Homeಮುಖಪುಟದೆಹಲಿಯ ಎಲ್ಲಾ 'ಸ್ಲಂ'ಗಳನ್ನು ಕೆಡವಲು ಕೇಂದ್ರ ಸರಕಾರ ಬಯಸಿದೆ: ಎಎಪಿ

ದೆಹಲಿಯ ಎಲ್ಲಾ ‘ಸ್ಲಂ’ಗಳನ್ನು ಕೆಡವಲು ಕೇಂದ್ರ ಸರಕಾರ ಬಯಸಿದೆ: ಎಎಪಿ

- Advertisement -
- Advertisement -

ಚುನಾವಣಾ ಪೂರ್ವದಲ್ಲಿ ಬಿಜೆಪಿಯು ದೆಹಲಿಯ ಸ್ಲಂ(ಕೊಳಗೇರಿ) ನಿವಾಸಿಗಳಿಗೆ ಮನೆಗಳನ್ನು ಕಟ್ಟಿಕೊಡುವ ಭರವಸೆ ನೀಡಿತ್ತು, ಆದರೆ ಇದೀಗ ಸ್ಲಂ ನಿವಾಸಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸದೆ ಸ್ಲಂನ್ನು ಕೆಡವಲು ಕೇಂದ್ರ ಸರ್ಕಾರ ಸಂಚು ನಡೆಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ)  ಆರೋಪಿಸಿದೆ.

ಎರಡು ದಿನಗಳ ಹಿಂದೆ ಪ್ರಧಾನಿ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ದೆಹಲಿಯಾದ್ಯಂತ ಕೊಳೆಗೇರಿಗಳನ್ನು ತೆಗೆದುಹಾಕುವಂತೆ ಎಲ್ಲಾ ಭೂಮಾಲೀಕ ಸಂಸ್ಥೆಗಳಿಗೆ ತಿಳಿಸಲಾಗಿದೆ ಎಂದು ಎಎಪಿಯ ಹಿರಿಯ ನಾಯಕಿ ಅತಿಶಿ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ಸರ್ಕಾರದ ಸಚಿವೆ ಅತಿಶಿ, ದೆಹಲಿಯ ಸ್ಲಂ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸದೆ  ಸ್ಲಂನ್ನು ನಾಶಪಡಿಸಲಾಗುತ್ತಿದೆ. ಎರಡು ದಿನಗಳ ಹಿಂದೆ ಪ್ರಧಾನಿ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ದೆಹಲಿಯ ಎಲ್ಲಾ ಭೂ-ಮಾಲೀಕ ಸಂಸ್ಥೆಗಳಿಗೆ, ದೆಹಲಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್ ನಂತಹ ಭೂ ಒಡೆತನ ಹೊಂದಿರುವ ಸಂಸ್ಥೆಗಳಿಗೆ ನಗರದಲ್ಲಿರುವ ಎಲ್ಲಾ ಕೊಳಗೇರಿಗಳನ್ನು ನಾಶ ಮಾಡುವಂತೆ ಸೂಚಿಸಲಾಗಿದೆ. ಸಭೆಯಲ್ಲಿ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್, ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ), ರೈಲ್ವೆ ಮತ್ತು ಇತರ ಏಜೆನ್ಸಿಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು ಎಂದು ಹೇಳಿದ್ದಾರೆ.

ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ 1,000 ದಿಂದ 1,500 ನಿವಾಸಿಗಳಿರುವ ಸುಂದರ್ ನರ್ಸರಿ ಹಾಗೂ ದೆಹಲಿ ಪಬ್ಲಿಕ್ ಶಾಲೆಯ ನಡುವೆ ಇರುವ ಕೊಳಗೇರಿಗಳನ್ನು ನವೆಂಬರ್‌ನಲ್ಲಿ ನೆಲಸಮಗೊಳಿಸಲಾಗಿದೆ. ಸ್ಥಳಾಂತರಕ್ಕೆ ಯಾವುದೇ ನೊಟೀಸ್‌ ನೀಡದೆ ಎರಡು ದಿನಗಳಲ್ಲಿ ಮನೆ ತ್ಯಜಿಸುವಂತೆ ಸೂಚಿಸಲಾಗಿದೆ ಎಂದು ಈ ಕೊಳಗೇರಿಗಳ ನಿವಾಸಿಗಳು ಆರೋಪಿಸಿದ್ದರು. ಅವರಿಗೆ ಪುನರ್ವಸತಿಯನ್ನು ಕೂಡ ಕಲ್ಪಿಸಿಲ್ಲ.

ವಸತಿ ಮತ್ತು ನಗರ ವ್ಯವಹಾರಗಳ ಕೇಂದ್ರ ಸಚಿವಾಲಯದ ಅಡಿಯಲ್ಲಿ ಬರುವ ಲ್ಯಾಂಡ್ ಅಂಡ್ ಡೆವಲಪ್‌ಮೆಂಟ್ ಆಫೀಸ್ (ಎಲ್ & ಡಿಒ) ಸುಂದರ್ ನರ್ಸರಿಯ ಬಳಿಯ ಸ್ಲಂನ್ನು ಕೆಡವಿರುವುದನ್ನು ಅತಿಶಿ ಅವರು ಉಲ್ಲೇಖಿಸಿದ್ದು, ಕೇಂದ್ರ ಸರ್ಕಾರದ ಇತ್ತೀಚಿನ ಆದೇಶಗಳು ಅದೇ ಉದ್ದೇಶದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ.

GRAP ಅಡಿಯಲ್ಲಿ ಸ್ಲಂನ್ನು ಕೆಡವಲು ಅನುಮತಿಸಲಾಗಿಲ್ಲ ಆದರೆ ಸ್ಲಂನ್ನು ತೆಗೆದುಹಾಕಲು ಅವರು ವಿಶೇಷ ಅನುಮತಿಯನ್ನು ಪಡೆದಿದ್ದರು. ಜಿ20 ಶೃಂಗಸಭೆಯ ವೇಳೆ ರಸ್ತೆ ಬದಿಯ ಕೊಳೆಗೇರಿಗಳ ಸುತ್ತಲೂ ಎತ್ತರದ ಹಸಿರು ಗೋಡೆಗಳನ್ನು ನಿರ್ಮಿಸಿರುವುದನ್ನು ಉಲ್ಲೇಖಿಸಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರು ಸ್ಲಂ ನಿವಾಸಿಗಳ ಬಗ್ಗೆ ನಾಚಿಕೆಪಡುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮುಜಾಫರ್‌ನಗರ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಯುಪಿ ಸರಕಾರಕ್ಕೆ ಸುಪ್ರೀಂಕೋರ್ಟ್‌ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...