Homeಮುಖಪುಟಇರಾನ್‌ನಲ್ಲಿ ಬಾಂಬ್ ಸ್ಪೋಟ: 100ಕ್ಕೂ ಅಧಿಕ ಮಂದಿ ಸಾವು

ಇರಾನ್‌ನಲ್ಲಿ ಬಾಂಬ್ ಸ್ಪೋಟ: 100ಕ್ಕೂ ಅಧಿಕ ಮಂದಿ ಸಾವು

- Advertisement -
- Advertisement -

ಇರಾನ್‌ನ ಆಗ್ನೆಯ ನಗರ ಕೆರ್ಮನ್‌ನಲ್ಲಿ ಸಂಭವಿಸಿದ ಎರಡು ಬಾಂಬ್ ಸ್ಟೋಟ ಪ್ರಕರಣಗಳಲ್ಲಿ ನೂರಕ್ಕೂ ಅಧಿಕ (103) ಜನರು ಮೃತಪಟ್ಟಿದ್ದಾರೆ. ಅವಘಡದಲ್ಲಿ ನೂರಾರು ಜನರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

2020ರಲ್ಲಿ ಯುಎಸ್ ಡ್ರೋನ್ ದಾಳಿಯಲ್ಲಿ ಮೃತಪಟ್ಟ ಇರಾನ್‌ನ ಕಮಾಂಡರ್ ಖಾಸಿಮ್ ಸುಲೈಮಾನಿಯ ಪುಣ್ಯಸ್ಮರಣೆ ಕಾರ್ಯಕ್ರಮದ ವೇಳೆ ಸ್ಪೋಟ ನಡೆದಿದೆ. ಭಯೋತ್ಪಾದಕರು ಅಥವಾ ಇಸ್ರೇಲ್ ಸೇನೆ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಕೆಲ ವರದಿಗಳು ಹೇಳಿವೆ. ಇದುವರೆಗೆ ಯಾರೂ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

ಖಾಸಿಮ್ ಸುಲೈಮಾನಿ ಅವರ ನಾಲ್ಕನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಕಿಕ್ಕಿರಿದು ಜನ ಸೇರಿದ್ದ ವೇಳೆ ಸ್ಪೋಟ ಸಂಭವಿಸಿದೆ. ಮೊದಲ ಸ್ಪೋಟದ 20 ನಿಮಿಷದ ಬಳಿಕ ಮತ್ತೊಂದು ಸ್ಪೋಟ ನಡೆದಿದೆ ಎಂದು ಇರಾನಿನ ಟಿವಿ ಮಾಧ್ಯಮವೊಂದು ವರದಿ ಮಾಡಿದೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಘಟನೆಯನ್ನು ‘ಘೋರ ಮತ್ತು ಅಮಾನವೀಯ ಅಪರಾಧ’ ಎಂದು ಕರೆದಿದ್ದು, ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಇರಾನ್‌ನ ಉನ್ನತ ಅಧಿಕಾರದ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ರಕ್ತಸಿಕ್ತ ಅವಳಿ ಬಾಂಬ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ರಷ್ಯಾ, ಟರ್ಕಿ ಸೇರಿದಂತೆ ಹಲವಾರು ದೇಶಗಳು ದಾಳಿಯನ್ನು ಖಂಡಿಸಿವೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಘಟನೆಗೆ ಬೇಸರ ವ್ಯಕ್ತಪಡಿಸಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ.

ಇರಾನ್ ಆರೋಗ್ಯ ಸಚಿವ ಬಹ್ರಾಮ್ ಐನೊಲ್ಲಾಹಿ ರಾಜ್ಯ ಟಿವಿಗೆ ನೀಡಿದ ಹೇಳಿಕೆಯಲ್ಲಿ, ಸಾವಿನ ಸಂಖ್ಯೆ 103ಕ್ಕೇರಿದೆ ಮತ್ತು 211 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇದು ಇರಾನ್ ಇಸ್ಲಾಮಿಕ್ ಗಣರಾಜ್ಯದ ಇತಿಹಾಸದಲ್ಲಿ ಅತ್ಯಂತ ಭೀಕರ ದಾಳಿಯಾಗಿದೆ. ಇದರ ಹಿಂದೆ ಇಸ್ಲಾಮಿಕ್ ಸ್ಟೇಟ್ ಸೇರಿದಂತೆ ವಿವಿಧ ಗುಂಪುಗಳಿವೆ ಎಂದಿದ್ದಾರೆ.

ಇದನ್ನೂ ಓದಿ : BRICS ರಾಷ್ಟ್ರಗಳ ಒಕ್ಕೂಟಕ್ಕೆ ಸೌದಿ ಅರೇಬಿಯಾ ಸೇರಿ ಐದು ರಾಷ್ಟ್ರಗಳ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...