Homeಮುಖಪುಟಮುಂಬೈ: ಮತ್ತೆ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ

ಮುಂಬೈ: ಮತ್ತೆ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮತ್ತೆ ಮರಾಠ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಮರಾಠ ಸಮುದಾಯಕ್ಕೆ ಮೀಸಲಾತಿಗಾಗಿ ಒದಗಿಸಲು ಒತ್ತಾಯಿಸಿ ಮರಾಠ ಕೋಟಾದ ನಾಯಕ ಮನೋಜ್ ಜಾರಂಗೆ ಅವರು ಶುಕ್ರವಾರ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ನವಿ ಮುಂಬೈ ತಲುಪಿದ್ದಾರೆ.

ಜಾರಂಗೆ ಮತ್ತು ಇತರ ಮರಾಠಾ ಕಾರ್ಯಕರ್ತರು ಬೈಕ್‌, ಕಾರು, ಜೀಪು, ಟೆಂಪೋ ಮತ್ತು ಟ್ರಕ್‍ಗಳ ಮೂಲಕ ಮುಂಬೈನ ಹೊರವಲಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮುಂಭಾಗಕ್ಕೆ ಬಂದು ಜಮಾಯಿಸಿದ್ದಾರೆ. ಅವರ ಯೋಜನೆಯಂತೆ ಜಾರಂಗೆ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಆಜಾದ್ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ. ಮರಾಠಾ ಸಮುದಾಯಕ್ಕೆ ಕುಂಬಿ (ಒಬಿಸಿ) ಸ್ಥಾನಮಾನ ನೀಡಬೇಕು ಎಂದು ಪ್ರತಿಭಟನಾಕಾರರ ಒತ್ತಾಯವಾಗಿದೆ.

ನಗರದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ಅನುಮತಿ ನಿರಾಕರಿಸಿ ಮುಂಬೈ ಪೊಲೀಸರು ನೋಟಿಸ್ ಜಾರಿ ಮಾಡಿದ್ದರೂ, ಜನವರಿ 26ರಂದು ದಕ್ಷಿಣ ಮುಂಬೈನ ಆಜಾದ್ ಮೈದಾನ ತಲುಪುದಾಗಿ ಗುರುವಾರ ಜಾರಂಗೆ ಘೋಷಿಸಿದ್ದರು. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 149 ರ ಅಡಿಯಲ್ಲಿ ಹೊರಡಿಸಲಾದ ನೋಟಿಸ್‍ನಲ್ಲಿ ಪೊಲೀಸರು, ಮುಂಬೈ ದೇಶದ ಆರ್ಥಿಕ ರಾಜಧಾನಿಯಾಗಿದೆ ಮತ್ತು ಮುಂಬೈನಲ್ಲಿ ವಿವಿಧ ಹಣಕಾಸು ಸಂಸ್ಥೆಗಳು, ಅಂತಾರಾಷ್ಟ್ರೀಯ ವಕೀಲರು ಮತ್ತು ಇತರ ಹಣಕಾಸು ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಮುಂಬೈನಲ್ಲಿ ಪ್ರತಿದಿನ ಸರಿಸುಮಾರು 60 ರಿಂದ 65 ಲಕ್ಷ ನಾಗರಿಕರು ಕೆಲಸಗಳಿಗಾಗಿ ರೈಲು ಮತ್ತು ಇತರ ಸಾರಿಗೆ ವಿಧಾನಗಳಲ್ಲಿ ಪ್ರಯಾಣಿಸುತ್ತಾರೆ. ಮರಾಠಾ ಪ್ರತಿಭಟನಾಕಾರರು ತಮ್ಮ ವಾಹನಗಳಲ್ಲಿ ನಗರಕ್ಕೆ ಬಂದರೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಮತ್ತು ನಗರದಲ್ಲಿ ದೈನಂದಿನ ಸಾರಿಗೆ ವ್ಯವಸ್ಥೆಗೆ ಅಡ್ಡಿಯಾಗಲಿದೆ ಎಂದು ಎಚ್ಚರಿಸಿದ್ದರು.

ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆದ ನಂತರ ನವಿ ಮುಂಬೈನ ಖಾರ್‌ಘರ್‌ನಲ್ಲಿರುವ ಇಂಟರ್‌ನ್ಯಾಷನಲ್ ಕಾರ್ಪೋರೇಷನ್ ಪಾರ್ಕ್ ಗ್ರೌಂಡ್‍ನಲ್ಲಿ ಪ್ರತಿಭಟನಾಕಾರರು ಸೇರಬಹುದು ಎಂದು ಮುಂಬೈ ಪೊಲೀಸರು ಸೂಚಿಸಿದ್ದಾರೆ. ಒಂದು ವೇಳೆ ಪ್ರತಿಭನಾಕಾರರು ನೋಟಿಸ್‍ಗೆ ಬದ್ಧವಾಗಿಲ್ಲದಿದ್ದರೆ, ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.

ಹೈಕೋರ್ಟ್‌ನ ಆದೇಶ ಪ್ರಕಾರ, ಆಝಾದ್ ಮೈದಾನದ 7,000 ಚದರ ಮೀಟರ್ ಪ್ರದೇಶವನ್ನು ಮಾತ್ರ ಪ್ರತಿಭಟನೆಗೆ ಮೀಸಲಿಡಲಾಗಿದೆ. ಈ ಜಾಗ 5,000 ರಿಂದ 6,000 ಪ್ರತಿಭಟನಾಕಾರರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವಿದೆ. ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಅಲ್ಲಿಗೆ ಬಂದರೆ, ಅವರಿಗೆ ನಿಲ್ಲಲು ಕೂಡ ಸಾಕಷ್ಟು ಸ್ಥಳಾವಕಾಶವಿಲ್ಲ. ಮೈದಾನದ ಇನ್ನುಳಿದ ಜಾಗ ಶಾಲಾ ಶಿಕ್ಷಣ ಮತ್ತು ಕ್ರೀಡಾ ಇಲಾಖೆಗೆ ಒಳಪಟ್ಟಿದ್ದು, ಅಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಲಾಗಿದೆ ಎಂದು ಪೊಲೀಸರು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ದಾದರ್‌ನ ಶಿವಾಜಿ ಪಾರ್ಕ್ ಮೈದಾನದಲ್ಲಿ ಜನಸಮೂಹ ಸೇರಲು ಅನುಮತಿ ನಿರಾಕರಿಸಿರುವ ಪೊಲೀಸರು, ಜನವರಿ 26 ಗಣರಾಜ್ಯೋತ್ಸವ ದಿನವಾದ್ದರಿಂದ ಶಿವಾಜಿ ಪಾರ್ಕ್‍ನಲ್ಲಿ ಸರ್ಕಾರಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಇದರಿಂದ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆಂದೋಲನ. ಶಿವಾಜಿ ಪಾರ್ಕ್ ಮೈದಾನಕ್ಕೆ ಇಷ್ಟು ದೊಡ್ಡ ಸಂಖ್ಯೆಯ ಪ್ರವಾಸಿಗರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯ ಇಲ್ಲ ಎಂದು ನೋಟಿಸ್‌ನಲ್ಲಿ ಸೇರಿಸಿದ್ದಾರೆ.

ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ರಿಟ್ ಅರ್ಜಿಯ ಪ್ರಕಾರ, ಪ್ರತಿಭಟನೆಯಿಂದ ಮುಂಬೈನಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದೆ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ. ಮರಾಠಾ ಆಂದೋಲನವು ಗಣರಾಜ್ಯೋತ್ಸವದಂದು ಅಯೋಜಿಸುವ ಯಾವುದೇ ಆಚರಣೆಯನ್ನು ಎಂದಿಗೂ ಅಡ್ಡಿಪಡಿಸುವುದಿಲ್ಲ ಎಂದು ಜಾರಂಗೆ ಹೇಳಿದ್ದಾರೆ.

ಪೊಲೀಸರ ಸೂಚನೆಯ ಹೊರತಾಗಿಯೂ ಜಾರಂಗೆ ಮುಂಬೈಗೆ ಆಗಮಿಸಿದ್ದಾರೆ. ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಸಮಸ್ಯೆ ಪರಿಹರಿಸಲು ವೈಯಕ್ತಿಕವಾಗಿ ಚರ್ಚೆಗೆ ಬರಬೇಕು ಎಂದು ಆಗ್ರಹಿಸಿದ್ದಾರೆ.

ಮುಂಬೈಗೆ ಹೋಗದಂತೆ ಮನವೊಲಿಸಲು ಛತ್ರಪತಿ ಸಂಭಾಜಿನಗರದ ವಿಭಾಗೀಯ ಆಯುಕ್ತ ಸೇರಿದಂತೆ ಹಿರಿಯ ಸರ್ಕಾರಿ ಅಧಿಕಾರಿಗಳ ನೇತೃತ್ವದ ನಿಯೋಗ ಜಾರಂಗೆ ಅವರನ್ನು ಭೇಟಿ ಮಾಡಿತ್ತು. ಮೀಸಲಾತಿ ವಿಚಾರದಲ್ಲಿ ಸರ್ಕಾರದ ನಿರ್ಧಾರಗಳನ್ನು ತಿಳಿಸಲು ಮತ್ತೊಂದು ನಿಯೋಗ ಅವರನ್ನು ಭೇಟಿ ಮಾಡಲಿದೆ ಎಂದು ಹೇಳಲಾಗಿತ್ತು. ನವಿ ಮುಂಬೈ ಪೊಲೀಸ್ ಅಧಿಕಾರಿಗಳು ಕೂಡ ಜಾರಂಗೆ ಅವರನ್ನು ಭೇಟಿಯಾಗಿ ಆಸ್ಪತ್ರೆಯೊಂದು ಮಾರ್ಗದಲ್ಲಿ ಇರುವುದರಿಂದ ಅವರ ಮೆರವಣಿಗೆಯ ಮಾರ್ಗವನ್ನು ಬದಲಾಯಿಸುವಂತೆ ಮನವಿ ಮಾಡಿದ್ದರು. ಮಾರ್ಗ ಬದಲಾಯಿಸಿ ಹಳೆಯ ಪುಣೆ-ಮುಂಬೈ ಹೆದ್ದಾರಿಯಿಂದ ತೆರಳಲು ಸೂಚಿಸಿದ್ದರು.

ಇದನ್ನೂ ಓದಿ: ಜ್ಞಾನವಾಪಿ ಪ್ರಕರಣ: ಹಿಂದೂ ಪರ ವಕೀಲನಿಂದ ಎಎಸ್‌ಐ ಸಮೀಕ್ಷೆ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...