Homeಕರ್ನಾಟಕಕೆರಗೋಡು ಧ್ವಜ ವಿವಾದ: ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಎಂದ ಕಾಂಗ್ರೆಸ್

ಕೆರಗೋಡು ಧ್ವಜ ವಿವಾದ: ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಎಂದ ಕಾಂಗ್ರೆಸ್

- Advertisement -
- Advertisement -

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭುಗಿಲೆದ್ದಿರುವ ಧ್ವಜ ವಿವಾದವನ್ನು ಬಿಜೆಪಿ ನಾಯಕರು ರಾಜಕೀಯಗೊಳಿಸಿದ್ದು, ಬಿಜೆಪಿ-ಆರ್‌ಎಸ್‌ಎಸ್‌ ವಿರುದ್ಧ ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಬಿಜೆಪಿ-ಆರ್‌ಎಸ್‌ಎಸ್‌ ಅನ್ನು ದೇಶದ್ರೋಹಿಗಳು ಎಂಟು ಟೀಕಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಅಂತಹ ಬ್ರಿಟಿಷರನ್ನೇ ಹೆದರಿಸಿದ ಕಾಂಗ್ರೆಸ್ ಈ ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ. ಬ್ರಿಟಿಷರ ಗುಂಡಿಗೆ ಎದೆಗೊಟ್ಟು ತಿರಂಗಾ ಹಾರಿಸಿದ ವೀರ ಪರಂಪರೆ ನಮ್ಮದು, ಈ ಸಂಘಿ ಕ್ರಿಮಿ ಕೀಟಗಳು ನಮ್ಮನ್ನು ತಡೆಯಲು ಸಾಧ್ಯವೇ. ದೇಶದ ಘನತೆ, ಗೌರವವನ್ನು ಎತ್ತಿ ಹಿಡಿದಿದ್ದೇವೆ, ದೇಶದ್ರೋಹಿ ಬಿಜೆಪಿಗೆ ದಮ್ಮು ತಾಕತ್ತಿದ್ದರೆ ಈ ರಾಷ್ಟ್ರ ಧ್ವಜವನ್ನು ಕಿತ್ತು ಹಾಕುವ ಧೈರ್ಯ ತೋರಲಿ’ ಎಂದು ಕಿರಿಕಾರಿದೆ.

‘ಬಿಜೆಪಿಯ ಲೋಕಸಭಾ ಚುನಾವಣೆಯ ತಾಲೀಮು ಮಂಡ್ಯದಲ್ಲಿ ಶುರುವಾಗಿದೆ, ಇದಕ್ಕೆ ಸೋಕಾಲ್ಡ್ ಜಾತ್ಯತೀತ ಜನತಾ ದಳ ಪೂರ್ಣ ಸಹಕಾರ ನೀಡುತ್ತಿದೆ. ಆರ್ ಅಶೋಕ್ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ದಮ್ಮು ತಾಕತ್ತಿದ್ದರೆ ಈ ಪ್ರಶ್ನೆಗಳಿಗೆ ಉತ್ತರಿಸಲಿ. ಕೆರೆಗೋಡು ಗ್ರಾಮದಲ್ಲಿ ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ನವರು ರಾಷ್ಟ್ರಧ್ವಜ ಹಾಗೂ ನಾಡ ಧ್ವಜ ಹಾರಿಸುವುದಕ್ಕಾಗಿ ಮಾತ್ರ ಧ್ವಜ ಸ್ಥಂಭ ಸ್ಥಾಪನೆಗೆ ಮುಚ್ಚಳಿಕೆ ಬರೆದುಕೊಟ್ಟು ಅನುಮತಿ ಪಡೆದಿದ್ದಾರೆ. ಬರೆದುಕೊಟ್ಟ ಮುಚ್ಚಳಿಕೆಯಂತೆ ಹಾಗೂ ಯಾವುದಕ್ಕೆ ಅನುಮತಿ ಪಡೆದಿದ್ದಾರೋ ಅದನ್ನ ಪಾಲಿಸಬೇಕೇ ಬೇಡವೇ’ ಎಂದು ಪ್ರಶ್ನಿಸಿದೆ.

‘ರಾಷ್ಟ್ರ ಧ್ವಜ ಹಾರಿಸುವ ಉದ್ದೇಶವನ್ನು ಹೈಜಾಕ್ ಮಾಡಿ ಮಂಡ್ಯದಲ್ಲಿ ಶಾಂತಿ ಕದಡಬೇಕು, ಸರ್ಕಾರಕ್ಕೆ ಸವಾಲು ಹಾಕಬೇಕು ಎನ್ನುವುದು ನಿಮ್ಮ ಪೂರ್ವಯೋಜಿತ ಹುನ್ನಾರವಾಗಿತ್ತಲ್ಲವೇ? ನಿಮ್ಮ ನಿಷ್ಠೆ ಸಂವಿಧಾನಕ್ಕೋ; ಮನುವಾದಕ್ಕೋ? ನಿಮ್ಮ ನಿಷ್ಠೆ ದೇಶಕ್ಕೋ, ದೇಶದ್ರೋಹಕ್ಕೋ? ನಿಮ್ಮ ನಿಷ್ಠೆ ರಾಷ್ಟ್ರ ಧ್ವಜಕ್ಕೋ , ಧಾರ್ಮಿಕ ಧ್ವಜಕ್ಕೋ? ಉತ್ತರ ನೀಡುವ ದಮ್ಮು ತಾಕತ್ತು ಇದೆಯೇ’ ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸವಾಲು ಹಾಕಿದೆ.

ಸರ್ಕಾರಿ ಕಟ್ಟಡಗಳ ಮೇಲೆ ಧಮ್ಮ ಚಕ್ರ- ಜೈ ಭೀಮ್ ಧ್ವಜ ಹಾಕಬಹುದೇ?

‘ಅನುಮತಿಯಿಲ್ಲದೆ ನಾನು ನಾಳೆ ಸರ್ಕಾರಿ ಆಸ್ತಿ ಅಥವಾ ಕಟ್ಟಡಗಳ ಮೇಲೆ ಧಮ್ಮ ಚಕ್ರ, ಪಂಚಶೀಲ ಧ್ವಜ ಅಥವಾ ಜೈ ಭೀಮ್ ಧ್ವಜವನ್ನು ಹಾಕಬಹುದೇ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರೇ, ನೀವು ಯಾಕೆ ಪ್ರತಿಭಟನೆ ಮಾಡುತ್ತಿದ್ದೀರಿ? ದಯವಿಟ್ಟು ಟ್ರಸ್ಟ್ ವಿನಂತಿಯನ್ನು ಮತ್ತು ನಂತರದ ಆದೇಶದ ಮರುಪರಿಶೀಲಿಸಿ. ವಿನಂತಿ/ಆದೇಶದ ಯಾವ ಭಾಗವು ಕಾನೂನಿಗೆ ವಿರುದ್ಧವಾಗಿದೆ ಎಂಬುದನ್ನು ದಯವಿಟ್ಟು ಕರ್ನಾಟಕದ ಜನತೆಗೆ ತಿಳಿಸಿ. ಅನುಮತಿಯಿಲ್ಲದೆ ನಾನು ನಾಳೆ ಸರ್ಕಾರಿ ಆಸ್ತಿ ಅಥವಾ ಕಟ್ಟಡಗಳ ಮೇಲೆ ಧಮ್ಮ ಚಕ್ರ, ಪಂಚಶೀಲ ಧ್ವಜ ಅಥವಾ ಜೈಭೀಮ್ ಧ್ವಜವನ್ನು ಹಾಕಬಹುದೇ? ಯಾವುದೇ ಧ್ವಜಕ್ಕಿಂತ ರಾಷ್ಟ್ರಧ್ವಜಕ್ಕೆ ಪ್ರಾಧಾನ್ಯತೆ ನೀಡಬೇಕಲ್ಲವೇ’ ಎಂದು ಹೇಳಿದ್ದಾರೆ.

ಶ್ರೀ ಗೌರಿಶಂಕರ್ ಸೇವಾ ಟ್ರಸ್ಟ್ ಭಾರತದ ಧ್ವಜ ಅಥವಾ ಕನ್ನಡ ಧ್ವಜವನ್ನು ಹಾರಿಸಲು ನಿರ್ದಿಷ್ಟವಾಗಿ ಧ್ವಜಸ್ತಂಭವನ್ನು ಕೇಳಿದೆ. ಅದಕ್ಕೆ ಪಂಚಾಯತ್ ಇಲಾಖೆ ಅನುಮತಿ ನೀಡಿರುವುದು ಸ್ಪಷ್ಟವಾಗಿದೆ. ಬಿಜೆಪಿ ಬೇರೆ ಯಾವುದಾದರೂ ಧ್ವಜವನ್ನು ಹಾರಿಸಲು ಒತ್ತಾಯಿಸುತ್ತೀರಾ? ನಿಮ್ಮ ಪಕ್ಷವನ್ನು ಯಾವಾಗಲೂ ಭಾರತೀಯ ಧ್ವಜವನ್ನು ವಿರೋಧಿಸುವ ರಾಷ್ಟ್ರೀಯ ವಿರೋಧಿ ಆರ್‌ಎಸ್‌ಎಸ್‌ನಿಂದ ಪೋಷಿಸಲಾಗಿದೆ. ‘ಆರ್‌ಎಸ್‌ಎಸ್‌ ಧ್ವಜ ಮುಂದೊಂದು ದಿನ ರಾಷ್ಟ್ರಧ್ವಜವಾಗುತ್ತದೆ’ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇತ್ತೀಚೆಗೆ ಪ್ರಸ್ತಾಪಿಸಿದ್ದನ್ನು ನೆನಪಿಸಿಕೊಳ್ಳಿ. ನೀವು ಸಹ ಇದನ್ನು ಹೇಗೆ ಒಪ್ಪುತ್ತೀರಿ? ನೀವು ಜವಾಬ್ದಾರಿಯುತವಾಗಿ ಸರ್ಕಾರವನ್ನು ನಡೆಸಲಿಲ್ಲ, ಕನಿಷ್ಠ ಜವಾಬ್ದಾರಿಯುತ ವಿರೋಧ ಪಕ್ಷದವರಾಗಿರಿ’ ಎಂದು ಪ್ರಿಯಾಂಕ್ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ; ಹನುಮಧ್ವಜ ವಿವಾದ: ಪರಿಸ್ಥಿತಿ ಪ್ರಕ್ಷುಬ್ಧಗೊಳಿಸಿದ ಹಿಂದುತ್ವ ಕಾರ್ಯಕರ್ತರು; ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...