Homeಮುಖಪುಟ2023ರಲ್ಲಿ ಹೆಚ್ಚಿದ ರೈತರ ಆತ್ಮಹತ್ಯೆ: ವರದಿ

2023ರಲ್ಲಿ ಹೆಚ್ಚಿದ ರೈತರ ಆತ್ಮಹತ್ಯೆ: ವರದಿ

- Advertisement -
- Advertisement -

ಭಾರತ ಕೃಷಿ ಪ್ರಧಾನ ದೇಶ. ರೈತರು ನಮ್ಮ ದೇಶದ ಬೆನ್ನೆಲುಬು. ದೇಶದ ಜನರು ಕೃಷಿಯನ್ನು ಹೆಚ್ಚು ಅವಲಂಬಿತರಾಗಿದ್ದಾರೆ. ದುರದೃಷ್ಟವಶಾತ್ ನಮ್ಮ ದೇಶದಲ್ಲಿ ರೈತರ ಆತ್ಮಹತ್ಯೆ ಕೂಡ ಹೆಚ್ಚಳವಾಗಿದೆ. ಪ್ರತಿ ವರ್ಷ ರೈತರ ಆತ್ಮಹತ್ಯೆ ಸರಣಿ ಮುಂದುವರಿಯುವುದನ್ನು ನಾವು ನೋಡುತ್ತೇವೆ. ಈ ಸಮಸ್ಯೆಯನ್ನು ತಡೆಗಟ್ಟಲು ಭಾರತ ಸರ್ಕಾರವು ವಿಫಲವಾಗಿದೆ ಎನ್ನುವುದನ್ನು ಇತ್ತೀಚಿನ ಆತ್ಮಹತ್ಯೆ ಕುರಿತ ಅಂಕಿ-ಅಂಶಗಳು ಬಹಿರಂಗಪಡಿಸುತ್ತದೆ.

2023ರಲ್ಲಿ ಮಹಾರಾಷ್ಟ್ರದ ಎಂಟು ಜಿಲ್ಲೆಗಳಲ್ಲಿ 1,088 ರೈತರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಮರಾಠವಾಡ ವಿಭಾಗೀಯ ಆಯುಕ್ತರ ಕಚೇರಿಯ ವರದಿಯು ಬಹಿರಂಗಪಡಿಸಿದೆ. ಇದು 2022ರಲ್ಲಿ ವರದಿಯಾಗಿದ್ದ ರೈತರ ಸಾವಿಗಳಿಗಿಂತ ಹೆಚ್ಚಳವಾಗಿದೆ ಎಂದು ಅಂಕಿ-ಅಂಶಗಳು ತಿಳಿಸಿದೆ.

2023ರಲ್ಲಿ ನಡೆದ 1,088 ಆತ್ಮಹತ್ಯೆಗಳಲ್ಲಿ ಮಹರಾಷ್ಟ್ರದ ಬೀಡ್‌ನಲ್ಲಿ 269 ಸಾವುಗಳು, ಛತ್ರಪತಿ ಸಂಭಾಜಿನಗರದಲ್ಲಿ 182, ನಾಂದೇಡ್‌ನಲ್ಲಿ 175, ಧಾರಶಿವ್‌ನಲ್ಲಿ 171 ಮತ್ತು ಪರ್ಭಾನಿಯಲ್ಲಿ 103 ಸಾವುಗಳು ಸಂಭವಿಸಿದೆ ಎಂದು ಅಂಕಿ-ಅಂಶಗಳು ವರದಿ ಮಾಡಿದೆ.

ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಭರವಸೆ ನೀಡಲಾಗಿದೆ. 1,088 ಪ್ರಕರಣಗಳಲ್ಲಿ 151 ಪ್ರಕರಣಗಳು ಪ್ರಸ್ತುತ ವಿಚಾರಣೆಯಲ್ಲಿವೆ ಎಂದು ಪಿಟಿಐ ಹೇಳಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಪ್ರಕಾರ,  2014ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ  ದೇಶಾದ್ಯಂತ ದಿನಕ್ಕೆ ಸರಾಸರಿ 30ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

ಸಾರ್ವಜನಿಕ ಹೂಡಿಕೆಗಳ ಕಡಿತ, ಪ್ರಮುಖ ಕೈಗಾರಿಕೆಗಳ ಖಾಸಗೀಕರಣ, ಬಾಹ್ಯ ವ್ಯಾಪಾರ, ರಾಜ್ಯಗಳ ಸಬ್ಸಿಡಿಗಳ ಕಡಿತ ಮತ್ತು ಕೃಷಿ ಸಾಲದ ಕಡಿತ ಇವೆಲ್ಲವೂ ರೈತರ ದೀರ್ಘ ಕಾಲದ ಸಂಕಷ್ಟಕ್ಕೆ ಕಾರಣವಾಗಿದೆ.

ವರದಿಯ ಪ್ರಕಾರ ಛತ್ರಪತಿ ಸಂಭಾಜಿನಗರ, ಜಲ್ನಾ, ಬೀಡ್, ಹಿಂಗೋಲಿ, ಧಾರಶಿವ್, ಲಾತೂರ್, ನಾಂದೇಡ್ ಮತ್ತು ಪರ್ಭಾನಿ ಜಿಲ್ಲೆಗಳನ್ನು ಒಳಗೊಂಡಿರುವ ಮರಾಠವಾಡದಲ್ಲಿ 2022ರಲ್ಲಿ 1,023 ರೈತರ ಆತ್ಮಹತ್ಯೆಗಳು ವರದಿಯಾಗಿತ್ತು. ಈ ವರ್ಷ ಈ ಜಿಲ್ಲೆಗಳಲ್ಲಿ ಆತ್ಮಹತ್ಯೆಗಳ ಅಂಕಿ-ಅಂಶಗಳಲ್ಲಿ ಹೆಚ್ಚಳ ಕಂಡು ಬಂದಿದೆ.

ರೈತರ ಆತ್ಮಹತ್ಯೆಗೆ ಕಾರಣಗಳೇನು?

ನಮ್ಮ ದೇಶದಲ್ಲಿ ರೈತರ ಆತ್ಮಹತ್ಯೆ ಏಕೆ ನಡೆಯುತ್ತಿದೆ ಎಂಬುದನ್ನು ನೋಡಿದಾಗ ಸಾಕಷ್ಟು ಕಾರಣಗಳು ನಮ್ಮ ಮುಂದೆ ಕಂಡು ಬರುತ್ತದೆ. ಮಳೆಯ ಕೊರತೆಯಿಂದಾಗಿ ಬೆಳೆಗಳ ನಾಶವಾಗುತ್ತದೆ. ರೈತರು ತಾವು ಹೂಡಿಕೆ ಮಾಡಿದ ಹಣ ವ್ಯರ್ಥವಾಗಿ ಸಾಲದ ಸುಳಿಯಲ್ಲಿ ಸಿಲುಕಿ ನಷ್ಟ ಅನುಭವಿಸುತ್ತಾರೆ. ಪದೇ ಪದೇ ಬರಗಾಲಕ್ಕೆ ತುತ್ತಾಗುವ ಪ್ರದೇಶಗಳಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ಎಂಬುವುದು ಗಮನಾರ್ಹ. ಅದೇ ರೀತಿ ಪ್ರವಾಹಗಳು ಕೂಡ ಬರಗಾಲದಷ್ಟೇ ಅಪಾಯಕಾರಿ. ರೈತರ ಬೆಳೆಗಳು ಕೊಚ್ಚಿ ಹೋಗುತ್ತವೆ ಮತ್ತು ಆ ಬೆಳೆಗಳಿಂದ ಅವರಿಗೆ ಯಾವುದೇ ಉತ್ಪನ್ನ ಸಿಗುವುದಿಲ್ಲ. ಬೆಳೆ ಬೆಳೆಯಲು ಭಾರೀ ಸಾಲ ಪಡೆದು ನಷ್ಟವುಂಟಾಗಿ ಅದನ್ನು ತೀರಿಸಲು ಹಣವಿಲ್ಲದೆ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಡವಾಳೀಕರಣ ಮತ್ತು ಖಾಸಗೀಕರಣವು ಕೂಡ ಆತ್ಮಹತ್ಯೆಗೆ ಕಾರಣವಾಗಿದ್ದು,  ಹೆಚ್ಚಿನ ಸಾಲಗಳು ಮತ್ತು ಕುಟುಂಬದ ಒತ್ತಡವೂ ರೈತರನ್ನು ದುಡುಕಿನ ನಿರ್ಧಾರ ತೆಗೆದುಕೊಳ್ಳಲು ಪ್ರೇರೇಪಿಸುತ್ತದೆ. ಸಾಮೂಹಿಕ ಪ್ರಯತ್ನದಿಂದ ರೈತರ ಆತ್ಮಹತ್ಯೆ ತಡೆಯಬಹುದು. ಸರಕಾರ ರೈತರಿಗೆ ಆಧುನಿಕ ತಂತ್ರಜ್ಞಾನ ಕಲಿಸಬೇಕು. ಇದಲ್ಲದೆ ಅವರಿಗೆ ಸರಿಯಾದ ನೀರಾವರಿ ಸೌಲಭ್ಯಗಳನ್ನು ನೀಡಬೇಕು. ರೈತರ ನಷ್ಟವನ್ನು ಸರಿದೂಗಿಸುವ ನಿಜವಾದ ಬೆಳೆ ವಿಮಾ ಪಾಲಿಸಿಗಳನ್ನು ಜಾರಿಗೆ ತರಬೇಕಿದೆ.

ಇದನ್ನು ಓದಿ: ಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪಿನ ದೌರ್ಜನ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...