Homeಮುಖಪುಟಗೆಳತಿಗಾಗಿ ಲಿಂಗ ಪರಿವರ್ತನೆಗೆ ಒಳಗಾಗಿದ್ದ ಮಹಿಳಾ ಟೆಕ್ಕಿ.. ಆಕೆಯನ್ನೆ ಕೊಂದಿದ್ಯಾಕೆ?

ಗೆಳತಿಗಾಗಿ ಲಿಂಗ ಪರಿವರ್ತನೆಗೆ ಒಳಗಾಗಿದ್ದ ಮಹಿಳಾ ಟೆಕ್ಕಿ.. ಆಕೆಯನ್ನೆ ಕೊಂದಿದ್ಯಾಕೆ?

- Advertisement -
- Advertisement -

ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರನ್ನು ಆಕೆಯ ಹುಟ್ಟುಹಬ್ಬದ ಮುನ್ನಾದಿನವೇ ಬೆಂಕಿಹಚ್ಚಿ ಸಜೀವ ದಹನ ಮಾಡಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಆಕೆಯನ್ನು ಮದುವೆಯಾಗಲು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ (ಹೆಣ್ಣಿನಿಂದ ಗಂಡಾಗಿದ್ದ) ಒಳಗಾಗಿದ್ದ ಆಕೆಯ ಮಾಜಿ ಸಹಪಾಠಿಯೇ ಕೊಲೆ ಮಾಡಿದ್ದು, ಟೆಕ್ಕಿಯನ್ನು ಸರಪಳಿಯಿಂದ ಬಂಧಿಸಿ, ಬ್ಲೇಡ್‌ನಿಂದ ಹಲ್ಲೆ ನಡೆಸಿದ ನಂತರ ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚೆನ್ನೈನ ದಕ್ಷಿಣ ಉಪನಗರವಾದ ಕೆಲಂಬಾಕ್ಕಂ ಬಳಿಯ ತಲಂಬೂರ್ನಲ್ಲಿ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ವರದಿಗಳ ಪ್ರಕಾರ, 26 ವರ್ಷದ ವೆಟ್ರಿಮಾರನ್ ಅಲಿಯಾಸ್ ಪಾಂಡಿ ಮಹೇಶ್ವರಿ, ಗೆಳತಿಗೆ ಹುಟ್ಟುಹಬ್ಬದ ಸರ್ಪ್ರೈಸ್ ನೀಡುವ ನೆಪದಲ್ಲಿ, 24 ವರ್ಷದ ಟೆಕ್ಕಿ ಆರ್.ನಂದಿನಿಯ ಕಣ್ಣಿಗೆ ಪಟ್ಟಿ ಕಟ್ಟಿ ಸರಪಳಿಯಿಂದ ಬಿಗಿಯಲಾಗಿದೆ. ನಂತರ, ಆಕೆಯ ಮೇಲೆ ಬ್ಲೇಡ್‌ನಿಂದ ಅಮಾನುಷವಾಗಿ ಹಲ್ಲೆ ನಡೆಸಿ, ಪೆಟ್ರೋಲ್ ಸುರಿದು ಜೀವಂತವಾಗಿ ಸುಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಧುರೈ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಮೃತೆ ನಂದಿನಿ, ಚೆನ್ನೈನಲ್ಲಿ ತನ್ನ ಸಂಬಂಧಿಕರೊಂದಿಗೆ ನೆಲೆಸಿದ್ದರು. ಆಕೆಯ ಗೆಳತಿ ಪಾಂಡಿ ಮಹೇಶ್ವರಿ ತನ್ನ ಹೆಸರನ್ನು ಈಗ ವೆಟ್ರಿಮಾರನ್ ಎಂದು ಬದಲಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ನಂದಿನಿಯನ್ನು ಕರೆಸಿಕೊಂಡು ಚಿತ್ರ ಹಿಂಸೆ ನೀಡಿ ಕೊಲೆ ಮಾಡಿದ್ದಾರೆ.

‘ಅವರು ಕಾಲೇಜು ಓದುವಾಗಲೇ ಸ್ನೇಹಿತರಾಗಿದ್ದರು ಎನ್ನಲಾಗಿದ್ದು, ಚೆನ್ನೈಗೆ ಬಂದು ಕೆಲ ದಿನ ಒಟ್ಟಿಗೆ ವಾಸಿಸುತ್ತಿದ್ದರು. ಕೊಲೆ ಸಂದರ್ಭದಲ್ಲಿ ಯಾವುದೇ ಲೈಂಗಿಕ ದೌರ್ಜನ್ಯದ ಸುಳಿವು ಇನ್ನೂ ಕಂಡುಬಂದಿಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದ್ದು, ವೆಟ್ರಿಮಾರನ್ ಈ ಹಿಂದೆ ಹಿಂಸಾತ್ಮಕ ಪ್ರವೃತ್ತಿಯನ್ನು ಪ್ರದರ್ಶಿಸಿದ್ದರೆ ಎಂಬ ಬಗ್ಗೆ ತಿಳಿದುಬಂದಿಲ್ಲ; ತನಿಖೆ ನಡೆಯುತ್ತಿದೆ ಎಂದು ತಾಂಬರಂ ಪೊಲೀಸ್ ಕಮಿಷನರ್ ಅಮಲ್ರಾಜ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇಬ್ಬರ ನಡುವಿನ ಸಂಬಂಧ ಹಳಸಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮಧುರೈನಲ್ಲಿ ಒಟ್ಟಿಗೆ ಓದಿದ ನಂದಿನಿ ಹಾಗೂ ವೆಟ್ರಿಮಾರನ್, ಲಿಂಗ ಬದಲಾವಣೆಯ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರವೂ ಸ್ನೇಹವನ್ನು ಮುಂದುವರಿಸಿದರು. ಇವರಿಬ್ಬರೂ ತೊರೈಪಾಕ್ಕಂನಲ್ಲಿರುವ ಖಾಸಗಿ ಐಟಿ ಸಂಸ್ಥೆಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದು, ಅವರ ಸಂಬಂಧವನ್ನು ಮತ್ತಷ್ಟು ಹತ್ತಿರವಾಗಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ನಂದಿನಿ ಬೇರೆ ಯುವಕರೊಂದಿಗೆ ಆಸಕ್ತಿ ಬೆಳೆಸಿಕೊಂಡಿದ್ದಳು ಎಂದು ವೆಟ್ರಿಮಾರನ್ ಅನುಮಾನಕ್ಕೆ ಒಳಗಾಗಿದ್ದು, ಈ ಭೀಕರ ಕೃತ್ಯದ ಹಿಂದಿನ ಉದ್ದೇಶ ಎನ್ನಲಾಗಿದ್ದು, ವೆಟ್ರಿಮಾರನ್ ಅವರು ನಂದಿನಿಯ ಹುಟ್ಟುಹಬ್ಬದ ಆಚರಣೆಗೆ ಆಹ್ವಾನಿಸಿದ್ದಾರೆ. ವೆಟ್ರಿಮಾರನ್ ಬೆಂಕಿ ಹಚ್ಚಿದ ನಂತರ ನಂದಿನಿ ಇನ್ನೂ ಸರಪಳಿಯಲ್ಲಿ ಸುಡುತ್ತಿರುವುದನ್ನು ಕಂಡ ಸ್ಥಳೀಯ ನಿವಾಸಿಗಳು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿ ಆಕೆ ಸಾವನ್ನಪ್ಪಿದ್ದಾಳೆ.

ಕೊಲೆ ಆರೋಪ ಎದುರಿಸುತ್ತಿರುವ ವೆಟ್ರಿಮಾರನ್ನನ್ನು ಪೊಲೀಸರು ಕೂಡಕೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...