Homeಮುಖಪುಟಬಿಲ್ಕಿಸ್ ಬಾನು ಪ್ರಕರಣ: ಶರಣಾಗತಿಗೆ ಕಾಲಾವಕಾಶ ಕೋರಿದ್ದ ಅಪರಾಧಿಗಳ ಅರ್ಜಿ ವಜಾ

ಬಿಲ್ಕಿಸ್ ಬಾನು ಪ್ರಕರಣ: ಶರಣಾಗತಿಗೆ ಕಾಲಾವಕಾಶ ಕೋರಿದ್ದ ಅಪರಾಧಿಗಳ ಅರ್ಜಿ ವಜಾ

- Advertisement -
- Advertisement -

ಬಿಲ್ಕಿಸ್ ಬಾನು ಅತ್ಯಾಚಾರಿಗಳ ಶರಣಾಗತಿಗೆ ಸಮಯ ವಿಸ್ತರಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಜನವರಿ 8ರಂದು ನೀಡಿದ ಆದೇಶದಂತೆ ಜೈಲಿಗೆ ಮರಳಲು ಸೂಚಿಸಿದೆ.

ಒಟ್ಟು 11 ಅಪರಾಧಿಗಳ ಪೈಕಿ ಮೂವರು ವೈಯುಕ್ತಿಕ ಕಾರಣಗಳನ್ನು ನೀಡಿ ಶರಣಾಗತಿಯ ಅವಧಿ ವಿಸ್ತರಿಸುವಂತೆ ಕೋರಿದ್ದರು. ಈ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್‌, ಎರಡು ವಾರಗಳಲ್ಲಿ ಜೈಲಿಗೆ ಮರಳುವಂತೆ ಜನವರಿ 8ರಂದು ನೀಡಿದ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದೆ.

ಒಟ್ಟು 11 ಅತ್ಯಾಚಾರಿಗಳ ಪೈಕಿ ಪ್ರಮುಖರಾದ ಗೋವಿಂದಭಾಯಿ ನಾಯ್, ರಮೇಶ್ ರೂಪಾಭಾಯ್ ಚಂದನ್ ಮತ್ತು ಮಿತೇಶ್ ಚಿಮನ್ಲಾಲ್ ಭಟ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅತ್ಯಾಚಾರಿ ಗೋವಿಂದಭಾಯಿ ನಾಯ್ ತಮ್ಮ ಅನಾರೋಗ್ಯ ಮತ್ತು ಮನೆಯ ಜವಾಬ್ದಾರಿಗಳನ್ನು ಉಲ್ಲೇಖಿಸಿ ಸಮಯ ವಿಸ್ತರಣೆಗೆ ಅರ್ಜಿ ಸಲ್ಲಿಸಿದ್ದ. “ನನ್ನ 88 ವರ್ಷದ ತಂದೆ ಹಾಸಿಗೆ ಹಿಡಿದಿದ್ದಾರೆ. ಅವರು ನನ್ನ ಮೇಲೆ ಅವಲಂಬಿತರಾಗಿದ್ದಾರೆ. ಹೆತ್ತವರನ್ನು ನೋಡಿಕೊಳ್ಳಲು ನನ್ನನ್ನು ಬಿಟ್ಟು ಬೇರೆ ಯಾರು ಇಲ್ಲ”ಎಂದು ಆತ ತನ್ನ ಅರ್ಜಿಯಲ್ಲಿ ಹೇಳಿದ್ದ.

ಅಲ್ಲದೆ, ಇತ್ತೀಚೆಗೆ ಆಂಜಿಯೋಗ್ರಫಿಗೆ ಒಳಗಾಗಿದ್ದೇನೆ. ಮೂಲವ್ಯಾಧಿ ಚಿಕಿತ್ಸೆಗಾಗಿ ಮತ್ತೊಂದು ಶಸ್ತ್ರಚಿಕಿತ್ಸೆಗೆ ಮಾಡಿಸಿಕೊಳ್ಳಬೇಕಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದ. 55 ವರ್ಷ ವಯಸ್ಸಿನವನಾದ ನಾನು ಆಸ್ತಮಾದಿಂದ ಬಳಲುತ್ತಿದ್ದು, ಆರೋಗ್ಯ ಮಟ್ಟ ನಿಜವಾಗಿಯೂ ಕಳಪೆಯಾಗಿದೆ ಎಂದು ಹೇಳಿಕೊಂಡಿದ್ದ.

ಮತ್ತೊಬ್ಬ ಅತ್ಯಾಚಾರಿ ರಮೇಶ್ ರೂಪಾಭಾಯ್ ಚಂದನ್, ತನ್ನ ಮಗನಿಗೆ ಮದುವೆಯಿದೆ, ಹಾಗಾಗಿ ಆರು ವಾರಗಳ ಕಾಲಾವಕಾಶ ನೀಡುವಂತೆ ಕೋರಿದ್ದ. ಇನ್ನೋರ್ವ ಅತ್ಯಾಚಾರಿ ಮಿತೇಶ್ ಚಿಮನ್ಲಾಲ್ ಭಟ್, ತನ್ನ ಚಳಿಗಾಲದ ಕೃಷಿ ಉತ್ಪನ್ನಗಳು ಕೊಯ್ಲಿಗೆ ಸಿದ್ಧವಾಗಿವೆ. ಅದರ ಪ್ರಕ್ರಿಯೆ ಪೂರ್ಣಗೊಳಿಸಲು ಆರು ವಾರಗಳ ಕಾಲವಕಾಶ ಕೋರಿದ್ದ. ಕೊಯ್ಲು ಕೆಲಸ ಮುಗಿದ ಬಳಿ ಶರಣಾಗುವುದಾಗಿ ತಿಳಿಸಿದ್ದ.

ಸುಪ್ರೀಂ ಕೋರ್ಟ್‌ ಆದೇಶದಂತೆ ಅಪರಾಧಿಗಳಿಗೆ ಶರಣಾಗಲು ಜನವರಿ 21 ಕೊನೆಯ ದಿನಾಂಕವಾಗಿದೆ. ಸುಪ್ರೀಂ ಕೋರ್ಟ್‌ ಸಮಯ ವಿಸ್ತರಿಸಲು ನಿರಾಕರಿಸಿರುವ ಹಿನ್ನೆಲೆ, ವಿಳಂಬ ಮಾಡದೆ ಎಲ್ಲಾ ಅಪರಾಧಿಗಳು ಜೈಲಿಗೆ ಮರಳಬೇಕಿದೆ.

ಒಟ್ಟು 11 ಮಂದಿ 2002ರ ಗುಜರಾತ್ ಗಲಭೆಯ ಸಮಯದಲ್ಲಿ ಬಿಲ್ಕಿಸ್ ಬಾನು ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬ ಸದಸ್ಯರ ಕೊಲೆಯ ಅಪರಾಧಿಗಳಾಗಿದ್ದಾರೆ.

ಅಪರಾಧಿಗಳು 14 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ ಬಳಿಕ, 2022ರ ಆಗಸ್ಟ್‌ನಲ್ಲಿ ಗುಜರಾತ್ ಸರ್ಕಾರ ಸನ್ನಡೆಯ ನೆಪ ಹೇಳಿ ಬಿಡುಗಡೆ ಮಾಡಿತ್ತು. ಇದರ ವಿರುದ್ದ ಬಿಲ್ಕಿಸ್ ಬಾನು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಜನವರಿ 8, 2024ರಂದು ತೀರ್ಪು ನೀಡಿದ್ದ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ಆದೇಶವನ್ನು ರದ್ದುಪಡಿಸಿದೆ. ಎರಡು ವಾರಗಳಲ್ಲಿ ಜೈಲಿಗೆ ಮರುಳುವಂತೆ ಅಪರಾಧಿಗಳಿಗೆ ಸೂಚಿಸಿದೆ.

ಇದನ್ನೂ ಓದಿ : ರಾಮಮಂದಿರ ಪ್ರಾಣಪ್ರತಿಷ್ಠಾನ: ಮೋದಿ, ಯೋಗಿಗೆ ನಿರ್ಬಂಧ ವಿಧಿಸುವಂತೆ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...