Homeಮುಖಪುಟಚುನಾವಣಾ ಆಯುಕ್ತರ ನೇಮಕಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಚುನಾವಣಾ ಆಯುಕ್ತರ ನೇಮಕಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದು, ಮಸೂದೆ ಇನ್ನು ಕಾರ್ಯರೂಪಕ್ಕೆ ಬರಲಿದೆ.

ಡಿ.12ರಂದು ರಾಜ್ಯಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಮಸೂದೆ-2023 ಅಂಗೀಕಾರಗೊಂಡಿತ್ತು. ಲೋಕಸಭೆಯಿಂದ ಬಹುಪಾಲು ಪ್ರತಿಪಕ್ಷಗಳ ಸದಸ್ಯರು ಅಮಾನತುಗೊಂಡ ಬಳಿಕ ಈ ಮಸೂದೆ ಅಂಗೀಕರಿಸಲಾಗಿತ್ತು.

ಏನಿದು ಮಸೂದೆ:

ಈ ಮಸೂದೆಯು ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ (EC)ಗಳ ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿಯನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ. ಜೊತೆಗೆ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯ ಕಾರ್ಯವಿಧಾನವನ್ನು ಇದು ವಿವರಿಸುತ್ತದೆ.

ಆ.10 ರಂದು ಈ ಮಸೂದೆಯನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ರಾಜ್ಯ ಸಭೆಯಲ್ಲಿ ಮಂಡಿಸಿದ್ದರು. ಸಂಸತ್ತಿನ ಮೇಲ್ಮನೆಯಲ್ಲಿ ಚರ್ಚೆಯ ನಂತರ ಮಸೂದೆ ಅಂಗೀಕಾರಗೊಂಡಿತು. ಮಸೂದೆಯನ್ನು ವಿರೋಧಿಸಿ ಪ್ರತಿಪಕ್ಷಗಳು ಸದನತ್ಯಾಗ ಮಾಡಿದ್ದವು. ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ  ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಾಧೀಶರನ್ನು ಕೈಬಿಟ್ಟಿರುವುದನ್ನು ಪ್ರತಿಪಕ್ಷಗಳು ವಿರೋಧಿಸಿದ್ದವು.

ಮಸೂದೆಯ ಪ್ರಮುಖ ನಿಬಂಧನೆಗಳು ಚುನಾವಣಾ ಆಯೋಗದ (ಚುನಾವಣಾ ಆಯುಕ್ತರ ಸೇವಾ ನಿಯಮಗಳು ಮತ್ತು ವ್ಯವಹಾರದ ವಹಿವಾಟು) ಕಾಯಿದೆ, 1991ನ್ನು ಬದಲಿಸಲಿದೆ. ಹೊಸ ಮಸೂದೆ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ, ಸಂಬಳ ಮತ್ತು ವಜಾಗೊಳಿಸುವಿಕೆಯಂತಹ ಅಂಶಗಳನ್ನು ಒಳಗೊಂಡಿದೆ.

ಪ್ರಧಾನ ಮಂತ್ರಿ, ಕೇಂದ್ರ ಸಂಪುಟ ಸಚಿವರು, ವಿರೋಧ ಪಕ್ಷದ ನಾಯಕ ಅಥವಾ ಲೋಕಸಭೆಯ ಅತಿದೊಡ್ಡ ವಿರೋಧ ಪಕ್ಷದ ನಾಯಕರನ್ನು ಒಳಗೊಂಡಿರುವ ಆಯ್ಕೆ ಸಮಿತಿಯ ಶಿಫಾರಸಿನ ಆಧಾರದ ಮೇಲೆ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳನ್ನು ನೇಮಿಸಲಿದ್ದಾರೆ. ಪೂರ್ಣ ಸಮಿತಿಯ ಅನುಪಸ್ಥಿತಿಯಲ್ಲಿಯೂ ಈ ಸಮಿತಿಯ ಶಿಫಾರಸುಗಳು ಮಾನ್ಯವಾಗಿರುತ್ತವೆ. ಕಾನೂನು ಸಚಿವರ ನೇತೃತ್ವದ ಶೋಧನಾ ಸಮಿತಿಯು ಆಯ್ಕೆ ಸಮಿತಿಗೆ ಹೆಸರುಗಳನ್ನು ಪ್ರಸ್ತಾಪಿಸುತ್ತದೆ. ಅರ್ಹತಾ ಮಾನದಂಡಗಳೊಂದಿಗೆ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಕಾರ್ಯದರ್ಶಿಗೆ ಸಮಾನವಾದ ಸ್ಥಾನವನ್ನು ಹೊಂದಿರಬೇಕು. ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳಿಗೆ ವೇತನ ಮತ್ತು ಸೇವಾ ಷರತ್ತುಗಳನ್ನು ಸಂಪುಟ ಕಾರ್ಯದರ್ಶಿಗೆ ಸಮನಾಗಿ ಹೊಂದಿಸಲಾಗಿದೆ. ಇದು ಸುಪ್ರೀಂಕೋರ್ಟ್ ನ್ಯಾಯಾಧೀಶರ ವೇತನಕ್ಕೆ ಸಮಾನಾಗಿ ಇದ್ದ ನಿಯಮವನ್ನು ಬದಲಿಸಲಿದೆ.

ಪ್ರಸ್ತಾವಿತ ಬದಲಾವಣೆಗಳು ಚುನಾವಣಾ ಆಯೋಗದ ಸ್ಥಾನಮಾನವನ್ನು ಕೆಳಮಟ್ಟಕ್ಕಿಳಿಸಲಿದೆ ಎಂದು ಪ್ರತಿಪಾದಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತರಗಳು ವೇತನ ಅಸಮಾನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ ಕೇಂದ್ರ ಸರ್ಕಾರವು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳ ವೇತನ ಮತ್ತು ಸವಲತ್ತುಗಳನ್ನು ಸುಪ್ರೀಂಕೋರ್ಟ್‌ ನ್ಯಾಯಾಧೀಶರ ಮಟ್ಟದಲ್ಲಿ ಮುಂದುವರೆಸಲು ಮಸೂದೆಯಲ್ಲಿ ತಿದ್ದುಪಡಿ ಮಾಡಿದೆ.

ಆಯ್ಕೆ ಸಮಿತಿಯ ಭಾರತದ ಮುಖ್ಯ ನ್ಯಾಯಮೂರ್ತಿ ಹೊರಕ್ಕೆ!  

ಹೊಸ ಮಸೂದೆಯು ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಹೊರಗಿಡಲಿದೆ. ಈ ವರ್ಷದ ಮಾರ್ಚ್‌ನಲ್ಲಿ, ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ಸಂಸತ್ತು ಕಾನೂನು ರೂಪಿಸುವವರೆಗೆ ಚುನಾವಣಾ ಆಯುಕ್ತರನ್ನು ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ಆಯ್ಕೆ ಮಾಡುತ್ತದೆ ಎಂದು ತೀರ್ಪು ನೀಡಿತ್ತು. ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಪೀಠವು ಚುನಾವಣಾ ಆಯುಕ್ತರ ಸ್ವಾತಂತ್ರ್ಯವನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಮಸೂದೆ ಮಂಡನೆ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...