Homeಮುಖಪುಟರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

ರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

- Advertisement -
- Advertisement -

ರಾಮಮಂದಿರದ ಉದ್ಘಾಟನೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಲಂಡನ್‌, ಅಮೆರಿಕ ಮತ್ತು ಆಸ್ಟ್ರೇಲಿಯಾದ 22 ದಕ್ಷಿಣ ಏಷ್ಯಾ ಮೂಲದ ವಲಸೆ(ಅನಿವಾಸಿ) ಸಂಸ್ಥೆಗಳು ಜನವರಿ 22 ಸೋಮವಾರದಂದು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

16ನೇ ಶತಮಾನದ ಬಾಬರಿ ಮಸೀದಿಯನ್ನು ನೆಲಸಮಗೊಳಿಸಿದ್ದ ಸ್ಥಳದಲ್ಲಿ ನಿರ್ಮಿಸಲಾದ ರಾಮ ಮಂದಿರವನ್ನು ಉದ್ಘಾಟಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಪಾಯಕಾರಿ ಮುನ್ನುಡಿಯನ್ನು  ಬರೆದಿದ್ದಾರೆ ಎಂದು ಸಂಘಟನೆಗಳು ಹೇಳಿವೆ. ಇದು ಭಾರತದ ಜಾತ್ಯತೀತ ಸಂವಿಧಾನವನ್ನು ಬದಲಿಸುವ ಮತ್ತು ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಯತ್ನವೆಂದು ವಲಸೆ ಸಂಘಟನೆಗಳು ಹೇಳಿವೆ.

1528ರಲ್ಲಿ ಮೊಘಲ್ ಚಕ್ರವರ್ತಿ ಬಾಬರನ ಕಮಾಂಡರ್ ಮೀರ್ ಬಾಕಿ ನಿರ್ಮಿಸಿದ ಬಾಬರಿ ಮಸೀದಿಯನ್ನು ಡಿಸೆಂಬರ್ 6, 1992ರಂದು ಹಿಂದುತ್ವ ಸಂಘಟನೆಗಳಿಗೆ ಸೇರಿದ ಕರಸೇವಕರು ಕೆಡವಿದ್ದರು. ರಾಮಮಂದಿರ ಉದ್ಘಾಟನೆಯಲ್ಲಿ ಮೋದಿ ಭಾಗವಹಿಸಿದ್ದು ಲೋಕಸಭಾ ಚುನಾವಣಾ ಪ್ರಚಾರಕ್ಕೆ ನಾಂದಿ ಹಾಡಿದೆ. ಗಣರಾಜ್ಯೋತ್ಸವಕ್ಕೆ 4 ದಿನಗಳ ಮೊದಲು ನಡೆದ ಈ ಕಾರ್ಯಕ್ರಮವು ಡಾ ಬಿ ಆರ್ ಅಂಬೇಡ್ಕರ್‌ ರಚಿಸಿದ ಭಾರತದ ಜಾತ್ಯತೀತ ಸಂವಿಧಾನವನ್ನು ಬದಿಗಿಡುವ ಮತ್ತು ಬದಲಿಸುವ ಪ್ರಯತ್ನವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸೌತ್ ಏಷ್ಯಾ ಜಸ್ಟಿಸ್ ಕ್ಯಾಂಪೇನ್, ಸೌತ್ ಏಷ್ಯಾ ಸಾಲಿಡಾರಿಟಿ ಗ್ರೂಪ್, ಅಲೈಯನ್ಸ್ ಎಗೇನ್ಸ್ಟ್ ಇಸ್ಲಾಮೋಫೋಬಿಯಾ-ಆಸ್ಟ್ರೇಲಿಯಾ, ಭಾರತದಲ್ಲಿ ಫ್ಯಾಸಿಸಂ ವಿರುದ್ಧದ ಒಕ್ಕೂಟ, ಕ್ರೇಗಿಬರ್ನ್ ಮಸೀದಿ ಮತ್ತು ಸಮುದಾಯ ಕೇಂದ್ರ, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ – ಯುಕೆ, ಇಂಡಿಯಾ ಸಿವಿಲ್ ವಾಚ್ ಇಂಟರ್ ನ್ಯಾಷನಲ್, ಉತ್ತರ ಅಮೆರಿಕಾ , ಇಂಡಿಯಾ ಲೇಬರ್ ಸಾಲಿಡಾರಿಟಿ (ಯುಕೆ), ಇಂಡಿಯನ್ ಅಲೈಯನ್ಸ್ ಪ್ಯಾರಿಸ್ – ಫ್ರಾನ್ಸ್, ಇಂಡಿಯನ್ ಅಮೆರಿಕನ್ ಮುಸ್ಲಿಂ ಕೌನ್ಸಿಲ್, ಇಂಟರ್‌ನ್ಯಾಷನಲ್ ಸಾಲಿಡಾರಿಟಿ ಫಾರ್‌ ಅಕಾಡೆಮಿಕ್‌ ಫ್ರೀಡಂ ಇನ್‌ ಇಂಡಿಯಾ (ಇನ್ಸಾಫ್ ಇಂಡಿಯಾ), ಮೆಲ್ಬೋರ್ನ್ ಗ್ರ್ಯಾಂಡ್ ಮಸೀದಿ, ಮುಸ್ಲಿಂ ಕಲೆಕ್ಟಿವ್ – ಆಸ್ಟ್ರೇಲಿಯಾ, ಪೀಸ್ ಇನ್ ಇಂಡಿಯಾ (ಯುಕೆ), ಪೆರಿಯಾರ್ ಅಂಬೇಡ್ಕರ್ ಥಾಟ್ಸ್ ಸರ್ಕಲ್ ಆಫ್ ಆಸ್ಟ್ರೇಲಿಯಾ, ಸ್ಕಾಟಿಷ್ ಇಂಡಿಯನ್ಸ್ ಫಾರ್ ಜಸ್ಟಿಸ್, ಸೌತ್ ಏಷ್ಯನ್ ಡಯಾಸ್ಪೊರಾ ಆಕ್ಷನ್ ಕಲೆಕ್ಟಿವ್ (SADAC), ಸ್ಟ್ರೈವ್ ಯುಕೆ, ದಿ ರೈಟ್ಸ್ ಕಲೆಕ್ಟಿವ್ (ಯುಕೆ), ಯುಕೆ ಇಂಡಿಯನ್ ಮುಸ್ಲಿಂ ಕೌನ್ಸಿಲ್, ಯುನೈಟಿಂಗ್ ಉಮ್ಮಾ ಆಫ್ ಆಸ್ಟ್ರೇಲಿಯಾ ಆರ್ಗನೈಸೇಶನ್ ಮತ್ತು ವಿಮೆನ್ ಎಗೇನ್ಸ್ಟ್ ಕಾಸ್ಟ್ ಸಂಸ್ಥೆಗಳು ಜಂಟಿ ಹೇಳಿಕೆಗೆ ಸಹಿಯನ್ನು ಹಾಕಿದೆ.

ಪ್ರಧಾನಿ ಮೋದಿ ಮತ್ತು ಬಿಜೆಪಿ, ಆರೆಸ್ಸೆಸ್‌ನಿಂದ ದೇವಾಲಯದ ‘ಪ್ರತಿಷ್ಠಾಪನೆ’ ಭಾರತವು ದೀರ್ಘಾವಧಿಯ ಆರೆಸ್ಸೆಸ್‌ ಗುರಿಗಳನ್ನು ಅನುಷ್ಠಾನಗೊಳಿಸುವತ್ತ ಸಾಗಿದೆ ಎಂಬುದರ ಸಂಕೇತವಾಗಿದೆ. ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವುದು ಮತ್ತು ಸಂವಿಧಾನದ ಬದಲು ಮನುಸ್ಮೃತಿಯನ್ನು ಜಾರಿಗೆ ತರುವ ಪ್ರಯತ್ನವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ, ವಿಶೇಷವಾಗಿ ಮುಸ್ಲಿಮರ ವಿರುದ್ಧ ತಾರತಮ್ಯ ಮತ್ತು ಹಿಂಸಾಚಾರ ದೇಶದ ಜಾತ್ಯತೀತ ರಚನೆ ಮತ್ತು ಸಂವಿಧಾನದ ವಿರುದ್ಧವಾಗಿದೆ ಎಂದು ಸಂಘಟನೆಗಳು ಹೇಳಿದೆ.

ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ಭಾರತದಲ್ಲಿ ಮುಸ್ಲಿಂ ಪರಂಪರೆಯ ಕುರುಹುಗಳನ್ನು ಅಳಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿದೆ. ಉದಾಹರಣೆಗೆ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಮತ್ತು ಮಾದ್ಯಮಗಳಲ್ಲಿ ಮತ್ತು ಸಾರ್ವಜನಿಕ ಹೇಳಿಕೆಗಳಲ್ಲಿ ಇತಿಹಾಸವನ್ನು ಮರು ವ್ಯಾಖ್ಯಾನ ಮಾಡುತ್ತಿದೆ. ಇದು ಅಲ್ಪಸಂಖ್ಯಾತ ಸಮುದಾಯವನ್ನು ಅನ್ಯ ಮತ್ತು ಬೇರೆಯವರು ಎಂದು ಪ್ರಸ್ತುತಪಡಿಸುವ ಪ್ರಯತ್ನವಾಗಿದೆ. ಹಿಂದೂ ರಾಷ್ಟ್ರೀಯವಾದಿ ಗುಂಪುಗಳು ಮುಸ್ಲಿಂ ಧಾರ್ಮಿಕ ಸ್ಥಳಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಬಾಬರಿ ಮಸೀದಿ ತೀರ್ಪು ಮತ್ತು ವಾರಣಾಸಿ ಮತ್ತು ಮಥುರಾದಲ್ಲಿನ ಮಸೀದಿಯ ವಿವಾದವನ್ನು ಉಲ್ಲೇಖಿಸಿ ಹೇಳಿದೆ.

ಭಾರತವು ಮುಂಬರುವ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವಾಗ, ಬಾಬರಿ ಮಸೀದಿ ಮಸೀದಿ ಇದ್ದ ಭೂಮಿಯಲ್ಲಿ ರಾಮ ಮಂದಿರ ಉದ್ಘಾಟನೆಯು ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕನ್ನು ಬಿಜೆಪಿ ಕಡೆಗಣಿಸುವುದರ ಪ್ರಬಲ ಸಂಕೇತವಾಗಿದೆ. ನಂಬಿಕೆಯ ಜನರ ಸ್ವತಂತ್ರ ಹಕ್ಕು, ಈ ಬೆಳವಣಿಗೆಗಳು ಭಾರತೀಯ ನಾಗರಿಕರಾಗಿ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

ಮುಸ್ಲಿಮರು, ಕ್ರಿಶ್ಚಿಯನ್ನರು, ದಲಿತರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧದ ಮೋದಿ ಆಡಳಿತದ ಅಮಾನವೀಯ ಆಕ್ರಮಣಗಳು, ಜಾತಿವಾದ ಮತ್ತು ಸ್ತ್ರೀದ್ವೇಷ, ದೌರ್ಜನ್ಯವನ್ನು ವಿರೋಧಿಸುತ್ತಿರುವ ಭಾರತದ ಎಲ್ಲರೊಂದಿಗೆ ತಾವು ನಿಲ್ಲುತ್ತೇವೆ ಎಂದು ಸಂಘಟನೆಗಳು ಹೇಳಿಕೆಯಲ್ಲಿ ಪ್ರತಿಪಾದಿಸಿದೆ.

ಇದನ್ನು ಓದಿ: ಕಾರು ಓವರ್‌ಟೇಕ್‌ ಮಾಡಿದ್ದಕ್ಕೆ ಯುವಕರಿಗೆ ಗಂಭೀರವಾಗಿ ಥಳಿತ: ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ತಹಶೀಲ್ಧಾರ್‌ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...