Homeಮುಖಪುಟರಾಮ ಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನ ತಿರಸ್ಕರಿಸಿದ ಸಿಪಿಐ(ಎಂ)

ರಾಮ ಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನ ತಿರಸ್ಕರಿಸಿದ ಸಿಪಿಐ(ಎಂ)

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ನೀಡಿರುವ ಆಹ್ವಾನವನ್ನು ಸಿಪಿಐ(ಎಂ) ಪಕ್ಷವು ತಿರಸ್ಕರಿಸಿದ್ದು, ಪಕ್ಷವು ತಮ್ಮ ಆಯ್ಕೆಯ ಯಾವುದೇ ಧರ್ಮವನ್ನು ನಂಬುವ ಮತ್ತು ಆಚರಿಸುವ ಪ್ರತಿಯೊಬ್ಬರ ಹಕ್ಕನ್ನು ಗೌರವಿಸುತ್ತದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

ಸಿಪಿಐ(ಎಂ) ನೀತಿಯು, ಧಾರ್ಮಿಕ ಭಾವನೆಗಳನ್ನು ಗೌರವಿಸುವುದು ಮತ್ತು ಪ್ರತಿಯೊಬ್ಬ ವ್ಯಕ್ತಿಗೆ ಅವರ ನಂಬಿಕೆಯನ್ನು ಆಚರಿಸುವ ಹಕ್ಕನ್ನು ಕಾಪಾಡುವ ಗುರಿಯನ್ನು ಹೊಂದಿದೆ. ಧರ್ಮವು ವೈಯಕ್ತಿಕ ಆಯ್ಕೆಯಾಗಿದೆ ಮತ್ತು ಅದನ್ನು ರಾಜಕೀಯ ಲಾಭದ ಸಾಧನವಾಗಿ ಪರಿವರ್ತಿಸಬಾರದು ಎಂದು ಪಕ್ಷವು ನಂಬುತ್ತದೆ. ಆದ್ದರಿಂದ ನಾವು ಈ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಸಿಪಿಐ(ಎಂ) ಪಕ್ಷವು ಪ್ರಕಟಣೆಯಲ್ಲಿ ತಿಳಿಸಿದೆ.

ಬಿಜೆಪಿ ಮತ್ತು ಆರೆಸ್ಸೆಸ್ ಧಾರ್ಮಿಕ ಕಾರ್ಯಕ್ರಮವನ್ನು ಹೇಗೆ ಸರಕಾರ ಪ್ರಾಯೋಜಿತ ಕಾರ್ಯಕ್ರಮವಾಗಿ  ಪರಿವರ್ತಿಸಿದೆ ಎಂಬುದನ್ನು ಪ್ರಕಟಣೆಯಲ್ಲಿ ಹೇಳಲಾಗಿದೆ. ಬಿಜೆಪಿ ಮತ್ತು ಆರೆಸ್ಸೆಸ್‌ ಈ ಧಾರ್ಮಿಕ ಸಮಾರಂಭವನ್ನು ಪ್ರಧಾನಮಂತ್ರಿ, ಯುಪಿ ಮುಖ್ಯಮಂತ್ರಿ ಮತ್ತು ಇತರ ಸರ್ಕಾರಿ ಅಧಿಕಾರಿಗಳನ್ನು ನೇರವಾಗಿ ಒಳಗೊಂಡ ಸರಕಾರದ ಕಾರ್ಯಕ್ರಮವನ್ನಾಗಿ ಪರಿವರ್ತಿಸಿರುವುದು ಅತ್ಯಂತ ದುರದೃಷ್ಟಕರ. ಸರಕಾರಕ್ಕೆ ಯಾವುದೇ ಧಾರ್ಮಿಕ ಒಲವುಗಳು ಇರಬಾರದು. ಇದು ಸಂವಿಧಾನ ಬಾಹಿರವಾಗಿದೆ. ಕಾರ್ಯಕ್ರಮದ ಆಯೋಜನೆ ವೇಳೆ ಈ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ಸಿಪಿಐಎಂ ಹೇಳಿದೆ.

1528ರಲ್ಲಿ ಮೊಘಲ್ ಚಕ್ರವರ್ತಿ ಬಾಬರನ ಕಮಾಂಡರ್ ಮೀರ್ ಬಾಕಿ ನಿರ್ಮಿಸಿದ ಬಾಬರಿ ಮಸೀದಿಯನ್ನು  1992ರ ಡಿ.6ರಂದು ಅಡ್ವಾಣಿ, ಜೋಷಿ ನೇತೃತ್ವದ ಕರಸೇವಕರು ಕೆಡವಿದರು. ಮಸೀದಿಯ ಧ್ವಂಸವು ಕೋಮುಗಲಭೆಗೆ ಕಾರಣವಾಯಿತು. ಈ ವೇಳೆ 2,000ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟರು. 1947ರಲ್ಲಿ ಸ್ವಾತಂತ್ರ್ಯದ ನಂತರ ಭಾರತವು ಕಂಡ ಅತ್ಯಂತ ಭೀಕರವಾದ ಗಲಭೆಗಳಲ್ಲಿ ಇದು ಒಂದಾಗಿತ್ತು.

2020ರಲ್ಲಿ ಲಕ್ನೋ ವಿಶೇಷ ಸಿಬಿಐ ಕೋರ್ಟ್ ನ್ಯಾಯಾಧೀಶ ಎಸ್.ಕೆ.ಯಾದವ್ ನೇತೃತ್ವದ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣವು ಪೂರ್ವ ನಿಯೋಜಿತವಲ್ಲ ಎಂದು ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಶಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ, ಬಜರಂಗ ದಳ ಸಂಸ್ಥಾಪಕ ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳನ್ನು ಖುಲಾಸೆಗೊಳಿಸಿತ್ತು.

2019ರಲ್ಲಿ ಅಂದಿನ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ. ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರನ್ನೊಳಗೊಂಡ ಪೀಠ ಅಯೋಧ್ಯೆ ಭೂ ವಿವಾದದ ಕುರಿತು ತೀರ್ಪು ನೀಡಿತ್ತು. 2.77 ಎಕರೆ ವಿವಾದಿತ ಭೂಮಿಯನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿತು ಮತ್ತು ಮಸೀದಿ ನಿರ್ಮಿಸಲು ಮುಸ್ಲಿಮರಿಗೆ ಐದು ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿತು. ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್‌ ನೀಡಿತ್ತು.

ಇದನ್ನು ಓದಿ: ಪ್ಯಾಲೆಸ್ತೀನ್‌ ಹಿರಿಯ ಸಂಸದೆ ಖಾಲಿದಾ ಜರಾರ್‌ನ್ನು ಬಂಧಿಸಿದ ಇಸ್ರೇಲ್‌ ಪಡೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂಸತ್ತು ಅಂಗೀಕರಿಸಿರುವ ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧದ ಅರ್ಜಿ: ಸುಪ್ರೀಂ ಕೋರ್ಟಿನಲ್ಲಿ ನಾಳೆ ವಿಚಾರಣೆ

0
"ಹಲವು ದೋಷಗಳು ಮತ್ತು ವ್ಯತ್ಯಾಸಗಳಿವೆ" ಎಂದು, ಭಾರತ ದಂಡ ಸಂಹಿತೆಗಳನ್ನು (ಐಪಿಸಿ) ಕೂಲಂಕಷವಾಗಿ ಪರಿಶೀಲಿಸುವ ಮೂರು ಹೊಸ ಕಾನೂನುಗಳ ಜಾರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ನಿಗದಿಪಡಿಸಿದೆ. ನ್ಯಾಯಮೂರ್ತಿಗಳಾದ ಬೇಲಾ...