Homeಮುಖಪುಟಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ದೂರು ದಾಖಲಿಸಿದ ನಜ್ಮಾ ನಝೀರ್

ಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ದೂರು ದಾಖಲಿಸಿದ ನಜ್ಮಾ ನಝೀರ್

- Advertisement -
- Advertisement -

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ಮೈಸೂರಿನ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಡಿಸೆಂಬರ್ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ” ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರ ವಿರುದ್ದ ನಜ್ಮಾ ದೂರು ನೀಡಿದ್ದು, ಪ್ರಭಾಕರ್ ಭಟ್‌ ವಿರುದ್ಧ ರೌಡಿ ಶೀಟ್ ತೆರೆಯುವಂತೆ ಆಗ್ರಹಿಸಿದ್ದಾರೆ.

ನಜ್ಮಾ ಅವರು ನೀಡಿರುವ ದೂರಿನ ಸಾರಾಂಶ ಇಲ್ಲಿದೆ :

ರವಿವಾರ ದಿನಾಂಕ 24.12.2023 ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿರುವ ಕಲ್ಲಡ್ಕ ಪ್ರಭಾಕರ್ ಭಟ್ ಎಂಬಾತನು “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ. ಮುಸ್ಲಿಂ ಯುವಕರು ಮಾತ್ರ ಅಲ್ಲ, ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ?” ಎಂದು ಹೇಳಿಕೆ ನೀಡಿದ್ದಾನೆ. ಈ ಹೇಳಿಕೆಯು ಮಹಿಳೆಯರ ಖಾಸಗಿತನ, ಮಹಿಳೆಯನ್ನು ಲೈಂಗಿಕವಾಗಿ ನಿಂದಿಸುವ, ಮಹಿಳೆಯ ಮೇಲೆ ಸಾರ್ವಜನಿಕರು ಬಲಪ್ರಯೋಗಿಸುವಂತೆ ಪ್ರಚೋದಿಸುವ, ಮಹಿಳೆಗೆ ಲೈಂಗಿಕ, ಜೀವ ಬೆದರಿಕೆ ಒಡ್ಡುವ, ಮಹಿಳೆಯರ ಖಾಸಗಿ ವಿಷಯವನ್ನು ಅಶ್ಲೀಲಗೊಳಿಸುವಿಕೆ, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಬಗೆಗೆ ಅಶ್ಲೀಲವಾಗಿ ಮಾತನಾಡಿದ, ಸಾರ್ವಜನಿಕವಾಗಿ ಮಹಿಳೆಯರನ್ನು ಚುಡಾಯಿಸಿದ, ಮಹಿಳೆಯರ ಘನತೆಗೆ ಅಡ್ಡಿಯಾದ ಪ್ರಕರಣವಾದ್ದರಿಂದ ಐಪಿಸಿ ಸೆಕ್ಷನ್ 294, 354, 509, 506, ಪ್ರಕಾರ ಅಪರಾಧವಾಗಿದೆ.

ಮುಂದುವರೆದು ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, “ದೇಶವನ್ನು ಉಳಿಸಿಕೊಳ್ಳುವ ಮಹತ್ ಕಾರ್ಯ ಹಿಂದೂಗಳಿಂದ ಮಾತ್ರ ಸಾಧ್ಯ. ಮುಸ್ಲಿಮರಿಗೆ ಹಲವು ದೇಶಗಳು ಇವೆ. ಆದರೆ, ಹಿಂದೂಗಳಿಗೆ ಭಾರತ ಮಾತ್ರ ಇರೋದು. ಹಿಂದೂಗಳಿಗೆ ಬೇರೆ ಕಡೆ ಜಾಗ ಇಲ್ಲ, ಅದಕ್ಕಾಗಿ ನಾವು ಹೋರಾಟ ಮಾಡಬೇಕು.ದೇಶದಲ್ಲಿ ನಾವು ಹಿಂದೂಗಳು ಉಳಿಯುವುದು ಹೇಗೆ? ಹಿಂದೂಗಳು ಕಡಿಮೆ ಆದರೇ ಪಾಕಿಸ್ತಾನ ಜಿಂದಾಬಾದ್ ಅನ್ನುತ್ತಾರೆ. ದೇಶದ ಆದಾಯದ ಮೊದಲ ಭಾಗ ಮುಸಲ್ಮಾನರಿಗೆ ಎಂದು ಮನಮೋಹನ್ ಸಿಂಗ್ ಹೇಳಿದ್ರು. 10 ಸಾವಿರ ಕೋಟಿ ಮುಸ್ಲಿಮರಿಗೆ ಮೀಸಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಾರಪ್ಪನ ದುಡ್ಡು ಅವರಿಗೆ ನೀವು ಮೀಸಲಿಡಲು. ಸರ್ಕಾರಕ್ಕೆ ತೆರಿಗೆ ಕಟ್ಟುವುದು ಹಿಂದೂಗಳು” ಎಂದು ಹೇಳಿದ್ದಾನೆ. ಇದು ಎರಡು ಧರ್ಮಗಳನ್ನು ಎತ್ತಿಕಟ್ಟಿ ಗಲಭೆ ಮಾಡಿಸುವ, ಧರ್ಮಗಳ ಮಧ್ಯೆ ಅಪನಂಬಿಕೆ ಹುಟ್ಟಿಸಿ, ಸಾಮಾಜಿಕ ಅಶಾಂತಿ ಸೃಷ್ಟಿಸುವ, ಧರ್ಮವೊಂದನ್ನು ಅವಹೇಳನ ಮಾಡುವ ಕೃತ್ಯವಾಗಿದ್ದು ಐಪಿಸಿ 153a, 295, 295a, 298 ಪ್ರಕಾರ ಅಪರಾಧವಾಗಿದೆ.

ಮುಂದುವರೆದು ಮಾತನಾಡಿರುವ ಕಲ್ಲಡ್ಕ ಪ್ರಭಾಕರ ಭಟ್ಟನು “ನಮ್ಮ ಕೋರ್ಟ್ ವ್ಯವಸ್ಥೆ ಹೇಗಿದೆ? ಕಸಬ್ ಗಾಗಿ ರಾತ್ರಿ ಕೋರ್ಟ್ ತೆರೆಯಿತು” ಎಂದು ಸಾರ್ವಜನಿಕವಾಗಿ ಹೇಳಿದ್ದಾನೆ. ಭಾರತದ ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ವ್ಯಕ್ತಿ ಮಾತ್ರ ಹೀಗೆ ಹೇಳಲು ಸಾಧ್ಯ. ಭಯೋತ್ಪಾದಕ ಕಸಬ್ ಗೂ ಭಾರತದ ಮುಸ್ಲಿಂ ಸಮುದಾಯಕ್ಕೂ ಯಾವ ಸಂಬಂಧವೂ ಇಲ್ಲ. ಮುಸ್ಲಿಮರೂ ಸೇರಿದಂತೆ ಭಾರತದ ಪ್ರತಿಯೊಬ್ಬ ನಾಗರಿಕರು ಕಸಬ್‌ನ ಕೃತ್ಯವನ್ನು ಖಂಡಿಸುತ್ತಾರೆ. ಆದರೆ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ಟನು ಕಸಬ್‌ನನ್ನು ತನ್ನ ಕೃತ್ಯಗಳಿಗೆ ಬಳಸಿಕೊಂಡಿದ್ದಾನೆ. ಮಾತ್ರವಲ್ಲದೆ ಕಸಬ್‌ಗೆ ಶಿಕ್ಷೆ ನೀಡಿರುವ ನ್ಯಾಯಾಲಯವನ್ನು ಟೀಕಿಸಿದ್ದಾನೆ. “ಕಸಬ್ ಗಾಗಿ ಕೋರ್ಟ್ ರಾತ್ರಿ ತೆರೆಯಿತು. ಕೋರ್ಟ್ ವ್ಯವಸ್ಥೆ ಹೇಗಿದೆ” ಎಂದು ಟೀಕಿಸಿ ಕಸಬ್ ಗೆ ಶಿಕ್ಷೆ ನೀಡಲು ನ್ಯಾಯಾಲಯ ಕೈಗೊಂಡಿರುವ ತುರ್ತು ಕ್ರಮವನ್ನು ಟೀಕಿಸುವ ಮೂಲಕ IPC 12 Contempt of Court Act 1971 ಪ್ರಕಾರ ಗುರುತರ ಅಪರಾಧ ಮಾಡಿದ್ದಾನೆ.

ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ಟನು ವೃತ್ತಿಪರ ಕ್ರಿಮಿನಲ್ ಆರೋಪಿಯಾಗಿದ್ದಾನೆ. ಜೀವನ ನಿರ್ವಹಣೆಗಾಗಿ ಯಾವುದೇ ನಿರ್ದಿಷ್ಟ ವೃತ್ತಿ ಹೊಂದಿಲ್ಲದ ಈತ ಈ ಹಿಂದೆಯೂ ಸಾಮಾಜಿಕ ಅಶಾಂತಿ, ಗಲಭೆ ಸೃಷ್ಟಿ, ಮಹಿಳೆಯರ ಅವಹೇಳನ, ಹುಡುಗಿಯರ ಚುಡಾವಣೆ, ಧರ್ಮಗಳ ಅವಹೇಳನ ಪ್ರಕರಣಗಳದ್ದೇ ರೀತಿಯ ಕೃತ್ಯಗಳನ್ನು ಹಲವು ಬಾರಿ ನಡೆಸಿದ್ದಾನೆ. ಕರ್ನಾಟಕದ ಹಲವು ಠಾಣೆಗಳಲ್ಲಿ ಈತನ ವಿರುದ್ದ ಈ ಹಿಂದೆ ಇಂತದ್ದೇ ಪ್ರಕರಣಗಳು ದಾಖಲಾಗಿದೆ. ಆದರೂ ಬುದ್ದಿ ಕಲಿಯದ ಈತ ತನ್ನ ಚಾಳಿಯನ್ನು ಮುಂದುವರೆಸಿದ್ದು, ಆದ್ದರಿಂದ ಈತನ ವಿರುದ್ದ ರೌಡಿ ಹಾಳೆ ತೆರೆದು, IPC 1860 – 354, 294, 509, 506, 153A, 295, 295A, 298 ಮತ್ತು IPC 12 Contempt of Court Act 1971 ಅಡಿಯಲ್ಲಿ ಪ್ರಕರಣ ದಾಖಲಿಸಿ ಮಹಿಳೆಯರಿಗೆ ಮತ್ತು ಸಾರ್ವಜನಿಕರಿಗೆ ರಕ್ಷಣೆ ನೀಡಬೇಕು ಎಂದು ದೂರು.

ದೂರು ನೀಡಿರುವ ಕುರಿತು ನಜ್ಮಾ ಅವರು ನಾನೂ ಗೌರಿಗೆ ಖಚಿತಪಡಿಸಿದ್ದಾರೆ. ಮೈಸೂರು ಜಿಲ್ಲೆಯ ಶ್ರೀರಂಗಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ನಜ್ಮಾ ನಝೀರ್ ನೀಡಿರುವ ದೂರು ಮತ್ತು ಎಫ್‌ಐಆರ್‌ ಪ್ರತಿ ಇಲ್ಲಿದೆ :  

ಪ್ರಭಾಕರ್ ಭಟ್ ಹೇಳಿಕೆ ಕುರಿತು ನಾನು ಗೌರಿ ಜೊತೆ ಮಾತನಾಡಿರುವ ರಾಜ್ಯ ಕಾಂಗ್ರೆಸ್ ವಕ್ತಾರೆ ಯು.ಟಿ ಫರ್ಝಾನ ಅವರು “ಒಂದು ಸಮುದಾಯದ ಮಹಿಳೆಯರನ್ನು ಸಾರ್ವಜನಿಕವಾಗಿ ಅವಹೇಳನ ಮಾಡಿರುವ ಕಲ್ಲಡ್ಕ ಪ್ರಭಾಕರ ಭಟ್‌ನಂತವರನ್ನು ತಮ್ಮ ನಾಯಕ ಎಂದು ಹೇಳಿಕೊಳ್ಳುವ ದುಸ್ಥಿಯಲ್ಲಿ ಹಿಂದೂ ಸಮಾಜ ಇದೆಯೇ? ಎಂದು ಪ್ರಶ್ನಿಸಿದ್ದಾರೆ. ಆರೆಸ್ಸೆಸ್ ಜೊತೆ ನಮಗೆ ಸೈದ್ದಾಂತಿಕ ಭಿನ್ನಾಭಿಪ್ರಾಯ ಇರಬಹುದು. ಆದರೆ, ಅವರು ಹಿಂದಿನಿಂದಲೂ ಭಾರತದ ಸಂಸ್ಕೃತಿಗೆ ಗೌರವ ಕೊಡುವ ಸಂಘಟನೆ ಎಂದು ಗುರುತಿಸಿಕೊಂಡಿದ್ದಾರೆ. ಹೀಗಿರುವಾಗ, ಮಹಿಳೆಯರನ್ನು ಅವಹೇಳನ ಮಾಡಿರುವ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ನಮಗೂ ಯಾವುದೇ ಸಂಬಂಧವಿಲ್ಲ ಎಂದು ಆರೆಸ್ಸೆಸ್ ಘೋಷಿಸಲಿ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...