Homeಮುಖಪುಟಜಯಲಲಿತಾ ಆಸ್ತಿ ಹರಾಜು ಬೇಡ: ಬೆಂಗಳೂರು ಕೋರ್ಟ್‌ ಆದೇಶ

ಜಯಲಲಿತಾ ಆಸ್ತಿ ಹರಾಜು ಬೇಡ: ಬೆಂಗಳೂರು ಕೋರ್ಟ್‌ ಆದೇಶ

- Advertisement -
- Advertisement -

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಕೋಟ್ಯಂತರ ರೂಪಾಯಿ ಬೆಲೆಬಾಳುವ ವಸ್ತುಗಳನ್ನು ಹರಾಜು ಹಾಕುವ ಬದಲು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡಲು ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.

ಆರ್‌ಟಿಐ ಕಾರ್ಯಕರ್ತ ಟಿ ನರಸಿಂಹ ಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಹೆಚ್‌. ಎ ಮೋಹನ್‌ ಅವರು, ಜಯಲಲಿತಾ ಅವರ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದು ಕರ್ನಾಟಕದ ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಪೊಲೀಸ್‌ ಇಲಾಖೆಗೆ ಆದೇಶಿಸಿದ್ದಾರೆ. ವಸ್ತುಗಳನ್ನು ಪರಿಶೀಲಿಸಿ ಪಡೆಯಲು ಕಾರ್ಯದರ್ಶಿ ಮಟ್ಟದಲ್ಲಿ ಸೂಕ್ತ ವ್ಯಕ್ತಿಗಳನ್ನು ನಿಯೋಜಿಸುವಂತೆ ತಮಿಳುನಾಡು ಸರ್ಕಾರದ ಗೃಹ ಇಲಾಖೆಗೆ ನ್ಯಾಯಾಲಯ ನಿರ್ದೇಶಿಸಿದೆ.

ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗಾಗಿ ವೆಚ್ಚವಾಗಿರುವ ಐದು ಕೋಟಿ ರೂಪಾಯಿ ಹಣವನ್ನು ಡಿಡಿ ರೂಪದಲ್ಲಿ ಕರ್ನಾಟಕ ಸರ್ಕಾರಕ್ಕೆ ಪಾವತಿಸುವಂತೆ ತಮಿಳುನಾಡು ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

ಕರ್ನಾಟಕ ಸರ್ಕಾರದ ವಿಶೇಷ ಅಭಿಯೋಜಕರಾಗಿರುವ ಕಿರಣ್ ಎಸ್. ಜವಳಿ ಅವರು, ಜಪ್ತಿಯಾದ ಜಯಲಲಿತಾ ಅವರ ಆಸ್ತಿ-ವಸ್ತುಗಳ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಅದನ್ನು ಪರಿಗಣಿಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರಿನ ವಿಶೇಷ ನ್ಯಾಯಾಲಯ ಜಯಲಲಿತಾ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು 100 ಕೋಟಿ ರೂಪಾಯಿ ದಂಡ ವಿಧಿಸಿ 2014ರ ಸೆಪ್ಟೆಂಬರ್‌ 27ರಂದು ಆದೇಶಿಸಿತ್ತು. ಜೊತೆಗೆ ಜಪ್ತಿ ಮಾಡಲಾದ ಅವರ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು.

ಆರ್‌ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ಅವರು ಜಯಲಲಿತಾ ಅವರ ವಸ್ತುಗಳ ವಿಲೇವಾರಿಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡುವ ಸಂಬಂಧ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಜಯಲಲಿತಾರಿಂದ ಜಪ್ತಿ ಮಾಡಿಕೊಂಡ ವಸ್ತಗಳಿವು : 7,040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆ ಜಿ ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜೆರೇಟರ್, 10 ಟಿವಿ ಸೆಟ್, 8 ವಿಸಿಆರ್, 1 ವಿಡಿಯೋ ಕ್ಯಾಮರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್‌ ರೇಕಾರ್ಡರ್, 1,040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರೂಪಾಯಿ ನಗದು ಸೇರಿದಂತೆ ಹಲವು ವಸ್ತುಗಳು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಬಿಲ್‌; ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...