Homeಮುಖಪುಟ'ಸರ್ನಾ ಪ್ರತ್ಯೇಕ ಧರ್ಮ' ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

‘ಸರ್ನಾ ಪ್ರತ್ಯೇಕ ಧರ್ಮ’ ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

- Advertisement -
- Advertisement -

ಸರ್ನಾ ಧರ್ಮಕ್ಕೆ ಮಾನ್ಯತೆ ನೀಡಬೇಕೆಂಬ ತಮ್ಮ ದೀರ್ಘ ಕಾಲದ ಬೇಡಿಕೆ ಈಡೇರಿಸಲು ಆಗ್ರಹಿಸಿ ಡಿಸೆಂಬರ್ 30ರಂದು ಸಾಂಕೇತಿಕ ‘ಭಾರತ್ ಬಂದ್‌’ಗೆ ಬುಡಕಟ್ಟು ಸಂಘಟನೆ ಆದಿವಾಸಿ ಸೆಂಗಲ್ ಅಭಿಯಾನ್ (ಎಎಸ್‌ಎ) ಬುಧವಾರ ಕರೆ ನೀಡಿದೆ.

ಎಎಸ್‌ಎ ಅಧ್ಯಕ್ಷ ಸಲ್ಖಾನ್ ಮುರ್ಮು ಮಾತನಾಡಿ, ಸರ್ನಾ ಧರ್ಮ ಸಂಹಿತೆಯು ದೇಶದ 15 ಕೋಟಿ ಬುಡಕಟ್ಟು ಜನಾಂಗದವರ ಗುರುತಾಗಿದೆ. ಬುಡಕಟ್ಟು ಸಮುದಾಯದ ಧರ್ಮಕ್ಕೆ ಮಾನ್ಯತೆ ನಿರಾಕರಿಸುವುದು ‘ಸಾಂವಿಧಾನಿಕ ಅಪರಾಧಕ್ಕೆ ಸಮಾನ’ ಎಂದು ಹೇಳಿದ್ದಾರೆ.

ಬುಡಕಟ್ಟು ಸಮುದಾಯವನ್ನು ಇತರ ಧರ್ಮಗಳನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸುವುದು ‘ಧರ್ಮದ ಗುಲಾಮಗಿರಿಯನ್ನು ಸ್ವೀಕರಿಸಲು ಒತ್ತಾಯಿಸಿದಂತೆ’. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಬುಡಕಟ್ಟು ಜನಾಂಗದವರ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಂಡಿವೆ ಎಂದು ಆರೋಪಿಸಿದ್ದಾರೆ.

1951ರ ಜನಗಣತಿಯು ಸರ್ನಾ ಧರ್ಮಕ್ಕೆ ಪ್ರತ್ಯೇಕ ಕೋಡ್ ಕೊಟ್ಟಿತ್ತು. ನಂತರ ಕಾಂಗ್ರೆಸ್ ಅದನ್ನು ತೆಗೆದು ಹಾಕಿದೆ. ಬಿಜೆಪಿ ಈಗ ಆದಿವಾಸಿಗಳನ್ನು ವನವಾಸಿಗಳು ಮತ್ತು ಹಿಂದೂಗಳಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ ಎಂದು ಮುರ್ಮು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಎಸ್‌ಎ ಬುಡಕಟ್ಟು ಸಮುದಾಯದ ಹಿತಾಸಕ್ತಿ ಕಾಪಾಡುವವರ ಪರವಾಗಿದೆ. ಯಾವ ಪಕ್ಷ ಸರ್ನಾ ಧರ್ಮವನ್ನು ಗುರುತಿಸುತ್ತದೆಯೋ, ಆ ಪಕ್ಷಕ್ಕೆ ನಾವು ಮತ ಹಾಕುತ್ತೇವೆ ಎಂದು ಮುರ್ಮು ಹೇಳಿದ್ದಾರೆ.

ಏನಿದು ಸರ್ನಾ ಧರ್ಮ?

ಸರ್ನಾ ಎಂಬುವುದು ಬುಡಕಟ್ಟು ಸಮುದಾಯಗಳ ಸ್ಥಳೀಯ ಧಾರ್ಮಿಕ ನಂಬಿಕೆಯಾಗಿದ್ದು, ಅವರು ಪ್ರಧಾನವಾಗಿ ಪರ್ವತ, ಕಾಡು ಮತ್ತು ವನ್ಯಜೀವಿಗಳಂತಹ ನೈಸರ್ಗಿಕ ಅಂಶಗಳನ್ನು ಪೂಜಿಸುತ್ತಾರೆ. ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ (ಎನ್‌ಸಿಎಸ್‌ಟಿ)ದ ಜನಗಣತಿಯು, ಧರ್ಮ ಸಂಹಿತೆಯಲ್ಲಿ ಸರ್ನಾ ಧರ್ಮಕ್ಕೆ ಸ್ವತಂತ್ರ ವರ್ಗವನ್ನು ನೀಡಬೇಕೆಂದು ಸೂಚಿಸಿದೆ.

ಹಲವಾರು ಬುಡಕಟ್ಟು ಸಂಘಟನೆಗಳು ಮತ್ತು ಕ್ರಿಶ್ಚಿಯನ್ ಮಿಷನರಿಗಳು ‘ಸರ್ನೈಂ’ಗೆ ವಿಶಿಷ್ಟವಾದ ಜನಗಣತಿ ಕೋಡ್ ನೀಡುವಂತೆ ಒತ್ತಾಯಿಸುತ್ತಿವೆ.

2011ರ ಜನಗಣತಿಯ ಪ್ರಕಾರ, ಸುಮಾರು 50 ಲಕ್ಷ ಆದಿವಾಸಿಗಳು ತಮ್ಮ ನಂಬಿಕೆಯನ್ನು ‘ಸರ್ನಾ’ ಎಂದು ಹೇಳಿಕೊಂಡಿದ್ದಾರೆ. ಜೈನ ಧರ್ಮಕ್ಕೆ ಹೋಲಿಸಿದರೆ ನಮ್ಮ ಸಂಖ್ಯೆ ದೊಡ್ಡದಿದೆ. ಕೇವಲ 44 ಜನ ಸಂಖ್ಯೆ ಇರುವ ಜೈನರಿಗೆ ಪ್ರತ್ಯೇಖ ಧರ್ಮದ ಮಾನ್ಯತೆ ಕೊಟ್ಟಿರುವಾಗ ನಮಗೂ ಕೊಡಿ ಎಂದು ಮುರ್ಮು ಆಗ್ರಹಿಸಿದ್ದಾರೆ.

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಜನ್ಮ ಸ್ಥಳವಾದ ಜಾರ್ಖಂಡ್‌ನ ಉಲಿಹಾತುಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅಥವಾ ನವೆಂಬರ್‌ನಲ್ಲಿ ಒಡಿಶಾದ ಬರಿಪಾದಕ್ಕೆ ಭೇಟಿ ನೀಡಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಸರ್ನಾ ಧರ್ಮದ ಮಾನ್ಯತೆಯ ಬಗ್ಗೆ ಒಂದು ಮಾತನ್ನೂ ಆಡಿಲ್ಲ. ಎಎಸ್‌ಎಗೆ ಬೇರೆ ಆಯ್ಕೆಗಳಿಲ್ಲದ ಕಾರಣ, ಡಿಸೆಂಬರ್ 30 ರಂದು ಸಮಾನ ಮನಸ್ಕ ಸಂಘಟನೆಗಳ ಬೆಂಬಲದೊಂದಿಗೆ ಒಂದು ದಿನದ ಸಾಂಕೇತಿಕ ಭಾರತ್ ಬಂದ್‌ಗೆ ಕರೆ ನೀಡಿದ್ದೇವೆ ಎಂದು ಮುರ್ಮು ಹೇಳಿದ್ದಾರೆ.

ಭಾರತ್ ಬಂದ್ ಭಾಗವಾಗಿ ಡಿ.30ರಂದು ಆದಿವಾಸಿಗಳು ರಸ್ತೆ, ರೈಲು ತಡೆ ಚಳವಳಿ ನಡೆಸಲಿದ್ದಾರೆ ಎಂದು ಮುರ್ಮು ತಿಳಿಸಿದ್ದಾರೆ.

ನವೆಂಬರ್ 11 ರಂದು ಜಾರ್ಖಂಡ್ ವಿಧಾನಸಭೆಯಲ್ಲಿ ಸರ್ನಾ ಪ್ರತ್ಯೇಖ ಧರ್ಮ ಸಂಹಿತೆ ಮಸೂದೆಯನ್ನು ಬೆಂಬಲಿಸಿದ ರಾಜಕೀಯ ಪಕ್ಷಗಳ ಬೆಂಬಲವನ್ನು ಭಾರತ್ ಬಂದ್‌ಗೆ ನಾವು ಕೋರಿದ್ದೇವೆ. ಜಾರ್ಖಂಡ್ ವಿಧಾನಸಭೆಯು 2020 ರ ನವೆಂಬರ್‌ನಲ್ಲಿ ಸರ್ವಾನುಮತದಿಂದ ಜನಗಣತಿಯ ವೇಳೆ ಸರ್ನಾವನ್ನು ಒಂದು ವಿಶಿಷ್ಟ ಧರ್ಮವೆಂದು ಗುರುತಿಸುವ ನಿರ್ಣಯವನ್ನು ಅಂಗೀಕರಿಸಿದೆ ಎಂದು ಮುರ್ಮು ಮಾಹಿತಿ ನೀಡಿದ್ದಾರೆ.

ಚಿತ್ರ ಕೃಪೆ: ದಿ ಹಿಂದೂ

ಇದನ್ನೂ ಓದಿ : 8 ಮಂದಿ ಭಾರತೀಯರಿಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆ ರದ್ದುಪಡಿಸಿದ ಕತಾರ್‌ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...