Homeಕರ್ನಾಟಕಮತೀಯ ಗೂಂಡಾಗಿರಿ ತಾಣವಾಗುತ್ತಿದೆಯಾ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ?

ಮತೀಯ ಗೂಂಡಾಗಿರಿ ತಾಣವಾಗುತ್ತಿದೆಯಾ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ?

- Advertisement -
- Advertisement -

ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 2023ರಲ್ಲಿ 84 ಕೋಮು ಹಿಂಸಾಚಾರದ ಪ್ರಕರಣ ವರದಿಯಾಗಿದೆ ಎಂದು ಪಿಯುಸಿಎಲ್ ಸದಸ್ಯ ಸುರೇಶ್ ಭಟ್ ಬಾಕ್ರಬೈಲ್ ಅವರ ವರದಿ ಹೇಳುತ್ತಿದೆ. ಈ ಶಾಕಿಂಗ್‌ ಅಂಕಿ- ಅಂಶಗಳು ಕರಾವಳಿಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿದೆ. ಮತೀಯ ಗೂಂಡಾಗಿರಿಯ ತಾಣವಾಗುತ್ತಿದೆಯಾ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಎಂಬ ಪ್ರಶ್ನೆ ಮೂಡಿಸಿದೆ. ದ್ವೇಷಭಾಷಣ, ರಾಜಕಾರಣಿಗಳ ಹೇಳಿಕೆಗಳು, ಪೊಲೀಸ್‌ ವೈಫಲ್ಯಗಳು ಕೋಮು ಹಿಂಸಾಚಾರ, ಮತೀಯ ಗೂಂಡಾಗಿರಿಗೆ ಕಾರಣಗಳಾಗಿ ಕಂಡು ಬರುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಕೋಮು-ಧ್ರವೀಕರಣವನ್ನು ವಿಫಲಗೊಳಿಸುವ ಅಗತ್ಯವನ್ನು ವರದಿಯು ಹೇಳುತ್ತಿದೆ.

ಕಳೆದ ಬೊಮ್ಮಯಿ ಅವಧಿಯ ಬಿಜೆಪಿ ಸರಕಾರದಲ್ಲಿ ಕರಾವಳಿಯಲ್ಲಿ ಹಲವು ಮತೀಯ ಗೂಂಡಾಗಿರಿ ಪ್ರಕರಣಗಳು ನಡೆದಿದ್ದವು. ಬಸವರಾಜ ಬೊಮ್ಮಯಿ ಕಳೆದ ಬಿಜೆಪಿ ಸರಕಾರದ ಸಿಎಂ ಆಗಿದ್ದಾಗ ಖುದ್ದು ಮತೀಯ ಗೂಂಡಾಗಿರಿ ಕುರಿತು ‘ಕ್ರಿಯೆ ನಡೆದಾಗ ಪ್ರತಿಕ್ರಿಯೆ ಬರುವುದು ಸಹಜ’ ಎಂಬಂತಹ ಬೇಜವಾಬ್ಧಾರಿ ಹೇಳಿಕೆ ಕೊಟ್ಟಿದ್ದರು. ಇದು ಮತೀಯ ಗೂಂಡಾಗಿರಿಯನ್ನು ಪ್ರಚೋಧಿಸಿದೆ ಎಂದು ಆರೋಪ ಕೇಳಿಬಂದಿತ್ತು. ಕಣಿಯೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳ ಮೇಲೆ ಮತೀಯ ಗೂಂಡಾಗಿರಿ ನಡೆಸಲಾಗಿತ್ತು. ಜವಳಿ ವ್ಯಾಪರಕ್ಕೆ ಹೋದ ಮಂಗಳೂರು ತಾಲ್ಲೂಕಿನ ಅಡ್ಡೂರು ನಿವಾಸಿಗಳಾದ ರಮೀಝುದ್ದೀನ್ ಮತ್ತು ರಫೀಕ್ ಅಮಾನವೀಯವಾಗಿ ಥಳಿಸಲಾಗಿತ್ತು.  ಇಬ್ಬರು ಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಮಾರಣಾಂತಿಕ ಹಲ್ಲೆ ನಡೆಸಿ ಬೈಕ್ ಹತ್ತಿಸಿ ಕೊಲೆಗೆ ಯತ್ನಿಸಿದ್ದರು.

ಮೂಡಬಿದಿರೆಯ 2023ರ ಆಗಸ್ಟ್‌ನಲ್ಲಿ ರಾಜೀವ್ ಗಾಂಧಿ ಕಾಂಪ್ಲೆಕ್ಸ್ ಬಳಿ ಸಹಪಾಠಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿದ್ಯಾರ್ಥಿಗೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. 2023ರ ಆ.2ರಂದು ರಾತ್ರಿ ವೇಳೆ ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ಅನೈತಿಕ ಪೊಲೀಸ್ ಗಿರಿ ಘಟನೆ ನಡೆದಿತ್ತು. ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ ಮೇಲೆ ಗುಂಪೊಂದು ಅಡ್ಡಗಟ್ಟಿ ಹಲ್ಲೆ ನಡೆಸಲಾಗಿತ್ತು. ಇಂತಹ ಹಲವು ಪ್ರಕರಣಗಳು ಕರಾವಳಿಯಲ್ಲಿ ವರದಿಯಾಗಿತ್ತು. ಬಿಜೆಪಿ ಅವಧಿಯಲ್ಲಿ ಹೆಚ್ಚಿನ ಪ್ರಕರಣಗಳು ನಡೆದಿದೆ, ಆದರೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಇದಕ್ಕೆ ಬ್ರೇಕ್‌ ಬೀಳುತ್ತದೆ ಎಂಬ ನಿರೀಕ್ಷೆ ಇದ್ದರೂ ನಂತರದ ದಿನಗಳಲ್ಲಿ ನಡೆದ ಘಟನೆಗಳು ಜನರಲ್ಲಿ ನಿರಾಶೆ ಮೂಡಿಸಿತ್ತು. ಬಂಟ್ವಾಳದಲ್ಲಿ ಪೊಲೀರ್ಸ ಮೇಲೆಯೇ ಮತೀಯ ಗೂಂಡಾಗಿರಿ ನಡೆದಿತ್ತು. ಬಿ.ಸಿ.ರೋಡ್ ನಿವಾಸಿಯಾಗಿರುವ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ಪತ್ನಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಅವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿತ್ತು. ಪೊಲೀಸ್ ಸಿಬ್ಬಂದಿ ಕುಟುಂಬವನ್ನು ಮನೆಗೆ ಮುಟ್ಟಿಸಿ, ಬಳಿಕ ಮತ್ತೆ ಕೇಸ್ ಒಂದರ ವಿಚಾರಕ್ಕೆ ಮನೆಯಿಂದ ಹೊರಕ್ಕೆ ಹೊರಡುತ್ತಿದ್ದಂತೆ, ಮನೆಯ ಅಂಗಳದಲ್ಲಿ ನಿಂತಿದ್ದ ಇಬ್ಬರು ಯುವಕರು ಮಾತಿಗಿಳಿದಿದ್ದಾರೆ. ಅವಾಚ್ಯವಾಗಿ ನಿಂದಿಸಿ, ಹುಡುಗಿಯನ್ನು ಎಲ್ಲಿಗೆ ಕರೆದುಕೊಂಡು ಹೋಗಿದ್ದೀಯಾ? ಇಲ್ಲಿನ ವಿಚಾರ ನಿನಗೆ ಗೊತ್ತಲ್ಲ ಎಂದು ಬೆದರಿಸಿ ಹಲ್ಲೆ ನಡೆಸಿದ್ದರು.

ಏಪ್ರಿಲ್ 4  2023ರಂದು ಬೆಳ್ತಂಗಡಿಯ ಉಜಿರೆಯಲ್ಲಿ 22ವರ್ಷದ ಯುವಕ ಶಾಹಿಲ್‌ ಮೇಲೆ ಹಿಂದೂ ಯುವತಿಯ ಜೊತೆ ಪ್ರಯಾಣಿಸುತ್ತಿದ್ದ ಎಂಬ ಆರೋಪದಲ್ಲಿ ಬಜರಂಗದಳದ ಕಾರ್ಯಕರ್ತರ ಗುಂಪು ಬಸ್‌ ತಡೆದು ಹಲ್ಲೆ ನಡೆಸಿದ್ದಾರೆ. ವಾಹನವನ್ನು ಅಡ್ಡಗಟ್ಟಿ ಶಾಹಿಲ್‌ ಮೇಲೆ ಹಲ್ಲೆ ನಡೆಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು. ಕೃತ್ಯಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಗಳೂರಿನ ಪೀಪಲ್ಸ್ ಯೂನಿಯನ್ ಆಫ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸದಸ್ಯ ಸುರೇಶ್ ಭಟ್ ಬಾಕ್ರಬೈಲ್ ಅವರ ವರದಿಯ ಪ್ರಕಾರ, 2023ರಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ನಡೆದ 20 ಮತೀಯ ಗೂಂಡಾಗಿರಿ ಪ್ರಕರಣಗಳಲ್ಲಿ ಈ ಪ್ರಕರಣವೂ ಒಂದಾಗಿದೆ.

ಕಳೆದ ವರ್ಷ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ 84 ಕೋಮು ವೈಷಮ್ಯದ ಪ್ರಕರಣಗಳು, ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ನಡೆದಿದೆ. ಇವುಗಳಲ್ಲಿ 44 ಪ್ರಕರಣಗಳಿಗೆ ದ್ವೇಷದ ಭಾಷಣ ಕಾರಣವಾಗಿದೆ. ಗೋರಕ್ಷಣೆ ಯತ್ನ, ಬಲವಂತದ ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿ ಎರಡು ಆರೋಪಗಳು ಮತ್ತು 10 ಇತರ ಕೋಮು ಘಟನೆಗಳು ವರದಿಯಾಗಿವೆ.

ದ್ವೇಷ ಭಾಷಣದ ಪ್ರಕರಣಗಳಲ್ಲಿ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಫೆಬ್ರವರಿಯಲ್ಲಿ ‘ಒಬ್ಬ ಹಿಂದೂ ಹುಡುಗಿಯನ್ನು ಕಳೆದುಕೊಂಡರೆ 10 ಮುಸ್ಲಿಂ ಹುಡುಗಿಯರನ್ನು ಕರೆತರುವಂತೆ’ ಹಿಂದೂ ಯುವಕರಿಗೆ ಸೂಚಿಸಿದ್ದಾರೆ. ವಿಟ್ಲದ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭದಲ್ಲಿ ಹಿಂದುತ್ವ ಸಂಘಟನೆಗಳು ಮುಸ್ಲಿಂ ಮಾರಾಟಗಾರರಿಗೆ ಅವಕಾಶ ನಿರಾಕರಿಸಿದ ಒಂದು ತಿಂಗಳ ನಂತರ ಈ ಬೆಳವಣಿಗೆ ನಡೆದಿತ್ತು.

44 ದ್ವೇಷ ಭಾಷಣಗಳಲ್ಲಿ ಹೆಚ್ಚಿನ ಭಾಷಣಗಳು ಹಿಂದುತ್ವ ಸಂಘಟನೆಗಳ ಕಾರ್ಯಕ್ರಮದಲ್ಲಿ ಮಾಡಲ್ಪಟ್ಟಿದ್ದರೆ, ಮೂರು ಮುಸ್ಲಿಂ ಸಂಘಟನೆಗೆ ಸೇರಿದ ಕಾರ್ಯಕ್ರಮದಲ್ಲಿ ಮಾಡಲಾಗಿದೆ. ಉಡುಪಿಯ ನೇಜಾರಿನಲ್ಲಿ ನಡೆದ ಮುಸ್ಲಿಂ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹಂತಕ ಪ್ರವೀಣ್‌ ಚೌಗಲೆಯನ್ನು ಉದ್ದೇಶಿಸಿ  ಆತನನ್ನು “ಮುಗಿಸುವ” ಅವಕಾಶ ಕಳೆದುಹೋಗಿದೆ ಎಂದು ಸ್ಟೇಟಸ್‌ ಹಾಕಿದ್ದ ಆರೋಪದಲ್ಲಿ ಹಫೀಜ್ ಮುಹಮ್ಮದ್ ಎಂಬಾತನ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಕೋಮು ಸೂಕ್ಷ್ಮ ಸಂದೇಶಗಳನ್ನು ಪೋಸ್ಟ್ ಮಾಡಿದ 21 ಪ್ರಕರಣಗಳನ್ನು ದಾಖಲಿಸಲಾಗಿತ್ತು. ಸುರೇಶ್ ಅವರು 2010ರಿಂದ ಕೋಮು ಹಿಂಸಾಚಾರದ ಕುರಿತ ಈ ಡೇಟಾವನ್ನು ಸಂಗ್ರಹಿಸುತ್ತಿದ್ದಾರೆ.

ದ್ವೇಷದ ಹೇಳಿಕೆಗಳನ್ನು ನೀಡಿದರೂ ಹಿಂದುತ್ವ ನಾಯಕರು ಯಾವುದೇ ಬಂಧನವಿಲ್ಲದೆ ರಾಜಾರೋಷವಾಗಿ ತಿರುಗುತ್ತಿದ್ದಾರೆ ಎಂಬುವುದನ್ನು ವರದಿಯು ಬೆಳಕು ಚೆಲ್ಲಿದೆ. ಸುಳ್ಯದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಗೆ ಸೇಡು ತೀರಿಸಿಕೊಳ್ಳಲು ವಿಎಚ್‌ಪಿಯ ಜಂಟಿ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಮಹಮ್ಮದ್ ಫಾಝಿಲ್ ಹತ್ಯೆಯಲ್ಲಿ ತಮ್ಮ ಕಾರ್ಯಕರ್ತರ ಕೈವಾಡವಿದೆ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದ. 2002ರ ಗುಜರಾತ್ ಗಲಭೆಯನ್ನು ನೆನಪಿಸಿಕೊಳ್ಳುವ ಮೂಲಕ ಪಂಪ್‌ವೆಲ್ ಪ್ರೇಕ್ಷಕರನ್ನು ಹಿಂಸಾಚಾರಕ್ಕೆ ಪ್ರಚೋದಿಸಿದ್ದ ಎಂಬುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ‘ಯಾವುದೇ ಹಿಂದೂಗಳು ತಮ್ಮ ಮನೆಯಲ್ಲಿ ಕುಳಿತುಕೊಳ್ಳಲಿಲ್ಲ. ಅವರು ಬೀದಿಗೆ ಬಂದು ಪ್ರತಿ ಮನೆಯನ್ನು  ನುಗ್ಗಿದರು. ಗುಜರಾತ್‌ನಲ್ಲಿ 58 ಕರಸೇವಕರ ಹತ್ಯೆಗೆ ಬಲಿಯಾದವರು ಎಷ್ಟು? ಗುಜರಾತ್‌ನಲ್ಲಿ ಸುಮಾರು 2,000 ಜನರು ಸಾವನ್ನಪ್ಪಿದ್ದಾರೆ’ ಎಂದು ಹೇಳಿದ್ದರು.

ವರದಿಯನ್ನು ಸಿದ್ಧಪಡಿಸಿದ ಪಿಯುಸಿಎಲ್ ಸದಸ್ಯ ಸುರೇಶ್ ಭಟ್ ಮಾತನಾಡುತ್ತಾ, 2006ರ ಸುರತ್ಕಲ್ ಗಲಭೆಯ ನಂತರ ಹೆಚ್ಚಾಗಿ ಇಂತಹ ಮಾಹಿತಿ ಸಂಗ್ರಹಿಸಲು ಮುಂದಾದೆ. ನನ್ನನ್ನೂ ಒಳಗೊಂಡ ಪಿಯುಸಿಎಲ್‌ನ ಸತ್ಯಶೋಧನಾ ತಂಡವು ಆ ಸಮಯದಲ್ಲಿ ಆ ಪ್ರದೇಶಕ್ಕೆ ಭೇಟಿ ನೀಡಿತ್ತು. ಕೋಮು ಘಟನೆಗಳ ಬಗ್ಗೆ ಯಾರೂ ದತ್ತಾಂಶವನ್ನು ಸಂಗ್ರಹಿಸುತ್ತಿಲ್ಲ ಎಂದು ನಾನು ಅರಿತುಕೊಂಡೆ. ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಆರೆಸ್ಸೆಸ್‌ ದಕ್ಷಿಣ ಕನ್ನಡದಲ್ಲಿ ಜನರನ್ನು ವ್ಯವಸ್ಥಿತವಾಗಿ ಧ್ರುವೀಕರಿಸುತ್ತಿದೆ ಮತ್ತು 1992ರಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ ಆ ಪ್ರಯತ್ನಗಳು ವೇಗವನ್ನು ಪಡೆದುಕೊಂಡವು. ಆರೆಸ್ಸೆಸ್‌ ಶಾಖಾಗಳು ಜನರ ಮನಸ್ಸಿನಲ್ಲಿ ದ್ವೇಷವನ್ನು ಬಿತ್ತಿದೆ. ವರದಿ ಸಿದ್ದಪಡಿಸಲು ಮೊದಲು  ಮುದ್ರಣ ಮಾಧ್ಯಮವನ್ನು ಅವಲಂಬಿಸಿದ್ದೆ, ಈಗ ಡಿಜಿಟಲ್ ಮಾಧ್ಯಮವನ್ನು ಕೂಡ ಅವಲಂಬಿಸಿದ್ದೇನೆ ಎಂದು ಸುರೇಶ್ ಹೇಳಿದ್ದಾರೆ.

ರಾಜ್ಯದ ಇತರ ಭಾಗಗಳಿಗಿಂತಲೂ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಇಂತಹ ಘಟನೆ ಮೊದಲು ಆರಂಭವಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತೆ ವಿದ್ಯಾ ದಿನಕರ್ ಹೇಳಿದ್ದಾರೆ. ಕೋಮುಗಲಭೆಯ ನಿದರ್ಶನಗಳು ಇದ್ದಕ್ಕಿದ್ದಂತೆ ಹುಟ್ಟಿಕೊಳ್ಳುವುದಿಲ್ಲ. ಇವುಗಳಲ್ಲಿ ಹಲವು ವರದಿಯಾಗುವುದಿಲ್ಲ. ದ್ವೇಷವು ಸಾರ್ವಜನಿಕರ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ ಮತ್ತು ರಾಜಕೀಯ ನಾಯಕರ ಹೇಳಿಕೆಗಳು ಅದನ್ನು ಉತ್ತೇಜಿಸುತ್ತವೆ ಎಂದು ಹೇಳಿದ್ದಾರೆ.

ಪಿಯುಸಿಎಲ್‌ನ ಕರ್ನಾಟಕ ಅಧ್ಯಕ್ಷ ಅರವಿಂದ್ ನಾರಾಯಣ್ ಅವರು ಈ ಬಗ್ಗೆ ಮಾತನಾಡಿದ್ದು, ಕೋಮುಗಲಭೆಯ ಘಟನೆಗಳಿಗೆ ಹಲವು ಕಾರಣಗಳಿರಬಹುದು, ಅವುಗಳಲ್ಲಿ ಒಂದು ಪೊಲೀಸರ ವಿಫಲತೆ ಇದೆ. ಪ್ರತಿಯೊಂದು ಧರ್ಮದಲ್ಲೂ ಮೂಲಭೂತವಾದಿಗಳು ಮತ್ತು ಪ್ರಗತಿಪರರು ಇದ್ದಾರೆ. ರಾಜ್ಯವು ಅವರಿಗೆ ಪ್ರೋತ್ಸಾಹ ನೀಡಿದಾಗ ಮತ್ತು ಅವರು ಬಯಸಿದ್ದನ್ನು ಮಾಡಲು ಅವಕಾಶ ನೀಡಿದಾಗ ಸಮಸ್ಯೆ ಉದ್ಭವಿಸುತ್ತದೆ, ಎಂದು ಹೇಳಿದ್ದಾರೆ.

ಇದನ್ನು ಓದಿ: ಕೌಟುಂಬಿಕ ಪ್ರಕರಣ: ಮನುಸ್ಮೃತಿ ಉಲ್ಲೇಖಿಸಿ ತೀರ್ಪು ನೀಡಿದ ಜಾರ್ಖಂಡ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...