Homeಕರ್ನಾಟಕಪ್ರಜಾಪ್ರಭುತ್ವದ ತಳಹದಿಗೆ ಬಿಜೆಪಿ ಅಪಾಯಕಾರಿ: ಸಂವಿಧಾನ ರಕ್ಷಣೆ ಜವಾಬ್ದಾರಿ ಕಾಂಗ್ರೆಸ್ ಮೇಲಿದೆ: ಸಿದ್ದರಾಮಯ್ಯ

ಪ್ರಜಾಪ್ರಭುತ್ವದ ತಳಹದಿಗೆ ಬಿಜೆಪಿ ಅಪಾಯಕಾರಿ: ಸಂವಿಧಾನ ರಕ್ಷಣೆ ಜವಾಬ್ದಾರಿ ಕಾಂಗ್ರೆಸ್ ಮೇಲಿದೆ: ಸಿದ್ದರಾಮಯ್ಯ

- Advertisement -
- Advertisement -

ಭಾರತೀಯ ಜನತಾ ಪಕ್ಷ (ಬಿಜೆಪಿ) ದೇಶದಲ್ಲಿ ವಸಾಹತುಶಾಹಿ ನೀತಿ ಪಾಲಿಸುತ್ತಿದ್ದು, ಪ್ರಜಾಪ್ರಭುತ್ವದ ತಳಹದಿಗೆ ಅಪಾಯಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಹಾರಾಷ್ಟ್ರದ ಸಹಕಾರಿ ಮಹರ್ಷಿ ಭಾವುಸಾಹೇಬ್ ಥಾರೋಟ್ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ.ಅಣ್ಣಾಸಾಹೇಬ್ ಶಿಂಧೆ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಭಾನುವಾರ ಪಾಲ್ಗೊಂಡು ಮಾತನಾಡಿದರು.

ಪ್ರಜಾತಂತ್ರ ವಿರೋಧಿ ಹಾಗೂ ಸಂವಿಧಾನವಿರೋಧಿ ಬಿಜೆಪಿ ಪಕ್ಷಕ್ಕೆ ಅಧಿಕಾರ ನೀಡಿದರೆ, ದೇಶ ಅಪಾಯಕ್ಕೆ ಸಿಲುಕಲಿದೆ. ಭಾರತವನ್ನು ಬ್ರಿಟಿಷರ ಕಪಿಮುಷ್ಟಿಯಿಂದ ಬಿಡಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್ ಪಕ್ಷ ಮಾತ್ರ. ಸರ್ವಾಧಿಕಾರಿ ಮನೋಭಾವವಿರುವಂತಹ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷವನ್ನು ಉಳಿಸಿದರೆ, ದೇಶಕ್ಕೆ ಸಂವಿಧಾನಕ್ಕೆ ಧಕ್ಕೆ ಬರುತ್ತದೆ. ಆದ್ದರಿಂದ ಭಾರತದ ಸಂವಿಧಾನದ ಆಶಯದ ರಕ್ಷಣೆಯ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ ಎಂದರು.

ಕರ್ನಾಟಕದಲ್ಲಿ ಬಿಜೆಪಿಯ ಭ್ರಷ್ಟಾಚಾರ ಹಾಗೂ ವಚನಭ್ರಷ್ಟತೆ:

ಬಿಜೆಪಿಯ ಜನವಿರೋಧಿ ನೀತಿಯನ್ನು ಕರ್ನಾಟಕದ ಮನೆಮನೆಗೂ ಕಾಂಗ್ರೆಸ್ ತಲುಪಿಸಿದ್ದರಿಂದ, ಬಿಜೆಪಿಯನ್ನು ರಾಜ್ಯದ ಅಧಿಕಾರದಿಂದ ಕಿತ್ತೊಗೆಯಲು ಸಾಧ್ಯವಾಯಿತು. ಕರ್ನಾಟಕದಲ್ಲಿ 40% ಕಮೀಷನ್ ನ ಭ್ರಷ್ಟಾಚಾರ ನಡೆಯಲು ಬಿಜೆಪಿ ಕಾರಣ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟಾಚಾರ ಹಾಗೂ ವಚನಭ್ರಷ್ಟತೆಯಿಂದ ಬೇಸತ್ತ ಕರ್ನಾಟಕದ ಜನ ಬಿಜೆಪಿಯನ್ನು ಕಿತ್ತೊಗೆದರು ಎಂದು ತಿಳಿಸಿದರು.

ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಜನರಿಗೆ ನೀಡಲಾಗಿದ್ದ ಗ್ಯಾರಂಟಿ ಭರವಸೆಗಳನ್ನು ತಪ್ಪದೇ ಈಡೇರಿಸಲಾಯಿತು. ಸಂವಿಧಾನದಲ್ಲಿ ನಂಬಿಕೆಯಿರುವವರೆಲ್ಲರೂ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಪ್ರಯತ್ನವನ್ನು ಕಾಂಗ್ರೆಸ್ ಸೇರಿದಂತೆ ಉಳಿದೆಲ್ಲ ಪಕ್ಷಗಳೂ ಮಾಡಬೇಕು ಎಂದರು.

ಇದನ್ನೂ ಓದಿ; ನಾನು ರಾಮ-ಹನುಮ ಭಕ್ತ, ನಾವೆಲ್ಲರೂ ಇಲ್ಲಿಂದಲೆ ಪ್ರಾರ್ಥಿಸುತ್ತೇವೆ: ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವಜನಿಕರ ಆಕ್ರೋಶಕ್ಕೆ ಮಣಿದು RTI ವಿನಾಯಿತಿ ಆದೇಶ ರದ್ದು ಮಾಡಿದ ತಮಿಳುನಾಡು ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಸರ್ಕಾರವು ಸಾರ್ವಜನಿಕರ ಹಾಗೂ ವಿರೋಧ ಪಕ್ಷಗಳ ತೀವ್ರ ಆಕ್ರೋಶದ ಬೆನ್ನಲ್ಲೇ ತನ್ನ ವಿವಾದಾತ್ಮಕ ನಿರ್ಧಾರವೊಂದನ್ನು ಹಿಂಪಡೆದುಕೊಂಡಿದೆ. ಸಾರ್ವಜನಿಕ (ಕಾನೂನು...

‘ಕೊಂದವರು ಯಾರು?’: ಧರ್ಮಸ್ಥಳ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹ, ಅ.2 ರಂದು ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ ಎನ್ನಲಾದ ಮಹಿಳೆಯರ ಮೇಲಿನ ವ್ಯವಸ್ಥಿತ ಲೈಂಗಿಕ ದೌರ್ಜನ್ಯ, ನಿಗೂಢ ಕೊಲೆಗಳು ಹಾಗೂ ಸಂತ್ರಸ್ತ ಕುಟುಂಬಗಳ ಸುದೀರ್ಘ ನ್ಯಾಯದ ಹೋರಾಟಕ್ಕೆ ಬೆಂಬಲವಾಗಿ...

2016ರಲ್ಲೇ ತಮ್ಮನ್ನು ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ IAS ಜಿಜಿ ಥಾಮ್ಸನ್

ದೇಶದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗಲೇ ಬಿಜೆಪಿ ಪರವಾಗಿ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದರು ಎಂಬ ಕಟು ಸತ್ಯವೊಂದು ಈಗ ಬಹಿರಂಗವಾಗಿದೆ. ಅವರು ನನಗೆ...

ಚಿಕ್ಕಮಗಳೂರು : ಚುನಾವಣಾ ಆಯೋಗದ ವಿರುದ್ಧ ಜನಾಂದೋಲನಕ್ಕೆ ಪ್ರಕಾಶ್ ರಾಜ್ ಕರೆ

ನ್ಯಾಯಾಂಗದ ಮೂಲಕ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಕೆಳಗಿಳಿಸುವುದು ಸಾಧ್ಯವಾಗದಿರಬಹುದು, ಆದರೆ ಜನರ ಹಕ್ಕುಗಳಿಗಾಗಿ ಬೀದಿ ಚಳವಳಿ ನಡೆಯಬೇಕು ಎಂದು ಪ್ರಕಾಶ್ ರಾಜ್ ಕರೆ ನೀಡಿದರು. ಎಸ್‌ಐಆರ್ ಪರಿಶೋಧನೆ ಮತ್ತು...

ಬೆಳಗಾವಿ| ಕೂಲಿ ನೇಕಾರರಿಗೆ ಕಾರ್ಮಿಕ ಇಲಾಖೆ ನೀಡುವ ‘ಸ್ಮಾರ್ಟ್ ಕಾರ್ಡ್’ನಲ್ಲಿ ಲೋಪ, ಅನ್ಯಾಯ ಸರಿಪಡಿಸಲು ಆಗ್ರಹ

ಹಗಲಿರುಳೆನ್ನದೆ ಮಗ್ಗಗಳ ಮುಂದೆ ಕುಳಿತು ಬಟ್ಟೆ ನೇಯುವ ಬೆಳಗಾವಿ ಭಾಗದ ಲಕ್ಷಾಂತರ ಕೂಲಿ ನೇಕಾರರ ಬದುಕು ಇಂದು ಭರವಸೆಯಿಲ್ಲದ ತೂಗುಯ್ಯಾಲೆಯಲ್ಲಿದೆ. ಒಂದೆಡೆ ಕಳೆದ ಒಂದು ದಶಕದಿಂದ (10 ವರ್ಷ) ಮಾಲೀಕರಿಂದ ಶ್ರಮಕ್ಕೆ ತಕ್ಕಂತೆ...

ಅಧಿಕಾರಿಯ ಡೆತ್‌ ನೋಟ್‌ನಲ್ಲಿ ಗ್ಯಾನೇಶ್ ಕುಮಾರ್ ಹೆಸರು!: ಮತ್ತೆ ಮುನ್ನೆಲೆಗೆ ಬಂದ ಹಳೆ ಕೇಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ದೇಶದಾದ್ಯಂತ ಆಕ್ರೋಶದ ಅಲೆ ಎದ್ದಿರುವ ಈ ಸಂದರ್ಭದಲ್ಲಿ, ಸುಮಾರು ಎರಡು ದಶಕಗಳ ಹಿಂದೆ, ಮಲೇಷ್ಯಾದ ಯೋಜನಾ ಅಧಿಕಾರಿಯೊಬ್ಬರ ಆತ್ಮಹತ್ಯೆ ಪತ್ರದಲ್ಲಿ ಗ್ಯಾನೇಶ್ ಕುಮಾರ್...

ಹಾಸನ| SIR ಅಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ನಟ ಪ್ರಕಾಶ್ ರಾಜ್ ಪಟ್ಟು

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ನೆಪದಲ್ಲಿ ಲಕ್ಷಾಂತರ ನಾಗರಿಕರ ಮೂಲಭೂತ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಕೇವಲ ಮತದಾರರ ವೈಯಕ್ತಿಕ ಸಮಸ್ಯೆಯಲ್ಲ, ಬದಲಿಗೆ ದೇಶದ ಸಂವಿಧಾನ...

SIR ರದ್ದುಗೊಳಿಸಿ, ಗ್ಯಾನೇಶ್ ಕುಮಾರ್‌ನನ್ನು ವಜಾಗೊಳಿಸುವಂತೆ ಆಗ್ರಹಿಸಿ ಎಡಪಕ್ಷಗಳಿಂದ ಪ್ರತಿಭಟನೆ

ದೇಶಾದ್ಯಂತ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಸಂಪೂರ್ಣ ಅಪ್ರಜಾಸತ್ತಾತ್ಮಕವಾಗಿದ್ದು, ಲಕ್ಷಾಂತರ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಅವರ ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಎಡಪಕ್ಷಗಳು ಆರೋಪಿಸಿವೆ. ಈ ಪ್ರಕ್ರಿಯೆಯನ್ನು...

ಗುವಾಹಟಿಯಲ್ಲಿ ಸಿಜೆಪಿ ಸಭೆಗೆ ಪೊಲೀಸರಿಂದ ಅಡ್ಡಿ; ಅಶುತೋಷ್ ರಾಂಕಾ ಮತ್ತು ತಂಡ ವಶಕ್ಕೆ

ಅಸ್ಸಾಂ ಪೊಲೀಸರು ಭಾನುವಾರ (ಸೆ.27) ಬೆಳಿಗ್ಗೆ ಗುವಾಹಟಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ'ಯ (ಸಿಜೆಪಿ) ಸಹ-ಸಂಯೋಜಕ ಅಶುತೋಷ್ ರಾಂಕಾ ಮತ್ತು ಸಂಘಟನೆಯ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅಸ್ಸಾಂ ಸಚಿವಾಲಯದ ಸಮೀಪದಲ್ಲಿ...

ಬಿಜೆಪಿಯಿಂದ ಸ್ಪರ್ಧಿಸುವಂತೆ ಗ್ಯಾನೇಶ್ ಕುಮಾರ್ ಈ ಹಿಂದೆ ನನಗೆ ಆಫರ್ ನೀಡಿದ್ದರು! — ಕೇರಳದ ಮಾಜಿ ಚೀಫ್ ಸೆಕ್ರೆಟರಿ ಜಿಜಿ ತೋಮ್ಸನ್ ಸ್ಪೋಟಕ ಹೇಳಿಕೆ!

ಚುನಾವಣಾ ಆಯೋಗದಲ್ಲಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಮತ ಕಡಿತ ಹಾಗೂ ಏಕಪಕ್ಷೀಯ ನಿರ್ಧಾರಗಳ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಹಾಲಿ ಮುಖ್ಯ ಚುನಾವಣಾ ಆಯುಕ್ತ...