Homeಮುಖಪುಟರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರಾದ ಅಡ್ವಾಣಿ!

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರಾದ ಅಡ್ವಾಣಿ!

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾನ ಕಾರ್ಯಕ್ರಮ ಇಂದು ನಡೆದಿದ್ದು, ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರು ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.

ಕಳೆದ ತಿಂಗಳು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರು ಆರೋಗ್ಯ ಮತ್ತು ವಯಸ್ಸಿನ ಕಾರಣ ಸಮಾರಂಭದಲ್ಲಿ ಭಾಗವಹಿಸದಂತೆ ಕೇಳಿಕೊಂಡಿತ್ತು. ಅವರಿಬ್ಬರಿಗೂ ವಯಸ್ಸಾಗಿರುವುದನ್ನು ಪರಿಗಣಿಸಿ ಕಾರ್ಯಕ್ರಮಕ್ಕೆ ಆಗಮಿಸದಂತೆ ಮನವಿ ಮಾಡಲಾಗಿದ್ದು, ಆ ಮನವಿಯನ್ನು ಅವರಿಬ್ಬರೂ ಸ್ವೀಕರಿಸಿದ್ದಾರೆ ಎಂದು ಹೇಳಿದ್ದರು.

ಇದಾದ ಬಳಿಕ ವಿಶ್ವ ಹಿಂದೂ ಪರಿಷತ್ ನಾಯಕರು, ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಅಡ್ವಾಣಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದರು. ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಡ್ವಾಣಿ ಅವರಿಗೆ ಅಗತ್ಯವಿರುವ ವೈದ್ಯಕೀಯ ಸೌಕರ್ಯದ ವ್ಯವಸ್ಥೆಯನ್ನು ಒದಗಿಸಲಾಗುವುದು ಎಂದು ವಿಶ‍್ವ ಹಿಂದೂ ಪರಿಷತ್ ನ ಅಂತಾರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ಹೇಳಿದ್ದರು.  ಅಡ್ವಾಣಿ ಹಾಗೂ ಜೋಶಿ ಅವರಿಗೆ ವಿಶ್ವ ಹಿಂದೂ ಪರಿಷತ್ ಆಯೋಧ್ಯೆಯಲ್ಲಿನ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಕೂಡ ನೀಡಿತ್ತು.

ರಾಮ ಮಂದಿರ ಚಳುವಳಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಡ್ವಾಣಿ, ಜೋಷಿ 

80ರ ದಶಕದಲ್ಲಿ ರಾಮ ಮಂದಿರಕ್ಕಾಗಿ ನಡೆದ ಚಳುವಳಿಯ ನೇತೃತ್ವವನ್ನು ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ವಹಿಸಿದ್ದರು. ಅಡ್ವಾಣಿ ಸೋಮನಾಥದಿಂದ ಅಯೋಧ್ಯೆಯವರೆಗೆ ‘ರಥಯಾತ್ರೆ’ ನಡೆಸಿದ್ದರು. ದೊಡ್ಡ ಪ್ರಮಾಣದ ಹಿಂಸಾಚಾರ, ದಂಗೆ ಮತ್ತು ಹತ್ಯೆಗಳೊಂದಿಗೆ ರಥಯಾತ್ರೆ ಕಾರಣವಾಗಿತ್ತು.  ಆ ಬಳಿಕ ಅಡ್ವಾಣಿ ಅವರನ್ನು ಬಿಹಾರದ ಲಾಲು ಪ್ರಸಾದ್ ಯಾದವ್ ಸರಕಾರ ಬಂಧಿಸಿತ್ತು.

ಇದಾದ ಬಳಿಕ 1992 ಡಿ.6ರಂದು ಅಡ್ವಾಣಿ, ಜೋಷಿ ನೇತೃತ್ವದ ಕರಸೇವಕರಿಂದ ಬಾಬರಿ ಮಸೀದಿ ಧ್ವಂಸ ನಡೆಯುತ್ತದೆ. ಆ ಬಳಿಕ ರಾಷ್ಟ್ರವ್ಯಾಪಿ ಕೋಮು ಗಲಭೆ ಆರಂಭವಾಗುತ್ತದೆ. ಎರಡು ಸಾವಿರಕ್ಕೂ ಹೆಚ್ಚು ಮಂದಿಯ ಸಾವು ಸಂಭವಿಸುತ್ತದೆ. ಪ್ರಕರಣಕ್ಕೆ ಸಂಬಂಧಿಸಿ ಕರಸೇವಕರ ವಿರುದ್ಧ, ಎಲ್‌.ಕೆ. ಅಡ್ವಾಣಿ, ಅಶೋಕ್‌ ಸಿಂಘಲ್‌, ವಿನಯ್‌ ಕಟಿಯಾರ್‌, ಉಮಾಭಾರತಿ, ಸಾಧ್ವಿ ಋತಂಬರಾ, ಮುರಳಿಮನೋಹರ ಜೋಶಿ, ಗಿರಿರಾಜ್‌ ಕಿಶೋರ್‌ ಹಾಗೂ ವಿಷ್ಣು ಹರಿ ದಾಲ್ಮಿಯಾ ಅವರ ವಿರುದ್ಧ ಪ್ರಕರಣ ದಾಖಲಾಗತ್ತದೆ.

ಆ ಬಳಿಕ ವಿಚಾರಣೆಯ ವೇಳೆ ಕರಸೇವಕರು ಬಿಜೆಪಿಯ ಹಿರಿಯ ನಾಯಕರಾದ ಅಡ್ವಾಣಿ, ಜೋಷಿ ಅವರ ಸೂಚನೆ ಮೇರೆಗೆ ಸಭೆ ಸೇರಿದ್ದೇವೆ ಮತ್ತು ಮಸೀದಿಗೆ ನುಗ್ಗಿದ್ದೇವೆ ಎಂದು ಹೇಳಿದ್ದರು. ಬಾಬರಿ ಮಸೀದಿಯ ಧ್ವಂಸಕ್ಕೆ ಮೊದಲು ಸುಮಾರು 150,000 ಜನರು ಅಡ್ವಾಣಿ ಮತ್ತು ಜೋಷಿಯ ಭಾಷಣಗಳನ್ನು ಕೇಳಲು ಜಮಾಯಿಸಿದ್ದರು. ಈ ಇಬ್ಬರು ಕೂಡ ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳಲ್ಲಿ ಸೇರಿದ್ದರು.

2020ರಲ್ಲಿ ಲಕ್ನೋ ವಿಶೇಷ ಸಿಬಿಐ ಕೋರ್ಟ್ ನ್ಯಾಯಾಧೀಶ ಎಸ್.ಕೆ.ಯಾದವ್ ನೇತೃತ್ವದ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣವು ಪೂರ್ವ ನಿಯೋಜಿತವಲ್ಲ ಎಂದು ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಶಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ, ಬಜರಂಗ ದಳ ಸಂಸ್ಥಾಪಕ ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳನ್ನು ಖುಲಾಸೆಗೊಳಿಸಿತ್ತು.

ಇದನ್ನು ಓದಿ: ಗ್ರಹಾಂ ಸ್ಟೇನ್ಸ್ ಮತ್ತು ಇಬ್ಬರು ಮಕ್ಕಳ ‘ಮಿಡ್‌ನೈಟ್‌’ ಮರ್ಡರ್‌ : ಬಲಪಂಥೀಯ ಕ್ರೌರ್ಯಕ್ಕೆ 25 ವರ್ಷ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...