂಡು ತಿರುಗಿದ್ದೇಕೆ? ಅಂದಹಾಗೆ ತಾವೂ ಸೇರಿದಂತೆ ತಮ್ಮ ಪಕ್ಷದವರು ದೆಹಲಿಗೆ ನಡೆದುಕೊಂಡು ಹೋಗುವಿರಾ, ಎತ್ತಿನ ಬಂಡಿ ಹತ್ತುವಿರಾ ಅಥವಾ ವಿಮಾನದಲ್ಲಿ ಹೋಗುವಿರಾ’ ಎಂದು ಪ್ರಶ್ನಿಸಿದೆ.

ಆಪರೇಷನ್ ಕಮಲಕ್ಕೆ ಬಳಸಿದ ಹಣ ಬಿಜೆಪಿಗರು ಕೂಲಿ ಮಾಡಿ ಕೂಡಿಟ್ಟದ್ದಲ್ಲ:

ಆರ್ ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮ್ಯ, ‘ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್‌ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ? 2014ರ ಜೂನ್ 15ರಿಂದ 2023ರ ಸೆಪ್ಟೆಂಬರ್‌ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 74 ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಪ್ರಧಾನಿಗಳ ಅಧಿಕೃತ ತಾಣದ ಅಂಕಿ ಅಂಶಗಳ ಪ್ರಕಾರ ಪ್ರತಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ ರೂಪಾಯಿ. ದೇಶ ಹಸಿವಿನ ಸೂಚ್ಯಂಕದಲ್ಲಿ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ’ ಎಂದು ಪ್ರಶ್ನಿಸಿದ್ದಾರೆ.

ಘಟನೆ ಹಿನ್ನೆಲೆ:

ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಜಮೀರ್ ಅಹಮದ್ ಖಾನ್ ಅವರು ಬೆಂಗಳೂರಿಗೆ ಮರಳಲು ಖಾಸಗಿ ಜೆಟ್ ಬಳಸಿದ್ದರು. ಪ್ರಯಾಣದ ಸಂದರ್ಭದಲ್ಲಿನ ಫೋಟೋ ಹಾಗೂ ವಿಡಿಯೋಗಳನ್ನು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದ್ದು ವೈರಲ್ ಆಗಿತ್ತು.

ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ‘ಬರದಿಂದ ರಾಜ್ಯದಲ್ಲಿ ರೈತರು ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ. 60 ಲಕ್ಷಕ್ಕೂ ಹೆಚ್ಚಿನ ರೈತರ ಜಮೀನಿನಲ್ಲಿ ಬೆಳೆ ನಷ್ಟವಾಗಿದ್ದು, ರೈತರು ಬೇರೆ ರಾಜ್ಯಗಳಿಗೆ ಗುಳೇ ಹೋಗುವ ಪರಿಸ್ಥಿತಿ ಇದೆ. ಮತ್ತೊಂದು ಕಡೆ ಮಕ್ಕಳು ಜೆಸಿಬಿಯಲ್ಲಿ ಶಾಲೆಗೆ ಹೋಗ್ತಿದ್ದಾರೆ. ಇತ್ತ ಮುಖ್ಯಮಂತ್ರಿಗಳು ಹಾಗೂ ಸಚಿವರು ಖಾಸಗಿ ಜೆಟ್ ನಲ್ಲಿ ಪ್ರಯಾಣ ಮಾಡಿದ್ದಾರೆ. ಬರದ ಛಾಯೆ ಸಂದರ್ಭದಲ್ಲಿ ಐಷಾರಾಮಿ ವಿಮಾನ ಪ್ರಯಾಣ ಬಗ್ಗೆ ಖುಷಿಯಾಗಿದೆ ಅಂತ ಜಮೀರ್ ವಿಡಿಯೋ ಹಂಚಿಕೊಂಡಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದರು.

‘ಸಿಎಂ ಹಾಗೂ ಸಚಿವರು ಜೆಟ್ ನಲ್ಲಿ ಪ್ರಯಾಣ, ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ.. ಇದೇನಾ ನಿಮ್ಮ ಸಮಾಜವಾದ; ಎಂದು ಕಿಡಿಕಾರಿದ್ದ ಅಶೋಕ್, ‘ಈ ರೀತಿಯ ದೌಲತ್ತು ಸಿಎಂ, ಸಚಿವರಿಗೆ ಬೇಕಿತ್ತಾ’ ಎಂದು ಜಮೀರ್ ಟ್ವೀಟ್ ಮಾಡಿದ್ದ ಫೋಟೋಗಳನ್ನು ಪ್ರದರ್ಶಿಸಿದರು.

ಇದನ್ನೂ ಓದಿ; ದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...