Homeಮುಖಪುಟಶಿಂಧೆಯನ್ನು ಪಕ್ಷದ ನಾಯಕತ್ವದಿಂದ ಕೆಳಗಿಳಿಸುವ ಅಧಿಕಾರ ಉದ್ಧವ್‌ಗೆ ಇರಲಿಲ್ಲ: ಸ್ಪೀಕರ್ ತೀರ್ಪು

ಶಿಂಧೆಯನ್ನು ಪಕ್ಷದ ನಾಯಕತ್ವದಿಂದ ಕೆಳಗಿಳಿಸುವ ಅಧಿಕಾರ ಉದ್ಧವ್‌ಗೆ ಇರಲಿಲ್ಲ: ಸ್ಪೀಕರ್ ತೀರ್ಪು

- Advertisement -
- Advertisement -

‘ಶಿವಸೇನೆ v/s ಶಿವಸೇನೆ’ ಪ್ರಕರಣದ ತೀರ್ಪನ್ನು ಪ್ರಕಟಿಸಿದ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್, ‘ಶಿವಸೇನೆಯ ಸಂವಿಧಾನದ ಪ್ರಕಾರ, ಏಕನಾಥ್ ಶಿಂಧೆಯನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ತೆಗೆದುಹಾಕಲು ಉದ್ಧವ್ ಠಾಕ್ರೆ ಅವರಿಗೆ ಯಾವುದೇ ಅಧಿಕಾರವಿಲ್ಲ’ ಎಂದು ಹೇಳಿದ್ದಾರೆ.

‘ಪಕ್ಷದ ನಾಯಕತ್ವ ರಚನೆಯನ್ನು ಗುರುತಿಸಲು ಪಕ್ಷದ ಸಂವಿಧಾನವು ಪ್ರಸ್ತುತವಾಗಿದೆ’ ಎಂದು ಹೇಳಿದರು. ಆ ಮೂಲಕ, ಶಿಂಧೆ ನೇತೃತ್ವದ ಬಣವನ್ನು ನಿಜವಾದ ಶಿವಸೇನೆ ಎಂದು ಸ್ಪೀಕರ್ ಘೋಷಿಸಿದ್ದಾರೆ. ‘ಉದ್ಧವ್ ಠಾಕ್ರೆ ಬಣವು ಪ್ರಸ್ತುತಪಡಿಸಿದ ವಾದಗಳಲ್ಲಿ ಹುರುಳಿಲ್ಲ. ಯಾವುದೇ ನಾಯಕನನ್ನು ಪಕ್ಷದಿಂದ ತೆಗೆದುಹಾಕುವ ಅಧಿಕಾರ ಶಿವಸೇನೆ ‘ಪ್ರಮುಖ’ಗೆ ಇಲ್ಲ’ ಎಂದು ನಾರ್ವೇಕರ್ ಅವರು ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.

‘2018ರ ಪಕ್ಷದ ಸಂವಿಧಾನವನ್ನು ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ. ಚುನಾವಣಾ ಆಯೋಗವು ಹೊರಡಿಸಿದ ಶಿವಸೇನೆ ಸಂವಿಧಾನವು ಅಧಿಕೃತ ದಾಖಲೆಯಾಗಿದೆ. ಇನ್ನು ಮುಂದೆ ಇದನ್ನು ಪಕ್ಷದ ಸಂವಿಧಾನ ಎಂದು ಉಲ್ಲೇಖಿಸಲಾಗುತ್ತದೆ’ ಎಂದು ಹೇಳಿದ್ದಾರೆ.

‘ಇಂದಿನ ತೀರ್ಪಿಗೂ ಮೊದಲು ಸ್ಪೀಕರ್ ಅವರು ಸಿಎಂ ಏಕನಾಥ್ ಶಿಂಧೆ ಅವರನ್ನು ಭೇಟಿ ಮಾಡಿದ್ದಾರೆ. ಇದು ಮ್ಯಾಚ್ ಫಿಕ್ಸಿಂಗ್’ ಎಂದು ಹೇಳಿರುವ ಉದ್ಧವ್ ಬಣ, ಈಗಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ‘ಮೊದಲನೆಯಯಾದಾಗಿ, ತೀರ್ಪಿಗೆ ಮುನ್ನ ಸ್ಪೀಕರ್ ಮುಖ್ಯಮಂತ್ರಿಯನ್ನು ಭೇಟಿಯಾಗಿರುವುದನ್ನು ನಾವು ನೋಡಿದ್ದೇವೆ. ನಂತರ, ನ್ಯಾಯ ನೀಡಬೇಕಾದವರು ಆರೋಪಿಗಳ ಬಳಿಗೆ ಹೋದರು ಎಂಬ ಭಾವನೆಯನ್ನು ಮೂಡಿಸಲು ಪ್ರಯತ್ನಿಸುತ್ತಿದೆ. ಇದು ಇತಿಹಾಸದಲ್ಲಿ ಎಂದಿಗೂ ಸಂಭವಿಸಿಲ್ಲ’ ಎಂದು ಮಾಜಿ ಸಚಿವ ಮತ್ತು ಶಾಸಕ ಆದಿತ್ಯ ಠಾಕ್ರೆ ಹೇಳಿದ್ದಾರೆ.

2022ರಲ್ಲಿ ಏಕನಾಥ್ ಶಿಂಧೆ ಅವರು ಸುಮಾರು 50 ಶಾಸಕರ ಬೆಂಬಲದೊಂದಿಗೆ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯ ಸಾರಿದಾಗ ಅಧಿಕಾರದ ಹೋರಾಟ ಪ್ರಾರಂಭವಾಯಿತು. ಜೂನ್ 2022: ಶಿಂಧೆ ಅವರು ಬಂಡಾಯವನ್ನು ಘೋಷಿಸಿದರು. ತಮ್ಮ ಬೆಂಬಲಿಗರೊಂದಿಗೆ ಅಸ್ಸಾಂಗೆ ಹೋಗಿ, ನಂತರ ಬಿಜೆಪಿಯ ಸಹಾಯದಿಂದ ಸರ್ಕಾರಕ್ಕೆ ಹಕ್ಕು ಸಾಧಿಸಿದರು. ಜೂನ್ 29, 2022ರಂದು ಮಹಾರಾಷ್ಟ್ರ ರಾಜ್ಯಪಾಲರು ತಮ್ಮ ಬಹುಮತವನ್ನು ಸಾಬೀತುಪಡಿಸಲು ಉದ್ಧವ್ ಅವರನ್ನು ಕೇಳಿದ ನಂತರ, ಸುಪ್ರೀಂ ಕೋರ್ಟ್ ಅಸೆಂಬ್ಲಿಯಲ್ಲಿ ವಿಶ್ವಾಸಮತ ಪರೀಕ್ಷೆಗೆ ಅನುಮತಿ ನೀಡಿತು. ನಂತರ ಉದ್ಧವ್ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಬಿಜೆಪಿ ಬೆಂಬಲದೊಂದಿಗೆ ಜೂನ್ 30, 2022ರಂದು ಏಕನಾಥ್ ಶಿಂಧೆ ಮುಖ್ಯಮಂತ್ರಿಯಾದರು. ಜುಲೈ 4, 2022ರಂದು ಏಕನಾಥ್ ಶಿಂಧೆ ಅವರು ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಯನ್ನು ಗೆದ್ದರು. ಅಕ್ಟೋಬರ್ 2022ರಂದು ಚುನಾವಣಾ ಆಯೋಗವು ಶಿವಸೇನೆಯ ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ಸ್ಥಗಿತಗೊಳಿಸಿತು. 2023 ಫೆಬ್ರವರಿಯಲ್ಲಿ ಚುನಾವಣಾ ಆಯೋಗವು ಶಿಂಧೆ ಬಣಕ್ಕೆ ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ನೀಡಿತು.

2023ರ ಮೇನಲ್ಲಿ  ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವನ್ನು ಅನರ್ಹಗೊಳಿಸಲು ಮತ್ತು ಉದ್ಧವ್ ಠಾಕ್ರೆ ಅವರನ್ನು ಮುಖ್ಯಮಂತ್ರಿಯಾಗಿ ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಹೇಳಿತು. ಏಕೆಂದರೆ, ಉದ್ಧವ್ ವಿಶ್ವಾಸಮತ ಯಾಚಿಸುವ  ಮೊದಲು ರಾಜೀನಾಮೆನೀಡಿದ್ದಾರೆ ಎಂದು ಹೇಳಿತು. 2023, ಡಿಸೆಂಬರ್ 15ರಂದು ಶಿಂಧೆ ಸೇರಿದಂತೆ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ತೀರ್ಪು ಪ್ರಕಟಿಸಲು ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ಜನವರಿ 10 ರವರೆಗೆ ಸಮಯವನ್ನು ವಿಸ್ತರಿಸಿತು.

ಇದನ್ನೂ ಓದಿ; ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಸೋನಿಯಾ, ಖರ್ಗೆ ಭಾಗವಹಿಸುವುದಿಲ್ಲ: ಕಾಂಗ್ರೆಸ್‌ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...