Homeಮುಖಪುಟಅಸ್ಸಾಂ: ರಾಹುಲ್ ಗಾಂಧಿಗೆ ದೇವಸ್ಥಾನ ಪ್ರವೇಶ ನಿರಾಕರಣೆ

ಅಸ್ಸಾಂ: ರಾಹುಲ್ ಗಾಂಧಿಗೆ ದೇವಸ್ಥಾನ ಪ್ರವೇಶ ನಿರಾಕರಣೆ

- Advertisement -
- Advertisement -

ಅಸ್ಸಾಮ್‌ನ 15ನೇ ಶತಮಾನದ ಸಂತ ಹಾಗೂ ವಿದ್ವಾಂಸ ಶ‍್ರೀಮಂತ ಶಂಕರದೇವರ ಜನ್ಮಸ್ಥಳವಾದ ಬತದ್ರವ ಸತ್ರ ದೇವಾಲಯಕ್ಕೆ ಭೇಟಿ ನೀಡುವುದರಿಂದ ಅಸ್ಸಾಂ ಆಡಳಿತ ನನ್ನನ್ನು ತಡೆದಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಗಾಂವ್‌ನಲ್ಲಿ ಆರೋಪಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತಮ್ಮ ಮೇಲೆ ಹೇರಲಾಗಿರುವ ನಿರ್ಬಂಧಗಳನ್ನು ಪ್ರಶ್ನಿಸಿರುವ ರಾಹುಲ್ ಗಾಂಧಿ, “ನಮಗೆ ದೇವಾಲಯಕ್ಕೆ ಭೇಟಿ ನೀಡಬೇಕಿದೆ. ನಾನು ದೇವಾಲಯಕ್ಕೆ ಭೇಟಿ ನೀಡದಿರಲು ಯಾವ ಅಪರಾಧ ಮಾಡಿದ್ದೇನೆ?”ಎಂದು ಪ್ರಶ್ನಿಸಿದ್ದಾರೆ.

“ನಾವು ಯಾವುದೇ ಸಮಸ್ಯೆಗಳನ್ನು ಸೃಷ್ಟಿಸುವುದಿಲ್ಲ. ನಾವು ಕೇವಲ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲು ಬಯಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಯಾರು ದೇವಾಲಯಕ್ಕೆ ಭೇಟಿ ನೀಡಬೇಕು ಎಂದು ನಿರ್ಧರಿಸಲಿದ್ದಾರೆ. ಕೇವಲ ಓರ್ವ ವ್ಯಕ್ತಿ ಮಾತ್ರ ದೇವಾಲಯವನ್ನು ಪ್ರವೇಶಿಸಬಹುದಾಗಿದೆ ಎಂದೂ ರಾಹುಲ್ ಗಾಂಧಿ ಹೇಳಿದ್ದಾರೆ.

ದೇವಾಲಯ ಭೇಟಿಗೆ ಅವಕಾಶ ನಿರಾಕರಣೆ ಹಿನ್ನೆಲೆ ರಾಹುಲ್ ಗಾಂಧಿ ನಾಗಾಂವ್‌ನಲ್ಲಿ ಧರಣಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

ಹಿಂದೂಸ್ತಾನ್ ಟೈಮ್ಸ್‌ ವರದಿ ಪ್ರಕಾರ, ಇಂದು ಅಯೋಧ್ಯೆ ರಾಮಮಂದಿರದ ಉದ್ಘಾಟನೆ ಪ್ರಯುಕ್ತ ದೇವಸ್ಥಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಗಾಗಿ, ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಕಾರಣಕ್ಕೆ ಇಂದು ದೇವಸ್ಥಾನಕ್ಕೆ ಭೇಟಿ ನೀಡದಂತೆ ರಾಹುಲ್ ಗಾಂಧಿಗೆ ಸೂಚಿಸಲಾಗಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗಲಭೆಯಾಗುವ ಸಾಧ್ಯತೆ ಇರುವುದರಿಂದ ರಾಹುಲ್ ಗಾಂಧಿ ತಮ್ಮ ಭಾರತ್ ಜೋಡೊ ನ್ಯಾಯ ಯಾತ್ರೆಯ ಮಾರ್ಗವನ್ನು ಮರು ಪರಿಶೀಲಿಸಬೇಕು ಎಂದು ಭಾನುವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಆಗ್ರಹಿಸಿದ್ದರು.

ಇದನ್ನೂ ಓದಿ: ಭಾರತ್ ಜೋಡೊ ಯಾತ್ರೆ ಮೇಲೆ ಬಿಜೆಪಿಗರಿಂದ ದಾಳಿ: ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷನಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...