Homeಕರ್ನಾಟಕಬೀದರ್ ಬಿಜೆಪಿಯಲ್ಲಿ ಭಿನ್ನಮತ: ಭಗವಂತ ಖೂಬಾಗೆ ಟಿಕೆಟ್‌ ನೀಡದಂತೆ ವಿಜಯೇಂದ್ರ ಕಾಲಿಗೆ ಬಿದ್ದ ಪ್ರಭು ಚವ್ಹಾಣ್!

ಬೀದರ್ ಬಿಜೆಪಿಯಲ್ಲಿ ಭಿನ್ನಮತ: ಭಗವಂತ ಖೂಬಾಗೆ ಟಿಕೆಟ್‌ ನೀಡದಂತೆ ವಿಜಯೇಂದ್ರ ಕಾಲಿಗೆ ಬಿದ್ದ ಪ್ರಭು ಚವ್ಹಾಣ್!

- Advertisement -
- Advertisement -

ಬೀದರ್ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಸೋಮವಾರ ನಡೆದ ಜಿಲ್ಲಾ​ ಬಿಜೆಪಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಉತ್ತಮ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಮಾಜಿ ಸಚಿವ ಪ್ರಭು ಚವ್ಹಾಣ್ ವೇದಿಕೆಯಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಲಿಗೆ ಬಿದ್ದಿದ್ದಾರೆ. ಈ ಮೂಲಕ ಹಾಲಿ ಸಂಸದ ಭಗವಂತ ಖೂಬಾಗೆ ಟಿಕೆಟ್ ನೀಡದಂತೆ ಪರೋಕ್ಷವಾಗಿ ಮನವಿ ಮಾಡಿದ್ದಾರೆ.

ವಿಜಯೇಂದ್ರ ಸೇರಿದಂತೆ ಬಿಜೆಪಿ ರಾಜ್ಯ ಮತ್ತು ಜಿಲ್ಲಾ ನಾಯಕರು ವೇದಿಕೆಯಲ್ಲಿ ಕುಳಿತಿದ್ದ ವೇಳೆ, ಭಾಷಣ ಪೀಠದಿಂದ ನೇರವಾಗಿ ಬಂದು ಪ್ರಭು ಚವ್ಹಾಣ್ ಸಾಷ್ಟಾಂಗವೆರಗಿದ್ದಾರೆ. ದಯವಿಟ್ಟು ಸಾಮಾನ್ಯ ಕಾರ್ಯಕರ್ತನಿಗೆ, ಉತ್ತಮ ಅಭ್ಯರ್ಥಿಗೆ ಈ ಬಾರಿಯ ಬೀದರ್‌ ಲೋಕಸಭೆ ಕ್ಷೇತ್ರದ ಟಿಕೆಟ್‌ ಕೊಡಿ ಎಂದು ಮನವಿ ಮಾಡಿದ್ದಾರೆ. ಇದು ನನ್ನ ಅಭಿಪ್ರಾಯ ಅಲ್ಲ, ಸಮಸ್ತ ಕಾರ್ಯಕರ್ತರ ಅಭಿಪ್ರಾಯ ಎಂದಿದ್ದಾರೆ. ಈ ವೇಳೆ ಪಕ್ಕದಲ್ಲೇ ಭಗವಂತ ಖೂಬಾ ಕುಳಿತಿದ್ದರು.

 

View this post on Instagram

 

A post shared by eedina.com (@eedinanews)

ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಕೇಂದ್ರ ಸಚಿವರೂ ಆಗಿರುವ ಬೀದರ್ ಸಂಸದ ಭಗವಂತ ಖೂಬಾ ಅವರಿಗೆ ಮರು ಟಿಕೆಟ್ ನೀಡುವುದನ್ನು ವಿರೋಧಿಸುತ್ತಿರುವ ಪಕ್ಷದ ಮುಖಂಡರೊಂದಿಗೆ ಚರ್ಚಿಸಲು ಇತ್ತೀಚೆಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿತ್ತು.

ಈ ಸಭೆಯಲ್ಲಿ ಕರಡಿ ಸಂಗಣ್ಣ ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮತ್ತೆ ಟಿಕೆಟ್ ನೀಡುವುದನ್ನು ಪಕ್ಷದ ಪದಾಧಿಕಾರಿಗಳು ವಿರೋಧಿಸಿದ್ದರು. ಖೂಬಾ ಸಂಸದರಾಗಿರುವ ಬೀದರ್‌ನಲ್ಲಿ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಗೆದ್ದಿದೆ. ಆದರೂ, ಬಿಜೆಪಿ ಶಾಸಕರು ಖೂಬಾಗೆ ಟಿಕೆಟ್ ನೀಡುವುದನ್ನು ವಿರೋಧಿಸಿದ್ದಾರೆ.

ಭಗವಂತ ಖೂಬಾ ಬಿಜೆಪಿ ಪಕ್ಷದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆ ಸಮಯದಲ್ಲಿ ನಮ್ಮ ಭವಿಷ್ಯ ಹಾಳುಮಾಡುವ ಪ್ರಯತ್ನ ನಡೆಸಿದ್ದರು ಎಂದು ಶಾಸಕರು ಗಂಭೀರ ಆರೋಪ ಮಾಡಿದ್ದರು. ಸಭೆಯಲ್ಲಿ ಖೂಬಾ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದ ಮಾಜಿ ಸಚಿವ ಪ್ರಭು ಚವ್ಹಾಣ್‌ಗೆ ಶರಣು ಸಲಗರ ಕೂಡ ಬೆಂಬಲವಾಗಿ ಮಾತನಾಡಿ ಖೂಬಾ ಅವರಿಗೆ ಟಿಕೆಟ್ ನೀಡದಂತೆ ಆಗ್ರಹಿಸಿದ್ದರು.

ಈ ವೇಳೆ ಶಾಸಕರ ಮೇಲೆ ಕೋಪಗೊಂಡ ಖೂಬಾ, ಟಿಕೆಟ್‌ ಕೊಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಹೇಳಿ ಸಭೆಯಿಂದ ಹೊರ ನಡೆದಿದ್ದರು. ಖೂಬಾ ಹೊರ ಹೋದ ಮೇಲೆ, ಈ ಬಾರಿ ಯಾರಿಗೆ ಟಿಕೆಟ್‌ ನೀಡಬೇಕೆಂದು ವಿಜಯೇಂದ್ರ ಶಾಸಕರನ್ನು ಪ್ರಶ್ನಿಸಿದ್ದಾರೆ. ಆಗ, ಯಾರಿಗೆ ಬೇಕಾದರು ಕೊಡಿ, ಆದರೆ ಖೂಬಾಗೆ ಮತ್ತೆ ಟಿಕೆಟ್‌ ಕೊಟ್ಟರೆ ನಾವು ಅವರ ಪರವಾಗಿ ಕೆಲಸ ಮಾಡುವುದಿಲ್ಲ ಎಂದು ಶಾಸಕರು ಹೇಳಿದ್ದಾಗಿ ವರದಿಗಳು ತಿಳಿಸಿವೆ.

ಖೂಬಾ ವಿರುದ್ದ ಗಂಭೀರ ಆರೋಪ ಮಾಡಿದ್ದರು ಚವ್ಹಾಣ್ :

ಭಗವಂತ್‌ ಖೂಬಾ ಮತ್ತು ಪ್ರಭು ಚವ್ಹಾಣ್ ನಡುವಿನ ಕಿತ್ತಾಟ ಇಂದು ನಿನ್ನೆಯದಲ್ಲ. ಕಳೆದ ಒಂದು ವರ್ಷದಿಂದ ಈ ಇಬ್ಬರು ನಾಯಕರ ನಡುವೆ ಮುನಿಸಿದೆ. ಕಳೆದ ಆಗಸ್ಟ್‌ನಲ್ಲಿ ಬೀದರ್‌ನ ಔರಾದ್‌ ಪಟ್ಟಣದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಖೂಬಾ ವಿರುದ್ದ ವಾಗ್ದಾಳಿ ನಡೆಸಿದ್ದ ಚವ್ಹಾಣ್, “ಕೇಂದ್ರ ಸಚಿವ ಭಗವಂತ ಖೂಬಾ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದ್ದರು. ಆದರೆ, ಅವರ ಪ್ರಯತ್ನ ವಿಫಲವಾಗಿದ್ದರಿಂದ ಈಗ ತಾನು ಸಾಕಿದ ಗೂಂಡಾಗಳಿಂದ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಎಂದು ಗಂಭೀರ ಆರೋಪ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿದ್ದ ಖೂಬಾ, ಪ್ರಭು ಚವ್ಹಾಣ್ ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ. ವರಿಷ್ಠರು ಅನುಮತಿ ನೀಡಿದರೆ ಅವರ ವಿರುದ್ಧ 100 ಕೋಟಿ ರೂಪಾಯಿ ಮಾನಹಾನಿ ಕೇಸ್ ದಾಖಲಿಸುವೆ ಎಂದು ಹೇಳಿದ್ದರು.

ಪದ್ಮಾಕರ್ ಪಾಟೀಲ್​ಗೆ ಟಿಕೆಟ್ ನೀಡುವಂತೆ ಸಲಗರ್‌ ಮನವಿ

ಪ್ರಭು ಚವ್ಹಾಣ್ ಒಂದು ಕಡೆಯಾದರೆ ಶಾಸಕ ಶರಣು ಸಲಗರ್ ಮತ್ತೊಂದು ಕಡೆ ಖೂಬಾ ವಿರುದ್ದ ತಿರುಗಿ ಬಿದ್ದಿದ್ದಾರೆ. ಮರಾಠಾ ಸಮುದಾಯದ ಪದ್ಮಾಕರ್ ಪಾಟೀಲ್ ಕಳೆದ 25 ವರ್ಷಗಳಿಂದ ಪಕ್ಷದ ಕಾರ್ಯಕರ್ತರಾಗಿ, ಮಾಜಿ‌ ಜಿಪಂ ಅಧ್ಯಕ್ಷರಾಗಿ ಸಾಕಷ್ಟು ದುಡಿದಿದ್ದಾರೆ. ಅವರಿಗೆ ಟಿಕೆಟ್‌ ನೀಡಿದ್ರೆ ನಮ್ಮ ಬೆಂಬಲ ಇದೆ ಎಂದು ಸಲಗರ್ ಈ ಹಿಂದೆ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು.

ಇದನ್ನೂ : ಮೈಸೂರು: ಅಂಬೇಡ್ಕರ್‌ ನಾಮಫಲಕ ಅಳವಡಿಕೆ ವಿಚಾರದಲ್ಲಿ ಘರ್ಷಣೆ: 30ಕ್ಕೂ ಅಧಿಕ ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...