Homeಮುಖಪುಟಬಿಹಾರದಲ್ಲಿ ಮುಂದುವರಿದ ಭಾರತ್ ಜೋಡೋ ನ್ಯಾಯ ಯಾತ್ರೆ: ಸಾಮಾಜಿಕ, ಆರ್ಥಿಕ ನ್ಯಾಯವಿಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ;...

ಬಿಹಾರದಲ್ಲಿ ಮುಂದುವರಿದ ಭಾರತ್ ಜೋಡೋ ನ್ಯಾಯ ಯಾತ್ರೆ: ಸಾಮಾಜಿಕ, ಆರ್ಥಿಕ ನ್ಯಾಯವಿಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ; ರಾಹುಲ್‌ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಬಿಹಾರದ ಕಿಶನ್‌ಗಂಜ್ ಜಿಲ್ಲೆಗೆ ಪ್ರವೇಶಿಸಿದೆ. ಬಿಹಾರ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಖಿಲೇಶ್ ಪ್ರಸಾದ್ ಸಿಂಗ್ ಮತ್ತು ಪಕ್ಷದ ಇತರ ಹಿರಿಯ ನಾಯಕರು ಬಿಹಾರದಲ್ಲಿ ರಾಹುಲ್‌ ಗಾಂಧಿಯನ್ನು ಸ್ವಾಗತಿಸಿದ್ದಾರೆ.

ಕಿಶನ್‌ಗಂಜ್ ಜಿಲ್ಲೆಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ ತಮ್ಮ ಭಾಷಣದಲ್ಲಿ, ನರೇಂದ್ರ ಮೋದಿ ಅವರನ್ನು ಕಟುವಾಗಿ ಟೀಕಿಸಿದ್ದಾರೆ ಮತ್ತು ದೇಶಾದ್ಯಂತ ಜಾತಿ ಆಧಾರಿತ ಜನಗಣತಿಗೆ ಒತ್ತಾಯಿಸಿದ್ದಾರೆ. ಬಿಹಾರವನ್ನು”ಸಾಮಾಜಿಕ ನ್ಯಾಯದ ನಾಡು” ಎಂದು ಕರೆದಿದ್ದಾರೆ ಮತ್ತು ದೇಶವು ಬಿಹಾರದ ಜನರನ್ನು ನೋಡುತ್ತಿದೆ ಏಕೆಂದರೆ ರಾಜ್ಯದ ಜನರಿಗಿಂತ ಸಾಮಾಜಿಕ ನ್ಯಾಯವನ್ನು ಯಾರೂ ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್‌ ದ್ವೇಷವನ್ನು ಹರಡುವುದರ ಜೊತೆಗೆ ಜಾತಿ ಮತ್ತು ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸುವ ಬಗ್ಗೆ ಮಾತನಾಡುತ್ತಿದೆ. ಕಾಂಗ್ರೆಸ್ ಪಕ್ಷವು ಪ್ರೀತಿ, ಗೌರವ ಮತ್ತು ಸಹೋದರತ್ವದ ಪ್ರಚಾರದ ಬಗ್ಗೆ ಗಮನಹರಿಸುತ್ತಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ದೇಶದ ಬಡ ಜನರು ಆರ್ಥಿಕ ಮತ್ತು ಸಾಮಾಜಿಕ ನ್ಯಾಯವನ್ನು ಪಡೆಯಲು ಸಾಧ್ಯವಾಗದ ಕಾರಣ ತಮ್ಮ ಯಾತ್ರೆಯ ಹೆಸರಿಗೆ ನ್ಯಾಯ ಪದವನ್ನು ಸೇರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಆರ್ಥಿಕತೆಯನ್ನು ಕೆಲವು ಬಿಲಿಯನೇರ್‌ಗಳಿಗೆ ಹಸ್ತಾಂತರಿಸಲಾಗಿದೆ. ವಿಮಾನ ನಿಲ್ದಾಣಗಳು, ಬಂದರುಗಳು, ಆಸ್ಪತ್ರೆಗಳು ಮತ್ತು ವಿಶ್ವವಿದ್ಯಾನಿಲಯಗಳು ಎಲ್ಲವನ್ನೂ ಎರಡರಿಂದ ಮೂರು ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರವು ಬಡವರಿಗೆ, ಕಾರ್ಮಿಕರಿಗೆ ಅಥವಾ ರೈತರಿಗೆ ಸಹಾಯ ಮಾಡುವುದಿಲ್ಲ ಮತ್ತು ಬಡವರಿಗೆ ಬ್ಯಾಂಕ್‌ಗಳ ಬಾಗಿಲು ಯಾವಾಗಲು ಮುಚ್ಚಲ್ಪಟ್ಟಿದೆ. ಆದರೆ ಪ್ರಧಾನಿ ಕಚೇರಿಯ ಆದೇಶದ ಮೇರೆಗೆ ಕೈಗಾರಿಕೋದ್ಯಮಿಗಳಿಗೆ ಬ್ಯಾಂಕ್‌ಗಳು ಯಾವಾಗಲೂ ತೆರೆದಿರುತ್ತದೆ. ಸಾಮಾಜಿಕ ಮತ್ತು ಆರ್ಥಿಕ ನ್ಯಾಯವಿಲ್ಲದೆ ದೇಶವು ಎಂದಿಗೂ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಬಿಜೆಪಿಯವರು ಮಾತನಾಡುವುದು ಸುಳ್ಳು ಎಂದು ಹೇಳಿದ್ದಾರೆ.

ಒಬಿಸಿಗಳು, ಅಲ್ಪಸಂಖ್ಯಾತ ಸಮುದಾಯಗಳು, ಬುಡಕಟ್ಟು ಮತ್ತು ಸಾಮಾನ್ಯ ವರ್ಗಗಳ ನಿಖರವಾದ ಜನಸಂಖ್ಯೆಯನ್ನು ತಿಳಿಯಲು ಪ್ರತಿಯೊಬ್ಬರಿಗೂ ಹಕ್ಕಿದೆ ಮತ್ತು ಅದಕ್ಕಾಗಿ ಜಾತಿ ಆಧಾರಿತ ಜನಗಣತಿ ಕ್ರಾಂತಿಕಾರಿ ಹೆಜ್ಜೆಯಾಗಿದೆ. ಸಾಮಾಜಿಕ ಮತ್ತು ಆರ್ಥಿಕ ನ್ಯಾಯ ಎಷ್ಟು ಮುಖ್ಯ ಎಂಬುದನ್ನು ಜನರಿಗೆ ತಿಳಿಸಲು ನಾನು ಬಿಹಾರಕ್ಕೆ ಬಂದಿದ್ದೇನೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಬಿಹಾರದಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮುಂದುವರಿದಿದ್ದು, INDIA ಮೈತ್ರಿ ಕೂಟದಿಂದ ನಿತೀಶ್ ಕುಮಾರ್ ಅವರ ನಿರ್ಗಮನದ ಬಳಿಕ ಮೊದಲ ಬಾರಿಗೆ ಅವರು ಪೂರ್ಣಿಯಾ ಜಿಲ್ಲೆಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಿಹಾರದ ಕಾಂಗ್ರೆಸ್  ಪಕ್ಷದ ನಾಯಕರ ಪ್ರಕಾರ ರ್ಯಾಲಿಯನ್ನುದ್ದೇಶಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಮಾತನಾಡಲಿದ್ದಾರೆ ಮತ್ತು ಅವರು ವೇದಿಕೆಯನ್ನು ಹಂಚಿಕೊಳ್ಳಲು ವಿರೋಧ ಪಕ್ಷದ INDIA ಬಣದ ಇತರ ನಾಯಕರನ್ನು ಆಹ್ವಾನಿಸಿದ್ದಾರೆ. ಸಭೆಯಲ್ಲಿ ಯುವ ನಾಯಕ ಕನ್ಹಯ್ಯ ಕುಮಾರ್ ಕೂಡ ಭಾಗವಹಿಸುವ ಸಾಧ್ಯತೆ ಇದೆ.

ಇದನ್ನು ಓದಿ: ‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...