Homeಮುಖಪುಟಪ.ಬಂಗಾಳದಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಪುನರಾರಂಭ: ಜಾತಿ ಗಣತಿ ನ್ಯಾಯದ ಮೊದಲ ಹೆಜ್ಜೆ: ರಾಹುಲ್...

ಪ.ಬಂಗಾಳದಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಪುನರಾರಂಭ: ಜಾತಿ ಗಣತಿ ನ್ಯಾಯದ ಮೊದಲ ಹೆಜ್ಜೆ: ರಾಹುಲ್ ಗಾಂಧಿ

- Advertisement -
- Advertisement -

ಕಳೆದ ಎರಡು ದಿನಗಳಿಂದ ವಿಶ್ರಾಂತಿಯಲ್ಲಿದ್ದ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆಯು ಪ.ಬಂಗಾಳದಲ್ಲಿ ಮತ್ತೆ ಪುನರಾರಂಭಗೊಂಡಿದೆ. ಇದೇ ವೇಳೆ ರಾಹುಲ್‌ ಗಾಂಧಿ ಎಕ್ಸ್‌ನಲ್ಲಿ ಜಾತಿಗಣತಿ ಬಗ್ಗೆ ಮಹತ್ವದ ಪೋಸ್ಟ್‌ ಮಾಡಿದ್ದು, ತೆಲಂಗಾಣ ಸರಕಾರವನ್ನು ಅಭಿನಂದಿಸಿದ್ದಾರೆ.

ತೆಲಂಗಾಣದಲ್ಲಿ ರಾಜ್ಯದಲ್ಲಿ ಜಾತಿ ಗಣತಿಯನ್ನು ಘೋಷಿಸುವ ಮೂಲಕ ನ್ಯಾಯದ ಕಡೆಗೆ ಮೊದಲ ಹೆಜ್ಜೆ ಇಟ್ಟಿದ್ದಕ್ಕಾಗಿ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮತ್ತು ಅವರ ಸರ್ಕಾರವನ್ನು ರಾಹುಲ್ ಗಾಂಧಿ ಅಭಿನಂದಿಸಿದ್ದಾರೆ.

ದೇಶದ ಏಳಿಗೆಯಲ್ಲಿ ಸಮಾಜದ ಪ್ರತಿಯೊಂದು ವರ್ಗದ ಸಮಾನ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಜಾತಿ ಗಣತಿಯೊಂದೇ ಮಾರ್ಗವಾಗಿದೆ. ಜಾತಿ ಗಣತಿ ನ್ಯಾಯದ ಮೊದಲ ಮೆಟ್ಟಿಲು. ಏಕೆಂದರೆ ಯಾವುದೇ ಸಮಾಜದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ತಿಳಿಯದೆ, ಅದಕ್ಕೆ ಸರಿಯಾದ ಯೋಜನೆಗಳನ್ನು ರೂಪಿಸುವುದು ಅಸಾಧ್ಯ. ದೇಶದ ಸಮೃದ್ಧಿಗೆ ಜಾತಿ ಗಣತಿಯು ಸಮಾಜದ ಪ್ರತಿಯೊಂದು ವರ್ಗದ ಸಮಾನ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಏಕೈಕ ಮಾರ್ಗವಾಗಿದೆ. ನ್ಯಾಯದತ್ತ ಮೊದಲ ಹೆಜ್ಜೆ ಇಟ್ಟ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರಕ್ಕೆ ಅಭಿನಂದನೆಗಳು ಎಂದು ಅವರು ಹೇಳಿದ್ದಾರೆ.

ತೆಲಂಗಾಣ ಸರ್ಕಾರ ಚುನಾವಣೆಗೂ ಮುನ್ನ ಜನತೆಗೆ ನೀಡಿದ ಭರವಸೆಯಂತೆ ಜಾತಿಗಣತಿಯನ್ನು ಶೀಘ್ರವೇ ಕೈಗೊಳ್ಳಲಿದೆ ಎಂದು ರೆಡ್ಡಿ ಶನಿವಾರ ಹೇಳಿದ್ದರು. ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಮತ್ತು ಬುಡಕಟ್ಟು ಕಲ್ಯಾಣ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆ ನಡೆಸಿದ ರೆಡ್ಡಿ, ಜಾತಿ ಗಣತಿಯನ್ನು ಕೈಗೊಳ್ಳಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಇದಲ್ಲದೆ ಬಿಪಿಎಲ್ ವರ್ಗದ ಕುಟುಂಬಗಳ ಹೆಣ್ಣುಮಕ್ಕಳಿಗೆ ಅವರ ಮದುವೆಯ ಸಮಯದಲ್ಲಿ 1 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯದ ಜೊತೆಗೆ ಒಂದು ತೊಲ ಚಿನ್ನವನ್ನು ನೀಡುವ ‘ಕಲ್ಯಾಣಮಸ್ತು’ ಯೋಜನೆಯನ್ನು ಅನುಷ್ಠಾನಗೊಳಿಸಲು ಬಜೆಟ್ ಅಂದಾಜುಗಳನ್ನು ಸಿದ್ಧಪಡಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆ: 

ಜ. 26, 27ರಂದು ವಿಶ್ರಾಂತಿಯಲ್ಲಿದ್ದ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ನ್ಯಾಯ ಯಾತ್ರೆಯು ಇಂದು ಮತ್ತೆ ಪುನರಾರಂಭಗೊಂಡಿದೆ. ಪ.ಬಂಗಾಳದ ಜಲ್ಪೈಗುರಿಯಿಂದ ರಾಹುಲ್ ಪಾದಯಾತ್ರೆಯನ್ನು ಪುನರಾರಂಭಿಸಿದ್ದಾರೆ.

ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರು ರಾಜ್ಯದ ಉತ್ತರ ಭಾಗದಲ್ಲಿರುವ ಸಿಲಿಗುರಿಯ ಬಾಗ್ದೋಗ್ರಾ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಬಂದ ರಾಹುಲ್‌ ಗಾಂಧಿ ಅವರನ್ನು ಬರಮಾಡಿಕೊಂಡಿದ್ದಾರೆ.

ಬಸ್ ಮತ್ತು ಕಾಲ್ನಡಿಗೆಯಲ್ಲಿ ಸಾಗುತ್ತಿರುವ ಭಾರತ್‌ ಜೋಡೋ ನ್ಯಾಯ ಯಾತ್ರೆಯು ಇಂದು ರಾತ್ರಿ ಸಿಲಿಗುರಿಯ ಬಳಿ ತಂಗಲಿದೆ. ಸೋಮವಾರ ಯಾತ್ರೆ ಬಿಹಾರಕ್ಕೆ ತೆರಳಲಿದೆ. ಜ.31ಕ್ಕೆ ಮಾಲ್ಡಾ ಮೂಲಕ ಪಶ್ಚಿಮ ಬಂಗಾಳ ಮರುಪ್ರವೇಶಿಸಿ ಫೆಬ್ರವರಿ 1ರಂದು  ಪ.ಬಂಗಾಳದಿಂದ ಯಾತ್ರೆ ಮುಂದೆ ಸಾಗಿ ಫೆಬ್ರವರಿ 2ರಂದು ಜಾರ್ಖಂಡ್ ಪ್ರವೇಶಿಸಲಿದೆ ಹಾಗೂ ಪಾಕುರ್ ಜಿಲ್ಲೆಯಲ್ಲಿ ರಾಹುಲ್‌ಗಾಂಧಿ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದನ್ನು ಓದಿ: ‘ಕಸ ಈಗ ಮತ್ತೆ ತೊಟ್ಟಿಗೆ ಸೇರಿದೆ’: INDIA  ಮೈತ್ರಿಕೂಟ ತೊರೆದ ನಿತೀಶ್‌ ವಿರುದ್ಧ ಪ್ರತಿಪಕ್ಷಗಳ ನಾಯಕರು ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ...

ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು...

ತಮಿಳುನಾಡು: ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ; ನಾಲ್ವರು ಪುನಃ ಬಂಧನ

ತಮಿಳುನಾಡಿನ ಆಂಡಿಪಟ್ಟಿ ಸಮೀಪದ ತೆಕ್ಕಂಪಟ್ಟಿ ಉಪಜೈಲಿನಲ್ಲಿ ಜೈಲು ಸಿಬ್ಬಂದಿಯನ್ನು ಥಳಿಸಿ 17 ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಂಗಳವಾರ (ಅ.27) ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಜೈಲಿನಿಂದ ಪರಾರಿಯಾದವರ ಪೈಕಿ...

ಕರ್ನಾಟಕ ಎಸ್ಐಆರ್: ಅಂತಿಮ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರುಗಳು ಹೊರಕ್ಕೆ; ಮತದಾರರ ಸಂಖ್ಯೆ 4.55 ಕೋಟಿಗೆ ಕುಸಿತ: ವರದಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳು ಹೊರಗುಳಿದಿವೆ. ಮಂಗಳವಾರ ಪ್ರಕಟವಾಗಲಿರುವ ಅಂತಿಮ ಪಟ್ಟಿಯಲ್ಲಿ ರಾಜ್ಯದ...

‘ನ್ಯೂಸ್‌ರೂಮ್‌ಗಳೇ ಮುಚ್ಚಿಹೋಗಲಿವೆ’ : ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿಎನ್‌ಪಿಎ; ಕೇಂದ್ರ ಸರ್ಕಾರಕ್ಕೆ ನೋಟಿಸ್

ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ, 2023ರ (DPDP Act) ನಿಬಂಧನೆಗಳನ್ನು ಪ್ರಶ್ನಿಸಿ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA) ಸಲ್ಲಿಸಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.27) ನೋಟಿಸ್...

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು : ಪ್ರಶಾಂತ್ ಭೂಷಣ್

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಕೈಗೊಂಡ...

SIR ವಿವಾದ: ಎಲ್ಲಾ ಆದೇಶಗಳು ಒಮ್ಮತದಿಂದಲೇ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಅಫಿಡವಿಟ್!

ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR)ಗೆ ಸಂಬಂಧಿಸಿದ ಎಲ್ಲಾ ಆದೇಶಗಳು ಸಂಪೂರ್ಣ ಒಮ್ಮತದಿಂದಲೇ ಹೊರಬಂದಿವೆ ಎಂದು ಭಾರತೀಯ...

ಎಸ್‌ಸಿ-ಎಸ್‌ಟಿ ಮತ್ತು ಮುಸ್ಲಿಮರ ಇತಿಹಾಸ, ಸಂಕಟ ಒಂದೇ, ಸಮಸಮಾಜ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಶೋಷಿತ ಸಮುದಾಯಗಳು ಒಂದಾಗಬೇಕಿದೆ: ರಿಜ್ವಾನ್ ಅರ್ಷದ್

ಸಮಾಜದಲ್ಲಿ ತಾರತಮ್ಯ ಮತ್ತು ಶೋಷಣೆಗೆ ಒಳಗಾದ ಸಮುದಾಯಗಳು ಒಗ್ಗಟ್ಟಾಗಿ ನಿಂತಾಗ ಮಾತ್ರ ಸಾಮಾಜಿಕ ನ್ಯಾಯ ಮತ್ತು ಸಮಾನ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್...

ಮಹಾರಾಷ್ಟ್ರ ಎಸ್‌ಐಆರ್‌ನಲ್ಲಿ ಹೆಸರು ಅಳಿಸಿದ ಬಳಿಕ ಮರು ನೋಂದಣಿ: ಮತದಾರರ ವಿರುದ್ಧ ಕ್ರಮವಿಲ್ಲ ಎಂದ ಸುಪ್ರೀಂ ಕೋರ್ಟ್ 

ನವದೆಹಲಿ: ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವೇಳೆ ಹೆಸರುಗಳನ್ನು ಅಳಿಸಿರುವ ಪ್ರಕರಣದಲ್ಲಿ, ಮರು ನೋಂದಣಿಗೆ ಅರ್ಜಿ ಸಲ್ಲಿಸುವ ಮತದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಸುಪ್ರೀಂ...

ಖಾಸಗಿ ಶಾಲೆಗಳಿಗೆ ಸಂಬಂಧಿಸಿದ 100 ಕೋಟಿ ರೂಪಾಯಿ ಹಗರಣ: ತಮಿಳುನಾಡು ಮಾಜಿ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಬಂಧನ

ಖಾಸಗಿ ಶಾಲೆಗಳಿಗೆ ಸಂಬಂಧಿಸಿದ 100 ಕೋಟಿ ರೂಪಾಯಿ ಮೌಲ್ಯದ ಹಗರಣವೊಂದಕ್ಕೆ ಸಂಬಂಧಿಸಿದಂತೆ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಹಾಗೂ ತಮಿಳುನಾಡಿನ ಮಾಜಿ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರನ್ನು...