Homeಮುಖಪುಟತಪ್ಪು ಮಾಹಿತಿಯಿಂದ ಮುಂದಿನ ಎರಡು ವರ್ಷಗಳಲ್ಲಿ ಭಾರತಕ್ಕೆ ಹೆಚ್ಚಿನ ಅಪಾಯ: ವರ್ಲ್ಡ್‌ ಇಕನಾಮಿಕ್‌ ಫೋರಂ ವರದಿ

ತಪ್ಪು ಮಾಹಿತಿಯಿಂದ ಮುಂದಿನ ಎರಡು ವರ್ಷಗಳಲ್ಲಿ ಭಾರತಕ್ಕೆ ಹೆಚ್ಚಿನ ಅಪಾಯ: ವರ್ಲ್ಡ್‌ ಇಕನಾಮಿಕ್‌ ಫೋರಂ ವರದಿ

- Advertisement -
- Advertisement -

ತಪ್ಪು ಮಾಹಿತಿ ಮತ್ತು ಸುಳ್ಳು ಮಾಹಿತಿ ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಹಾಗೂ ಮುಂದಿನ ಎರಡು ವರ್ಷಗಳಲ್ಲಿ ಭಾರತಕ್ಕೆ ದೊಡ್ಡ ಅಪಾಯವೊಡ್ಡಲಿದೆ ಎಂದು ವರ್ಲ್ಡ್ ಇಕನಾಮಿಕ್ ಫೋರಂ ತನ್ನ ವರದಿಯಲ್ಲಿ ತಿಳಿಸಿದೆ.

ಮುಂದಿನ ಎರಡು ವರ್ಷಗಳಲ್ಲಿ ಭಾರತಕ್ಕೆ ಇತರ ಪ್ರಮುಖ ಅಪಾಯಗಳೆಂದರೆ ಸಾಂಕ್ರಾಮಿಕ ರೋಗಗಳು, ಅಕ್ರಮ ಆರ್ಥಿಕ ಚಟುವಟಿಕೆ, ಅಸಮಾನತೆ ಮತ್ತು ಕಾರ್ಮಿಕರ ಕೊರತೆ ಎಂದು ಸಂಸ್ಥೆ ಹೇಳಿದೆ.

ಭಾರತ ಸೇರಿದಂತೆ ಮುಂದಿನ ಎರಡು ವರ್ಷಗಳಲ್ಲಿ ಚುನಾವಣೆಗಳು ನಡೆಯಲಿರುವ ದೇಶಗಳಲ್ಲಿ ತಪ್ಪು ಮಾಹಿತಿಯು ಸರ್ಕಾರಗಳ ನ್ಯಾಯ ಸಮ್ಮತತೆಯನ್ನು ಗಂಭೀರವಾಗಿ ಅಸ್ಥಿರಗೊಳಿಸಬಹುದು ಎಂದು ವರದಿ ಕಳವಳ ವ್ಯಕ್ತಪಡಿಸಿದೆ.

1.4 ಶತಕೋಟಿ ಜನಸಂಖ್ಯೆ ಹೊಂದಿರುವ ಭಾರತದಲ್ಲಿ 18ನೇ ಲೋಕಸಭೆಗೆ ಮುಂದಿನ ಏಪ್ರಿಲ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ವರ್ಲ್ಡ್ ಇಕನಾಮಿಕ್ ಫೋರಂನ ‘ದಿ ಗ್ಲೋಬಲ್‌ ರಿಸ್ಕ್ಸ್‌ ರಿಪೋರ್ಟ್‌’ ಅನ್ನು ಶಿಕ್ಷಣ, ಉದ್ಯಮ, ಸರ್ಕಾರಿ ಕ್ಷೇತ್ರಗಳ 1500 ತಜ್ಞರ ಸಮೀಕ್ಷೆಯ ಆಧಾರದಲ್ಲಿ ಸಿದ್ಧಪಡಿಸಲಾಗಿದ್ದು ಮುಂದಿನ ಎರಡು ಮತ್ತು 10 ವರ್ಷಗಳ ಅವಧಿಯಲ್ಲಿ ಜಾಗತಿಕ ಆರ್ಥಿಕತೆಗಳು ಎದುರಿಸುವ ಅಪಾಯಗಳನ್ನು ಅಂದಾಜಿಸುವ ಯತ್ನವನ್ನು ಮಾಡಿದೆ.

ವರದಿಯು ಆರ್ಥಿಕ, ಪರಿಸರ, ಭೌಗೋಳಿಕ ರಾಜಕೀಯ, ಸಾಮಾಜಿಕ ಮತ್ತು ತಾಂತ್ರಿಕ ಹೀಗೆ ಐದು ವರ್ಗಗಳಾಗಿ ಜಾಗತಿಕ ಅಪಾಯಗಳನ್ನು ಉಲ್ಲೇಖಿಸಿದೆ. ‘ತಪ್ಪು ಮಾಹಿತಿ’ ಎಂಬುದು ತಾಂತ್ರಿಕ ಅಪಾಯಗಳ ಅಡಿಯಲ್ಲಿ ಒಂದು ಉಪ-ವರ್ಗವಾಗಿದೆ.

ಗುಜರಾತ್‌ನಲ್ಲಿ 2002ರಲ್ಲಿ ನಡೆದ ಗಲಭೆಗಳಲ್ಲಿ ಆಗ ಅಲ್ಲಿನ ಸಿಎಂ ಆಗಿದ್ದ ಈಗಿನ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರವನ್ನು ತೋರಿಸುವ ಬಿಬಿಸಿ ಸಾಕ್ಷ್ಯಚಿತ್ರದ ಉದಾಹರಣೆಯನ್ನೂ ಈ ವರದಿ ಉಲ್ಲೇಖಿಸಿದೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಈ ಸಾಕ್ಷ್ಯಚಿತ್ರದ ವಿಡಿಯೋವನ್ನು ಟ್ವಿಟರ್‌, ಯುಟ್ಯೂಬ್‌ನಿಂದ ಕಳೆದ ವರ್ಷದ ಜನವರಿಯಲ್ಲಿ ತೆಗೆದು ಹಾಕಲಾಗಿತ್ತು. ಪ್ರಜಾಪ್ರಭುತ್ವಗಳಲ್ಲೂ ಸಹ ನೈಜ ಅಥವಾ ಕಲ್ಪಿತ ವಿದೇಶಿ ಹಸ್ತಕ್ಷೇಪದ ಮೇಲಿನ ಕಾರ್ಯಾಚರಣೆಯು ಈಗಿರುವ ನಿಯಂತ್ರಣವನ್ನು ಬಲಪಡಿಸಲು ಬಳಸಬಹುದು ಎಂಬುದನ್ನು ವರದಿ ಎತ್ತಿ ತೋರಿಸಿದೆ.

ಇದನ್ನೂ ಓದಿ : 2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...