Homeಮುಖಪುಟಕಚ್ಚಾ ತೈಲ ಬೆಲೆಯಲ್ಲಿ ಇಳಿಕೆಯಾದರೂ, ಪೆಟ್ರೋಲ್‌ ಬೆಲೆ ಕಡಿತಗೊಳಿಸಿಲ್ಲ: ಕೇಂದ್ರದ ವಿರುದ್ಧ ಖರ್ಗೆ ವಾಗ್ಧಾಳಿ

ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆಯಾದರೂ, ಪೆಟ್ರೋಲ್‌ ಬೆಲೆ ಕಡಿತಗೊಳಿಸಿಲ್ಲ: ಕೇಂದ್ರದ ವಿರುದ್ಧ ಖರ್ಗೆ ವಾಗ್ಧಾಳಿ

- Advertisement -
- Advertisement -

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಆದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

ಕಚ್ಚಾ ತೈಲ ಬೆಲೆಗಳು 19 ತಿಂಗಳುಗಳಲ್ಲಿ 31% ರಷ್ಟು ಕುಸಿದಿದೆ. ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಅನಿಯಂತ್ರಿತ ಲಾಭಕೋರತನಕ್ಕೆ ಅವಕಾಶ ಮಾಡಿಕೊಟ್ಟಿದೆ. ಇದರಿಂದಾಗಿ ಕಚ್ಚಾ ತೈಲ ಬೆಲೆಗಳು ಇಳಿದರೂ ಸಾರ್ವಜನಿಕರಿಗೆ ಪರಿಹಾರವಾಗಿ ಇಂಧನಗಳ ಬೆಲೆಯನ್ನು ಇಳಿಕೆ ಮಾಡಲಾಗಿಲ್ಲ. ಇದರ ಪ್ರಯೋಜನವನ್ನು ಸಾರ್ವಜನಿಕರಿಗೆ ವರ್ಗಾಯಿಸುತ್ತಿಲ್ಲ. ತೈಲ ಕಂಪನಿಗಳೊಂದಿಗೆ ಬೆಲೆ ಇಳಿಕೆಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ವತಃ ಸಚಿವರೇ ಒಪ್ಪಿಕೊಳ್ಳುತ್ತಾರೆ. ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್‌ಗೆ ಸಾರ್ವಜನಿಕರಿಂದ 8 ರಿಂದ 10 ಮತ್ತು ಡೀಸೆಲ್‌ನಿಂದ 3 ರಿಂದ 4 ರೂ. ಲಾಭವನ್ನು ಗಳಿಸುತ್ತಿವೆ ಎಂದು ಹೇಳಿದ್ದಾರೆ.

ಸಾರ್ವಜನಿಕ ಉಳಿತಾಯವು 50 ವರ್ಷಗಳಲ್ಲಿ ಅತ್ಯಂತ ಕಡಿಮೆಯಾಗಿದೆ. ದೇಶವು ಭ್ರಮನಿರಸನಗೊಂಡಿದೆ, ಸುಳ್ಳು ಭರವಸೆಗಳು ಮತ್ತು ಪೊಳ್ಳು ಜಾಹೀರಾತುಗಳ ಮೂಲಕ ಬಿಜೆಪಿ ಭರವಸೆ ನೀಡಿದ ಅಚ್ಛೇ ದಿನ್‌ನ್ನು ಹುಡುಕುತ್ತಿದ್ದೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ 96.72ರೂ ಮತ್ತು ಡೀಸೆಲ್ ದರ 89.62ರೂ ಇದೆ. ಮುಂಬೈ, ಬೆಂಗಳೂರಿನಂತಹ ನಗರಗಳಲ್ಲಿ ಇಂಧನ ಬೆಲೆ 100ರ ಗಡಿ ದಾಟಿದೆ. ಕಚ್ಚಾ ತೈಲದ ಪ್ರಸ್ತುತ ಜಾಗತಿಕ ಬೆಲೆ ಗುರುವಾರ ಪ್ರತಿ ಬ್ಯಾರೆಲ್‌ಗೆ 6,016 ರಷ್ಟಿದ್ದು, 1.93% ನಷ್ಟು ಕುಸಿತವನ್ನು ಕಂಡಿದೆ. ಈ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಯಾವುದೇ ಸ್ಪಷ್ಟನೆಯನ್ನು ಈವೆರೆಗೆ ನೀಡಿಲ್ಲ.

ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮಾತನಾಡಿ, ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳು ಮುಖ್ಯವಾಗಿ ಭೌಗೋಳಿಕ ರಾಜಕೀಯ ಕಾರಣಗಳಿಂದ ಏರಿಳಿತಗಳು ಕಾಣುತ್ತಿದೆ. ಮತ್ತು ಲಭ್ಯತೆ ಮತ್ತು ದರಗಳ ಮೇಲೆ ದೇಶದ ಇಂಧನ ಭದ್ರತೆಯನ್ನು ಖಚಿತಪಡಿಸುವುದು ಸರ್ಕಾರದ ಗಮನವಾಗಿದೆ. ಕೆಂಪು ಸಮುದ್ರ ಮತ್ತು ಸೂಯೆಜ್ ಕಾಲುವೆಯ ಮೂಲಕ ಅತ್ಯಂತ ಅನುಕೂಲಕರ ಹಡಗು ಮಾರ್ಗಗಳಲ್ಲಿ ನಡೆಯುತ್ತಿರುವ ಸಂಘರ್ಷಗಳಿಂದಾಗಿ, ದಿನಕ್ಕೆ ಸುಮಾರು 8.2 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲ ಸಾಗಣೆಗೆ ತೊಂದರೆಯಾಗಿದೆ ಎಂದು ಹೇಳಿದ್ದಾರೆ.

ಭಾರತವು 87% ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಸೆಪಟ್ಟಂಬರ್‌ 2023ಕ್ಕೆ ಹೋಲಿಕೆ ಮಾಡಿದರೆ ಡಿಸೆಂಬರ್‌ನಲ್ಲಿ ಕಚ್ಚಾ ತೈಲದ ಸರಾಸರಿ ಆಮದು ವೆಚ್ಚದಲ್ಲಿ 17% ಕುಸಿತವನ್ನು ಕಂಡಿದೆ. ಜಾಗತಿಕ ಕಚ್ಚಾ ತೈಲ ದರಗಳ ಕುಸಿತದ ಹೊರತಾಗಿಯೂ, ಭಾರತದ ಪ್ರಮುಖ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂಡಿಯನ್ ಆಯಿಲ್ ಕಾರ್ಪ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪ್ (ಬಿಪಿಸಿಎಲ್), ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪ್ (ಎಚ್‌ಪಿಸಿಎಲ್) ಗಮನಾರ್ಹ ಲಾಭವನ್ನು ಗಳಿಸಿದೆ. ಆದರೆ ಸಾರ್ವಜನಿಕರಿಗೆ ತೈಲ ಬೆಲೆ ಇಳಿಕೆ ಮಾಡಲಾಗಿಲ್ಲ.

ಇದನ್ನು ಓದಿ: ಹೆಚ್ಚಿದ ನಿರುದ್ಯೋಗ: 15 ಹುದ್ದೆಗಳಿಗೆ 25,000ಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...