Homeಮುಖಪುಟಬಿಹಾರ ರಾಜಕೀಯ ಬೆಳವಣಿಗೆ: ಮುಖ್ಯಮಂತ್ರಿಯಾಗಿ ನಿತೀಶ್, ಬಿಜೆಪಿಯಿಂದ ಇಬ್ಬರು ಡಿಸಿಎಂ!

ಬಿಹಾರ ರಾಜಕೀಯ ಬೆಳವಣಿಗೆ: ಮುಖ್ಯಮಂತ್ರಿಯಾಗಿ ನಿತೀಶ್, ಬಿಜೆಪಿಯಿಂದ ಇಬ್ಬರು ಡಿಸಿಎಂ!

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ‘ಮಹಾ ಘಟಬಂಧನ್’ ತೊರೆಯುವುದು ಖಚಿತವಾಗಿದ್ದು, ಬಿಜೆಪಿ ಜತೆ ಸೇರಿ ಅವರು ಇದೆ ಭಾನುವಾರ ಏಳನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ಉನ್ನತ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿವೆ.

ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್ ಮುಖ್ಯಮಂತ್ರಿಯಾದರೆ, ಬಿಹಾರ ಬಿಜೆಪಿ ಎರಡು ಉಪಮುಖ್ಯಮಂತ್ರಿ ಸ್ಥಾನಗಳನ್ನು ಪಡೆಯುತ್ತದೆ ಎನ್ನಲಾಗಿದ್ದು, 2020ರ ಚುನಾವಣೆಯ ನಂತರ ಈ ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು ಎನ್ನಲಾಗಿದೆ.

ಈ ಸಮಯದಲ್ಲಿ ನಿತೀಶ್ ಕುಮಾರ್ ವಿಧಾನಸಭೆ ವಿಸರ್ಜಿಸಿ, ಮತ್ತೆ ಚುನಾವಣೆಗೆ ಹೋಗುವುದಿಲ್ಲ ಎಂದು ತಿಳಿದುಬಂದಿದ್ದು, ಮುಂದಿನ ವರ್ಷ ಬಿಹಾರ ವಿಧಾನಸಭೆಗೆ ಮತದಾನ ನಡೆಯಲಿದೆ. ಆದ್ದರಿಂದ, ಬಿಜೆಪಿ-ಜೆಡಿಯು ಪಕ್ಷಗಳು ವಿಧಾನಸಭೆ ವಿಸರ್ಜಿಸುವ ಆತುರದಲ್ಲಿಲ್ಲ. ಆದರೆ, ಉಭಯ ಪಕ್ಷಗಳ ಚಿತ್ತ ಈಗ ಲೋಕಸಭೆ ಚುನಾವಣೆ ಮೇಲಿದೆ.

ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಜನವರಿ 28ರವರೆಗೆ ನಿಗದಿಯಾಗಿದ್ದ ಸಾರ್ವಜನಿಕ ಸಭೆಗಳು ಮತ್ತು ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು 2022 ರಲ್ಲಿ ಬಿಜೆಪಿಗೆ ಕೈಕೊಟ್ಟು ಮಹಾ ಘಟಬಂಧನ್ ಕಡೆಗೆ ಜಿಗಿದಿದ್ದರು. ಈಗ ಮತ್ತೊಮ್ಮೆ ಬಿಜೆಪಿ ಸೇರಲು ಮುಂದಾಗಿದ್ದಾರೆ. ಆ ಮೂಲಕ ತಮ್ಮ ‘ಪಲ್ಟು ಕುಮಾರ್’ ಅಡ್ಡಹೆಸರನ್ನು ಮರುಪಡೆಯಲು ಸಜ್ಜಾಗಿದ್ದಾರೆ.

ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಮರಳುವುದಕ್ಕೆ ಬಿಜೆಪಿ ಹಲವು ಷರತ್ತುಗಳನ್ನು ವಿಧಿಸಿದೆ ಎನ್ನಲಾಗುತ್ತಿದೆ. ವಿಧಾನಸಭೆ ಸ್ಪೀಕರ್ ಯಾರಾಗಬೇಕು ಎಂಬುದರಿಂದ ಹಿಡಿದು, ಕ್ಯಾಬಿನೆಟ್ ಮರು-ವಿಂಗಡಣೆಯನ್ನು ಒಳಗೊಂಡಿರುತ್ತದೆ. ಬಿಜೆಪಿ ಶಾಸಕರಿಗೆ ಅವಕಾಶ ಕಲ್ಪಿಸಲು ಪ್ರತಿ ನಾಲ್ಕು ಶಾಸಕರಿಗೆ ಒಂದು ಮಂತ್ರಿ ಸ್ಥಾನ ನೀಡುವುದು ಸೇರಿದಂತೆ, ಜೆಡಿಯುಗೆ ಲೋಕಸಭಾ ಸ್ಥಾನಗಳ ಕಡಿತಗೊಳಿಸುವ ವಿಚಾರ ಒಳಗೊಂಡಿದೆ. 2019 ರಲ್ಲಿ ಜೆಡಿಯು 17 ರಲ್ಲಿ ಸ್ಪರ್ಧಿಸಿ, 16 ಸ್ಥಾನಗಳನ್ನು ಗೆದ್ದಿತು.

ನಿತೀಶ್ ಅವರ ಬಿಜೆಪಿ ಜತೆಗೆ ಮರು ಹೊಂದಾಣಿಕೆ ಮಾಡಿಕೊಳ್ಳುತ್ತವೆ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ, ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿಯವರ “ರಾಜಕೀಯದಲ್ಲಿ ಬಾಗಿಲುಗಳು ಶಾಶ್ವತವಾಗಿ ಮುಚ್ಚಲ್ಪಟ್ಟಿಲ್ಲ” ಎಂಬ ಹೇಳಿಕೆಯ ನಂತರ ಈ ಊಹಾಪೋಹಗಳಿಗೆ ಮತ್ತಷ್ಟು ರೆಕ್ಕೆಪುಕ್ಕ ಬಂದಿದೆ.

ನಿತೀಶ್ ಕುಮಾರ್ ಅವರ ಬಿಜೆಪಿ ಘರ್ ವಾಪ್ಸಿಯು ಬಿಹಾರದ ರಾಜಕೀಯದಲ್ಲಿ ಮಿಶ್ರ ಪ್ರತಿಕ್ರಿಯೆ ಕೇಳಿಬರುತ್ತಿದೆ. ಮೂಲಗಳ ಪ್ರಕಾರ, ನಿತೀಶ್ ಕುಮಾರ್ ಅವರ ಪಕ್ಷದೊಳಗೆ ಭಿನ್ನಾಭಿಪ್ರಾಯ ಉಂಟಾಗಿದೆ. ಕಳೆದ ತಿಂಗಳು ನಿತೀಶ್ರಿಂದ ಜೆಡಿಯು ಮುಖ್ಯಸ್ಥ ಸದ್ಥಾನದಿಂದ ಪದಚ್ಯುತಗೊಂಡ ಲಾಲನ್ ಸಿಂಗ್, ಆರ್‌ಜೆಡಿ ಕೈಬಿಡುವುದನ್ನು ವಿರೋಧಿಸುತ್ತಿದ್ದಾರೆ ಎಂದು ತಿಳಿದುಬಂದಿದೆ, ಆದರೆ ಸಂಜಯ್ ಝಾ ಮತ್ತು ಅಶೋಕ್ ಚೌಧರಿ ನೇತೃತ್ವದ ಗುಂಪು ಬಿಜೆಪಿಯೊಂದಿಗೆ ಮೈತ್ರಿಗೆ ಒತ್ತಾಯಿಸುತ್ತಿದೆ.

ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಮತ್ತು ಅವರ ಹಿಂದೂಸ್ತಾನ್ ಅವಾಮ್ ಮೋರ್ಚಾ – ಸದ್ಯಕ್ಕೆ ಜೆಡಿಯು ಮಿತ್ರ ಮತ್ತು ರಾಜ್ಯ ಸರ್ಕಾರದ ಭಾಗವಾಗಿದೆ. ಕೇಂದ್ರ ಗೃಹ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಆ ಒಪ್ಪಂದವನ್ನು ಮಾಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ವರದಿಯಾಗಿದೆ.

ಇಷ್ಟೆಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೂ ಇಂಡಿಯಾ ಬಣವು ಭರವಸೆ ಕಳೆದುಕೊಂಡಿಲ್ಲ. ಸಾರ್ವಜನಿಕವಾಗಿಯೂ ಯಾವುದೇ ಹೇಳಿಕೆ ನೀಡಿಲ್ಲ. ‘ನಿತೀಶ್ ಕುಮಾರ್ ಅವರು ಮೈತ್ರಿಯೊಂದಿಗೆ ಉಳಿಯುತ್ತಾರೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ. ಅವರು ಬಿಜೆಪಿಯನ್ನು ಅಧಿಕಾರದಿಂದ ಹೊರಹಾಕಲು ನಿರ್ಧರಿಸಿದ್ದಾರೆ ಮತ್ತು ನಾವು ಅವರನ್ನು ನಂಬುತ್ತೇವೆ’ ಎಂದು ಬಿಹಾರದ ಕಾಂಗ್ರೆಸ್ ನಾಯಕ ಪ್ರೇಮ್ ಚಂದ್ರ ಮಿಶ್ರಾ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆರ್‌ಜೆಡಿ ಮುಖಂಡರೂ ಕೂಡ ಇನ್ನೂ ಆಶಾವಾದ ಇಟ್ಟುಕೊಂಡಿದ್ದಾರೆ, ‘ಮೈತ್ರಿ ಮಾತುಕತೆಯು ಬಿಜೆಪಿ ಹೆದರಿರುವುದನ್ನು ಪ್ರತಿಬಿಂಬಿಸುತ್ತದೆ’ ಎಂದು ಪಕ್ಷದ ವಕ್ತಾರ ಶಕ್ತಿ ಯಾದವ್ ಹೇಳಿದರು.

ಇದನ್ನೂ ಓದಿ; ಇಂಡಿಯಾ ಬಣ ಬಿಕ್ಕಟ್ಟು: ಟಿಎಂಸಿ ಸಂಸದರ ವಿರುದ್ಧ ಅಧೀರ್ ರಂಜನ್ ಚೌಧರಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...