Homeಮುಖಪುಟ'ಭಾರತೀಯ ವಿಜ್ಞಾನ ಕಾಂಗ್ರೆಸ್‌'ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

- Advertisement -
- Advertisement -

ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್(ISCA) ಪ್ರತಿವರ್ಷ ಆಯೋಜನೆ ಮಾಡುತ್ತಿದ್ದ ವಾರ್ಷಿಕ ಕಾರ್ಯಕ್ರಮ ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ ರದ್ದುಗೊಳಿಸಲಾಗಿದ್ದು, ಸರ್ಕಾರವು ಈ ಬಾರಿ ಹಣಕಾಸಿನ ನೆರವು ನೀಡದ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ.

ಈ ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿ ಸರ್ಕಾರ ಮತ್ತು ಐಎಸ್‌ಸಿಎ ನಡುವೆ ಕಳೆದ ಕೆಲ ವರ್ಷಗಳಿಂದ ಭಿನ್ನಾಭಿಪ್ರಾಯ ಇದೆ. ವಿಜ್ಞಾನ ಕಾಂಗ್ರೆಸ್‌ಗೆ ಬದಲಾಗಿ ಸರ್ಕಾರವು,  ವಿಜ್ಞಾನ ಭಾರತಿಯ ‘ಭಾರತೀಯ ಅಂತರಾಷ್ಟ್ರೀಯ ವಿಜ್ಞಾನ ಮೇಳ’ವನ್ನು (ಐಐಎಸ್‌ಎಫ್‌) 2015ರಿಂದ ಆಯೋಜಿಸುತ್ತಿದೆ.

‘ವಿಜ್ಞಾನ ಭಾರತಿ’ಯು ಸಂಘ ಪರಿವಾರದ ಜೊತೆ ನಂಟು ಇರುವ ಸಂಸ್ಥೆಯಾಗಿದೆ. ಇದರ ವಾರ್ಷಿಕ ಸಭೆಯು ಹರಿಯಾಣದ ಫರೀದಾಬಾದ್‌ನಲ್ಲಿ ಈ ತಿಂಗಳು ನಡೆಯಲಿದೆ. ಈ ಸಂಸ್ಥೆಯು ನಡೆಸುವ ಕಾರ್ಯಕ್ರಮವನ್ನು ವಿಜ್ಞಾನ ಕಾಂಗ್ರೆಸ್‌ಗೆ ಪರ್ಯಾಯ ಎಂದು ಬಿಂಬಿಸಲು ಸರ್ಕಾರ ಯತ್ನಿಸುತ್ತಿದೆ.

1914ರಿಂದ ಭಾರತೀಯ ವಿಜ್ಞಾನ ಕಾಂಗ್ರೆಸ್‌ನ್ನು ಆಯೋಜಿಸಲಾಗುತ್ತಿತ್ತು. ಸ್ವಾತಂತ್ರ್ಯದ ನಂತರ ಭಾರತದ ಪ್ರಧಾನ ಮಂತ್ರಿಗಳು ವಿಜ್ಞಾನಿಗಳ ವಾರ್ಷಿಕ ಕೂಟವನ್ನು ಉದ್ಘಾಟಿಸುತ್ತಿದ್ದರು. ಈ ಸಭೆಯು ಪ್ರಧಾನಿಯವರ ವರ್ಷದ ಮೊದಲ ಸಾರ್ವಜನಿಕ ಕಾರ್ಯಕ್ರಮವಾಗಿರುತ್ತಿತ್ತು. ಆದರೆ ಈ ಬಾರಿ ಕಾರ್ಯಕ್ರಮ ನಡೆಯುತ್ತಿಲ್ಲ.

ಕೋವಿಡ್‌ ಸಾಂಕ್ರಾಮಿಕದ ಕಾರಣದಿಂದ 2021 ಮತ್ತು 2022ರಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಅನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. 108ನೇ ವಿಜ್ಞಾನ ಕಾಂಗ್ರೆಸ್‌ ಅನ್ನು ಕಳೆದ ವರ್ಷ ನಾಗ್ಪುರದಲ್ಲಿ ಆಯೋಜಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಇದನ್ನು ಉದ್ಘಾಟಿಸಿದ್ದರು.

ಈ ಬಾರಿ ಜನವರಿ 3 ರಿಂದ 5ರವರೆಗೆ ಜಲಂಧರ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (LPU) 109ನೇ ಭಾರತೀಯ ವಿಜ್ಞಾನ ಕಾಂಗ್ರೆಸ್‌ನ್ನು (ISC) ಆಯೋಜಿಸಲು ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್ (ISCA) ತೀರ್ಮಾನಿಸಿತ್ತು. ಆದರೆ ಸೆಪ್ಟೆಂಬರ್ 2023ರಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ISC ಮತ್ತು ಈವೆಂಟ್‌ಗೆ ಯಾವುದೇ ಸರ್ಕಾರಿ ಧನಸಹಾಯ ನೀಡಲು ನಿರಾಕರಿಸುವುದರಿಂದ ಸಮ್ಮೇಳನವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದು ಸಂಘಟಕರು ಹೇಳಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು, ಸರ್ಕಾರದ ಅನುಮೋದನೆಯಿಲ್ಲದೆ ‘ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್’ ಏಕಪಕ್ಷೀಯವಾಗಿ ಲಕ್ನೋದಿಂದ ಜಲಂಧರ್‌ಗೆ ಕಾರ್ಯಕ್ರಮ ಸ್ಥಳಾಂತರಿಸಿದೆ ಎಂದು ಆರೋಪಿಸಿದೆ. ಸ್ಥಳವನ್ನು ಆಯ್ಕೆ ಮಾಡಲು ತನ್ನ ಕಾರ್ಯಕಾರಿ ಸಮಿತಿಗೆ DST ಯಿಂದ ಅನುಮತಿ ಅಗತ್ಯವಿಲ್ಲ ಎಂದು ISCA ಪ್ರತಿವಾದಿಸಿದೆ. ಆದರೆ ಸ್ಥಳವನ್ನು ಆಯ್ಕೆ ಮಾಡುವ ಸಮಯದಲ್ಲಿ ಡಿಎಸ್‌ಟಿ ಪ್ರತಿನಿಧಿಯೊಬ್ಬರು ಹಾಜರಿದ್ದರು ಎಂದು ಕೂಡ ಹೇಳಿದೆ.

ISCA ಆಯೋಜಿಸುವ ವಾರ್ಷಿಕ ಕಾರ್ಯಕ್ರಮವು ಈಗಾಗಲೇ ವೈಜ್ಞಾನಿಕತೆಯನ್ನು ಕಳೆದುಕೊಂಡಿದೆ ಮತ್ತು ಕಾರ್ಯಕ್ರಮದ ಆಯೋಜನೆಯಲ್ಲಿ ವೃತ್ತಿಪರ ವಿಧಾನವನ್ನು ಹೊಂದಿಲ್ಲ ಎಂದು ಆರೋಪಿಸಲಾಗಿದೆ. ಆದರೆ ವಿಜ್ಞಾನ ಕಾಂಗ್ರೆಸ್‌ನ ಕಾರ್ಯಚಟುವಟಿಕೆ ಕುರಿತು ಸರ್ಕಾರಕ್ಕೆ ಅಸಮಾಧಾನ ಇದ್ದಿದ್ದರೆ ಅದನ್ನು ಸರಿಪಡಿಸುವ ಕೆಲಸವನ್ನು ಮಾಡಬಹುದಿತ್ತು. ಅದರ ಕಾರ್ಯಕ್ರಮ ನಡೆಸಲು ನಿರಾಕರಿಸಿರುವುದು ಪ್ರಶ್ನೆಗೆ ಕಾರಣವಾಗಿದೆ.

ಸಾವಿರಾರು ವಿಜ್ಞಾನಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ವೈಜ್ಞಾನಿಕ ಸಂಸ್ಥೆಗಳಿಂದ ಅಧ್ಯಾಪಕರು ಮತ್ತು ಶಾಲಾ ಮಕ್ಕಳು ಸಾಮಾನ್ಯವಾಗಿ ISCಯ ವಾರ್ಷಿಕ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ. ISC ಯೊಂದಿಗೆ ನಿಕಟವಾಗಿರುವ ಅಧಿಕಾರಿಗಳು ಮತ್ತು ವಿಜ್ಞಾನಿಗಳು ಅದರ ವಾರ್ಷಿಕ ಅಧಿವೇಶನಗಳ ವಿಷಯವನ್ನು ಸುಧಾರಿಸಬೇಕೆನ್ನುವುದನ್ನು ಒಪ್ಪಿಕೊಳ್ಳುತ್ತಾರೆ. ಆದರೆ ಕಾರ್ಯಕ್ರವನ್ನೇ ನಡೆಯದಂತೆ ಹುನ್ನಾರ ನಡೆಸಿರುವುದರ ಹಿಂದೆ ಸರಕಾರವನ್ನು ಟೀಕಿಸಿದ್ದಾರೆ. ISC ಗೆ ಸರ್ಕಾರದ ಹಣವನ್ನು ನಿರಾಕರಿಸುವ DST ನಿರ್ಧಾರವನ್ನು ISC ಯ ಸಮ್ಮೇಳನವನ್ನು ದುರ್ಬಲಗೊಳಿಸಲು ಸರ್ಕಾರವು ನಡೆಸಿದ ಪ್ರಯತ್ನಗಳ ಫಲಿತಾಂಶವೆಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಸ್ವದೇಶಿ ಮನೋಭಾವದೊಂದಿಗೆ ವಿಜ್ಞಾನ ಆಂದೋಲನದ ಕಾರಣ ಮುಂದಿಟ್ಟು ‘ಇಂಡಿಯಾ–ಇಂಟರ್‌ನ್ಯಾಷನಲ್‌ ಸೈನ್ಸ್‌ ಫೆಸ್ಟಿವಲ್‌’ ಆಯೋಜಿಸಲಾಗುತ್ತಿದೆ. IISF ಗಾಗಿ ಸರ್ಕಾರ 20 ರಿಂದ 25 ಕೋಟಿ ರೂಪಾಯಿಗಳು ಬಜೆಟ್‌ನಲ್ಲಿ ನೀಡುತ್ತಿದೆ.  ISC ಯ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಸಮ್ಮೇಳನಕ್ಕೆ 5 ಕೋಟಿ ರೂಪಾಯಿಗಳಿಗೆ ಮಾತ್ರ ನೀಡಲಾಗುತ್ತಿತ್ತು ಎಂದು DST ಅಧಿಕಾರಿಯೋರ್ವರು ಹೇಳಿದ್ದಾರೆ.

ಮುಂಬೈನ ಹೋಮಿ ಭಾಭಾ ವಿಜ್ಞಾನ ಶಿಕ್ಷಣ ಕೇಂದ್ರದ ಖಗೋಳಶಾಸ್ತ್ರಜ್ಞ ಅನಿಕೇತ್ ಸುಲೆ ಈ ಬಗ್ಗೆ ಮಾತನಾಡಿದ್ದು, ವಿಜ್ಞಾನ ಕಾಂಗ್ರೆಸ್ ಕಾರ್ಯಕ್ರಮ ರದ್ದತಿ ಬಗ್ಗೆ ನಾನು ಚಿಂತಿಸುವುದಿಲ್ಲ. ವಿಜ್ಞಾನ ಕಾಂಗ್ರೆಸ್ ತನ್ನ ಅರ್ಥವನ್ನು ಕಳೆದುಕೊಂಡಿದೆ ಎಂದು ನಾನು ಒಪ್ಪುತ್ತೇನೆ. ಆದರೆ ಅದರ ಕಾರ್ಯಕ್ರಮ ನಡೆಯದಿರುವ ಕಾರಣದ ಬಗ್ಗೆ ನಾನು ಚಿಂತಿತನಾಗಿದ್ದೇನೆ ಎಂದು ಹೇಳಿದ್ದಾರೆ. ವಿಜ್ಞಾನ ಮತ್ತು ರಾಜಕೀಯ ಸಿದ್ಧಾಂತದ ನಡುವೆ ಯಾವುದೇ ಸಂಬಂಧ ಇಲ್ಲ. ಆದರೆ ಸರಕಾರ ರಾಜಕೀಯ ಕಾರಣಕ್ಕೆ ವೈಜ್ಞಾನಿಕ ಕಾರ್ಯಕ್ರಮಕ್ಕೆ ಅನುದಾನ ನೀಡದಿರುವುದು ಟೀಕೆಗೆ ಕಾರಣವಾಗಿದೆ.

ಇದನ್ನು ಓದಿ: ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...