Homeಮುಖಪುಟಲೆಬನಾನ್‌ಗೂ ವ್ಯಾಪಿಸಿದ ಇಸ್ರೇಲ್ ಆಕ್ರಮಣ: ವೈಮಾನಿಕ ದಾಳಿಯಲ್ಲಿ ಮೂವರು ಸಾವು

ಲೆಬನಾನ್‌ಗೂ ವ್ಯಾಪಿಸಿದ ಇಸ್ರೇಲ್ ಆಕ್ರಮಣ: ವೈಮಾನಿಕ ದಾಳಿಯಲ್ಲಿ ಮೂವರು ಸಾವು

- Advertisement -
- Advertisement -

ದಕ್ಷಿಣ ಲೆಬನಾನ್ ಗಡಿ ಪಟ್ಟಣದ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ.

ಮಂಗಳವಾರ ತಡರಾತ್ರಿ ಬಿಂತ್ ಜೆಬೈಲ್ ಪಟ್ಟಣದ ಮನೆಯೊಂದನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಝ್ಬುಲ್ಲಾ ಕಮಾಂಡರ್‌ ಮತ್ತು ಅವರ ಇಬ್ಬರು ಸಂಬಂಧಿಕರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಗಡಿಗೆ ಸಮೀಪವಿರುವ ಇಸ್ರೇಲ್‌ ಪೋಸ್ಟ್‌ಗಳ ಮೇಲೆ ಹಿಝ್ಬುಲ್ಲಾ ನಡೆಸಿದ ಸರಣಿ ದಾಳಿಯ ನಂತರ ಇಸ್ರೇಲ್ ಪ್ರತಿದಾಳಿ ನಡೆಸಿದೆ ಎಂದು ಹೇಳಲಾಗಿದೆ. ಅಕ್ಟೋಬರ್ 7ರಂದು ಇಸ್ರೇಲ್-ಗಾಜಾ ನಡುವೆ ಯುದ್ಧ ಪ್ರಾರಂಭವಾದಾಗಿನಿಂದ ಲೆಬನಾನ್ ಮತ್ತು ಇಸ್ರೇಲ್ ನಡುವಿನ ಗಡಿ ಪ್ರದೇಶದಲ್ಲಿ ದಾಳಿ -ಪ್ರತಿದಾಳಿಗಳು ನಡೆಯುತ್ತಲೇ ಇವೆ.

ಇಸ್ರೇಲ್ ದಾಳಿಯಿಂದ ಮೃತಪಟ್ಟವರನ್ನು ಅಲಿ ಬಾಝಿ, ಅವರ ಸಹೋದರ ಇಬ್ರಾಹಿಂ ಮತ್ತು ಸೊಸೆ ಶೌರೂಕ್ ಹಮ್ಮೌದ್ ಎಂದು ಗುರುತಿಸಿರುವುದಾಗಿ ಲೆಬನಾನ್‌ನ ರಾಷ್ಟ್ರೀಯ ಸುದ್ದಿ ಸಂಸ್ಥೆ (ಎನ್‌ಎನ್‌ಎ) ಬುಧವಾರ ಹೇಳಿದೆ.

ಮೃತ ಇಬ್ರಾಹಿಂ ಬಾಝಿ ಆಸ್ಟ್ರೇಲಿಯಾದ ಪ್ರಜೆಯಾಗಿದ್ದು, ಅವರು ಒಂದು ವಾರದ ಹಿಂದೆಯಷ್ಟೇ ಸಂಬಂಧಿಕರ ಭೇಟಿಗಾಗಿ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ತಿಳಿಸಿದೆ. ಮೃತಪಟ್ಟ ಮತ್ತೋರ್ವ ವ್ಯಕ್ತಿ ಅಲಿ ಬಾಝಿ ತನ್ನ ಹೋರಾಟಗಾರರಲ್ಲಿ ಒಬ್ಬ ಎಂದು ಹಿಝ್ಬುಲ್ಲಾ ಘೋಷಿದೆ.

2006 ರ ಬಳಿಕ ಇದೇ ಮೊದಲ ಬಾರಿಗೆ ಬಿಂತ್ ಜೆಬೈಲ್ ಪಟ್ಟಣದ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಆದರೆ, ದಕ್ಷಿಣ ಲೆಬನಾನಿನ ಇತರ ಏಳು ಪಟ್ಟಣಗಳ ಮೇಲೆ ಇಸ್ರೇಲ್ ಪದೇ ಪದೇ ದಾಳಿ ನಡೆಸುತ್ತಿರುತ್ತದೆ ಎಂದು ಅಲ್‌ -ಜಝೀರಾ ವರದಿ ಮಾಡಿದೆ.

ಇಸ್ರೇಲ್ ಗಡಿಯಿಂದ ಉತ್ತರಕ್ಕೆ 30 ಕಿ.ಮೀ (20 ಮೈಲುಗಳು) ದೂರದಲ್ಲಿರುವ ಲಿಟಾನಿ ನದಿಯ ಉತ್ತರದಿಂದ ಹಿಝ್ಬುಲ್ಲಾ ಪಡೆಯನ್ನು ಹಿಂಪಡೆಯಲು ಇಸ್ರೇಲ್ ಒತ್ತಾಯಿಸುತ್ತಿದೆ. ಮಂಗಳವಾರ ಹಿಝ್ಬುಲ್ಲಾ ನಡೆಸಿದ ದಾಳಿಯಲ್ಲಿ ಇಸ್ರೇಲ್‌ನ 9 ಸೈನಿಕರು ಗಾಯಗೊಂಡಿದ್ದರು ಎಂದು ಹೇಳಲಾಗಿದೆ.

ಬುಧವಾರ, ಇಸ್ರೇಲ್‌ನ ಸೇನಾ ರೇಡಿಯೋ ಮತ್ತು ಮಾಧ್ಯಮವು 18 ಕ್ಷಿಪಣಿಗಳನ್ನು ಲೆಬನಾನಿನ ಗಡಿಯಿಂದ ಈಶಾನ್ಯ ಇಸ್ರೇಲ್‌ಗೆ ಹಾರಿಸಲಾಗಿದೆ ಎಂದು ವರದಿ ಮಾಡಿದೆ.

ಈ ಪ್ರದೇಶದಲ್ಲಿ ಸೈರನ್‌ಗಳು ಸದ್ದು ಮಾಡುತ್ತಿದ್ದಂತೆ ಇಸ್ರೇಲಿ ಸೇನೆಯು ರೋಶ್ ಹನಿಕ್ರಾ ಕಿಬ್ಬುಟ್ಜ್ ಕಡೆಗೆ ಸಾಗುತ್ತಿದ್ದ ಎಂಟು ಕ್ಷಿಪಣಿಗಳನ್ನು ಹೊಡೆದುರುಳಿಸಿದೆ. ದಾಳಿಯಲ್ಲಿ ಯಾವುದೇ ಗಾಯ ಅಥವಾ ಹಾನಿಯಾಗಿಲ್ಲ ಎಂದು ವರದಿಗಳು ತಿಳಿಸಿವೆ.

ಹಮಾಸ್-ಇಸ್ರೇಲ್ ಸಂಘರ್ಷದ ನಡುವೆ ಹಿಝ್ಬುಲ್ಲಾ-ಇಸ್ರೇಲ್ ನಡುವೆ ಸಮರ ನಡೆಯುತ್ತಿದೆ. ಇಸ್ರೇಲ್ ದಾಳಿಯಿಂದ ಲೆಬನಾನಿನ 150 ಮಂದಿ ಇದುವರೆಗೆ ಮೃತಪಟ್ಟಿದ್ದಾರೆ. ಈ ಪೈಕಿ ಹೆಚ್ಚಿನವರು ಹಿಝ್ಬುಲ್ಲಾ ಗುಂಪಿನವರು ಉಳಿದವರಲ್ಲಿ ಮೂವರು ಪತ್ರಕರ್ತರು ಮತ್ತು ನಾಗರಿಕರು ಒಳಗೊಂಡಿದ್ದಾರೆ.

ಇಸ್ರೇಲ್‌ ಭಾಗದ ಮಿಲಿಟರಿಯ ಅಂಕಿ ಅಂಶಗಳ ಪ್ರಕಾರ, ಅಕ್ಟೋಬರ್ 7 ರಿಂದ ಕನಿಷ್ಠ ನಾಲ್ಕು ನಾಗರಿಕರು ಮತ್ತು ಒಂಬತ್ತು ಸೈನಿಕರು ಕೊಲ್ಲಲ್ಪಟ್ಟಿದ್ದಾರೆ.

ಇದನ್ನೂ ಓದಿ : ಇಸ್ರೇಲ್‌ಗೆ 230 ವಿಮಾನ, 20 ಹಡಗುಗಳಲ್ಲಿ ಯುದ್ಧ ಸಾಮಗ್ರಿ ಒದಗಿಸಿದ ಯುಎಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...