Homeಮುಖಪುಟಜ್ಞಾನವಾಪಿ ಮಸೀದಿ ಆವರಣದ ವಿಗ್ರಹ ತುಂಡುಗಳ ಬಗ್ಗೆ ಸಂಶಯ ವ್ಯಕ್ತಪಡಿಸಿದ ಮುಸ್ಲಿಂ ಅರ್ಜಿದಾರರು

ಜ್ಞಾನವಾಪಿ ಮಸೀದಿ ಆವರಣದ ವಿಗ್ರಹ ತುಂಡುಗಳ ಬಗ್ಗೆ ಸಂಶಯ ವ್ಯಕ್ತಪಡಿಸಿದ ಮುಸ್ಲಿಂ ಅರ್ಜಿದಾರರು

- Advertisement -
- Advertisement -

ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಅವಶೇಷಗಳ ರಾಶಿಯಲ್ಲಿ ಪುರಾತತ್ವ ಇಲಾಖೆ ಪತ್ತೆ ಮಾಡಿದೆ ಎನ್ನಲಾದ ವಿಗ್ರಹಗಳ ತುಂಡುಗಳು ಈ ಕಟ್ಟಡದ ಬಾಡಿಗೆ ಮಳಿಗೆಗಳಲ್ಲಿ ವಹಿವಾಟು ನಡೆಸುತ್ತಿದ್ದ ಶಿಲ್ಪಿಗಳು ಹಾಕಿರುವ ಸಾಧ್ಯತೆ ಇದೆ ಎಂದು ಮಸೀದಿಯ ಪರಿಪಾಲನೆ ನಿರ್ವಹಿಸುತ್ತಿರುವ ಅಂಜುಮನ್ ಇಂತಿಝಾಮಿಯಾ ಮಸಾಜಿದ್ (ಎಐಎಂ) ಸಮಿತಿ ಶುಕ್ರವಾರ ಸಂಶಯ ವ್ಯಕ್ತಪಡಿಸಿದೆ.

ಮಸೀದಿ ಸಮಿತಿ ಹೇಳಿಕೆ ನೀಡಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಹಿಂದೂ ಅರ್ಜಿದಾರರ ಪರ ವಕೀಲ ವಿಷ್ಣು ಶಂಕರ್ ಜೈನ್, ಇಂಥ ವಾದಕ್ಕೆ ಯಾವ ಆಧಾರವೂ ಇಲ್ಲ ಎಂದಿದ್ದಾರೆ. ಜ್ಞಾನವಾಪಿ ಎಎಸ್ಐನ ವೈಜ್ಞಾನಿಕ ಸಮೀಕ್ಷೆ ವರದಿಯು ಆವರಣದ ಒಳಗಡೆ ಇದ್ದ ಅವಶೇಷಗಳ ರಾಶಿಯಲ್ಲಿ ಪತ್ತೆಯಾದ ಪ್ರತಿ ವಿಗ್ರಹ ಮತ್ತು ಕಲಾಕೃತಿಗಳ ವಯಸ್ಸು, ಯುಗ, ಗಾತ್ರ ಮತ್ತು ಇತರ ಎಲ್ಲ ಸೂಕ್ತ ವಿವರಗಳನ್ನು ನಿರ್ದಿಷ್ಟಪಡಿಸಿದೆ ಎಂದು ಅವರು ಹೇಳಿದ್ದಾರೆ.

ಎಎಸ್‌ಐ ಸಮೀಕ್ಷೆ ವರದಿಯ ಪ್ರತಿಯನ್ನು ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯ ಅರ್ಜಿದಾರರಿಗೆ ನೀಡಿದ ಬೆನ್ನಲ್ಲೇ ಪರಸ್ಪರ ವಾಗ್ವಾದ ಶುರುವಾಗಿದೆ. 17ನೇ ಶತಮಾನದಲ್ಲಿ ಮಸೀದಿ ನಿರ್ಮಾಣ ಮಾಡುವ ಮೊದಲು ಜ್ಞಾನವಾಪಿ ಜಾಗದಲ್ಲಿ ಹಿಂದೂ ಮಂದಿರ ಇತ್ತು ಎಂದು ಎಎಸ್ಐ ಸಮೀಕ್ಷೆ ತಿಳಿಸಿದೆ.

ಎಎಸ್ಐ ಸಮೀಕ್ಷೆ ವರದಿಯ ಅಧ್ಯಯನಕ್ಕೆ ಕಾನೂನು ತಜ್ಞರನ್ನು ನೇಮಕ ಮಾಡಲಾಗುವುದು ಎಂದು ಮಸೀದಿ ಸಮಿತಿ ಹೇಳಿದೆ. ಇಲ್ಲಿ ದೇವಾಲಯ ಇತ್ತು ಎನ್ನುವ ಬಗ್ಗೆ ಹಿಂದೂಗಳು ಮಾಡಿರುವ ಪ್ರತಿಪಾದನೆಗೆ ಯಾವುದೇ ಹೊಸ ಶೋಧನೆಯ ಆಧಾರ ಇಲ್ಲ ಎಂದು ಸಮಿತಿಯ ವಕೀಲ ಅಖ್ಲಾಕ್ ಅಹ್ಮದ್ ಅಭಿಪ್ರಾಯಪಟ್ಟಿದ್ದಾರೆ.

ನಾವು ವರದಿಯನ್ನು ಅಧ್ಯಯನ ಮಾಡಿದ ಬಳಿಕ ಹೇಳಿಕೆ ನೀಡುತ್ತೇವೆ. ಎಎಸ್‌ಐ ಸಮೀಕ್ಷೆಯಲ್ಲಿ, ಮೇ 2022 ರಲ್ಲಿ ನ್ಯಾಯಾಲಯದ ಕಮಿಷನರ್ ಸಮೀಕ್ಷೆಯಲ್ಲಿ ಹೇಳಿದ್ದನ್ನೇ ಹೇಳಲಾಗಿದೆ. ಹೊಸತೇನು ಇಲ್ಲ ಎಂದು ಅಖ್ಲಾಕ್ ಅಹ್ಮದ್ ತಿಳಿಸಿದ್ದಾರೆ.

1993ರಲ್ಲಿ ಕಬ್ಬಿಣದ ಪಟ್ಟಿಗಳಿಂದ ಮಸೀದಿಯ ದಕ್ಷಿಣ ಭಾಗವನ್ನು ಮುಚ್ಚುವ ಮೊದಲು ಮಸೀದಿ ಸಮಿತಿಯಿಂದ ಅಂಗಡಿಗಳನ್ನು ಐದರಿಂದ ಆರು ಶಿಲ್ಪಿಗಳು ಬಾಡಿಗೆಗೆ ಪಡೆದಿದ್ದರು. ಆ ವೇಳೆ ಅವರು ವಿಗ್ರಹಗಳು ಮತ್ತು ತ್ಯಾಜ್ಯವನ್ನು ಎಸೆದಿರುವ ಬಲವಾದ ಸಂಶಯ ನಮಗಿದೆ. ಎಎಸ್‌ಐ ಸಮೀಕ್ಷೆ ಸಮಯದಲ್ಲಿ ಅದೇ ವಿಗ್ರಹಗಳನ್ನು ದೊರತಿರುವ ಸಾಧ್ಯತೆ ಇದೆ ಎಂದು ಅಖ್ಲಾಕ್ ಅಹ್ಮದ್ ಹೇಳಿದ್ದಾರೆ.

ಇದನ್ನೂ ಓದಿ: ನಿತೀಶ್ ಕುಮಾರ್ ‘ಇಂಡಿಯಾ’ ಬಣದಲ್ಲೆ ಉಳಿದಿದ್ದರೆ ಪ್ರಧಾನಿಯಾಗಬಹುದಿತ್ತು: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...