Homeಕರ್ನಾಟಕಎಐಸಿಸಿ ಸೆಂಟ್ರಲ್‌ ವಾರ್‌ರೂಂ ಅಧ್ಯಕ್ಷರಾಗಿ ಶಶಿಕಾಂತ್‌ ಸೆಂಥಿಲ್‌ ನೇಮಕ

ಎಐಸಿಸಿ ಸೆಂಟ್ರಲ್‌ ವಾರ್‌ರೂಂ ಅಧ್ಯಕ್ಷರಾಗಿ ಶಶಿಕಾಂತ್‌ ಸೆಂಥಿಲ್‌ ನೇಮಕ

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಪಕ್ಷವು ಸೆಂಟ್ರಲ್‌ ವಾರ್‌ರೂಂನ್ನು ರಚಿಸಿದ್ದು, ‘ಸಂಘಟನಾ’ ವಾರ್‌ರೂಂ ಅಧ್ಯಕ್ಷರಾಗಿ ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್‌ ಸೆಂಥಿಲ್‌ ಅವರು ನೇಮಕಗೊಂಡಿದ್ದಾರೆ.

ತಮಿಳುನಾಡು ಕೇಡರ್‌ನ ಐಎಎಸ್ ಅಧಿಕಾರಿಯಾಗಿರುವ ಶಶಿಕಾತ್‌ ಸೆಂಥಿಲ್‌, ಐಎಎಸ್‌ ಹುದ್ದೆಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದರು. ಇತ್ತೀಚಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೆಂಥಿಲ್ ಪ್ರಮುಖ ಚುನಾವಣಾ ತಂತ್ರಗಾರರಲ್ಲಿ ಒಬ್ಬರಾಗಿದ್ದರು. ಕೆಪಿಸಿಸಿಯ ವಾರ್‌ ರೂಂನ್ನು ಯಶಸ್ವಿಯಾಗಿ ನಿಭಾಯಿಸಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವಿನಲ್ಲಿ ಪಾತ್ರ ವಹಿಸಿದ್ದರು.

ವೈಭವ್ ವಾಲಿಯಾ ಅವರು ಸೆಂಟ್ರಲ್‌ ಸಂವಹನ ವಾರ್ ರೂಮ್‌ನ ಮುಖ್ಯಸ್ಥರನ್ನಾಗಿ ನೇಮಕಗೊಂಡಿದ್ದು, ಸಸಿಕಾಂತ್ ಸೆಂಥಿಲ್ ಅವರನ್ನು ‘ಸಂಘಟನಾ’ ವಾರ್ ರೂಮ್‌ನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಗೋಕುಲ್ ಬುತೈಲ್, ನವೀನ್ ಶರ್ಮ, ವರುಣ್ ಸಂತೋಷ್, ಅರವಿಂದ್ ಕುಮಾರ್‌ರನ್ನು ವಾರ್‌ರೂಂ ಉಪಾಧ್ಯಕ್ಷರುಗಳಾಗಿ ಆಯ್ಕೆ ಮಾಡಲಾಗಿದೆ.

ಎಐಸಿಸಿ ಕೋಶಾಧಿಕಾರಿ ಅಜಯ್ ಮಾಕೆನ್ ಅವರ ಸಂಚಾಲಕತ್ವದಲ್ಲಿ ಪ್ರಚಾರ ಸಮಿತಿಯನ್ನು ರಚಿಸಿದೆ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್ ಮತ್ತು ಕೆ ಸಿ ವೇಣುಗೋಪಾಲ್, ಎಐಸಿಸಿ ಆಡಳಿತ ಉಸ್ತುವಾರಿ ಗುರುದೀಪ್ ಸಿಂಗ್ ಸಪ್ಪಲ್, ಮಾದ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಮತ್ತು ಸಾಮಾಜಿಕ ಮಾಧ್ಯಮದ ಮುಖ್ಯಸ್ಥೆ ಸುಪ್ರಿಯಾ ಶ್ರೀನತೆ ಅವರು ಸಮಿತಿಯ ಭಾಗವಾಗಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆ ಸಾರ್ವತ್ರಿಕ ಚುನಾವಣೆಗೆ ಪ್ರಚಾರ ಸಮಿತಿಯನ್ನು ರಚಿಸಿದ್ದು, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಖಜಾಂಚಿ ಅಜಯ್ ಮಾಕೆನ್ ಸಂಚಾಲಕರಾಗಿದ್ದಾರೆ ಎಂದು ಹೇಳಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂವಹನ ವಿಭಾಗ), ಎಐಸಿಸಿ ಆಡಳಿತದ ಉಸ್ತುವಾರಿ, ಎಐಸಿಸಿ ಮಾದ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷರು ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷರು ಪ್ರಚಾರ ಸಮತಿಯ ಸದಸ್ಯರಾಗಿರುತ್ತಾರೆ.

ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲು ಕಾಂಗ್ರೆಸ್ ಐದು ಸ್ಕ್ರೀನಿಂಗ್ ಕಮಿಟಿಗಳನ್ನು ರಚಿಸಿದ ಒಂದು ದಿನದ ನಂತರ ಈ ನೇಮಕಾತಿಗಳು ನಡೆದಿದೆ.

ಇದಲ್ಲದೆ ಎಐಸಿಸಿ ಇಂದು ರಾಜಸ್ಥಾನ, ಕೇರಳ, ತೆಲಂಗಾಣ, ಛತ್ತೀಸ್‌ಗಢ, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ ಮತ್ತು ತ್ರಿಪುರಾ, ಮಧ್ಯಪ್ರದೇಶಕ್ಕೆ ಚುನಾವಣಾ ಸಮಿತಿಗಳನ್ನು ರಚಿಸಿದ್ದು, ಇದಕ್ಕೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದನೆ ನೀಡಿದ್ದರು.

ಇದನ್ನು ಓದಿ: 8 ರಾಜ್ಯಗಳಿಗೆ ಚುನಾವಣಾ ಸಮಿತಿಗಳನ್ನು ನೇಮಿಸಿದ ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವಜನಿಕರ ಆಕ್ರೋಶಕ್ಕೆ ಮಣಿದು RTI ವಿನಾಯಿತಿ ಆದೇಶ ರದ್ದು ಮಾಡಿದ ತಮಿಳುನಾಡು ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಸರ್ಕಾರವು ಸಾರ್ವಜನಿಕರ ಹಾಗೂ ವಿರೋಧ ಪಕ್ಷಗಳ ತೀವ್ರ ಆಕ್ರೋಶದ ಬೆನ್ನಲ್ಲೇ ತನ್ನ ವಿವಾದಾತ್ಮಕ ನಿರ್ಧಾರವೊಂದನ್ನು ಹಿಂಪಡೆದುಕೊಂಡಿದೆ. ಸಾರ್ವಜನಿಕ (ಕಾನೂನು...

‘ಕೊಂದವರು ಯಾರು?’: ಧರ್ಮಸ್ಥಳ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹ, ಅ.2 ರಂದು ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ ಎನ್ನಲಾದ ಮಹಿಳೆಯರ ಮೇಲಿನ ವ್ಯವಸ್ಥಿತ ಲೈಂಗಿಕ ದೌರ್ಜನ್ಯ, ನಿಗೂಢ ಕೊಲೆಗಳು ಹಾಗೂ ಸಂತ್ರಸ್ತ ಕುಟುಂಬಗಳ ಸುದೀರ್ಘ ನ್ಯಾಯದ ಹೋರಾಟಕ್ಕೆ ಬೆಂಬಲವಾಗಿ...

2016ರಲ್ಲೇ ತಮ್ಮನ್ನು ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ IAS ಜಿಜಿ ಥಾಮ್ಸನ್

ದೇಶದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗಲೇ ಬಿಜೆಪಿ ಪರವಾಗಿ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದರು ಎಂಬ ಕಟು ಸತ್ಯವೊಂದು ಈಗ ಬಹಿರಂಗವಾಗಿದೆ. ಅವರು ನನಗೆ...

ಚಿಕ್ಕಮಗಳೂರು : ಚುನಾವಣಾ ಆಯೋಗದ ವಿರುದ್ಧ ಜನಾಂದೋಲನಕ್ಕೆ ಪ್ರಕಾಶ್ ರಾಜ್ ಕರೆ

ನ್ಯಾಯಾಂಗದ ಮೂಲಕ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಕೆಳಗಿಳಿಸುವುದು ಸಾಧ್ಯವಾಗದಿರಬಹುದು, ಆದರೆ ಜನರ ಹಕ್ಕುಗಳಿಗಾಗಿ ಬೀದಿ ಚಳವಳಿ ನಡೆಯಬೇಕು ಎಂದು ಪ್ರಕಾಶ್ ರಾಜ್ ಕರೆ ನೀಡಿದರು. ಎಸ್‌ಐಆರ್ ಪರಿಶೋಧನೆ ಮತ್ತು...

ಬೆಳಗಾವಿ| ಕೂಲಿ ನೇಕಾರರಿಗೆ ಕಾರ್ಮಿಕ ಇಲಾಖೆ ನೀಡುವ ‘ಸ್ಮಾರ್ಟ್ ಕಾರ್ಡ್’ನಲ್ಲಿ ಲೋಪ, ಅನ್ಯಾಯ ಸರಿಪಡಿಸಲು ಆಗ್ರಹ

ಹಗಲಿರುಳೆನ್ನದೆ ಮಗ್ಗಗಳ ಮುಂದೆ ಕುಳಿತು ಬಟ್ಟೆ ನೇಯುವ ಬೆಳಗಾವಿ ಭಾಗದ ಲಕ್ಷಾಂತರ ಕೂಲಿ ನೇಕಾರರ ಬದುಕು ಇಂದು ಭರವಸೆಯಿಲ್ಲದ ತೂಗುಯ್ಯಾಲೆಯಲ್ಲಿದೆ. ಒಂದೆಡೆ ಕಳೆದ ಒಂದು ದಶಕದಿಂದ (10 ವರ್ಷ) ಮಾಲೀಕರಿಂದ ಶ್ರಮಕ್ಕೆ ತಕ್ಕಂತೆ...

ಅಧಿಕಾರಿಯ ಡೆತ್‌ ನೋಟ್‌ನಲ್ಲಿ ಗ್ಯಾನೇಶ್ ಕುಮಾರ್ ಹೆಸರು!: ಮತ್ತೆ ಮುನ್ನೆಲೆಗೆ ಬಂದ ಹಳೆ ಕೇಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ದೇಶದಾದ್ಯಂತ ಆಕ್ರೋಶದ ಅಲೆ ಎದ್ದಿರುವ ಈ ಸಂದರ್ಭದಲ್ಲಿ, ಸುಮಾರು ಎರಡು ದಶಕಗಳ ಹಿಂದೆ, ಮಲೇಷ್ಯಾದ ಯೋಜನಾ ಅಧಿಕಾರಿಯೊಬ್ಬರ ಆತ್ಮಹತ್ಯೆ ಪತ್ರದಲ್ಲಿ ಗ್ಯಾನೇಶ್ ಕುಮಾರ್...

ಹಾಸನ| SIR ಅಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ನಟ ಪ್ರಕಾಶ್ ರಾಜ್ ಪಟ್ಟು

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ನೆಪದಲ್ಲಿ ಲಕ್ಷಾಂತರ ನಾಗರಿಕರ ಮೂಲಭೂತ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಕೇವಲ ಮತದಾರರ ವೈಯಕ್ತಿಕ ಸಮಸ್ಯೆಯಲ್ಲ, ಬದಲಿಗೆ ದೇಶದ ಸಂವಿಧಾನ...

SIR ರದ್ದುಗೊಳಿಸಿ, ಗ್ಯಾನೇಶ್ ಕುಮಾರ್‌ನನ್ನು ವಜಾಗೊಳಿಸುವಂತೆ ಆಗ್ರಹಿಸಿ ಎಡಪಕ್ಷಗಳಿಂದ ಪ್ರತಿಭಟನೆ

ದೇಶಾದ್ಯಂತ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಸಂಪೂರ್ಣ ಅಪ್ರಜಾಸತ್ತಾತ್ಮಕವಾಗಿದ್ದು, ಲಕ್ಷಾಂತರ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಅವರ ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಎಡಪಕ್ಷಗಳು ಆರೋಪಿಸಿವೆ. ಈ ಪ್ರಕ್ರಿಯೆಯನ್ನು...

ಗುವಾಹಟಿಯಲ್ಲಿ ಸಿಜೆಪಿ ಸಭೆಗೆ ಪೊಲೀಸರಿಂದ ಅಡ್ಡಿ; ಅಶುತೋಷ್ ರಾಂಕಾ ಮತ್ತು ತಂಡ ವಶಕ್ಕೆ

ಅಸ್ಸಾಂ ಪೊಲೀಸರು ಭಾನುವಾರ (ಸೆ.27) ಬೆಳಿಗ್ಗೆ ಗುವಾಹಟಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ'ಯ (ಸಿಜೆಪಿ) ಸಹ-ಸಂಯೋಜಕ ಅಶುತೋಷ್ ರಾಂಕಾ ಮತ್ತು ಸಂಘಟನೆಯ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅಸ್ಸಾಂ ಸಚಿವಾಲಯದ ಸಮೀಪದಲ್ಲಿ...

ಬಿಜೆಪಿಯಿಂದ ಸ್ಪರ್ಧಿಸುವಂತೆ ಗ್ಯಾನೇಶ್ ಕುಮಾರ್ ಈ ಹಿಂದೆ ನನಗೆ ಆಫರ್ ನೀಡಿದ್ದರು! — ಕೇರಳದ ಮಾಜಿ ಚೀಫ್ ಸೆಕ್ರೆಟರಿ ಜಿಜಿ ತೋಮ್ಸನ್ ಸ್ಪೋಟಕ ಹೇಳಿಕೆ!

ಚುನಾವಣಾ ಆಯೋಗದಲ್ಲಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಮತ ಕಡಿತ ಹಾಗೂ ಏಕಪಕ್ಷೀಯ ನಿರ್ಧಾರಗಳ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಹಾಲಿ ಮುಖ್ಯ ಚುನಾವಣಾ ಆಯುಕ್ತ...