Homeಕರ್ನಾಟಕಮರಗಳ್ಳತನ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರನ ಬಂಧನ

ಮರಗಳ್ಳತನ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರನ ಬಂಧನ

- Advertisement -
- Advertisement -

ಮರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ಬಂಧಿಸಿದ್ದು, ನಂದಗೋಡನಹಳ್ಳಿಯಲ್ಲಿ ಮರ ಕಡಿದು ಸಾಗಿಸಿದ ಆರೋಪದಡಿ ವಿಕ್ರಮ್ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ ಸರ್ಕಾರಿ ಜಮೀನಿನಲ್ಲಿದ್ದ 126 ಮರಗಳನ್ನು ಅಕ್ರಮವಾಗಿ ಕಡಿದ ಆರೋಪ ವಿಕ್ರಂ ಮೇಲಿತ್ತು. ಬೇಲೂರು ತಹಶೀಲ್ದಾರ್ ಮಮತಾ ಅವರ ವರದಿ ಮೇರೆಗೆ ಡಿ.16ರಂದು ಅರಣ್ಯ ಇಲಾಖೆಗೆ ಮರಗಳ್ಳತನ ವಿಷಯ ತಿಳಿದಿದೆ. ಶುಂಠಿ ಕೃಷಿ ಮಾಡಲು ಮರಗಳನ್ನು ಕಡಿಯಲಾಗಿದೆ ಎಂದು ಹೇಳಲಾಗಿತ್ತು.

ದೂರು ದಾಖಲಾದ ನಂತರ ವಿಕ್ರಮ್ ಸಿಂಹ ಅವರು ಆರಂಭದಲ್ಲಿ ತನಿಖಾಧಿಕಾರಿಯ ಮುಂದೆ ಹಾಜರಾಗಿದ್ದರು ಎಂದು ಅರಣ್ಯ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ನಂತರ ಅವರು ಅಧಿಕಾರಿಗಳಿಂದ ತಪ್ಪಿಸಿಕೊಂಡಿದ್ದರು. ಅವರ ಕುರಿತ ಸಾಕ್ಷ್ಯ ಸಂಗ್ರಹದ ಬಳಿಕ ಅರಣ್ಯಾಧಿಕಾರಿಗಳು ಅವರ ಬಂಧನಕ್ಕೆ ಬಲೆ ಬೀಸಿದ್ದರು ಎನ್ನಲಾಗಿದೆ.

ಆರೋಪಿ ಹಾಸನದಿಂದ ಬೆಂಗಳೂರಿಗೆ ತೆರಳಿರುವುದನ್ನು ತಿಳಿದ ಅಧಿಕಾರಿಗಳ ತಂಡ ಆರೋಪಿಯ ಪತ್ತೆಗೆ ಸಹಕರಿಸಲು ನಗರ ಪೊಲೀಸ್ ಆಯುಕ್ತರಿಂದ ಸಹಯಾವನ್ನು ಕೋರಿದ್ದರು. ಹಾಸನದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಭುಗೌಡ ಬಿರಾದಾರ್ ಮತ್ತು ಬೆಂಗಳೂರಿನ ಅಪರಾಧ ವಿಭಾಗದ ಎಸಿಪಿ ನೇತೃತ್ವದ ಜಂಟಿ ತಂಡವು ವಿಕ್ರಮ್ ಸಿಂಹನನ್ನು ಬೆಂಗಳೂರಿನಲ್ಲಿ ಬಂಧಿಸಿದೆ. ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಆರೋಪದಡಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ ಮೋಹನ್ ಕುಮಾರ್ ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಬೇಲೂರು ತಾಲೂಕಿನ ನಂದಗೋಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿದ್ದು, ಈ ಸಂಬಂಧ ಬೇಲೂರು ಆರ್‌ಎಫ್‌ಒ, ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್ ಶೆಟ್ಟಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಕಡಿದಿರುವ ಮರಗಳನ್ನು ಅರಣ್ಯ ಇಲಾಖೆ ಡಿಪೊದಲ್ಲಿ ಸಂಗ್ರಹಿಸಲಾಗಿದೆ. ಪ್ರಕರಣ ಬಯಲಾಗುತ್ತಿದ್ದಂತೆ ಪ್ರತಾಪ್ ಸಿಂಹ ಹಾಗೂ ಸಹೋದರನ ವಿರುದ್ಧ ಅಣ್ಣ ಪ್ರತಾಪ್ ಸಿಂಹ ನಾಡಕಳ್ಳ, ತಮ್ಮ ವಿಕ್ರಂ ಸಿಂಹ ಕಾಡುಗಳ್ಳ ಎಂದು ಕಾಂಗ್ರೆಸ್ ಟೀಕಿಸಿತ್ತು.

ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ:

ಈ ಬಗ್ಗೆ ಮಾತನಾಡಿದ್ದ ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ.ಖಂಡ್ರೆ, ಬೇಲೂರು ತಾಲೂಕಿನ ನಂದಗೋಡನ ಹಳ್ಳಿಯಲ್ಲಿ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ. ಇದರಲ್ಲಿ 60 ಬೃಹತ್‌ ಹಳೆಯ ಮರಗಳೂ ಸೇರಿವೆ. ಈ ರೀತಿ ಸ್ವಾರ್ಥಕ್ಕೆ ಯಾರೇ ಮರ ಕಡಿದರೆ ಅಪರಾಧ, ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ವಿಕ್ರಂ ಸಿಂಹ ಎಂಬವರನ್ನು ವಶಕ್ಕೆ ಪಡೆದು ಪ್ರಶ್ನಿಸುವುದು ಅಗತ್ಯವೆಂದು ಮನಗಂಡು ತನಿಖಾಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣವನ್ನು ತಹಶೀಲ್ದಾರ್ ಅವರು ಬೆಳಕಿಗೆ ತಂದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡು ಬಂದಿದೆ. ತಕ್ಷಣ ಕ್ರಮ ವಹಿಸದೆ ಲೋಪ ಎಸಗಿದ ಆರೋಪದಡಿ ಐವರು ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಉನ್ನಾವೊ ಎಸ್ಪಿ ಕಚೇರಿ ಹೊರಗೆ ಬೆಂಕಿ ಹಚ್ಚಿಕೊಂಡಿದ್ದ ದಲಿತ ಯುವಕ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಮಗುವಿನ ವಿಡಿಯೋಗೆ ವಿಕೃತವಾಗಿ ಕಮೆಂಟಿಸಿದ ನಟಿ ರೂಪಾಲಿ ಗಂಗೂಲಿ: ‘ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು’ ಎಂದ ನಟಿ ವಿರುದ್ಧ ಜನಾಕ್ರೋಶ

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸದಸ್ಯೆ ರೂಪಾಲಿ ಗಂಗೂಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ...

‘ಅಂಬೇಡ್ಕರ್ ಅವರನ್ನು ಆಚರಿಸುವ ಬಿಜೆಪಿ, ‘ಹಿಂದೂ ರಾಷ್ಟ್ರ’ದ ಕುರಿತ ಅವರ ಎಚ್ಚರಿಕೆಯನ್ನೂ ಓದಲಿ’: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ದೇಶದಲ್ಲಿ ‘ಹಿಂದೂ ರಾಷ್ಟ್ರ’ ನಿರ್ಮಾಣದ ಬೇಡಿಕೆಯನ್ನು ತೀವ್ರವಾಗಿ ಟೀಕಿಸಿರುವ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದ ಎಚ್ಚರಿಕೆಗಳನ್ನು ಓದಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ನಾಯಕರು ಭಾರತ...

‘ಪರಿಶೀಲನೆ ಮಾನವ ಘನತೆಯನ್ನು ಬಲಿಪಡೆಯಬಾರದು’: ನಾಗಪುರ ಜೈಲಿನ ಅಮಾನವೀಯ ವಿವಸ್ತ್ರ ಪರಿಶೀಲನೆ ವಿರುದ್ಧ ಜೈಲಿನಲ್ಲಿರುವ ಕೇರಳ ಕಾರ್ಯಕರ್ತ ಆರೋಪ

ಬಂಧನದಲ್ಲಿರುವ ವ್ಯಕ್ತಿಗಳು ಅಥವಾ ಕೈದಿಗಳು ಜೈಲಿನ ಬಾಗಿಲು ಪ್ರವೇಶಿಸಿದ ತಕ್ಷಣ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಹಾಗೂ ಮಾನವ ಘನತೆಯನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮಹಾರಾಷ್ಟ್ರದ ನಾಗಪುರ ಕೇಂದ್ರ ಕಾರಾಗೃಹದ 'ಅಂಡಾ ಸೆಲ್'ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ...

‘ಅದು ಪೊಲೀಸರೇ ನಡೆಸಿದ ಪೂರ್ವ ಯೋಜಿತ ಕೃತ್ಯ’: ಸಂಭಾಲ್ ಹಿಂಸಾಚಾರ ನ್ಯಾಯಾಂಗ ಆಯೋಗದ ವರದಿ ತಿರಸ್ಕರಿಸಿದ ಸಂಸದ ಜಿಯಾ-ಉರ್-ರೆಹಮಾನ್

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ನ್ಯಾಯಾಂಗ ಆಯೋಗದ ವರದಿಯನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಘಟನೆಯಲ್ಲಿ ನಾಲ್ವರು...

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...