Homeಮುಖಪುಟರಾಮಮಂದಿರ ಉದ್ಘಾಟನೆ: ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ಚಿತ್ರರಂಗದ ದಿಗ್ಗಜರು

ರಾಮಮಂದಿರ ಉದ್ಘಾಟನೆ: ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ಚಿತ್ರರಂಗದ ದಿಗ್ಗಜರು

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಕಾರ್ಯಕ್ರಮ ನಡೆಯುತ್ತಿದೆ. ಮಲಯಾಳಂ ಚಿತ್ರರಂಗದ ಜನಪ್ರಿಯ ನಟರು, ನಿರ್ದೇಶಕರು ತಮ್ಮ ಸಾಮಾಜಿಕ ಮಾದ್ಯಮಗಳ ಖಾತೆಗಳಲ್ಲಿ ಭಾರತದ ಸಂವಿಧಾನದ ಪೀಠಿಕೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಸಮಾನತೆ, ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ತತ್ವಗಳನ್ನು ಒತ್ತಿಹೇಳಿದ್ದಾರೆ.

ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ.ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ ಪೀಠ, ದಶಕಗಳ ಕಾಲದ ಅಯೋಧ್ಯೆ-ಬಾಬರಿ ಮಸೀದಿ ಜಮೀನಿನ ಒಡೆತನದ ಬಗ್ಗೆ ನ.9, 2019ರಂದು ಅಂತಿಮ ತೀರ್ಪು ನೀಡಿತ್ತು. ತೀರ್ಪಿನ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗಿತ್ತು. ತೀರ್ಪನ್ನು ವಾಸ್ತವಕ್ಕಿಂತ-ನಂಬಿಕೆ ಆಧಾರದಲ್ಲಿ ನೀಡಲಾಗಿದೆ ಎಂದು ಟೀಕೆ ವ್ಯಕ್ತವಾಗಿತ್ತು. ವಿವಾದಿತ ಭೂಮಿಯನ್ನು ಸುಪ್ರೀಂಕೋರ್ಟ್‌ ರಾಮಮಂದಿರ ನಿರ್ಮಾಣಕ್ಕೆ ಕೊಟ್ಟ ಬಳಿಕ ಇದೀಗ ಅದೇ ಸ್ಥಳದಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ರಾಮಮಂದಿರ ಆಂದೋಲನ ಮತ್ತು ಬಾಬರಿ ಮಸೀದಿ ಧ್ವಂಸವು ಹಿಂದೂ ಬಹುಸಂಖ್ಯಾತತೆಯ ಬಲವರ್ಧನೆಗೆ ಮತ್ತು ಭಾರತೀಯ ಜನತಾ ಪಕ್ಷದ ಬೆಳವಣಿಗೆಗೆ ಕಾರಣವಾಗಿತ್ತು. ಇದೀಗ ರಾಮಮಂದಿರ ಉದ್ಘಾಟನೆಯನ್ನು ಬಿಜೆಪಿ ಲೋಕಸಭೆಯ ಚುನಾವಣೆಯ ಹೊಸ್ತಿಲಲ್ಲೇ ನಡೆಸುತ್ತಿದ್ದು, ಪ್ರತಿಪಕ್ಷಗಳ ವಿರೋಧಕ್ಕೆ ಕಾರಣವಾಗಿತ್ತು. ಧರ್ಮವನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ಮತ್ತು ಪ್ರಧಾನಿ, ಸಿಎಂಗಳು ಸೇರಿ ಆಡಳಿತ ಯಂತ್ರವನ್ನು ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ವ್ಯಾಪಕ ಟೀಕೆಗೆ ಕಾರಣವಾಗಿತ್ತು.

ಮಳಯಾಲಂ ನಟರಾದ ಪಾರ್ವತಿ ತಿರುವೋತು, ರಿಮಾ ಕಲ್ಲಿಂಗಲ್, ದಿವ್ಯ ಪ್ರಭಾ, ಕಣಿ ಕುಸೃತಿ, ನಿರ್ದೇಶಕರಾದ ಜಿಯೋ ಬೇಬಿ, ಆಶಿಕ್ ಅಬು, ಕಮಲ್ ಕೆಎಂ ಮತ್ತು ಗಾಯಕ ಸೂರಜ್ ಸಂತೋಷ್ ಸೇರಿದಂತೆ ಹಲವಾರು ಪ್ರಸಿದ್ಧ ಮಲಯಾಳಂ ಚಿತ್ರರಂಗದ ಸೆಲೆಬ್ರಿಟಿಗಳು ಸಂವಿಧಾನದ ಮುನ್ನುಡಿಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಭಾರತದ ಪ್ರಜೆಗಳಾದ, ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ, ಗಣರಾಜ್ಯವಾಗಿ ರೂಪಿಸಲು ಮತ್ತು ಅದರ ಎಲ್ಲಾ ನಾಗರಿಕರಿಗೆ ಸುರಕ್ಷಿತಗೊಳಿಸಲು ನಿರ್ಧರಿಸಿದ್ದೇವೆ..

ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ;

ವಿಚಾರ, ಅಭಿವ್ಯಕ್ತಿ, ವಿಶ್ವಾಸ ಮತ್ತು ಉಪಾಸನಾ ಸ್ವಾತಂತ್ರ್ಯ;

ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು(ರಾಷ್ಟ್ರದ ಏಕತೆ ಮತ್ತು ಅಖಂಡತೆಯನ್ನು) ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃತ್ವ ಭಾವನೆಯನ್ನು ವೃದ್ಧಿಸಿಕೊಳ್ಳಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ 

ನಮ್ಮ ಸಂವಿಧಾನ ಸಭೆಯಲ್ಲಿ, 1949ನೆಯ ನವೆಂಬರ್‌ ತಿಂಗಳ 26ನೇ ತಾರೀಖಾದ ಈ ದಿವಸ ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ. 

ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾಪನೆ’ ಇಂದು ಮಧ್ಯಾಹ್ನ 12.20ಕ್ಕೆ ಪ್ರಾರಂಭವಾಗಲಿದೆ. ಕಾರ್ಯಕ್ರಮ ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಈ ವೇಳೆ ಭಾಷಣ ಮಾಡಲಿದ್ದಾರೆ. ಸ್ಥಳದಲ್ಲಿ 13,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ. ವಿಕ್ಕಿ ಕೌಶಲ್, ಮಾಧುರಿ ದೀಕ್ಷಿತ್, ಆಲಿಯಾ ಭಟ್, ರಾಜ್‌ಕುಮಾರ್ ಹಿರಾನಿ, ಮಹಾವೀರ್ ಜೈನ್ ಮತ್ತು ರೋಹಿತ್ ಶೆಟ್ಟಿ ಸೇರಿದಂತೆ ಬಾಲಿವುಡ್ ತಾರೆಯರು ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.

1528 ರಲ್ಲಿ ಮೊಘಲ್ ಚಕ್ರವರ್ತಿ ಬಾಬರ್‌ನ ಕಮಾಂಡರ್ ಮೀರ್ ಬಾಕಿಯಿಂದ ನಿರ್ಮಿಸಲ್ಪಟ್ಟ 16ನೇ ಶತಮಾನದ ಮಸೀದಿ ಬಾಬರಿ ಮಸೀದಿಯನ್ನು ಡಿಸೆಂಬರ್ 6, 1992 ರಂದು  ಧ್ವಂಸಗೊಳಿಸಲಾಗಿತ್ತು. ವಿಎಚ್ ಪಿ, ಶಿವ ಸೇನೆ, ಬಿಜೆಪಿಯ ಸದಸ್ಯರಿದ್ದ ಕರಸೇವಕರು ಮಸೀದಿಯ 3 ಗುಮ್ಮಟಗಳು ಒಂದರ ನಂತರ ಒಂದರಂತೆ  ಕೆಡವಿದ್ದಾರೆ. ಈ ಸಂಘಟಿತ ಅಪರಾಧದಿಂದಾಗಿ ಭುಗಿಲೆದ್ದ ಕೋಮು ಗಲಭೆಯಲ್ಲಿ 2,000ಕ್ಕೂ ಹೆಚ್ಚು ಸಾವುಗಳಿಗೆ ಕಾರಣವಾಗಿತ್ತು. 1947ರಲ್ಲಿ ಸ್ವಾತಂತ್ರ್ಯದ ನಂತರ ಭಾರತವು ಕಂಡ ಅತ್ಯಂತ ಭೀಕರವಾದ ಗಲಭೆಗಳಲ್ಲಿ ಒಂದಾಗಿದೆ.

ಬಾಬರಿ ಮಸೀದಿ ಧ್ವಂಸ ಅಪರಾಧ ಆದರೆ ಸುದೀರ್ಘ ವಿಚಾರಣೆಯ ನಂತರವೂ ವಿಚಾರಣಾ ನ್ಯಾಯಾಲಯದಿಂದ ಒಬ್ಬ ಆರೋಪಿಗೂ ಶಿಕ್ಷೆಯಾಗಲಿಲ್ಲ. ಉತ್ತರಪ್ರದೇಶ ಪೊಲೀಸರು ಬಾಬರಿ ಮಸೀದಿ ಧ್ವಂಸ, ಗಲಭೆ, ಕೋಮು ಸೌಹಾರ್ದತೆಗೆ ಭಂಗ ತರುವ ಭಾಷಣಗಳು ಮತ್ತು ಇತರ ಪತ್ರಕರ್ತರ ಮೇಲಿನ ಹಲ್ಲೆಗಳಿಗೆ ಸಂಬಂಧಿಸಿದಂತೆ ಒಟ್ಟು 49 ಪ್ರಕರಣಗಳನ್ನು ದಾಖಲಿಸಿದ್ದರು. ದಾಖಲೆಗಳ ಪ್ರಕಾರ ಅಂದಿನ ರಾಮಜನ್ಮಭೂಮಿ ಪೊಲೀಸ್ ಠಾಣೆಯ ಉಸ್ತುವಾರಿ ಪಿಎನ್ ಶುಕ್ಲಾ ಅವರು ಅಪರಿಚಿತ ಕರಸೇವಕರ ವಿರುದ್ಧ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಅಶೋಕ್ ಸಿಂಘಾಲ್, ಗಿರಿರಾಜ್ ಕಿಶೋರ್, ವಿಷ್ಣು ಹರಿ ದಾಲ್ಮಿಯಾ, ಸಾಧ್ವಿ ಋತಂಭರ, ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ವಿನಯ್ ಕಟಿಯಾರ್ ಮತ್ತು ಉಮಾಭಾರತಿ ಸೇರಿ ಪ್ರಕರಣದಲ್ಲಿ ಹಲವರ ವಿರುದ್ಧ ಕೇಸ್ ದಾಖಲಾಗಿತ್ತು.
ಅಯೋಧ್ಯೆ-ಬಾಬರಿ ಮಸೀದಿ ಜಮೀನಿನ ಒಡೆತನದ ಬಗ್ಗೆ ನ. 9, 2019ರಂದು ಸುಪ್ರೀಂಕೋರ್ಟ್‌ ಪೀಠ ತೀರ್ಪು ನೀಡಿತ್ತು. ವಿವಾದಿತ 2.77 ಎಕರೆ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದ ಸುಪ್ರೀಂಕೋರ್ಟ್, ರಾಮಮಂದಿರ ಜಮೀನನ್ನು ಸಂಪೂರ್ಣವಾಗಿ ಟ್ರಸ್ಟ್​​ ವಶಕ್ಕೆ ನೀಡಬೇಕು. ಇದರ ಹೊಣೆ ಸರ್ಕಾರದ್ದು ಎಂದು ಸೂಚಿಸಿತ್ತು. ಇದೇ ವೇಳೆ ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಫ್ ಬೋರ್ಡ್‌ಗೆ 5 ಎಕರೆ ಪರ್ಯಾಯ ಭೂಮಿ ನೀಡಲು ಸೂಚಿಸಿತ್ತು. ಇದಲ್ಲದೆ 2010ರಲ್ಲಿ ಇದೇ ವಿವಾದದಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯವು  ರದ್ದುಪಡಿಸಿತ್ತು. ರಾಮ್ ಲಲ್ಲಾ, ನಿರ್ಮೋಹಿ ಅಖಾಡಾ ಮತ್ತು ಸುನ್ನಿ ವಕ್ಫ್ ಬೋರ್ಡ್‌ಗೆ ವಿವಾದಿತ ಜಾಗವನ್ನು ಅಲಹಾಬಾದ್ ಹೈಕೋರ್ಟ್ ಸಮನಾಗಿ ಹಂಚಿಕೆ ಮಾಡಿರುವುದನ್ನು ರದ್ದುಪಡಿಸಿತ್ತು. ಮಸೀದಿಯ ಧ್ವಂಸವನ್ನು “ಕಾನೂನಿನ ನಿಯಮದ ಉಲ್ಲಂಘನೆ” ಎಂದು ಸುಪ್ರೀಂಕೋರ್ಟ್ ಉಲ್ಲೇಖಿಸಿದ್ದರೂ, ವಾಸ್ತವಕ್ಕಿಂತ ಮೇಲಿನ ನಂಬಿಕೆ ಆಧಾರದಲ್ಲಿ ತೀರ್ಪನ್ನು ನೀಡಿದ್ದಕ್ಕೆ ವ್ಯಾಪಕವಾದ ಟೀಕೆ ವ್ಯಕ್ತವಾಗಿತ್ತು.

 

 

View this post on Instagram

 

A post shared by Parvathy Thiruvothu (@par_vathy)

 

 

View this post on Instagram

 

A post shared by Aashiq Abu (@aashiqabu)

 

 

View this post on Instagram

 

A post shared by Jeo Baby (@jeobabymusic)

 

 

View this post on Instagram

 

A post shared by Kamal KM (@kamalkm)

 

 

View this post on Instagram

 

A post shared by Divyaprabha (@divya_prabha__)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...