Homeಫ್ಯಾಕ್ಟ್‌ಚೆಕ್Fact Check: ರಾಹುಲ್ ಗಾಂಧಿ ಬಿಜೆಪಿ ಚಿಹ್ನೆಯಿರುವ ಟಿ ಶರ್ಟ್‌ ಧರಿಸಿದ್ದು ನಿಜಾನಾ?

Fact Check: ರಾಹುಲ್ ಗಾಂಧಿ ಬಿಜೆಪಿ ಚಿಹ್ನೆಯಿರುವ ಟಿ ಶರ್ಟ್‌ ಧರಿಸಿದ್ದು ನಿಜಾನಾ?

- Advertisement -
- Advertisement -

‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿಯ ಕಮಲದ ಚಿಹ್ನೆ ಹೊಂದಿರುವ ಟಿ ಶರ್ಟ್‌ಧರಿಸಿ ಭಾಷಣ ಮಾಡಿದ್ದಾರೆ ಎನ್ನಲಾದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ.

ಅನೇಕ ಮಂದಿ ಸಾಮಾಜಿಕ ಜಾಲತಾಣ ಬಳಕೆದಾರರು, ಭಾರತ್ ಜೋಡೋ ನ್ಯಾಯ್ ಯಾತ್ರೆಯ ನಡುವೆ ರಾಹುಲ್ ಗಾಂಧಿ ಬಿಜೆಪಿಯ ಕಮಲದ ಚಿಹ್ನೆ ಹೊಂದಿದ್ದ ಬಿಳಿ ಬಣ್ಣದ ಟಿ ಶರ್ಟ್‌ ಧರಿಸಿ ಜನರನ್ನು ಉದ್ದೇಶಿಸಿ ಮಾತನಾಡಿರುವುದಾಗಿ ಪೋಟೋ ಹಂಚಿಕೊಂಡಿದ್ದಾರೆ.

“ರಾಹುಲ್ ಗಾಂಧಿ ಬಿಜೆಪಿಯ ಏಜೆಂಟ್ ಎಂದು ನಾವು ಮೊದಲೇ ಹೇಳಿದ್ದೆವು, ಇದೀಗ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದೇವೆ ನೋಡಿ” ಎಂದು ಫೋಟೋದ ಜೊತೆಗೆ ಕೆಲವರು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ನಾನುಗೌರಿ.ಕಾಂ ಮೇಲೆ ತಿಳಿಸಿದ ವೈರಲ್ ಫೋಟೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಮೊದಲು ನಾವು ಭಾರತ್ ಜೋಡೋ ನ್ಯಾಯ್ ಯಾತ್ರೆಯ ಅಧಿಕೃತ ಎಕ್ಸ್‌ ಖಾತೆಯನ್ನು ಪರಿಶೀಲಿಸಿದ್ದೇವೆ. ಈ ವೇಳೆ ಅದರಲ್ಲಿ ಎಲ್ಲೂ ರಾಹುಲ್ ಗಾಂಧಿ ಬಿಜೆಪಿ ಚಿಹ್ನೆ ಹೊಂದಿದ್ದ ಟಿ ಶರ್ಟ್‌ ಧರಿಸಿದ್ದ ಫೋಟೋ ಕಂಡು ಬಂದಿಲ್ಲ.

ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ನಾವು ಈ ಫೋಟೋ ಕುರಿತು ಹುಡುಕಿದ್ದೇವೆ. ಅಲ್ಲಿ ಜನವರಿ 14ರಂದು ಸಂಜೆ 5:07 ಗಂಟೆಗೆ ‘Amock(@Politics_2022_)’ ಎಂಬ ಎಕ್ಸ್‌ ಖಾತೆಯಲ್ಲಿ ಮೇಲಿನ ಪೋಸ್ಟ್‌ ಆಗಿರುವುದು ಕಂಡು ಬಂದಿದೆ. ಅದರಲ್ಲಿ ರಾಹುಲ್ ಗಾಂಧಿ ಧರಿಸಿದ್ದ ಟಿ ಶರ್ಟ್‌ನಲ್ಲಿ ಬಿಜೆಪಿಯ ಕಮಲದ ಚಿಹ್ನೆ ಕಂಡು ಬಂದಿಲ್ಲ.

ವೈರಲ್‌ ಫೋಟೋವನ್ನು ಇನ್ನಷ್ಟು ಖಚಿತಪಡಿಸಿಕೊಳ್ಳಲು ನಾವು ಕೆಲ ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳನ್ನು ಪರಿಶೀಲಿಸಿದ್ದೇವೆ. ಈ ವೇಳೆ ಕಾಂಗ್ರೆಸ್ ಸಾಮಾಜಿಕ ಜಾಲತಾಣ ತಂಡದ ಮುಖ್ಯಸ್ಥೆ ಮತ್ತು ಎಐಸಿಸಿ ಕಾರ್ಯಕಾರಿ ಸಮಿತಿಯ ಸದಸ್ಯೆ ಸುಪ್ರಿಯಾ ಶ್ರೀನಾಥೆ ಅವರ ಎಕ್ಸ್‌ ಖಾತೆಯಲ್ಲಿ ಫೋಟೋ ಕಂಡು ಬಂದಿದೆ. ಜನವರಿ 14ರಂದು ಸಂಜೆ 4:38 ಗಂಟೆಗೆ ಈ ಫೋಟೋವನ್ನು ಸುಪ್ರಿಯಾ ಶ್ರೀನಾಥೆ ಪೋಸ್ಟ್‌ ಮಾಡಿದ್ದು, “ಪೂರ್ವದಿಂದ ಪಶ್ಚಿಮಕ್ಕೆ ಯಾತ್ರೆಯ ಬಗ್ಗೆ ಮಾತನಾಡುವಾಗ, ಅದು ಮಣಿಪುರದಿಂದ ಪ್ರಾರಂಭವಾಗಬಹುದು ಎಂದು ನಾನು ಹೇಳಿದ್ದೆ” ಎಂದು ಬರೆದುಕೊಂಡಿದ್ದಾರೆ.

ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ಶಿಕ್ಷಣ, ಮಹಿಳೆಯರು, ಮಕ್ಕಳು, ಕ್ರೀಡೆಗಳ ಸಂಸದೀಯ ಸ್ಥಾಯಿ ಸಮಿತಿ ಟಿ.ಎನ್ ಪ್ರತಾಪನ್ ಅವರು ಕೂಡ ಇದೇ ಫೋಟೋವನ್ನು ಜನವರಿ 14ರಂದು ಸಂಜೆ 4:44 ಗಂಟೆಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಸುಪ್ರಿಯಾ ಶ್ರೀನಾಥೆಯಂತೆ ಬರೆದುಕೊಂಡಿದ್ದಾರೆ.

ಭಾರತ್ ಜೋಡೊ ನ್ಯಾಯ ಯಾತ್ರೆಯ ಕುರಿತು ರಾಹುಲ್ ಗಾಂಧಿ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಫೋಟೋಗಳಲ್ಲಿ ಎಲ್ಲೂ ಟಿ ಶರ್ಟ್‌ ಮೇಲೆ ಬಿಜೆಪಿಯ ಚಿಹ್ನೆ ಕಂಡು ಬಂದಿಲ್ಲ.

ವೈರಲ್ ಫೋಟೋದ ಕುರಿತು ನಾವು ನಡೆಸಿದ ಪರಿಶೀಲನೆಯಲ್ಲಿ ಅದು ಎಡಿಟೆಡ್ ಫೋಟೋ ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check : ಮಣಿಪುರದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. I am next April-2024 going to retair from my job.I am a teacher at government high school.So I am not wish to take loan but you wish sanction loan to my, you will deducted by my pension amount.

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...