Homeಮುಖಪುಟ‘ಮುಖ್ ಮೇ ರಾಮ್, ಬಗಲ್ ಮೇ ಚೂರಿ…’; ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

‘ಮುಖ್ ಮೇ ರಾಮ್, ಬಗಲ್ ಮೇ ಚೂರಿ…’; ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

- Advertisement -
- Advertisement -

ಮಣಿಪುರದಲ್ಲಿ ಇಂದು ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಗೆ ಚಾಲನೆ ನೀಡುವ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಮಣಿಪುರಕ್ಕೆ ಮತ ಕೇಳಲು ಬರುತ್ತಾರೆ .ಆದರೆ, ರಾಜ್ಯದ ಜನತೆ ಸಂಕಷ್ಟದಲ್ಲಿದ್ದಾಗ ಮುಖ ತೋರಿಸುವುದಿಲ್ಲ’ ಎಂದು ವಾಗ್ದಾಳಿ ನಡೆಸಿದರು.

‘ವೋ ಸಮಂದರ್ ಕೆ ಉಪರ್ ಸೈರ್ ಕರ್ತಾ ಫಿರ್ತಾ ಹೈ ಔರ್ ಬೈತೆ ಜಗಹ್ ಜಪ್ ಕರ್ತೆ ರೆಹತೇ ಹೇ ರಾಮ್ ರಾಮ್ (ಅವರು ಸಮುದ್ರದ ಮೇಲಿನ ಸೇತುವೆಯ ಮೇಲೆ ಪ್ರವಾಸ ಮಾಡುತ್ತಿರುವುದನ್ನು ಕಾಣಬಹುದು ಅಥವಾ ರಾಮ್ ರಾಮ್ ಎಂದು ಜಪಿಸುತ್ತಿರುವುದು ಕಂಡುಬರುತ್ತದೆ)’ ಎಂದು ಖರ್ಗೆ ಹೇಳಿದರು.

‘ಮುಖ್ ಮೇ ರಾಮ್, ಬಗಲ್ ಮೇ ಚೂರಿ, ಜನರೊಂದಿಗೆ ಹೀಗೆ ಮಾಡಬೇಡಿ… ಎಲ್ಲರಿಗೂ ದೇವರಲ್ಲಿ ನಂಬಿಕೆ ಇದೆ. ಆದರೆ ಮತಕ್ಕಾಗಿ ಇದನ್ನು ಮಾಡಬೇಡಿ… ಬಿಜೆಪಿಗರು ಜನರನ್ನು ಪ್ರಚೋದಿಸಲು ಧರ್ಮವನ್ನು ಬಳಸುತ್ತಾರೆ’ ಎಂದು ವಾಗ್ದಾಳಿ ನಡೆಸಿದರು.

‘ಬಿಜೆಪಿ ಧರ್ಮವನ್ನು ರಾಜಕೀಯದೊಂದಿಗೆ ಬೆರೆಸುತ್ತದೆ, ಜನರನ್ನು ಪ್ರಚೋದಿಸುತ್ತದೆ; ನಾವು ಜಾತ್ಯತೀತತೆ, ಸಮಾನತೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತೇವೆ’ ಎಂದು ಖರ್ಗೆ ಹೇಳಿದರು.

‘ಜವಾಹರಲಾಲ್ ನೆಹರು ಅವರು ಮಣಿಪುರಕ್ಕೆ ಮೊದಲು ಭೇಟಿ ನೀಡಿದಾಗ, ಅವರು ಅದನ್ನು ಭಾರತದ ರತ್ನ ಎಂದು ಬಣ್ಣಿಸಿದರು. ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಕೂಡ ಅದನ್ನೇ ಹೇಳಿದ್ದರು. ಸಂವಿಧಾನ, ಪ್ರಜಾಪ್ರಭುತ್ವ ಉಳಿಸಲು ಮತ್ತು ದೇಶದಲ್ಲಿ ಫ್ಯಾಸಿಸ್ಟ್ ಶಕ್ತಿಗಳನ್ನು ನಿಲ್ಲಿಸಲು ಕಾಂಗ್ರೆಸ್ ಯಾತ್ರೆ ಕೈಗೊಂಡಿದೆ’ ಎಂದು ಖರ್ಗೆ ಹೇಳಿದರು.

‘ಯಾತ್ರೆಯು ಜನರಿಗೆ ಉದ್ಯೋಗವನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದೆ; ಬೆಲೆ ಏರಿಕೆ ವಿರುದ್ಧವಾಗಿದೆ’ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದರು.

ಭಾರತ್ ಜೋಡೋ ನ್ಯಾಯ್ ಯಾತ್ರೆಯು ಕಳೆದ ವರ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈಗೊಂಡ ಭಾರತ್ ಜೋಡೋ ಯಾತ್ರೆಯ ಭಾಗವಾಗಿದೆ. ಭಾನುವಾರ ಮಣಿಪುರದ ತೌಬಲ್‌ನಲ್ಲಿ ಕಾಂಗ್ರೆಸ್‌ನಿಂದ ಯಾತ್ರೆಗೆ ಚಾಲನೆ ನೀಡಲಾಯಿತು.

ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಕಳೆದ ವರ್ಷದಂತೆ ನಾನು ಈ (ಭಾರತ್ ಜೋಡೋ ನ್ಯಾಯ್) ಯಾತ್ರೆಯನ್ನು ಕಾಲ್ನಡಿಗೆಯಲ್ಲಿ ಮಾಡಲು ಬಯಸಿದ್ದೆ. ಆದರೆ, ಮುಂಬರುವ (ಲೋಕಸಭಾ) ಚುನಾವಣೆಯನ್ನು ಪರಿಗಣಿಸಿ, ಕಾಲ್ನಡಿಗೆಯಲ್ಲಿ ನಡೆಯುವುದಕ್ಕೆ ಹೆಚ್ಚಿನ ಸಮಯ ಅಗತ್ಯವಾಗಿತ್ತು. ಆದ್ದರಿಂದ, ಕಾಂಗ್ರೆಸ್ ಪಕ್ಷವು ಈ ಯಾತ್ರೆಯನ್ನು ಹೈಬ್ರಿಡ್ ಮೋಡ್‌ನಲ್ಲಿ ಮಾಡಲು ನಿರ್ಧರಿಸಿದೆ’ ಎಂದರು.

ಇದನ್ನೂ ಓದಿ; ಮಣಿಪುರದ ತೌಬಲ್ ಜಿಲ್ಲೆಯಿಂದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಗೆ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...