Homeಮುಖಪುಟದೆಹಲಿ ಸರ್ಕಾರ ಉರುಳಿಸಲು ಬಿಜೆಪಿಯಿಂದ ತಂತ್ರ, ಶಾಸಕರಿಗೆ ತಲಾ 25 ಕೋಟಿ ರೂ. ಆಮಿಷ: ಎಎಪಿ...

ದೆಹಲಿ ಸರ್ಕಾರ ಉರುಳಿಸಲು ಬಿಜೆಪಿಯಿಂದ ತಂತ್ರ, ಶಾಸಕರಿಗೆ ತಲಾ 25 ಕೋಟಿ ರೂ. ಆಮಿಷ: ಎಎಪಿ ಆರೋಪ

- Advertisement -
- Advertisement -

ದೆಹಲಿಯಲ್ಲಿ ಆಪರೇಷನ್ ಕಮಲ 2.0 ನಡೆಯುತ್ತಿದ್ದು, ಎಎಪಿ ಶಾಸಕರಿಗೆ ಬಿಜೆಪಿ ಹಣದ ಆಮಿಷ ಒಡ್ಡುವ ಮೂಲಕ ರಾಜ್ಯ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಶಿಕ್ಷಣ ಸಚಿವೆ ಅತಿಶಿ ಮರ್ಲೆನಾ ಅವರು, ಬಿಜೆಪಿ ನಮ್ಮ ಏಳು ಮಂದಿ ಶಾಸಕರನ್ನು ಸಂಪರ್ಕಿಸಿದೆ ಎಂದು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅತಿಶಿ, “ಬಿಜೆಪಿ ‘ಆಪರೇಷನ್ ಕಮಲ 2.0’ ಆರಂಭಿಸಿದೆ. ದೆಹಲಿಯಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಎಎಪಿ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ. ಎಎಪಿಯ ಏಳು ಶಾಸಕರನ್ನು ಬಿಜೆಪಿ ಸಂಪರ್ಕಿಸಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಅವರು ಶೀಘ್ರದಲ್ಲೇ ಬಂಧಿಸಲಾಗುವುದು. ಆ ಬಳಿಕ ಎಎಪಿ ಶಾಸಕರ ನಡುವೆ ಬಿರುಕು ಮೂಡಲಿದೆ ಅವರು ನಮ್ಮ ಶಾಸಕರಿಗೆ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

21 ಎಎಪಿ ಶಾಸಕರೊಂದಿಗೆ ಬಿಜೆಪಿ ಸಂಪರ್ಕದಲ್ಲಿದೆ. ಏಳು ಶಾಸಕರ ಪೈಕಿ ಪ್ರತಿಯೊಬ್ಬರಿಗೂ ತಲಾ 25 ಕೋಟಿ ರೂಪಾಯಿ ಮತ್ತು ಬಿಜೆಪಿ ಟಿಕೆಟ್ ನೀಡುವ ಆಮಿಷ ಒಡ್ಡಲಾಗಿದೆ ಎಂದು ಅತಿಶಿ ಆರೋಪಿಸಿದ್ದಾರೆ. ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗದ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಆಪರೇಷನ್ ಕಮಲದ ತಂತ್ರ ಪ್ರಯೋಗಿಸುತ್ತಿದೆ. ಮಹಾರಾಷ್ಟ್ರ, ಗೋವಾ, ಕರ್ನಾಟಕ, ಅರುಣಾಚಲ ಪ್ರದೇಶ ಮತ್ತು ಮಧ್ಯಪ್ರದೇಶಗಳು ಇದಕ್ಕೆ ಉದಾಹರಣೆಗಳಾಗಿವೆ ಎಂದು ಅತಿಶಿ ತಿಳಿಸಿದ್ದಾರೆ.

ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಎಕ್ಸ್‌ನಲ್ಲಿ ಗಂಭೀರ ಆರೋಪಗಳನ್ನು ಮಾಡಿದ್ದು, “ನನ್ನನ್ನು ಅಬಕಾರಿ ನೀತಿ ಹಗರಣದ ತನಿಖೆಯ ಭಾಗವಾಗಿ ಬಂಧಿಸುತ್ತಿಲ್ಲ. ದೆಹಲಿಯ ಆಮ್‌ ಆದ್ಮಿ ಪಕ್ಷದ ಸರ್ಕಾರವನ್ನು ಉರುಳಿಸಲು ಪಿತೂರಿ ಮಾಡುತ್ತಿದ್ದಾರೆ. ಕಳೆದ ಒಂಬತ್ತು ವರ್ಷಗಳಲ್ಲಿ ಅವರು ನಮ್ಮ ಸರ್ಕಾರವನ್ನು ಬೀಳಿಸಲು ಅನೇಕ ಷಡ್ಯಂತ್ರಗಳನ್ನು ರೂಪಿಸಿದ್ದಾರೆ. ಆದರೆ, ಅದರಲ್ಲಿ ಅವರಿಗೆ ಯಶಸ್ಸು ಸಿಗಲಿಲ್ಲ. ದೇವರು ಮತ್ತು ಜನರು ಯಾವಾಗಲೂ ನಮ್ಮನ್ನು ಬೆಂಬಲಿಸಿದ್ದಾರೆ. ನಮ್ಮ ಎಲ್ಲಾ ಶಾಸಕರು ಕೂಡ ಬಲವಾಗಿ ಜೊತೆಗಿದ್ದಾರೆ. ಈ ಬಾರಿಯೂ ಅವರ ಕೆಟ್ಟ ಉದ್ದೇಶ ವಿಫಲವಾಗಲಿದೆ” ಎಂದಿದ್ದಾರೆ.

ಇದನ್ನೂ ಓದಿ: ಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...