Homeಫ್ಯಾಕ್ಟ್‌ಚೆಕ್Fact Check: ರಾಮ ಮಂದಿರ ಉದ್ಘಾಟನೆಯಂದು ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಿಸಿದೆಯಾ?

Fact Check: ರಾಮ ಮಂದಿರ ಉದ್ಘಾಟನೆಯಂದು ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಿಸಿದೆಯಾ?

- Advertisement -
- Advertisement -

ಜನವರಿ 22,2024ರಂದು ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ, ಇಸ್ರೇಲ್ ಸರ್ಕಾರ ಅಂದಿನ ದಿನವನ್ನು ರಾಷ್ಟ್ರೀಯ ರಜಾದಿನವನ್ನಾಗಿ ಘೋಷಣೆ ಮಾಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹಬ್ಬಿದೆ.

ಅನೇಕ ಫೇಸ್‌ಬುಕ್ ಬಳಕೆದಾರರು ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಭಾರತದ ಮಿತ್ರ ರಾಷ್ಟ್ರ ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಣೆ ಮಾಡಿದ ಎಂದು ಪೋಸ್ಟ್ ಹಾಕಿದ್ದಾರೆ.

‘Manohar Manohar’ಎಂಬ ಫೇಸ್‌ಬುಕ್ ಬಳಕೆದಾರ ತಮ್ಮ ಖಾತೆಯಲ್ಲಿ “ಇಸ್ರೇಲ್ ಜನವರಿ 22 ಅನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಿದೆ. ಜೈ ಇಸ್ರೇಲ್, ಜೈ ಶ್ರೀರಾಮ್” ಎಂದು ಬರೆದುಕೊಂಡಿದ್ದಾರೆ.

‘Siddu Adin’ಎಂಬ ಮತ್ತೋರ್ವ ಫೇಸ್‌ಬುಕ್ ಬಳಕೆದಾರ ” ಇಸ್ರೇಲ್ ಜನವರಿ 22ನೇ ತಾರೀಖು ರಾಷ್ಟ್ರೀಯ ರಜಾ ದಿನವೆಂದು ಘೋಷಿಸಿದೆ. ಜೈಶ್ರೀರಾಮ್, ಜೈ ಇಸ್ರೇಲ್” ಎಂದು ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್‌ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಸತ್ಯ ಸನಾತನಿ‘ ಎಂಬ ಮತ್ತೊಂದು ಫೇಸ್‌ಬುಕ್ ಖಾತೆಯಲ್ಲೂ ” ಇಸ್ರೇಲ್ ಜನವರಿ 22ರಂದು ರಾಷ್ಟ್ರೀಯ ರಜಾದಿನವೆಂದು ಘೋಷಿಸಿದೆ. ಒಂದು ದೇಶ ತನ್ನ ಮಿತ್ರ ದೇಶಕ್ಕೆ ಇದಕ್ಕಿಂತಲೂ ಸ್ಪಷ್ಟವಾಗಿ ಇನ್ನು ಹೇಗೆ ತಾನೆ ಬೆಂಬಲ ಸೂಚಿಸಲು ಸಾಧ್ಯ? ಇಸ್ರೇಲ್‌ನ ಹೃದಯದಲ್ಲಿ ಭಾರತ ಇದೆ” ಎಂದು ಬರೆದುಕೊಳ್ಳಲಾಗಿದೆ.

ವಾಸ್ತವ : ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಈ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನವನ್ನು ನಾನುಗೌರಿ.ಕಾಂ ಮಾಡಿದೆ.

ಗೂಗಲ್‌ ಸಹಾಯದಿಂದ ಇಸ್ರೇಲ್‌ನ ರಜಾದಿನಗಳ ಪಟ್ಟಿಯನ್ನು ಹುಡುಕಿದಾಗ ಅನೇಕ ಅಂತಾರಾಷ್ಟ್ರೀಯ ವೆಬ್‌ಸೈಟ್‌ಗಳಲ್ಲಿ ಪಟ್ಟಿ ದೊರೆತಿದೆ.

ಜಾಗತಿಕ ಮಾಹಿತಿಗಳನ್ನು ತಿಳಿಸುವ worlddata.info ಎಂಬ ವೆಬ್‌ಸೈಟ್‌ನಲ್ಲಿ ಇಸ್ರೇಲ್‌ನ 2024ರ ರಜಾದಿನಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಜನವರಿ 25, 2022ರಂದು New year festival of trees and bushes (ಮರಗಳು ಮತ್ತು ಪೊದೆಗಳ ಹೊಸ ವರ್ಷದ ಹಬ್ಬ) ಎಂಬ ಹೆಸರಿನಲ್ಲಿ ರಜಾದಿನ ಕಂಡು ಬಂದಿದೆ. ಜನವರಿ 22ರಂದು ಯಾವುದೇ ರಜೆ ಇರುವುದಾಗಿ ಉಲ್ಲೇಖಿಸಿಲ್ಲ.

ವಿವಿಧ ದೇಶಗಳ ಮಾಹಿತಿ ತಿಳಿಸುವ timeanddate.com ಎಂಬ ಮತ್ತೊಂದು ವೆಬ್‌ಸೈಟ್‌ನಲ್ಲಿಯೂ ಜನವರಿ 25, 2024ರಂದು ಇಸ್ರೇಲ್‌ನಲ್ಲಿ ರಜಾದಿನ ಇರುವುದಾಗಿ ಹೇಳಲಾಗಿದೆ. ಜನವರಿ 22ರ ರಜೆಯ ಕುರಿತು ಉಲ್ಲೇಖಿಸಿಲ್ಲ.

ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕೃತ ವೆಬ್‌ಸೈಟ್‌ನಲ್ಲಿ 2024 ಇಸ್ರೇಲ್‌ ಮತ್ತು ಭಾರತದ ರಜಾದಿನಗಳ ಮಾಹಿತಿ ನೀಡಲಾಗಿದೆ. ಅದರಲ್ಲಿ ಜನವರಿ 26 ಭಾರತ ಗಣರಾಜ್ಯೋತ್ಸವದಂದು ಇಸ್ರೇಲ್‌ನಲ್ಲಿರುವ ರಾಯಭಾರ ಕಚೇರಿಗೆ ರಜೆ ಇರುವುದಾಗಿ ಹೇಳಲಾಗಿದೆ. ಆದರೆ, ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ರಾಯಭಾರ ಕಚೇರಿಗಾಗಲಿ, ಇಸ್ರೇಲ್ ದೇಶದಲ್ಲಾಗಲಿ ಯಾವುದೇ ರಜೆ ಇರುವ ಬಗ್ಗೆ ಉಲ್ಲೇಖಿಸಿಲ್ಲ.

ಇಸ್ರೇಲ್‌ಗಿಂತ ಭಾರತದಲ್ಲೇ ಜನವರಿ 22ರಂದು ಯಾವುದೇ ರಾಷ್ಟ್ರೀಯ ರಜೆ ಇರುವುದಾಗಿ ಸರ್ಕಾರ ಘೋಷಣೆ ಮಾಡಿಲ್ಲ. ಉತ್ತರ ಪ್ರದೇಶ ಸರ್ಕಾರ ಅಂದು ಉತ್ತರ ಪ್ರದೇಶ ರಾಜ್ಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿದೆ.

ಭಾರತದ ಯಾವುದೇ ಮುಖ್ಯವಾಹಿನಿ ಮಾಧ್ಯಮಗಳು ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಣೆ ಮಾಡಿದೆ ಎಂದು ಎಲ್ಲೂ ಸುದ್ದಿ ಪ್ರಕಟಿಸಿಲ್ಲ.

ಭಾರತದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಜನವರಿ 22ರಂದು ಇಸ್ರೇಲ್‌ನಲ್ಲಿ ರಜೆ ಇರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ರಾಯಭಾರ ಕಚೇರಿಯ ವೆಬ್‌ಸೈಟ್‌ನಲ್ಲಿ 2024ರ ರಜಾದಿನಗಳ ಪಟ್ಟಿ ಇನ್ನೂ ಅಪ್ಡೇಟ್ ಆಗಿಲ್ಲ. ಹಳೆಯ 2023ರ ಪಟ್ಟಿಯೇ ಇದೆ.

ಇದನ್ನೂ ಓದಿ : Fact Check : ಮಣಿಪುರದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...